370ನೇ ವಿಧಿ ರದ್ದು; ಕಾಶ್ಮೀರ ವಿಷಯವನ್ನು ಅಂತಾರಾಷ್ಟ್ರೀಯ ನ್ಯಾಯಾಲಯಕ್ಕೆ ಕೊಂಡೊಯ್ಯಲು ನಿರ್ಧರಿಸಲಾಗಿದೆ ಎಂದ ಪಾಕ್ ಸಚಿವ

ಜಮ್ಮು-ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಪ್ರಾತಿನಿಧ್ಯದ 370ನೇ ವಿಧಿಯನ್ನು ಭಾರತ ಹಿಂಪಡೆದು, ಈ ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳನ್ನಾಗಿ ಘೋಷಿಸಿದ್ದು, ಭಾರತ ಮತ್ತು ಪಾಕಿಸ್ತಾನ ನಡುವಿನ ಪರಿಸ್ಥಿತಿ ಮತ್ತಷ್ಟು ವಿಷಮಗೊಂಡಿದೆ.

HR Ramesh | news18-kannada
Updated:August 21, 2019, 9:44 AM IST
370ನೇ ವಿಧಿ ರದ್ದು; ಕಾಶ್ಮೀರ ವಿಷಯವನ್ನು ಅಂತಾರಾಷ್ಟ್ರೀಯ ನ್ಯಾಯಾಲಯಕ್ಕೆ ಕೊಂಡೊಯ್ಯಲು ನಿರ್ಧರಿಸಲಾಗಿದೆ ಎಂದ ಪಾಕ್ ಸಚಿವ
ಪಾಕಿಸ್ತಾನ ವಿದೇಶಾಂಗ ಸಚಿವ ಶಾ ಮೆಹಮೊದ್​ ಖುರೇಷಿ
  • Share this:
ಇಸ್ಲಾಮಾಬಾದ್​: ಕಾಶ್ಮೀರ ವಿವಾದ ಸಂಬಂಧ ನ್ಯಾಯಕ್ಕಾಗಿ ಪಾಕಿಸ್ತಾನ ಅಂತಾರಾಷ್ಟ್ರೀಯ ನ್ಯಾಯಾಲಯದ ಮೊರೆ ಹೋಗಲಿದೆ ಎಂದು ಪಾಕ್​ ಮಂಗಳವಾರ ಹೇಳಿದೆ. ಇದೇ ತಿಂಗಳ ಆರಂಭದಲ್ಲಿ ಜಮ್ಮು-ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಪ್ರಾತಿನಿಧ್ಯವನ್ನು ಭಾರತ ತೆಗೆದುಹಾಕಿದ್ದು, ಇಸ್ಲಾಮಾಬಾದ್​ ಕೋಪಕ್ಕೆ ಕಾರಣವಾಗಿದೆ.

ಕಾಶ್ಮೀರ ಪ್ರಕರಣವನ್ನು ನಾವು ಅಂತಾರಾಷ್ಟ್ರೀಯ ನ್ಯಾಯಾಲಯ ತೆಗೆದುಕೊಂಡು ಹೋಗಲು ತೀರ್ಮಾನಿದ್ದೇವೆ. ಎಲ್ಲ ಆಯಾಮಗಳಿಂದ ಯೋಚಿಸಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಪಾಕಿಸ್ತಾನ ವಿದೇಶಾಂಗ ಸಚಿವ ಶಾ ಮೆಹಮೊದ್​ ಖುರೇಷಿ ಹೇಳಿದ್ದಾರೆ.

ಇದನ್ನು ಓದಿ: ಕಾಶ್ಮೀರ ವಿಚಾರ ಕುರಿತು ದೂರವಾಣಿ ಸಂಭಾಷಣೆ ನಡೆಸಿದ ಮೋದಿ-ಟ್ರಂಪ್​
ಜಮ್ಮು-ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಪ್ರಾತಿನಿಧ್ಯದ 370ನೇ ವಿಧಿಯನ್ನು ಭಾರತ ಹಿಂಪಡೆದು, ಈ ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳನ್ನಾಗಿ ಘೋಷಿಸಿದ್ದು, ಭಾರತ ಮತ್ತು ಪಾಕಿಸ್ತಾನ ನಡುವಿನ ಪರಿಸ್ಥಿತಿ ಮತ್ತಷ್ಟು ವಿಷಮಗೊಂಡಿದೆ.ಕ್ಷಣಕ್ಷಣದ ಬ್ರೇಕಿಂಗ್ ನ್ಯೂಸ್ ಅಲರ್ಟ್​​ಗಾಗಿ ನಿಮ್ಮ ನ್ಯೂಸ್18 ಕನ್ನಡವನ್ನು ಫೇಸ್​ಬುಕ್ ಮೆಸೆಂಜರ್​ನಲ್ಲಿ ಸಬ್​ಸ್ಕ್ರೈಬ್​ ಮಾಡಲು ಇಲ್ಲಿ ಕ್ಲಿಕ್​ ಮಾಡಿ


First published: August 20, 2019, 9:54 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading