Sushma ChakreSushma Chakre
|
news18-kannada Updated:January 26, 2021, 8:20 AM IST
ಪತನವಾದ ಹೆಲಿಕಾಪ್ಟರ್
ಶ್ರೀನಗರ (ಜ. 26): ಜಮ್ಮು ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ ನಿನ್ನೆ ಸಂಜೆ ಭಾರತೀಯ ಸೇನೆಯ ಹೆಲಿಕಾಪ್ಟರ್ ಎಎಲ್ಎಚ್ ಧ್ರುವ ಪತನವಾಗಿದೆ. ಈ ಅಪಘಾತದಲ್ಲಿ ಓರ್ವ ಪೈಲಟ್ ಸಾವನ್ನಪ್ಪಿದ್ದು, ಇನ್ನೊಬ್ಬರ ಸ್ಥಿತಿ ಗಂಭೀರವಾಗಿದೆ. ತೀವ್ರವಾಗಿ ಗಾಯಗೊಂಡಿದ್ದ ಇನ್ನೋರ್ವ ಪೈಲಟ್ಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಹೆಲಿಕಾಪ್ಟರ್ ಪತನವಾಗಲು ಕಾರಣವೇನೆಂಬುದು ಇನ್ನೂ ತಿಳಿದುಬಂದಿಲ್ಲ.
ಸೋಮವಾರ ಸಂಜೆ 7.15ರ ಸುಮಾರಿಗೆ ಕಥುವಾ ಜಿಲ್ಲೆಯ ಲಖನ್ಪುರದಲ್ಲಿ ಭಾರತೀಯ ಸೇನಾ ಚಾಪರ್ ಧ್ರುವ ಪತನವಾಗಿದೆ. ಹೆಲಿಕಾಪ್ಟರ್ನಲ್ಲಿದ್ದ ಇಬ್ಬರು ಪೈಲಟ್ಗಳನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಗಂಭೀರವಾಗಿ ಗಾಯಗೊಂಡಿದ್ದ ಪೈಲಟ್ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಇನ್ನೊಬ್ಬರ ಆರೋಗ್ಯ ಸ್ಥಿತಿಯೂ ಗಂಭೀರವಾಗಿದ್ದು, ಮಿಲಿಟರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಈ ಹೆಲಿಕಾಪ್ಟರ್ ಪಠಾನ್ಕೋಟ್ನಿಂದ ಆಗಮಿಸುತ್ತಿತ್ತು. ಸೇನಾ ನೆಲೆಯಲ್ಲಿ ಹೆಲಿಕಾಪ್ಟರ್ ಅನ್ನು ಲ್ಯಾಂಡ್ ಮಾಡುವಾಗ ಇದ್ದಕ್ಕಿದ್ದಂತೆ ಪತನವಾಗಿದೆ. ಈ ಬಗ್ಗೆ ರಕ್ಷಣಾ ಇಲಾಖೆಯ ವಕ್ತಾರರು ಕೂಡ ಮಾಹಿತಿ ನೀಡಿದ್ದು, ಓರ್ವ ಪೈಲಟ್ ಸಾವನ್ನಪ್ಪಿರುವುದಾಗಿ ಖಚಿತಪಡಿಸಿದ್ದಾರೆ.
Published by:
Sushma Chakre
First published:
January 26, 2021, 8:20 AM IST