‘ಸಿಎಎ ಯಾರ ಪೌರತ್ವವೂ ಕಸಿದುಕೊಳ್ಳುವುದಿಲ್ಲ‘; ಕೇಂದ್ರ ಗೃಹ ಸಚಿವ ಅಮಿತ್​​​ ಶಾ ಮರು ಸ್ಪಷ್ಟನೆ

ಸಿಎಎ ಕುರಿತಂತೆ ವಿರೋಧ ಪಕ್ಷಗಳು ಸುಳ್ಳು ಸುದ್ದಿ ಯಾಕೇ ಹರಡುತ್ತಿವೆ ಎಂದು ಗೊತ್ತಿಲ್ಲ. ನಿರಾಶ್ರಿತರಿಗೆ ಪೌರತ್ವ ನೀಡುವ ಕಾಯ್ದೆ ಸಿಎಎ, ಇದರರ್ಥ ಯಾರೊಬ್ಬರು ಪೌರತ್ವ ಕಳೆದುಕೊಳ್ಳುವುದಿಲ್ಲ. ಬದಲಿಗೆ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದ ಮುಸ್ಲಿಮೇತರ ನಿರಾಶ್ರಿತರಿಗೆ ಪೌರತ್ವ ನೀಡಲಿದೆ. ಈ ಉದ್ದೇಶದಿಂದಲೇ ಸಿಎಎ ಜಾರಿಗೆ ತರಲಾಗಿದೆ ಎಂದು ಅಮಿತ್​​ ಶಾ ಪುನರುಚ್ಚರಿಸಿದರು.

news18-kannada
Updated:February 28, 2020, 6:28 PM IST
‘ಸಿಎಎ ಯಾರ ಪೌರತ್ವವೂ ಕಸಿದುಕೊಳ್ಳುವುದಿಲ್ಲ‘; ಕೇಂದ್ರ ಗೃಹ ಸಚಿವ ಅಮಿತ್​​​ ಶಾ ಮರು ಸ್ಪಷ್ಟನೆ
ಕೇಂದ್ರ ಗೃಹ ಸಚಿವ ಅಮಿತ್​​ ಶಾ
  • Share this:
ನವದೆಹಲಿ(ಫೆ.28): ರಾಷ್ಟ್ರೀಯ ನಾಗರಿಕ ನೋಂದಣಿ ಮತ್ತು ಪೌರತ್ವ ಕಾಯ್ದೆಯಿಂದ ದೇಶದ ಪ್ರಜೆಗಳಿಗೆ ಯಾವುದೇ ತೊಂದರೆಯಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್​​ ಶಾ ಮರು ಸ್ಪಷ್ಟನೆ ನೀಡಿದ್ದಾರೆ. ಇಂದು ಒರಿಸ್ಸಾ ರಾಜಧಾನಿ ಭುವನೇಶ್ವರದಲ್ಲಿ ನಡೆದ ಬಿಜೆಪಿ ಸಮಾವೇಶವನ್ನುದ್ದೇಶಿಸಿ ಮಾತಾಡಿದ ಅಮಿತ್​​ ಶಾ, ಸಿಎಎ ಮತ್ತು ಎನ್​​ಆರ್​​ಸಿ ಬಗ್ಗೆ ವಿರೋಧ ಪಕ್ಷಗಳು ಸುಳ್ಳು ಹಬ್ಬಿಸುತ್ತಿವೆ. ಇದರಿಂದ ದೇಶಾದ್ಯಂತ ಮಾರಣಾಂತಿಕ ಘಟನೆಗಳು ಸಂಭವಿಸುತ್ತಿವೆ. ಆದರೆ, ಸಿಎಎ ಕಾಯ್ದೆ ಯಾರೊಬ್ಬರ ಪೌರತ್ವ ಕಸಿದುಕೊಳ್ಳುವ ಉದ್ದೇಶ ಹೊಂದಿಲ್ಲ ಎಂದರು.

ಇನ್ನು, ಪೌರತ್ವ ಕಾಯ್ದೆ ಟೀಕಿಸುವ ಭರದಲ್ಲಿ ಪ್ರತಿಪಕ್ಷಗಳು ಸುಳ್ಳು ಸುದ್ದಿ ಹಬ್ಬಿಸುತ್ತಿವೆ. ಬಹುಜನ ಸಮಾಜ ಪಕ್ಷ(ಬಿಎಸ್​​ಪಿ), ಸಮಾಜವಾದಿ ಪಕ್ಷ(ಎಸ್​ಪಿ), ಕಮ್ಯೂನಿಸ್ಟ್​, ಕಾಂಗ್ರೆಸ್​ ಸೇರಿದಂತೆ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಜತೆಗೆ ಹಲವು ಪಕ್ಷಗಳು ಸಿಎಎ ವಿರುದ್ಧ ನಿಂತಿದ್ದಾರೆ. ಸಿಎಎ ಅಲ್ಪಸಂಖ್ಯಾತರ ಪೌರತ್ವ ಕಸಿದುಕೊಳ್ಳಲಿದೆ ಎನ್ನುವ ಮೂಲಕ ಇಡೀ ದೇಶವನ್ನು ದಿಕ್ಕು ತಪ್ಪಿಸುತ್ತಿವೆ ಎಂದು ಅಮಿತ್​​ ಶಾ ದೂರಿದರು.

ಸಿಎಎ ಕುರಿತಂತೆ ವಿರೋಧ ಪಕ್ಷಗಳು ಸುಳ್ಳು ಸುದ್ದಿ ಯಾಕೇ ಹರಡುತ್ತಿವೆ ಎಂದು ಗೊತ್ತಿಲ್ಲ. ನಿರಾಶ್ರಿತರಿಗೆ ಪೌರತ್ವ ನೀಡುವ ಕಾಯ್ದೆ ಸಿಎಎ, ಇದರರ್ಥ ಯಾರೊಬ್ಬರು ಪೌರತ್ವ ಕಳೆದುಕೊಳ್ಳುವುದಿಲ್ಲ. ಬದಲಿಗೆ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದ ಮುಸ್ಲಿಮೇತರ ನಿರಾಶ್ರಿತರಿಗೆ ಪೌರತ್ವ ನೀಡಲಿದೆ. ಈ ಉದ್ದೇಶದಿಂದಲೇ ಸಿಎಎ ಜಾರಿಗೆ ತರಲಾಗಿದೆ ಎಂದು ಪುನರುಚ್ಚರಿಸಿದರು.

ಇದನ್ನೂ ಓದಿ: ದೆಹಲಿ ಹಿಂಸಾಚಾರ: ಪ್ರಚೋದನಕಾರಿ ಭಾಷಣ; ಕೇಂದ್ರ, ದಿಲ್ಲಿ ಸರ್ಕಾರ ಮತ್ತು ಪೊಲೀಸರಿಗೆ ಹೈಕೋರ್ಟ್​ ನೋಟಿಸ್​​

ರಾಷ್ಟ್ರೀಯ ನಾಗರಿಕ ನೋಂದಣಿ ಮತ್ತು ಪೌರತ್ವ ಕಾಯ್ದೆ ಪರ-ವಿರೋಧಿ ಗುಂಪುಗಳ ನಡುವಿನ ಘರ್ಷಣೆಯಿಂದ ದೆಹಲಿಯಲ್ಲಿ ಹಿಂಸಾಚಾರ ಹೆಚ್ಚುತ್ತಲ್ಲೇ ಇದೆ. ಈ ಬೆನ್ನಲ್ಲೇ ಎಚ್ಚೆತ್ತ ದೆಹಲಿ ಪೊಲೀಸರು ಕಂಡಲ್ಲಿ ಗುಂಡಿಕ್ಕಲು ಆದೇಶ ಹೊರಡಿಸಿದ್ದಾರೆ. ಈ ಆದೇಶ ಈಶಾನ್ಯ ದೆಹಲಿಯ ಹಲವೆಡೆ ಜಾರಿಯಲ್ಲಿದ್ದು, ಹಿಂಸಾಚಾರ ತಡೆಗಟ್ಟಲು ಕಠಿಣ ಆದೇಶ ಹೊರಡಿಸಲಾಗಿದೆ. ಈ ಮಧ್ಯೆ ಸಿಎಎ ಬಗ್ಗೆ ಪ್ರಚೋದನಕಾರಿ ಹೇಳಿಕೆ ನೀಡುವವರನ್ನು ವಿರುದ್ಧ ಕಠಿಣ ಕ್ರಮಕೈಗೊಳ್ಳಿ ಎಂದು ಸುಪ್ರೀಂಕೋರ್ಟ್ ಪೊಲೀಸರಿಗೆ ನಿರ್ದೇಶನ ನೀಡಿತ್ತು.

ದೆಹಲಿ ಹಿಂಸಾಚಾರ ಸಂಬಂಧ ಸುಪ್ರೀಂಕೋರ್ಟ್​ಗೆ ಯಾವುದೇ ಅರ್ಜಿ ಸಲ್ಲಿಕೆಯಾಗಿಲ್ಲ. ಇಲ್ಲಿನ ಹಿಂಸಾಚಾರವೂ ದೆಹಲಿ ಹೈಕೋರ್ಟ್ ವ್ಯಾಪ್ತಿಗೆ ಬರಲಿದೆ. ಯಾರೇ ಆಗಲಿ ಅಲ್ಲಿಯೇ ಸರ್ಜಿ ಸಲ್ಲಿಸಬಹುದು. ಈ ವಿಚಾರದಲ್ಲಿ ಸುಪ್ರೀಂಕೋರ್ಟ್ ಮಧ್ಯಪ್ರವೇಶ ಮಾಡುವುದಿಲ್ಲ ಎಂದು ದ್ವಿಸದಸ್ಯ ಪೀಠವು ತಿಳಿಸಿತ್ತು. ಅದರಂತೆಯೇ ದೆಹಲಿ ಹಿಂಸಾಚಾರದ ಸಂಬಂಧ ಹಲವು ಅರ್ಜಿಗಳು ಇಲ್ಲಿನ ಹೈಕೋರ್ಟ್​ಗೆ ಸಲ್ಲಿಕೆಯಾಗಿವು. ಇದರ ವಿಚಾರಣೆ ನಡೆಸುತ್ತಿರುವ ದೆಹಲಿ ಹೈಕೋರ್ಟ್​ ಹೀಗೆ ಆದೇಶ ನೀಡಿ ಪ್ರಕರಣ ಇತ್ಯರ್ಥ ಮಾಡುತ್ತಿದೆ.
First published: February 28, 2020, 6:23 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading