HOME » NEWS » National-international » OIL INDIA LIMITED RECRUITMENT 2021 FORTY EIGHT OPERATOR JOBS WALK IN HG

Oil India Limited Recruitment 2021: 48 ಆಪರೇಟರ್ ಮತ್ತು ಮೆಕ್ಯಾನಿಕ್ ಹುದ್ದೆಗಳಿಗೆ ನೇರ ಸಂದರ್ಶನ

ಕನಿಷ್ಟ 18 ರಿಂದ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.

news18-kannada
Updated:February 18, 2021, 4:12 PM IST
Oil India Limited Recruitment 2021: 48 ಆಪರೇಟರ್ ಮತ್ತು ಮೆಕ್ಯಾನಿಕ್ ಹುದ್ದೆಗಳಿಗೆ ನೇರ ಸಂದರ್ಶನ
ಸಾಂದರ್ಭಿಕ ಚಿತ್ರ
  • Share this:
ಆಯಿಲ್ ಇಂಡಿಯಾ ಲಿಮಿಟೆಡ್ ಖಾಲಿ ಇರುವ 48 ಆಪರೇಟರ್ ಮತ್ತು ಮೆಕ್ಯಾನಿಕ್ ಹುದ್ದೆಗಳನ್ನು ಭರ್ತಿ ಮಾಡಲು ಮುಂದಾಗಿದೆ. ಅದಕ್ಕಾಗಿ ಅರ್ಹ ಅಭ್ಯರ್ಥಿಗಳ ನೇರ ಸಂದರ್ಶನ ನಡೆಸಲಿದೆ. ಆಸಕ್ತರು ನೇಮಕಾತಿ ಬಗೆಗೆ ತಿಳಿದುಕೊಂಡು ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.

ವಿದ್ಯಾರ್ಹತೆ: 10ನೇ ತರಗತಿ, ಪದವಿ ಮತ್ತು ಡಿಪ್ಲೋಮಾ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದು.

ವಯೋಮಿತಿ: ಕನಿಷ್ಟ 18 ರಿಂದ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.

-ಪ.ಜಾ/ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನ: ಆಪರೇಟರ್ ಮತ್ತು ಮೆಕ್ಯಾನಿಕ್ ಹುದ್ದೆಗಳಿಗೆ ಅಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 15,700 ರಿಂದ 18,400 ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ: ಅರ್ಹ ಅಭ್ಯರ್ಥಿಗಳಿಗೆ ಕೌಶಲ್ಯ ಪರೀಕ್ಷೆ, ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವುದು ಹೇಗೆ?:  ಫೆಬ್ರವರಿ 25, ಮಾರ್ಚ್ 1, 8, 15 ಮತ್ತು 22,2021ರಂದು ಬೆಳಿಗ್ಗೆ 7 ರಿದ 11 ಗಂಟೆಯವರೆಗೆ ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಪಾಲ್ಗೊಳ್ಳಬಹುದು.
Published by: Harshith AS
First published: February 18, 2021, 4:12 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories