ತಿರುವನಂತಪುರಂ: ಸೌದಿ ಅರೆಬಿಯಾದಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿರುವ ಕೇರಳದ ಮಹಿಳೆಗೆ ಕೊರೊನಾವೈರಸ್ ಇರುವುದು ದೃಢಪಟ್ಟಿದೆ. ಹೊಸ ವೈರಲ್ ಸೋಂಕಿನಿಂದ ಬಳಲುತ್ತಿರುವ ನರ್ಸ್ಗೆ ತಜ್ಞರಿಂದ ಸೂಕ್ತ ಚಿಕಿತ್ಸೆ ನೀಡುವಂತೆ ಗಲ್ಫ್ ದೇಶಕ್ಕೆ ಮನವಿ ಮಾಡುವಂತೆ ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರಿಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೇಳಿಕೊಂಡಿದ್ದಾರೆ.
ಈ ಸಂಬಂಧ ಮುಖ್ಯಮಂತ್ರಿ ಕಚೇರಿಯಿಂದ ಜೈಶಂಕರ್ ಅವರಿಗೆ ಪತ್ರ ಬರೆದು ಮನವಿ ಮಾಡಿಕೊಳ್ಳಲಾಗಿದೆ.
ಕೊಟ್ಟಾಯಂ ಜಿಲ್ಲೆಯ ಎತ್ತುಮನ್ನೂರಿನ ನರ್ಸ್ ಸೌದಿ ಅರೆಬಿಯಾದ ಅಲ್ ಹಯಾತ್ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಚೀನಾದಲ್ಲಿ 17 ಜನರನ್ನು ಬಲಿ ಪಡೆದಿರುವ ವೈರಲ್ ನರ್ಸ್ ದೇಹದಲ್ಲಿ ಪತ್ತೆಯಾಗಿರುವುದಾಗಿ ವರದಿಯಾಗಿದೆ. ಆಸ್ಪತ್ರೆಯಲ್ಲಿ ಕನಿಷ್ಠ 30 ಮಂದಿ ನರ್ಸ್ಗಳನ್ನು ಪ್ರತ್ಯೇಕವಾಗಿ ಇರಿಸಲಾಗಿದೆ.
ಸೌದಿ ಅರೆಬಿಯಾದೊಂದಿಗೆ ಸರ್ಕಾರ ನಿರಂತರ ಸಂಪರ್ಕದಲ್ಲಿದೆ. ಮತ್ತು ಸೋಂಕಿನ ಬಳಲುತ್ತಿರುವ ದಾದಿಯರಿಗೆ ತಜ್ಞರಿಂದ ಸೂಕ್ತ ಚಿಕಿತ್ಸೆ ಸೇರಿದಂತೆ ಅಗತ್ಯ ಕ್ರಮ ತೆಗೆದುಕೊಳ್ಳುವಂತೆ ಮನವಿ ಮಾಡಿಕೊಳ್ಳಲಾಗಿದೆ. ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಳ್ಳಲಾಗಿದೆ ಎಂದು ಪಿಣರಾಯಿ ವಿಜಯನ್ ತಿಳಿಸಿದ್ದಾರೆ.
ವಿದೇಶಾಂಗ ವ್ಯವಹಾರ ಖಾತೆಗಳ ರಾಜ್ಯ ಸಚಿವ ವಿ.ಮುರಳಿಧರನ್ ಮಾತನಾಡಿ, ದಾದಿಯರಿಗೆ ಎಲ್ಲ ರೀತಿಯ ಬೆಂಬಲ ನೀಡುವಂತೆ ಸೌದಿ ಅರೆಬಿಯಾದ ಭಾರತೀಯ ರಾಯಭಾರಿಗೆ ಹೇಳಲಾಗಿದೆ ಎಂದು ತಿಳಿಸಿದ್ದಾರೆ.
Spoke to @CGIJeddah on Indian nurses quarantined at Al-Hayat Hospital, Khamis Mushait, Saudi Arabia due to Corona virus threat.
They are in touch with hospital management and Saudi foreign Ministry. Have asked our Consulate to provide all possible support. @MEAIndia @PMOIndia
— V. Muraleedharan (@MOS_MEA) January 23, 2020
ಅಲ್ ಹಯಾತ್ ಆಸ್ಪತ್ರೆಯಲ್ಲಿಯಲ್ಲಿ 100ಕ್ಕೂ ಅಧಿಕ ಭಾರತೀಯ ನರ್ಸ್ಗಳು ಕಾರ್ಯನಿರ್ವಹಿಸುತ್ತಿದ್ದಾರೆ. ಇವರಲ್ಲಿ ಕೇರಳದವರೇ ಅಧಿಕ ಮಂದಿ ಇದ್ದಾರೆ. ಸೋಂಕಿನಿಂದ ಬಳಲುತ್ತಿರುವ ದಾದಿಯರನ್ನು ಅಸೀರ್ ನ್ಯಾಷನಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಮತ್ತು ಚಿಕಿತ್ಸೆಗೆ ಸಕಾರಾತ್ಮಕವಾಗಿ ಸ್ಪಂದಿಸುತ್ತಿದ್ದಾರೆ ಎಂದು ಮುರಳಿಧರನ್ ಟ್ವೀಟ್ ಮಾಡಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ