ಮಹಾರಾಷ್ಟ್ರದಲ್ಲಿ ಪ್ರಜಾಪ್ರಭುತ್ವದ ಕೊಲೆ ನಡೆದಿದೆ; ಸಂಸತ್ತಿನಲ್ಲಿ ರಾಹುಲ್ ಗಾಂಧಿ ವಾಗ್ದಾಳಿ, ಅಧಿವೇಶನ ಮೂಂದೂಡಿಕೆ

ಎನ್​ಸಿಪಿಯ ಅಜಿತ್​ ಪವಾರ್​ ಜೊತೆ ಸೇರಿ ಮಾಹಾರಾಷ್ಟ್ರದಲ್ಲಿ ಬಿಜೆಪಿ ಸರ್ಕಾರ ರಚನೆ ಮಾಡಿದ ವಿಚಾರದಲ್ಲಿ ಸೋನಿಯಾ ಗಾಂಧಿ ಮೌನ ಮುರಿದಿದ್ದಾರೆ. ಅಲ್ಲದೆ, ರಾಹುಲ್​ ಗಾಂಧಿ ಕೂಡ ವಾಗ್ದಾಳಿ ನಡೆಸಿದ್ದಾರೆ.

Rajesh Duggumane | news18-kannada
Updated:November 25, 2019, 11:32 AM IST
ಮಹಾರಾಷ್ಟ್ರದಲ್ಲಿ ಪ್ರಜಾಪ್ರಭುತ್ವದ ಕೊಲೆ ನಡೆದಿದೆ; ಸಂಸತ್ತಿನಲ್ಲಿ ರಾಹುಲ್ ಗಾಂಧಿ ವಾಗ್ದಾಳಿ, ಅಧಿವೇಶನ ಮೂಂದೂಡಿಕೆ
ರಾಹುಲ್​ ಗಾಂಧಿ
  • Share this:
ನವದೆಹಲಿ (ನ.25): ಮಹಾರಾಷ್ಟ್ರದಲ್ಲಿ ಬಿಜೆಪಿ ತರಾತುರಿಯಲ್ಲಿ ಸರ್ಕಾರ ರಚನೆ ಮಾಡಿದ ವಿಚಾರ ಲೋಕಸಭೆಯಲ್ಲಿ ವಿಪಕ್ಷಗಳ ಆಕ್ರೋಶಕ್ಕೆ ಕಾರಣವಾಯಿತು. ಸಂಸತ್ತಿನ ಹೊರ ಭಾಗದಲ್ಲಿ ಕಾಂಗ್ರೆಸ್​ ಅಧ್ಯಕ್ಷೆ ಸೋನಿಯಾ ಗಾಂಧಿ ನೇತೃತ್ವದಲ್ಲಿ ಪ್ರತಿಭಟನೆ ನಡೆದರೆ, ಲೋಕಸಭೆ ಅಧಿವೇಶನದಲ್ಲಿ ಕಾಂಗ್ರೆಸ್​ ಮಾಜಿ ಅಧ್ಯಕ್ಷ ರಾಹುಲ್​ ಗಾಂಧಿ ಮೋದಿ ಸರ್ಕಾರದ ವಿರುದ್ಧ ಹರಿಹಾಯ್ದರು.

ಎನ್​ಸಿಪಿಯ ಅಜಿತ್​ ಪವಾರ್​ ಜೊತೆ ಸೇರಿ ಮಾಹಾರಾಷ್ಟ್ರದಲ್ಲಿ ಬಿಜೆಪಿ ಸರ್ಕಾರ ರಚನೆ ಮಾಡಿದ ವಿಚಾರದಲ್ಲಿ ಸೋನಿಯಾ ಗಾಂಧಿ ಮೌನ ಮುರಿದಿದ್ದಾರೆ. ಇಷ್ಟು ದಿನ ಈ ಬಗ್ಗೆ ಒಂದೂ ಮಾತನಾಡದ ಅವರು, ಇಂದು ಸಂಸತ್ತಿನ ಹೊರಭಾಗದಲ್ಲಿ ಪ್ರತಿಭಟನೆ ನಡೆಸಿದರು. ಈ ವೇಳೆ ಪ್ರಜಾಪ್ರಭುತ್ವದ ಕೊಲೆ ಆಗಿದೆ ಎಂದರು.

ಲೋಕಸಭೆಯಲ್ಲಿ ಮಾತನಾಡಿದ ರಾಹುಲ್​ ಗಾಂಧಿ, “ನಾನು ಒಂದು ಪ್ರಶ್ನೆಯನ್ನೂ ಕೇಳುವುದಿತ್ತು. ಆದರೆ, ಅದನ್ನು ಕೇಳುವುದರಲ್ಲಿ ಯಾವುದೇ ಅರ್ಥವಿಲ್ಲ. ಏಕೆಂದರೆ, ಪ್ರಜಾಪ್ರಭುತ್ವವನ್ನು ಕೊಲೆ ಮಾಡಲಾಗಿದೆ,” ಎಂದರು.

ಕಾಂಗ್ರೆಸ್​ ನಾಯಕರು ಲೋಕಸಭೆಯಲ್ಲಿ ತೀವ್ರ ಗದ್ದಲ ನಡೆಸಿದರು. ‘ಸಂವಿಧಾನದ ಹತ್ಯೆ ನಿಲ್ಲಿಸಿ’ ಎಂದು ಕೂಗಾಟ ನಡೆಸಿದರು. ಹೀಗಾಗಿ ಲೋಕಸಭೆಯನ್ನು 12 ಗಂಟೆಯವರೆಗೆ ಹಾಗೂ ರಾಜ್ಯಸಭೆಯನ್ನು 2 ಗಂಟೆವರೆಗೆ ಮುಂದೂಡಲಾಯಿತು.
First published: November 25, 2019, 11:32 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading