‘ಚುನಾವಣೆಯಲ್ಲಿ ಸೋತವರು ಈಗ ದೇಶದ ಜನರ ದಿಕ್ಕು ತಪ್ಪಿಸುತ್ತಿದ್ದಾರೆ‘: ಪ್ರಧಾನಿ ನರೇಂದ್ರ ಮೋದಿ

ಇಡೀ ದೇಶಾದ್ಯಂತ ಅಮಿತ್​​ ಶಾ ಅವರು ಬಿಜೆಪಿಯನ್ನು ಬಲಪಡಿಸಿದರು. ಅಮಿತ್​​ ಶಾರಂತೆಯೇ ನಮ್ಮ ಕಾರ್ಯಕರ್ತರು ಬಿಜೆಪಿಯನ್ನು ಮತ್ತಷ್ಟು ಬಲವರ್ಧನೆಗೊಳಿಸಬೇಕು ಎಂದರು. ಜತೆಗೆ ಪೌರತ್ವ ಕಾಯ್ದೆಯ ಕುರಿತು ಜಾಗೃತಿ ಮೂಡಿಸಬೇಕೆಂದು ಎಂದು ಮೋದಿ ಹೇಳಿದರು.

news18-kannada
Updated:January 20, 2020, 9:18 PM IST
‘ಚುನಾವಣೆಯಲ್ಲಿ ಸೋತವರು ಈಗ ದೇಶದ ಜನರ ದಿಕ್ಕು ತಪ್ಪಿಸುತ್ತಿದ್ದಾರೆ‘: ಪ್ರಧಾನಿ ನರೇಂದ್ರ ಮೋದಿ
ನರೇಂದ್ರ ಮೋದಿ
  • Share this:
ನವದೆಹಲಿ(ಜ.20): ಕಳೆದ ಲೋಕಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋತವರೀಗ ದೇಶದ ಜನರ ದಿಕ್ಕು ತಪ್ಪಿಸುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ. ಇಂದು ದೆಹಲಿಯ ಭಾರತೀಯ ಜನತಾ ಪಕ್ಷದ ಕೇಂದ್ರ ಕಚೇರಿಯಲ್ಲಿ ಬಿಜೆಪಿ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಅವಿರೋಧ ಆಯ್ಕೆಯಾದ ಜೆ.ಪಿ. ನಡ್ಡಾರಿಗೆ ಅಭಿನಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮವನ್ನುದ್ದೇಶಿಸಿ ಮಾತಾಡಿ ಪ್ರಧಾನಿ ನರೇಂದ್ರ ಮೋದಿ ಹೀಗೆ ಕಾಂಗ್ರೆಸ್​ ಸೇರಿದಂತೆ ವಿಪಕ್ಷಗಳ ವಿರುದ್ಧ ಕಿಡಿಕಾರಿದರು.

"ಚುನಾವಣೆಯಲ್ಲಿ ಜನರಿಂದ ತಿರಸ್ಕರಿಸಲ್ಪಟ್ಟವರೀಗ ದೇಶದಲ್ಲಿ ಸುಳ್ಳು ವದಂತಿಗಳನ್ನು ಹರಡುತ್ತಿದ್ದಾರೆ. ಈ ಮೂಲಕ ಪೌರತ್ವ ಕಾಯ್ದೆ ವಿಚಾರದಲ್ಲಿ ಗೊಂದಲ ಸೃಷ್ಟಿಸುತ್ತಿದ್ದಾರೆ. ಹಾಗಾಗಿ ಬಿಜೆಪಿ ಕಾರ್ಯಕರ್ತರು ಹೆಚ್ಟು ಸಕ್ರಿಯರಾಗಿ ಜನರಿಗೆ ಸತ್ಯವನ್ನು ತಿಳಿಸಿ" ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದರು.

ಕೇಂದ್ರ ಗೃಹ ಸಚಿವ ಅಮಿತ್​​ ಶಾರ ನೇತೃತ್ವದಲ್ಲಿ ಬಿಜೆಪಿ ಪಕ್ಷ ಮುನ್ನಡೆಯುತ್ತಿತ್ತು. ಇದರ ಫಲವಾಗಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಭಾರೀ ಬಹುಮತ ಪಡೆದಿದ್ದೇವೆ. ಇಡೀ ದೇಶಾದ್ಯಂತ ಅಮಿತ್​​ ಶಾ ಅವರು ಬಿಜೆಪಿಯನ್ನು ಬಲಪಡಿಸಿದರು. ಅಮಿತ್​​ ಶಾರಂತೆಯೇ ನಮ್ಮ ಕಾರ್ಯಕರ್ತರು ಬಿಜೆಪಿಯನ್ನು ಮತ್ತಷ್ಟು ಬಲವರ್ಧನೆಗೊಳಿಸಬೇಕು ಎಂದರು. ಜತೆಗೆ ಪೌರತ್ವ ಕಾಯ್ದೆಯ ಕುರಿತು ಜಾಗೃತಿ ಮೂಡಿಸಬೇಕೆಂದು ಎಂದು ಹೇಳಿದರು.

ಇದನ್ನೂ ಓದಿ: ಟಿಪ್ಪು ಇತಿಹಾಸವನ್ನು ಈ ವರ್ಷ ಪಠ್ಯ ಪುಸ್ತಕದಿಂದ ಕೈಬಿಡಲಾಗುವುದಿಲ್ಲ; ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ

ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಯಾಗಿದೆ. ತಿದ್ದುಪಡಿ ಮಸೂದೆಗೆ ಲೋಕಸಭೆ ಮತ್ತು ರಾಜ್ಯಸಭೆ ಎರಡರಲ್ಲೂ ಅನುಮೋದನೆ ಸಿಗುತ್ತಿದ್ದಂತೆಯೇ ದೇಶದ ಹಲವೆಡೆ ಪ್ರತಿಭಟನೆಗಳು ಭುಗಿಲೆದ್ದಿವೆ. ಈಶಾನ್ಯ ಭಾರತದ ರಾಜ್ಯಗಳಲ್ಲಿ ಪ್ರತಿಭಟನೆಗಳು ಮೊದಲಿಟ್ಟವು. ನಂತರ ಇದು ರಾಜಧಾನಿ ದೆಹಲಿಯಲ್ಲಿ ಮಾರ್ದನಿಸಿತು. ದೇಶದ ವಿವಿಧೆಡೆ ಅಲ್ಲಲ್ಲಿ ಪ್ರತಿಭಟನೆಗಳು ನಡೆಯುತ್ತಲೇ ಇವೆ.

ಈಶಾನ್ಯ ರಾಜ್ಯಗಳು ಸಾಂಸ್ಕೃತಿಕವಾಗಿ ಮತ್ತು ನೈಸರ್ಗಿಕವಾಗಿ ವೈಶಿಷ್ಟ್ಯತೆಗಳನ್ನು ಹೊಂದಿವೆ. ಬಾಂಗ್ಲಾದೇಶದಿಂದ ಅಕ್ರಮವಾಗಿ ವಲಸೆ ಬಂದಿರುವ ಅನೇಕ ಜನರು ಈಶಾನ್ಯ ರಾಜ್ಯಗಳಲ್ಲಿ ಸೇರಿಕೊಂಡಿದ್ದಾರೆ. ಅಸ್ಸಾಮ್​ನಲ್ಲಿ ಈ ಸಮಸ್ಯೆ ಅತೀ ಹೆಚ್ಚು ಇದೆ. ಭಾರತದ ಇತರ ಭಾಗದಿಂದ, ಅದರಲ್ಲೂ ಪಶ್ಚಿಮ ಬಂಗಾಳದಿಂದಲೂ ಹೋಗಿ ನೆಲಸಿದವರಿದ್ಧಾರೆ. ಅಸ್ಸಾಮ್​ನಲ್ಲಿ ನೆಲಸಿರುವ ಹಿಂದೂ ಮತ್ತು ಮುಸ್ಲಿಮ್ ಬಂಗಾಳಿಗಳು ಯಾವತ್ತೂ ಕೂಡ ಸ್ಥಳೀಯ ಸಂಸ್ಕೃತಿಯನ್ನು ಅಪ್ಪಿಕೊಂಡವರಲ್ಲ. ಮೂಲ ನಿವಾಸಿಗರ ಪ್ರಮಾಣ ಶೇ. 50ರಷ್ಟು ಕೂಡ ಇಲ್ಲ. ಇದು ಅಲ್ಲಿನ ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ. ಇದೇ ಕಾರಣಕ್ಕೆ ಅಲ್ಲಿ ಉಗ್ರ ಸಂಘಟನೆಗಳು ತಲೆ ಎತ್ತಿ ನಿಂತಿರುವುದು. ರಾಷ್ಟ್ರೀಯ ಪೌರತ್ವ ನೊಂದಣಿ ನಡೆಸಿ ವಿದೇಶಿ ಅಕ್ರಮ ವಲಸಿಗರನ್ನು ಹೊರಗೆ ಕಳುಹಿಸಬೇಕು ಎಂಬ ಆಗ್ರಹ ಹಲವು ದಶಕಗಳಿಂದಲೂ ಅಲ್ಲಿ ಇದೆ. ಈಗ ಅಲ್ಲಿ ಎನ್​ಆರ್​ಸಿ ಯೋಜನೆ ಜಾರಿಗೆ ಬಂದಿದೆ. ಆದರೆ, ಎನ್​ಆರ್​ಸಿ ಪಟ್ಟಿಯು ಸ್ಥಳೀಯರಿಗೆ ಸಮಾಧಾನ ತಂದಿಲ್ಲ. ಕೋಟಿಗಟ್ಟಲೆ ಅಕ್ರಮ ವಲಸಿಗರು ರಾಜ್ಯದಲ್ಲಿ ಇದ್ದಾರೆ ಎಂಬ ಅಂದಾಜು ಇದ್ದರೂ ಎನ್​ಆರ್​ಸಿ ಪಟ್ಟಿಯಿಂದ ಹೊರಗುಳಿದವರ ಸಂಖ್ಯೆ ಕೆಲವೇ ಲಕ್ಷ ಮಾತ್ರ. ಎನ್​ಆರ್​ಸಿ ಪಟ್ಟಿಯಲ್ಲಿ ಸ್ಥಳೀಯ ನಿವಾಸಿಗಳ ಹೆಸರೂ ಇಲ್ಲ ಎಂದು ಹೇಳಲಾಗುತ್ತಿದೆ. ಇದು ಅಸ್ಸಾಮಿಗರ ಆಕ್ರೋಶಕ್ಕೆ ಕಾರಣವಾಗಿದೆ.
First published: January 20, 2020, 9:10 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading