HOME » NEWS » National-international » OMPL RECRUITMENT 2021 APPLY 25 APPRENTICE VACANCIES HG

OMPL Recruitment 2021: ಇಂಜಿನಿಯರಿಂಗ್​, ಡಿಪ್ಲೋಮಾ ವಿದ್ಯಾರ್ಹತೆ ಪಡೆದವರಿಗೆ ಉದ್ಯೋಗವಕಾಶ

ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗಳಿಗೆ ಇಂಜಿನಿಯರಿಂಗ್ ಪದವಿ ಪಡೆದಿರಬೇಕು.

news18-kannada
Updated:December 4, 2020, 9:37 PM IST
OMPL Recruitment 2021: ಇಂಜಿನಿಯರಿಂಗ್​, ಡಿಪ್ಲೋಮಾ ವಿದ್ಯಾರ್ಹತೆ ಪಡೆದವರಿಗೆ ಉದ್ಯೋಗವಕಾಶ
ಸಾಂದರ್ಭಿಕ ಚಿತ್ರ
  • Share this:
ಒನ್‌ಜಿಸಿ ಮಂಗಳೂರು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (ಒಎಂಪಿಎಲ್) ಗ್ರಾಜುಯೇಟ್ ಮತ್ತು ಟೆಕ್ನೀಶಿಯನ್ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ.  ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿ ತಿಳಿಸಿದ್ದು, ಜನವರಿ 1, 2021 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.

ವಿದ್ಯಾರ್ಹತೆ:

-ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗಳಿಗೆ ಇಂಜಿನಿಯರಿಂಗ್ ಪದವಿ ಪಡೆದಿರಬೇಕು.

-ಟೆಕ್ನೀಶಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಇಂಜಿನಿಯರಿಂಗ್ ನಲ್ಲಿ ಡಿಪ್ಲೋಮಾ ವಿದ್ಯಾರ್ಹತೆಯನ್ನು ಪಡೆದಿರಬೇಕು

ವಯೋಮಿತಿ:  ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದು.

ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 10,000 ರೂ ಸ್ಟೈಫೆಂಡ್​ ಸಿಗಲಿದೆ.

ಟೆಕ್ನೀಶಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 8,000ರೂ ಸ್ಟೈಫೆಂಡ್ ನೀಡಲಾಗುವುದು.ಆಯ್ಕೆ ಹೇಗೆ?: ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ: ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಕೆ: ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಅಧಿಕೃತ ವೆಬ್‌ಸೈಟ್ https://www.ompl.co.in/ ಗೆ ಭೇಟಿ ನೀಡಿ ಮಾಹಿತಿಯನ್ನು ಭರ್ತಿ ಮಾಡಿ ಜನವರಿ 1,2021ರೊಳಗೆ ಅರ್ಜಿ ಸಲ್ಲಿಸಬೇಕು.
Published by: Harshith AS
First published: December 4, 2020, 9:37 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories