Lakhimpur Kheri Violence: ಕೇಂದ್ರ ಸರ್ಕಾರದ ನಡೆ ಖಂಡಿಸಿ ಪ್ರತಿಪಕ್ಷಗಳಿಂದ ಪ್ರತಿಭಟನಾ ಮೆರವಣಿಗೆ

ಲಖೀಂಪುರ್ ಖೇರಿ ರೈತರ ಹತ್ಯಾಕಾಂಡವೂ ಸೇರಿದಂತೆ ಪ್ರಮುಖ ವಿಷಯಗಳ ಚರ್ಚೆಗೆ ಅವಕಾಶ ಕೊಡದ ಕೇಂದ್ರ ಸರ್ಕಾರದ ನಡೆ ವಿರುದ್ಧ ಸಿಡಿದೆದ್ದ ಪ್ರತಿಪಕ್ಷಗಳು ಇಂದು ಸಂಸತ್ ಭವನದಿಂದ ವಿಜಯ್ ಚೌಕ್ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದವು.

ಪ್ರತಿಭಟನಾ ನಿರತ ಪ್ರತಿಪಕ್ಷ ನಾಯಕರು

ಪ್ರತಿಭಟನಾ ನಿರತ ಪ್ರತಿಪಕ್ಷ ನಾಯಕರು

  • Share this:
ನವದೆಹಲಿ, ಡಿ.‌ 21: ಕೇಂದ್ರ ಗೃಹ ಖಾತೆಯ ರಾಜ್ಯ ಸಚಿವ ಅಜಯ್‌ ಮಿಶ್ರಾ (Union Minister Ajay Mishra) ಅವರ ಪುತ್ರ ಆಶೀಶ್ ಮಿಶ್ರಾ ಅವರೇ ಹತ್ಯಾಕಾಂಡಕ್ಕೆ ಕಾರಣ ಎನ್ನಲಾಗುತ್ತಿರುವ ಉತ್ತರ ಪ್ರದೇಶದ (Uttar Pradesh) ಲಖಿಂಪುರ ಖೇರಿ ಪ್ರಕರಣದ (Lakhimpura Kheri Violence) ಬಗ್ಗೆ ಸಂಸತ್ತಿನ‌ ಚಳಿಗಾಲದ ಅಧಿವೇಶನದಲ್ಲಿ ಚರ್ಚೆ ಮಾಡಲು ಅವಕಾಶ ನೀಡಬೇಕೆಂದು ಕಾಂಗ್ರೆಸ್ (Congress) ನೇತೃತ್ವದಲ್ಲಿ ಪ್ರತಿಪಕ್ಷಗಳು ಮಾಡುತ್ತಿರುವ ಮನವಿಯನ್ನು ಪುರಸ್ಕರಿಸದ ಹಾಗೂ ಪ್ರಮುಖ ವಿಷಯಗಳ ಚರ್ಚೆಗೆ ಅವಕಾಶ ಕೊಡದ ಕೇಂದ್ರ ಸರ್ಕಾರದ ನಡೆ ವಿರುದ್ಧ ಸಿಡಿದೆದ್ದ ಪ್ರತಿಪಕ್ಷಗಳು ಇಂದು ಸಂಸತ್ ಭವನದಿಂದ ವಿಜಯ್ ಚೌಕ್ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದವು.

ಲಖಿಂಪುರ ಖೇರಿಯಲ್ಲಿ ನಡೆದ ರೈತರ ಹತ್ಯಾಕಾಂಡಕ್ಕೆ ಕೇಂದ್ರ ಗೃಹ ಖಾತೆಯ ರಾಜ್ಯ ಸಚಿವ ಅಜಯ್‌ ಮಿಶ್ರಾ ಮತ್ತು ಅವರ ಪುತ್ರ ಆಶೀಶ್ ಮಿಶ್ರಾ ಅವರೇ ಕಾರಣ. ಆಶಿಶ್ ಮಿಶ್ರಾ ಕಾರು ಹರಿಸಿದ ಪರಿಣಾಮದಿಂದಾಗಿಯೇ ರೈತರ ಸಾವು ಸಂಭವಿಸಿದೆ ಎಂದು ಕಾಂಗ್ರೆಸ್ ನಾಯಕ ಹಾಗೂ ಸಂಸದ ರಾಹುಲ್ ಗಾಂಧಿ (Congress Leader Rahul Gandhi) ಅವರು ಆರೋಪ ಮಾಡಿದ್ದರಲ್ಲದೆ, ಅಜಯ್ ಮಿಶ್ರಾ ಅವರನ್ನು ಕೇಂದ್ರ ಸಚಿವ ಸಂಪುಟದಿಂದ ಕೈಬಿಡಬೇಕೆಂದು ಕೂಡ ಆಗ್ರಹಿಸಿದ್ದರು.

ಸ್ಪೀಕರ್​ಗೂ ಮನವಿ ಸಲ್ಲಿಸಲಾಗಿದೆ

ಘಟನೆಯಲ್ಲಿ ಕೇಂದ್ರ ಸಚಿವರ ಪಾತ್ರ ಇರುವ ಹಿನ್ನೆಲೆಯಲ್ಲಿ ಲೋಕಸಭೆಯಲ್ಲಿ ವಿಷಯ ಚರ್ಚೆ ಆಗಬೇಕು ಎಂದು ಸ್ಪೀಕರ್ ಓಂ ಬಿರ್ಲಾ  (Loksabha Speaker Om Birla) ಅವರಿಗೆ ಮನವಿಯನ್ನೂ ಮಾಡಿದ್ದರು. ಆದರೆ ಕೇಂದ್ರ ಸರ್ಕಾರ ಮಾತ್ರ ಚರ್ಚೆಗೆ ಸುತಾರಾಂ ಸಿದ್ದವಿಲ್ಲ. ಇದರಿಂದಾಗಿಯೇ ಈ ಬಾರಿಯ ಚಳಿಗಾಲದ ಅಧಿವೇಶನ ಸರಿಯಾಗಿ ನಡೆಯುತ್ತಿಲ್ಲ. ಆದರೂ ಭಂಡತನ ಬಿಡದ ಕೇಂದ್ರ ಸರ್ಕಾರ ಚರ್ಚೆಗೆ ಅವಕಾಶ ಮಾಡಿಕೊಟ್ಟಿಲ್ಲ. ಹಾಗಾಗಿ ಇಷ್ಟು ದಿವಸ ಸದನದಲ್ಲಿ ಒಳಗಡೆ ಪ್ರತಿಭಟನೆ ಮಾಡುತ್ತಿದ್ದ ಪ್ರತಿಪಕ್ಷಗಳು ಇಂದು ಸದನದ ಹೊರಗೂ ಪ್ರತಿಭಟನೆಗೆ ಮುಂದಾದವು.

ಇದನ್ನೂ ಓದಿ: Lakhimpur Kheri Violence: ರೈತರ ಹತ್ಯಾಕಾಂಡದ ಬಗ್ಗೆ ಚರ್ಚೆಗೆ ಕಾಂಗ್ರೆಸ್ ಪಟ್ಟು, ಕೇಂದ್ರ ಸರ್ಕಾರ ನಕಾರ

ಇಂದು ಬೆಳಿಗ್ಗೆಯೇ ಲಖಿಂಪುರ ಖೇರಿ ರೈತರ ಹತ್ಯಾಕಾಂಡದ ಬಗ್ಗೆ ಲೋಕಸಭೆಯಲ್ಲಿ ಚರ್ಚೆಗೆ ಅವಕಾಶ ಕೋರಿಕಾಂಗ್ರೆಸ್ ಸಂಸದ ಮಾಣಿಕ್ ಟ್ಯಾಗೂರ್ ಸ್ಪೀಕರ್ ಗೆ ಮನವಿ ಮಾಡಿದ್ದರು. ಹತ್ಯಾಕಾಂಡದಲ್ಲಿ ಕೇಂದ್ರ ಗೃಹ ಖಾತೆಯ ರಾಜ್ಯ ಸಚಿವ ಅಜಯ್ ಮಿಶ್ರಾ ಪಾತ್ರದ ಬಗ್ಗೆ ಚರ್ಚೆಗೆ ಅವಕಾಶ ಕೊಡಿ ಎಂದು ಕೇಳಿಕೊಂಡಿದ್ದರು.

ಬೇರೆ ದಾರಿ ಇಲ್ಲದೇ ಪ್ರತಿಭಟನೆ

ಇದಕ್ಕೂ ಮೊದಲು ಲೋಕಸಭೆಯಲ್ಲಿ ಕಾಂಗ್ರೆಸ್ ನಾಯಕರಾಗಿರುವ ಅಧೀರ್ ರಂಜನ್ ಚೌಧರಿ (Adhir Ranjan Chowdhari) ಮತ್ತಿತರರು ಕೂಡ ಮನವಿ ಮಾಡಿದ್ದರು. ಹೀಗೆ ಪ್ರತಿಪಕ್ಷ ಪರಿಪರಿಯಾಗಿ ಬೇಡಿಕೊಂಡರೂ ಕೇಂದ ಸರ್ಕಾರ ಮಾತ್ರ ರೈತರ ಹತ್ಯಾಕಾಂಡದ ಬಗ್ಗೆ ಚರ್ಚೆ ಮಾಡಲು ಅವಕಾಶ ಕೊಡಲಿಲ್ಲ‌. ಅದರಿಂದ ಈಗ ಪ್ರತಿಪಕ್ಷಗಳು ಒಟ್ಟಾಗಿ ಪ್ರತಿಭಟನೆಗೆ ಮುಂದಾಗಿವೆ.

ಇದನ್ನೂ ಓದಿ: ಲಂಖೀಪುರ ಹತ್ಯಾಕಾಂಡ ಯೋಜಿತ ಪಿತೂರಿ ಎಂದ ವರದಿ

ಇಂದು ಬೆಳಿಗ್ಗೆ ರಾಜ್ಯಸಭೆಯ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ (Mallikarjuna Kharge) ಅವರ ನೇತೃತ್ವದಲ್ಲಿ ವಿಪಕ್ಷಗಳ ಸಭೆ ನಡೆಸಿ ಪ್ರಮುಖ ವಿಷಯಗಳ ಚರ್ಚೆಗೆ ಅವಕಾಶ ಕೊಡದ ಕೇಂದ್ರ ಸರ್ಕಾರದ ನಡೆಗಳಿಗೆ ಪ್ರತಿಯಾಗಿ ಪ್ರತಿಪಕ್ಷಗಳು ಏನು ಮಾಡಬೇಕೆಂದು ಚರ್ಚೆ ಮಾಡಲಾಯಿತು. ಒಂದು ವೇಳೆ ಇಂದು ಕೂಡ ಚರ್ಚೆಗೆ ಅವಕಾಶ ಕೊಡದಿದ್ದರೆ ಪ್ರತಿಪಕ್ಷಗಳು ಜಂಟಿ ಸುದ್ದಿಗೋಷ್ಠಿ ಮತ್ತು ಸಂಸತ್ ಭವನದಿಂದ ವಿಜಯ್ ಚೌಕ್ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲು ನಿರ್ಧರಿಸಿದ್ದವು. ಅದರಂತೆ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಮತ್ತಿತರರ ನೇತೃತ್ವದಲ್ಲಿ ಸಂಸತ್ ಭವನದಿಂದ ವಿಜಯ್ ಚೌಕ್ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.

ಪ್ರತಿಭಟನಾ ಮೆರವಣಿಗೆಯಲ್ಲಿ ನಾಯಕರು ಭಾಗಿ

ಸಂಸತ್ ಭವನದಿಂದ ವಿಜಯ್ ಚೌಕ್ ವರೆಗೆ ಪ್ರತಿಭಟನಾ ಮೆರವಣಿಗೆ ವೇಳೆ ಲಖೀಂಪುರ ಖೇರಿ ರೈತರ ಹತ್ಯಾಕಾಂಡದ ರೂವಾರಿ ಎನ್ನಲಾಗುತ್ತಿರುವ ಕೇಂದ್ರ ಗೃಹ ಖಾತೆಯ ರಾಜ್ಯ ಸಚಿವ ಅಜಯ್ ಮಿಶ್ರಾ ಟೆನಿ ರಾಜೀನಾಮೆಗೆ ಆಗ್ರಹ ಮಾಡಲಾಯಿತು.
ರಾಜ್ಯಸಭೆಯಲ್ಲಿ ಕಾಂಗ್ರೆಸ್ ವಿಪ್ ಚುನಾವಣಾ ತಿದ್ದುಪಡಿ ಮಸೂದೆ ಮಂಡನೆಗೆ ಪ್ರತಿಪಕ್ಷಗಳು ವಿರೋಧ ವ್ಯಕ್ತಪಡಿಸುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ತನ್ನ ಪಕ್ಷದ ಸಂಸದರಿಗೆ ರಾಜ್ಯಸಭೆಯಲ್ಲಿ ವಿಪ್ ಜಾರಿ ಮಾಡಿದೆ.

ಮಸೂದೆ ಮಂಡನೆ ವೇಳೆ ಎಲ್ಲಾ ಸಂಸದರು ತಪ್ಪದೆ ಹಾಜರಿದ್ದು ವಿರೋಧ ವ್ಯಕ್ತಪಡಿಸಬೇಕೆಂದು ಸೂಚನೆ ನೀಡಿದೆ. ಕೇಂದ್ರ ಸರ್ಕಾರ ತರುತ್ತಿರುವ ಚುನಾವಣಾ ತಿದ್ದುಪಡಿ ಮಸೂದೆಯಲ್ಲಿ ಕೆಲವು ಲೋಪದೋಷಗಳಿದ್ದು ಅವುಗಳ ಬಗ್ಗೆ ಚರ್ಚೆ ಮಾಡಲು ಮತ್ತು ತಿದ್ದುಪಡಿ ಮಾಡಲು ಮಸೂದೆಯನ್ನು ಜಂಟಿ ಸದನ ಸಮಿತಿಗೆ ಕಳುಹಿಸಬೇಕೆಂದು ಪ್ರತಿಪಕ್ಷಗಳು ಕೇಳುತ್ತಿವೆ.
Published by:Soumya KN
First published: