7 ತಿಂಗಳಿನಿಂದ ಬಂಧನದಲ್ಲಿರುವ ಮಗ ಓಮರ್ ಅಬ್ದುಲ್ಲಾ ಭೇಟಿ ಮಾಡಿದ ಫಾರೂಕ್ ಅಬ್ದುಲ್ಲಾ
ಸದ್ಯ ಅಬ್ದುಲ್ಲಾ ಅವರನ್ನು ಬಂಧನದಿಂದ ಬಿಡುಗಡೆ ಮಾಡಲಾಗಿದೆ. ಕಳೆದ 7 ತಿಂಗಳಲ್ಲಿ ಇದೇ ಮೊದಲ ಬಾರಿಗೆ ಫಾರೂಕ್ ಅಬ್ದುಲ್ಲಾ ತಮ್ಮ ಮಗ ಓಮರ್ ಅಬ್ದುಲ್ಲಾ ಅವರನ್ನು ಭೇಟಿಯಾಗಿ ಸುಮಾರು 1 ಗಂಟೆ ಮಾತುಕತೆ ನಡೆಸಿದರು.
ಶ್ರೀನಗರ(ಮಾ.14): ಕಳೆದ 7 ತಿಂಗಳಿಂದ ಬಂಧನದಲ್ಲಿದ್ದು ನೆನ್ನೆ ಬಿಡುಗಡೆಗೊಂಡ ನ್ಯಾಷನಲ್ ಕಾನ್ಫೆರೆನ್ಸ್ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಇಂದು ತಮ್ಮ ಮಗ ಓಮರ್ ಅಬ್ದುಲ್ಲಾ ಅವರನ್ನು ಶ್ರೀನಗರದ ಉಪ ಜೈಲಿನಲ್ಲಿ ಭೇಟಿಯಾದರು. ಇದೊಂದು ಭಾವನಾತ್ಮಕ ಭೇಟಿಯಾಗಿತ್ತು.
ಸಾರ್ವಜನಿಕ ರಕ್ಷಣಾ ಕಾಯ್ದೆಯಡಿ ಬಂಧನಕ್ಕೊಳಗಾಗಿದ್ದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಅವರನ್ನು ಶುಕ್ರವಾರ ಬಿಡುಗಡೆ ಮಾಡಲಾಯಿತು. ಫಾರೂಕ್ ಅಬ್ದುಲ್ಲಾ ಅವರನ್ನು ಜಮ್ಮು ಕಾಶ್ಮೀರದಲ್ಲಿ ವಿಶೇಷ ಸ್ಥಾನಮಾನವನ್ನು ರದ್ದುಪಡಿಸಿದ ದಿನದಿಂದ ಶ್ರೀನಗರದ ಉಪ ಜೈಲಿನಲ್ಲಿ ಇರಿಸಲಾಗಿತ್ತು.
82 ವರ್ಷದ ಫಾರೂಕ್ ಅಬ್ದುಲ್ಲಾ ತಮ್ಮ ಮಗನನ್ನು ನೋಡಲು ಅವಕಾಶ ಮಾಡಿಕೊಡುವಂತೆ ಜಮ್ಮು ಮತ್ತು ಕಾಶ್ಮೀರದ ಆಡಳಿತ ಮಂಡಳಿಯಲ್ಲಿ ಮನವಿ ಮಾಡಿದ್ದರು. ಅನುಮತಿ ಕೂಡ ಸಿಕ್ಕಿತ್ತು. ಸದ್ಯ ಅಬ್ದುಲ್ಲಾ ಅವರನ್ನು ಬಂಧನದಿಂದ ಬಿಡುಗಡೆ ಮಾಡಲಾಗಿದೆ. ಕಳೆದ 7 ತಿಂಗಳಲ್ಲಿ ಇದೇ ಮೊದಲ ಬಾರಿಗೆ ಫಾರೂಕ್ ಅಬ್ದುಲ್ಲಾ ತಮ್ಮ ಮಗ ಓಮರ್ ಅಬ್ದುಲ್ಲಾ ಅವರನ್ನು ಭೇಟಿಯಾಗಿ ಸುಮಾರು 1 ಗಂಟೆ ಮಾತುಕತೆ ನಡೆಸಿದರು.
ಫಾರೂಕ್ ಅಬ್ದುಲ್ಲಾ, ಓಮರ್ ಅಬ್ದುಲ್ಲಾ ಮತ್ತು ಇನ್ನಿತರ ನಾಯಕರು, ಬೇರೆ ಮುಖ್ಯಮಂತ್ರಿಗಳು, ಪೀಪಲ್ಸ್ ಡೆಮಾಕ್ರೆಟಿಕ್ ಪಾರ್ಟಿ(ಪಿಡಿಪಿ) ಅಧ್ಯಕ್ಷ ಮೆಹಬೂಬಾ ಮುಫ್ತಿ ಇನ್ನೂ ಮೊದಲಾದವರನ್ನು ಕಳೆದ ವರ್ಷ ಆಗಸ್ಟ್ 5ರಿಂದ ಬಂಧನಲ್ಲಿರಿಸಲಾಗಿತ್ತು. ಸಾರ್ವಜನಿಕ ರಕ್ಷಣಾ ಕಾಯ್ದೆ(ಪಿಎಸ್ಎ)ಯಡಿ ಸೆಪ್ಟೆಂಬರ್ 15ರಂದು ದಿ ನ್ಯಾಷನಲ್ ಕಾನ್ಫೆರೆನ್ಸ್(ಎನ್ಸಿ) ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಮೇಲೆ ಪ್ರಕರಣ ದಾಖಲಿಸಲಾಗಿತ್ತು.