ನಾಳೆ ಸರ್ದಾರ್ ಪಟೇಲ್‌ 144ನೇ ಜನ್ಮದಿನ: ‘ಏಕತಾ ದಿವಸ್‘​​ ಮೆರವಣಿಗೆಯಲ್ಲಿ ಪ್ರಧಾನಿ ಮೋದಿ ಭಾಗಿ

ಕೇಂದ್ರ ಸರ್ಕಾರ ಆಯೋಜಿಸಿರುವ ಏಕತಾ ದಿವಸ ಪಥಸಂಚಲನದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗಿಯಾಗಲಿದ್ದಾರೆ. ಈ ಪಥಸಂಚಲನದಲ್ಲಿ ಪಾಲ್ಗೊಳ್ಳುವ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ.

news18-kannada
Updated:October 30, 2019, 6:07 PM IST
ನಾಳೆ ಸರ್ದಾರ್ ಪಟೇಲ್‌ 144ನೇ ಜನ್ಮದಿನ: ‘ಏಕತಾ ದಿವಸ್‘​​ ಮೆರವಣಿಗೆಯಲ್ಲಿ ಪ್ರಧಾನಿ ಮೋದಿ ಭಾಗಿ
ಏಕತಾ ಪ್ರತಿಮೆ ವೀಕ್ಷಿಸುತ್ತಿರುವ ಮೋದಿ
  • Share this:
ನವದೆಹಲಿ(ಅ.30): ನಾಳೆ ದೇಶಾದ್ಯಂತ ಉಕ್ಕಿನ ಮನುಷ್ಯ ಸರ್ದಾರ್ ಪಟೇಲ್‌ 144ನೇ ಜನ್ಮದಿನಾಚರಣೆ ಮಾಡಲಾಗುತ್ತಿದೆ. ಸರ್ದಾರ್ ಪಟೇಲ್‌ ಜನ್ಮದಿನದ ಅಂಗವಾಗಿ ಕೇಂದ್ರ ಸರ್ಕಾರ ಏಕತಾ ದಿವಸ್​ ಆಚರಿಸುತ್ತಿದೆ. ಖುದ್ದು ಪ್ರಧಾನಿ ನರೇಂದ್ರ ಮೋದಿಯವರೇ ಗುಜರಾತ್‌ನ ನರ್ಮದಾ ನದಿ ತೀರದಲ್ಲಿರುವ ಏಕತಾ ಪ್ರತಿಮೆಗೆ ಗೌರವ ಸಲ್ಲಿಸಲಿದ್ದಾರೆ.

ಕೇಂದ್ರ ಸರ್ಕಾರ ಆಯೋಜಿಸಿರುವ ಏಕತಾ ದಿವಸ ಪಥಸಂಚಲನದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗಿಯಾಗಲಿದ್ದಾರೆ. ಈ ಪಥಸಂಚಲನದಲ್ಲಿ ಪಾಲ್ಗೊಳ್ಳುವ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ. 2014ರಿಂದಲೂ ಅ.31ರಂದು ರಾಷ್ಟ್ರೀಯ ಏಕತಾ ದಿವಸ ಆಚರಿಸಲಾಗುತ್ತಿದೆ. ಈ ವರ್ಷವೂ ಕೇಂದ್ರ ಸರ್ಕಾರ ಏಕತಾ ದಿವಸ ಆಚರಿಸುತ್ತಿದ್ದು, ​​​ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗಿಯಾಗಲಿದ್ದಾರೆ.

ಕಳೆದ ವರ್ಷವೇ ಗುಜರಾತ್‌ನ ನರ್ಮದಾ ನದಿ ತೀರದಲ್ಲಿ ನಿರ್ಮಾಣ ವಾಗಿರುವ ಸರ್ದಾರ್‌ ವಲ್ಲಭ ಭಾಯಿ ಪಟೇಲ್‌ ಅವರ ಪ್ರತಿಮೆಯನ್ನು ಪ್ರಧಾನಿ ಲೋಕಾರ್ಪಣೆ ಮಾಡಿದ್ದರು. ವಿಶೇಷವೆಂದರೆ, ಪ್ರತಿ ವರ್ಷದ ಜ.26ರಂದು ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಕಾರ್ಯಕ್ರಮದ ಮಾದರಿಯಲ್ಲೇ ಪಟೇಲ್‌ ಪ್ರತಿಮೆ ಅನಾವರಣ ಕಾರ್ಯಕ್ರಮ ನಡೆದಿತ್ತು.

ಇದನ್ನೂ ಓದಿ: ಮಹಾರಾಷ್ಟ್ರ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಮತ್ತೆ ದೇವೇಂದ್ರ ಫಡ್ನವೀಸ್​​ ಆಯ್ಕೆ

ವಿಶ್ವದ ಅತಿ ದೊಡ್ಡ ಪ್ರತಿಮೆ ಎಂದೇ ಖ್ಯಾತಿ ಪಡೆದಿರುವ ಏಕತಾ ಪ್ರತಿಮೆಗೆ ಇಲ್ಲಿಯವರೆಗೂ 26 ಲಕ್ಷ ಮಂದಿ ಭೇಟಿ ನೀಡಿದ್ದಾರೆ. ಈ ಬಗ್ಗೆ ಸ್ವತಃ ಪ್ರಧಾನಿ ಮೋದಿಯವರೇ ಮಾಹಿತಿ ನೀಡಿದ್ದಾರೆ. ಈ ಏಕತಾ ಪ್ರತಿಮೆ ಭಾರತ ಸೇರಿದಂತೆ ಇತರೆ ಪ್ರಜಾಪ್ರಭುತ್ವ ರಾಷ್ಟ್ರಗಳಿಗೆ ಮಹತ್ವದ ಸಂಶೋಧನೆಯ ವಿಷಯವಾಗಬಹುದು ಎಂದು ಮೋದಿ ಅಭಿಪ್ರಾಯಪಟ್ಟಿದ್ದಾರೆ.

ಜೆಡಿಎಸ್ ವರಿಷ್ಠ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಗುಜರಾತ್ ಪ್ರವಾಸಕ್ಕೆ ತೆರಳಿದ ವೇಳೆ ಸರ್ದಾರ್ ವಲ್ಲಭಭಾಯ್ ಪಟೇಲ್ ಏಕತಾ ಮೂರ್ತಿ ವೀಕ್ಷಿಸಿದ್ದರು. ನರ್ಮದಾ ನದಿ ತಟದಲ್ಲಿರುವ ಏಕತಾ ಪ್ರತಿಮೆಗೆ ದೇವೇಗೌಡರು ನಮಿಸಿದ್ದಾರೆ. ಇದನ್ನು ಪ್ರಧಾನಿ ಮೋದಿಯವರೇ ಖುದ್ದು ತಮ್ಮ ಟ್ವಿಟ್ಟರ್​​ನಲ್ಲಿ ಪೋಸ್ಟ್​ ಮಾಡಿದ್ದರು.
-----------
First published:October 30, 2019
ಮತ್ತಷ್ಟು ಓದಿರಿ
ಮುಂದಿನ ಸುದ್ದಿ
corona virus btn
corona virus btn
Loading