Parliament Session: ಅಧಿವೇಶನದ ಹಿನ್ನೆಲೆಯಲ್ಲಿ 28ಕ್ಕೆ ಸರ್ವಪಕ್ಷ ಸಭೆ; 29ಕ್ಕೆ ವಿಪಕ್ಷ ನಾಯಕರ ಸಭೆ

ನ. 29ರಂದು ರಾಜ್ಯಸಭಾ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಸಂಸತ್ ಭವನದ ತಮ್ಮ ಕಚೇರಿಯಲ್ಲಿ ವಿಪಕ್ಷಗಳ ನಾಯಕರ ಸಭೆ ಕರೆದಿದ್ದಾರೆ. ಸದನದಲ್ಲಿ ಆಡಳಿತ ಪಕ್ಷದ ವಿರುದ್ಧ ಹೋರಾಡುವ ಬಗ್ಗೆ ಚರ್ಚೆ ಮಾಡಲೆಂದು ಈ ಸಭೆ ಕರೆಯಲಾಗಿದೆ. 

ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ

ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ

  • Share this:
ನವದೆಹಲಿ, ನ. 25: ಸಂಸತ್ ಚಳಿಗಾಲದ ಅಧಿವೇಶನ (Parliament Session) ನವೆಂಬರ್‌ 29ರಿಂದ ಆರಂಭವಾಗಲಿದ್ದು ಪ್ರಧಾನ ಮಂತ್ರಿ ನರೇಂದ್ರ ಮೋದಿ (Prime Minister Narendara Modi)  ಕೇಂದ್ರ ಸರ್ಕಾರ ತಂದಿದ್ದ ಮೂರು ರೈತ ವಿರೋಧಿ ಕೃಷಿ ಕಾನೂನುಗಳನ್ನು (Three Agricultural Laws) ವಾಪಸ್ ತೆಗೆದುಕೊಳ್ಳಲಾಗುವುದು ಎಂದು ಘೋಷಣೆ ಮಾಡಿರುವುದರಿಂದ ಆ ಮೂರು‌ ವಿವಾದಾತ್ಮಕ ಕೃಷಿ ಮಸೂದೆಗಳು ಹಾಗೂ ಇತ್ತೀಚೆಗೆ ದೇಶದಲ್ಲಿ ಭಾರೀ ಚರ್ಚೆ ಆಗುತ್ತಿರುವ ಕ್ರಿಪ್ಟೋ ಕರೆನ್ಸಿ (Crypto Currency) ಕುರಿತಾದ ಕ್ರಿಪ್ಟೊ ಕರೆನ್ಸಿ ನಿಯಂತ್ರಣ ಮಸೂದೆ ಸೇರಿದಂತೆ 26 ಹೊಸ ಮಸೂದೆಗಳನ್ನು ಈ ಬಾರಿಯ ಅಧಿವೇಶನದಲ್ಲಿ ಮಂಡಿಸಲು ಕೇಂದ್ರ ಸರ್ಕಾರ ಸಜ್ಜಾಗಿದೆ. ಈ ನಡುವೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ಹಲವು ವಿಷಯಗಳಲ್ಲಿ ಬಿರುಸಿನ‌ ಚರ್ಚೆ ಆಗುವ ಸಂಭವವಿದೆ.

ಕೃಷಿ ಮಸೂದೆ ಹಿಂಪಡೆಯಲು ಸಿದ್ಧತೆ

ಕೃಷಿ ಉತ್ಪನ್ನಗಳ ವ್ಯಾಪಾರ ಮತ್ತು ವಾಣಿಜ್ಯ (ಪ್ರಚಾರ ಮತ್ತು ನೆರವು) ಕಾಯ್ದೆ, ದರ ಭರವಸೆ ಮತ್ತು ಕೃಷಿ ಸೇವೆಗಳಿಗೆ ರೈತರ (ಸಬಲೀಕರಣ ಮತ್ತು ರಕ್ಷಣೆ) ಒಪ್ಪಿಗೆ ಕಾಯ್ದೆ ಮತ್ತು ಅಗತ್ಯ ವಸ್ತುಗಳ (ತಿದ್ದುಪಡಿ) ಕಾಯ್ದೆಗಳನ್ನು ಹಿಂದಕ್ಕೆ ಪಡೆಯುವುದಾಗಿ ಈಗಾಗಲೇ ಪ್ರಧಾನಿ ಮೋದಿ ಘೋಷಣೆ ಮಾಡಿರುವುದರಿಂದ ಈ‌ ಕಾಯಿದೆಗಳನ್ನು ವಾಪಸ್ ಪಡೆಯಲು ಮತ್ತೆ ಮಸೂದೆಗಳ ರೂಪದಲ್ಲಿ ಸಂಸತ್ತಿನಲ್ಲಿ ಮಂಡಿಸಿ ಸಂಸತ್ತಿನ ಅಂಗೀಕಾರ ಪಡೆಯಬೇಕಾಗಿದೆ. ಈ ಹಿನ್ನೆಲೆಯಲ್ಲಿ ನವೆಂಬರ್ 24ರಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಈ ಮಸೂದೆಗಳನ್ನು ಇಟ್ಟು ಒಪ್ಪಿಗೆ ಪಡೆಯಲಾಗಿದೆ. ಇದೇ ರೀತಿ ಎಲ್ಲಾ 26 ಮಸೂದೆಗಳನ್ನು ಮಂಡಿಸಲು ಕೇಂದ್ರ ಸರ್ಕಾರ (Union Government) ಸಿದ್ದತೆ ಮಾಡಿಕೊಂಡಿದೆ.‌

ಸರ್ವಪಕ್ಷ ಸಭೆ

ಆದರೆ ಕೆಲವು ಮಸೂದೆಗಳ ವಿಷಯದಲ್ಲಿ ಪ್ರತಿಪಕ್ಷಗಳು ಆಕ್ಷೇಪ ವ್ಯಕ್ತಪಡಿಸುವ ಸಾಧ್ಯತೆ ಇದೆ. ಇದೇ ಹಿನ್ನೆಲೆಯಲ್ಲಿ ಬಿಜೆಪಿ (BJP) ನವೆಂಬರ್ ‌ 28ರಂದು ಸರ್ವಪಕ್ಷಗಳ ಸಭೆ (All Party Meeting) ಕರೆದಿದೆ. ಇದಲ್ಲದೆ ಬಿಜೆಪಿ ಸಂಸದೀಯ ಪಕ್ಷದ ಹಾಗೂ ಎನ್ ಡಿಎ (NDA) ಮೈತ್ರಿ ಕೂಟದ ಸಭೆಯನ್ನು ನಡೆಸಲಿದೆ. ಪ್ರಧಾನಿ ಮೋದಿ ಖುದ್ದು ಸಭೆಯಲ್ಲಿ ಹಾಜರಿದ್ದು ಸರ್ಕಾರದ ನಿಲುವುಗಳನ್ನು ತಿಳಿಸುವ ಸಾಧ್ಯತೆ ಇದೆ. ಇದಲ್ಲದೆ ನವೆಂಬರ್ 29ರಂದು ರಾಜ್ಯಸಭಾ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ (Opposition Leader Mallikarjuna Karge)  ಅವರು ಸಂಸತ್ ಭವನದ ತಮ್ಮ ಕಚೇರಿಯಲ್ಲಿ ವಿಪಕ್ಷಗಳ ನಾಯಕರ ಸಭೆ ಕರೆದಿದ್ದಾರೆ. ಸದನದಲ್ಲಿ ಆಡಳಿತ ಪಕ್ಷದ ವಿರುದ್ಧ ಹೋರಾಡುವ ಬಗ್ಗೆ ಚರ್ಚೆ ಮಾಡಲೆಂದು ಈ ಸಭೆಯನ್ನು ಕರೆಯಲಾಗಿದೆ.

ಮಂಡನೆಗೆ ಸಿದ್ದವಾಗಿರುವ ಮಸೂದೆಗಳ ಮಾಹಿತಿ ಈ ರೀತಿ ಇದೆ.

1.ಕ್ರಿಪ್ಟೋಕರೆನ್ಸಿ ಮತ್ತು ಅಧಿಕೃತ ಡಿಜಿಟಲ್ ಕರೆನ್ಸಿ ನಿಯಂತ್ರಣ ಮಸೂದೆ 2021
2.ದಿವಾಳಿ ಮತ್ತು ದಿವಾಳಿತನ ನೀತಿ (ಎರಡನೇ ತಿದ್ದುಪಡಿ) ಮಸೂದೆ
3.‌ ಬ್ಯಾಂಕಿಂಗ್‌ ಕಾನೂನು (ತಿದ್ದುಪಡಿ) ಮಸೂದೆ 2021
4. ರೈತರ ಉತ್ಪನ್ನ ವ್ಯಾಪಾರ ಮತ್ತು ವಾಣಿಜ್ಯ (ಪ್ರಚಾರ ಮತ್ತು ಅನುಕೂಲ) ಕಾಯಿದೆ, 2020, ರೈತರ (ಸಬಲೀಕರಣ ಮತ್ತು ರಕ್ಷಣೆ) ಬೆಲೆ ಭರವಸೆ, ಕೃಷಿ ಸೇವೆಗಳ ಕಾಯಿದೆ, 2020; ಅಗತ್ಯ ಸರಕುಗಳ (ತಿದ್ದುಪಡಿ) ಕಾಯಿದೆ, 2020- ಈ ಕಾಯ್ದೆಗಳನ್ನು ರದ್ದುಪಡಿಸುವ ಮಸೂದೆ 2021
5. ವ್ಯಾಜ್ಯಪೂರ್ವ ಮಧ್ಯಸ್ಥಿಕೆ, ತುರ್ತು ಪರಿಹಾರ ಕೋರಿದರೆ ಸಮರ್ಥ ನ್ಯಾಯಾಧಿಕರಣ ವೇದಿಕೆಗಳು/ನ್ಯಾಯಾಲಯಗಳನ್ನು ಸಂಪರ್ಕಿಸಲು ದಾವೆದಾರರ ಹಿತಾಸಕ್ತಿ ಕಾಪಾಡುವ ಮಧ್ಯಸ್ಥಿಕೆ ಮಸೂದೆ, 2021
6.ಪಿಂಚಣಿ ನಿಧಿ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ (ತಿದ್ದುಪಡಿ) ಮಸೂದೆ, 2021
7. ಪ್ಯಾರಿಸ್ ಒಪ್ಪಂದವನ್ನು ಕಾರ್ಯಗತಗೊಳಿಸುವ ನಿಟ್ಟಿನಲ್ಲಿ ಹಣಕಾಸು, ತಾಂತ್ರಿಕ ಮತ್ತು ಸಾಮರ್ಥ್ಯ ನಿರ್ಮಾಣ ಮಾಡುವ ಇಂಧನ ಸಂರಕ್ಷಣೆ (ತಿದ್ದುಪಡಿ) ಮಸೂದೆ, 2021
8.ಚಾರ್ಟರ್ಡ್ ಅಕೌಂಟೆಂಟ್ಸ್, ಕಾಸ್ಟ್ ಅಂಡ್ ವರ್ಕ್ಸ್ ಅಕೌಂಟೆಂಟ್ಸ್ ಮತ್ತು ಕಂಪನಿ ಸೆಕ್ರೆಟರಿಗಳ (ತಿದ್ದುಪಡಿ) ಮಸೂದೆ
9. ವಿದ್ಯುಚ್ಛಕ್ತಿ ವಿತರಣಾ ವ್ಯವಹಾರಗಳಿಗೆ ಪರವಾನಗಿ ನೀಡುವುದು, ವಿದ್ಯುತ್ ದಂಡಕ್ಕಾಗಿ ಮೇಲ್ಮನವಿ ನ್ಯಾಯಾಧಿಕರಣ ಬಲಪಡಿಸುವ ವಿದ್ಯುಚ್ಛಕ್ತಿ (ತಿದ್ದುಪಡಿ) ಮಸೂದೆ, 2021
10. ನಾರ್ಕೋಟಿಕ್ ಡ್ರಗ್ಸ್ ಮತ್ತು ಸೈಕೋಟಿಕ್ ಸಬ್ಸ್ಟೆನ್ಸ್ (ತಿದ್ದುಪಡಿ) ಮಸೂದೆ

ಇದನ್ನು ಓದಿ: ದಕ್ಷಿಣ ಆಫ್ರಿಕಾದಲ್ಲಿ ಹೊಸ ತಳಿ ಪತ್ತೆ, ಭಾರೀ ವೇಗದಲ್ಲಿ ಹರಡುತ್ತಿದೆ ವೈರಸ್!

11. ಕೇಂದ್ರ ಜಾಗೃತ ಆಯೋಗ (ತಿದ್ದುಪಡಿ) ಮಸೂದೆ
12. ದೆಹಲಿ ವಿಶೇಷ ಪೊಲೀಸ್ ಸ್ಥಾಪನೆ (ತಿದ್ದುಪಡಿ) ಮಸೂದೆ
13. ಕಂಟೋನ್ಮೆಂಟ್ ಮಸೂದೆ
14. ಅಂತರ-ಸೇವೆಗಳ ಸಂಸ್ಥೆಗಳು (ಕಮಾಂಡ್, ನಿಯಂತ್ರಣ ಮತ್ತು ಶಿಸ್ತು) ಮಸೂದೆ
15. ಭಾರತೀಯ ಅಂಟಾರ್ಟಿಕಾ ಮಸೂದೆ
16. ಎಮಿಗ್ರೇಷನ್ ಮಸೂದೆ
17. ಭಾರತೀಯ ಸಮುದ್ರ ಮೀನುಗಾರಿಕೆ ಮಸೂದೆ
18. ರಾಷ್ಟ್ರೀಯ ದಂತ ಆಯೋಗದ ಮಸೂದೆ
19. ರಾಷ್ಟ್ರೀಯ ನರ್ಸಿಂಗ್ ಮಿಡ್‌ವೈಫರಿ ಕಮಿಷನ್ ಬಿಲ್
20. ಮೆಟ್ರೋ ರೈಲು (ನಿರ್ಮಾಣ, ಕಾರ್ಯಾಚರಣೆ ಮತ್ತು ನಿರ್ವಹಣೆ) ಮಸೂದೆ
21. ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ನ್ಯಾಯಾಧೀಶರು (ಸಂಬಳ ಮತ್ತು ಸೇವಾ ಷರತ್ತುಗಳು) ತಿದ್ದುಪಡಿ ಮಸೂದೆ
22. ರಾಷ್ಟ್ರೀಯ ಸಾರಿಗೆ ವಿಶ್ವವಿದ್ಯಾಲಯದ ಮಸೂದೆ
23. ಸಂವಿಧಾನ (ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳು) ಆದೇಶ (ತಿದ್ದುಪಡಿ) ಮಸೂದೆ

ಇದನ್ನು ಓದಿ: ಮುಂಬೈ ಡೆಡ್ಲಿ ದಾಳಿಗೆ 13 ವರ್ಷ: ಕರಾಳ ದಿನ ನೆನೆದ ದೇಶದ ಜನತೆ!

24. ಸಂವಿಧಾನ (ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳು) ಆದೇಶ (ತಿದ್ದುಪಡಿ) ಮಸೂದೆ 25. ಮಾನವ ಕಳ್ಳಸಾಗಣೆ (ತಡೆಗಟ್ಟುವಿಕೆ, ರಕ್ಷಣೆ ಮತ್ತು ಪುನರ್ವಸತಿ) ಮಸೂದೆ
26. ರಾಷ್ಟ್ರೀಯ ಡೋಪಿಂಗ್ ವಿರೋಧಿ ಮಸೂದೆ.
ಈ ಪೈಕಿ ಮೂರು ಕೃಷಿ ಕಾನೂನುಗಳನ್ನು ಹಿಂಪಡೆಯುವ ಮಸೂದೆಗಳನ್ನು ಸಂಸತ್ತಿನ ಚಳಿಗಾಲದ ಅಧಿವೇಶನದ ಮೊದಲ ದಿನವಾದ ನವೆಂಬರ್ 29ರಂದೇ ಮಂಡಿಸಲಾಗುತ್ತದೆ. ಆಡಳಿತಾರೂಢ ಬಿಜೆಪಿಗೆ ಲೋಕಸಭೆಯಲ್ಲಿ (Lokasabha) ಸಂಖ್ಯಾಬಲ ಇರುವುದರಿಂದ ಸಮಸ್ಯೆ ಇಲ್ಲ. ರಾಜ್ಯಸಭೆಯಲ್ಲಿ (Rajyasabha) ಬಹುಮತ ಇಲ್ಲದ ಕಾರಣ ಕೃಷಿ ಕಾನೂನುಗಳನ್ನು ಹಿಂತೆಗೆದುಕೊಳ್ಳುವ ಮಸೂದೆ ಮಂಡನೆ ವೇಳೆ ತನ್ನ ಸದಸ್ಯರೆಲ್ಲರೂ ಸದನದಲ್ಲಿ ಕಡ್ಡಾಯವಾಗಿ ಹಾಜರಿರಬೇಕು ಎಂದು ವಿಪ್ ಜಾರಿ ಮಾಡಿದೆ.
Published by:Seema R
First published: