ಮತ್ತೆ 14 ದಿನ ಚಿದಂಬರಂ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ; ಇಡಿ ಮನವಿಗೆ ಆಕ್ಷೇಪಣೆ ಸಲ್ಲಿಸದ ಕೇಂದ್ರದ ಮಾಜಿ ಸಚಿವರ ವಕೀಲರು

ಆರೋಪಿಯ ಹೆಚ್ಚಿನ ವಿಚಾರಣೆಗಾಗಿ ನ್ಯಾಯಾಂಗ ಬಂಧನ ಅವಧಿಯನ್ನು 14 ದಿನಗಳ ಕಾಲ ವಿಸ್ತರಿಸುವಂತೆ ಕೋರಿ ಜಾರಿ ನಿರ್ದೇಶನಾಲಯ ನ್ಯಾಯಾಲಯದಲ್ಲಿ ಮನವಿ ಮಾಡಿತ್ತು. ಇ.ಡಿ ಮನವಿಯನ್ನು ಪುರಸ್ಕರಿಸಿದ ನ್ಯಾಯಾಲಯ ಮತ್ತೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ಅವಧಿಯನ್ನು ವಿಸ್ತರಿಸಿದೆ.

HR Ramesh | news18-kannada
Updated:November 27, 2019, 4:45 PM IST
ಮತ್ತೆ 14 ದಿನ ಚಿದಂಬರಂ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ; ಇಡಿ ಮನವಿಗೆ ಆಕ್ಷೇಪಣೆ ಸಲ್ಲಿಸದ ಕೇಂದ್ರದ ಮಾಜಿ ಸಚಿವರ ವಕೀಲರು
ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ
  • Share this:
ನವದೆಹಲಿ: ಐಎನ್​ಎಕ್ಸ್ ಮೀಡಿಯಾ ಪ್ರಕರಣ ಸಂಬಂಧ ನ್ಯಾಯಾಂಗ ಬಂಧನದಲ್ಲಿ ಇರುವ ಕೇಂದ್ರದ ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಅವರ ನ್ಯಾಯಾಂಗ ಬಂಧನ ಅವಧಿಯನ್ನು ಡಿಸೆಂಬರ್ 11 ವಿಸ್ತರಿಸಿ ದೆಹಲಿ ವಿಶೇಷ ನ್ಯಾಯಾಲಯ ಬುಧವಾರ ಆದೇಶ ನೀಡಿದೆ.

ಪಿ.ಚಿದಂಬರಂ ಅವರ ನ್ಯಾಯಾಂಗ ಬಂಧನ ಅವಧಿಯನ್ನು 14 ದಿನಗಳ ಕಾಲ ವಿಸ್ತರಿಸುವಂತೆ ಕೋರಿ ಜಾರಿ ನಿರ್ದೇಶನಾಲಯ ಮಾಡಿದ್ದ ಮನವಿಯನ್ನು ಪುರಸ್ಕರಿಸಿದ ವಿಶೇಷ ನ್ಯಾಯಾಲಯದ ನ್ಯಾ.ಅಜಯ್ ಕುಮಾರ್ ಕುಹಾರ್ ಅವರು ಈ ಆದೇಶ ನೀಡಿದ್ದಾರೆ. ಕೇಂದ್ರ ಸಂಸ್ಥೆ ಮಾಡಿದ್ದ ಮನವಿಗೆ 74 ವರ್ಷದ ಹಿರಿಯ ಕಾಂಗ್ರೆಸ್ ನಾಯಕ ಚಿದಂಬರಂ ಅವರ ವಕೀಲರು ಯಾವುದೇ ವಿರೋಧ ಮಾಡಲಿಲ್ಲ.

ಕಳೆದ ತಿಂಗಳು ಆರೋಗ್ಯ ಸ್ಥಿತಿಯನ್ನು ಉಲ್ಲೇಖಿಸಿ ಚಿದಂಬರಂ ಮಧ್ಯಂತರ ಜಾಮೀನು ಕೋರಿದ್ದರು. ಆದರೆ ಇದನ್ನು ಪರಿಗಣಿಸದ ನ್ಯಾಯಾಲಯ ನವೆಂಬರ್​ 13ರವರೆಗೆ ನ್ಯಾಯಾಂಗ ಬಂಧನದ ಆದೇಶ ನೀಡಿತ್ತು. ಬಳಿಕ ನವೆಂಬರ್ 13ರಂದು ನ್ಯಾಯಾಂಗ ಬಂಧನ ಅಂತ್ಯವಾದ ಹಿನ್ನೆಲೆಯಲ್ಲಿ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ, ಚಿದಂಬರಂ ಅವರ ನ್ಯಾಯಾಂಗ ಬಂಧನವನ್ನು ನವೆಂಬರ್ 27ರವರೆಗೂ ವಿಸ್ತರಣೆ ಮಾಡಿತ್ತು. ಇಂದು ನ್ಯಾಯಾಂಗ ಬಂಧನ ಮುಕ್ತಾಯವಾಗಿತ್ತು. ಪ್ರಕರಣದ ವಿಚಾರಣೆ ನಡೆಯುತ್ತಿದ್ದು, ಆರೋಪಿಯ ಹೆಚ್ಚಿನ ವಿಚಾರಣೆಗಾಗಿ ನ್ಯಾಯಾಂಗ ಬಂಧನ ಅವಧಿಯನ್ನು 14 ದಿನಗಳ ಕಾಲ ವಿಸ್ತರಿಸುವಂತೆ ಕೋರಿ ಜಾರಿ ನಿರ್ದೇಶನಾಲಯ ನ್ಯಾಯಾಲಯದಲ್ಲಿ ಮನವಿ ಮಾಡಿತ್ತು. ಇ.ಡಿ ಮನವಿಯನ್ನು ಪುರಸ್ಕರಿಸಿದ ನ್ಯಾಯಾಲಯ ಮತ್ತೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ಅವಧಿಯನ್ನು ವಿಸ್ತರಿಸಿದೆ. ಈ ಮೂಲಕ ಕಾಂಗ್ರೆಸ್​ ಹಿರಿಯ ನಾಯಕನಿಗೆ ಬಂಧ ಮುಕ್ತಿ ಸದ್ಯಕ್ಕಿಲ್ಲ ಎಂಬುದು ಖಚಿತವಾಗಿದೆ.

ಇದನ್ನು ಓದಿ: ಚಿದಂಬರಂಗಿಲ್ಲ ರಿಲೀಫ್​; ನವೆಂಬರ್​ 27ರ ವರೆಗೆ ನ್ಯಾಯಾಂಗ ಬಂಧನ ಮುಂದೂಡಿಕೆ

First published: November 27, 2019, 4:45 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading