ರಾಜಸ್ಥಾನ ಬಿಜೆಪಿಯಲ್ಲಿ ನಿಲ್ಲದ ಒಳಬೇಗುದಿ; ವಿಪಕ್ಷ ನಾಯಕನ ಮೇಲೆ ಸ್ವಪಕ್ಷೀಯರಿಂದಲೇ ಭ್ರಷ್ಟಾಚಾರ ಆರೋಪ

ಗುಲಾಬ್ ಚಾಂದ್ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ. ಬಿಜೆಪಿ ಟಿಕೆಟ್ ನೀಡಲು ಕೋಟ್ಯಾಂತರ ರೂ ಲಂಚ ಪಡೆದಿದ್ದಾರೆ. ಇದೆಲ್ಲದರ ಬಗ್ಗೆ ಮಾಜಿ ಬಿಜೆಪಿ ಅಧ್ಯಕ್ಷರಿಗೆ ತಿಳಿದು ಹಣ ವಾಪಸ್ ಕೊಡಿಸಿದ್ದಾರೆ. ಹಾಗಾಗಿ ಅವರನ್ನು ತುಳಿಯಲಾಗುತ್ತಿದೆ ಎಂದು ಪತ್ರದಲ್ಲಿ ದೂರಲಾಗಿದೆ.

ಪ್ರಾತಿನಿಧಿಕ ಚಿತ್ರ.

ಪ್ರಾತಿನಿಧಿಕ ಚಿತ್ರ.

 • Share this:
  ಜೈಪುರ (ಸೆಪ್ಟೆಂಬರ್ 08); ರಾಜಸ್ಥಾನದಲ್ಲಿ ಅಧಿಕಾರ ಹಿಡಿಯುವುದು ಬಿಜೆಪಿಯ ಕನಸು. ಕಳೆದ ಚುನಾವಣೆಯಲ್ಲಿ ಬಿಜೆಪಿ ಸಾಕಷ್ಟು ಶ್ರಮ ವಹಿಸಿದ್ದರೂ ಸಹ ರಾಜಸ್ಥಾನದಲ್ಲಿ ಅಧಿಕಾರ ಹಿಡಿಯಲು ಸಾಧ್ಯವಾಗಿರಲಿಲ್ಲ. ಅಲ್ಲದೆ, ಕಾಂಗ್ರೆಸ್ ಪಕ್ಷದ ಒಳಗಿನ ಜಗಳದಿಂದ ಲಾಭ ಪಡೆಯುವ ನಿರೀಕ್ಷೆಯಲ್ಲಿ ಬಿಜೆಪಿ ಇತ್ತು. ಅಶೋಕ್ ಗೆಹ್ಲೋಟ್ ಸರ್ಕಾರವನ್ನು ಬೀಳಿಸಲು ಸಾಕಷ್ಟು ಕಸರತ್ತು ನಡೆಸಿತ್ತು. ಆದರೆ, ಅದೂ ಸಹ ಫಲ ನೀಡಿರಲಿಲ್ಲ. ಇದೀಗ ಶೀಘ್ರದಲ್ಲೇ ರಾಜಸ್ಥಾನಕ್ಕೆ ವಿಧಾನಸಭಾ ಚುನಾವಣೆ ಬರಲಿದೆ. ಆದರೆ, ಈ ನಡುವೆ ರಾಜಸ್ಥಾನ ಬಿಜೆಪಿಯಲ್ಲಿನ ಆಂತರಿಕ ಬೇಗುದಿ ಬೀದಿಗೆ ಬಿದ್ದಿದೆ. ಮಾಜಿ ಸ್ಪೀಕರ್ ಮತ್ತು ಹಿರಿಯ ಶಾಸಕ ಕೈಲಾಶ್ ಮೇಘವಾಲ್ ವಿಪಕ್ಷ ನಾಯಕ ಗುಲಾಬ್ ಚಾಂದ್ ಕಟಾರಿಯ ವಿರುದ್ಧ ತಿರುಗಿ ಬಿದ್ದಿದ್ದು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಮತ್ತು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾರವರಿಗೆ ಪತ್ರ ಬರೆದು ಭ್ರಷ್ಟಾಚಾರದ ಆರೋಪ ಮಾಡಿದ್ದಾರೆ. ಅಲ್ಲದೆ, ನಾಯಕತ್ವ ಬದಲಾವಣೆಗೂ ಒತ್ತಾಯಿಸಿದ್ದಾರೆ.

  "ಗುರುವಾರದಿಂದ ಆರಂಭವಾಗಲಿರುವ ವಿಧಾನಸಭಾ ಅಧಿವೇಶನಕ್ಕೂ ಮುನ್ನ ಶ್ರೀರಾಮ ಮತ್ತು ಮಹಾರಾಣ ಪ್ರತಾಪ್ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿರುವ ಗುಲಾಬ್ ಚಾಂದ್ ವಿರುದ್ದ ತನಿಖೆ ನಡೆಯಬೇಕು" ಎಂದು ಒತ್ತಾಯಿಸಿರುವ ಕೈಲಾಶ್ ಮೇಘವಾಲ್, 11 ಪುಟಗಳ ಸುಧೀರ್ಘ ಪತ್ರ ಬರೆದಿದ್ದಾರೆ.

  ಇತ್ತೀಚೆಗೆ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ ಸೋಲಲು ಮಹಾರಾಣ ಪ್ರತಾಪ್ ಕಾರಣ ಎಂದು ಗುಲಾಬ್ ಚಾಂದ್ ಹೇಳಿಕೆ ನೀಡಿದ್ದರು. ಇದು ವಿವಾದದ ಕಿಡಿ ಹಬ್ಬಿಸಿದೆ. ರಾಜಸಮಂದ್ ಶಾಸಕಿ ಕಿರಣ್ ಮಹೇಶ್ವರಿ ವಿರುದ್ಧ ಅಸಭ್ಯ, ನಿಂದನೀಯ ಮಾತುಗಳನ್ನಾಡಲಾಗಿದೆ ಎಂದು ಕೈಲಾಶ್ ಮೇಘಲಾಲ್ ದೂರಿದ್ದಾರೆ.

  ಗುಲಾಬ್ ಚಾಂದ್ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ. ಬಿಜೆಪಿ ಟಿಕೆಟ್ ನೀಡಲು ಕೋಟ್ಯಾಂತರ ರೂ ಲಂಚ ಪಡೆದಿದ್ದಾರೆ. ಇದೆಲ್ಲದರ ಬಗ್ಗೆ ಮಾಜಿ ಬಿಜೆಪಿ ಅಧ್ಯಕ್ಷರಿಗೆ ತಿಳಿದು ಹಣ ವಾಪಸ್ ಕೊಡಿಸಿದ್ದಾರೆ. ಹಾಗಾಗಿ ಅವರನ್ನು ತುಳಿಯಲಾಗುತ್ತಿದೆ ಎಂದು ಪತ್ರದಲ್ಲಿ ದೂರಲಾಗಿದೆ.

  ಅವರು ಬಳಸುವ ಭಾಷೆಯನ್ನು ಕೇಳಿದರೆ ನೀವೆಂದೂ ಅವರ ಮುಖ ನೋಡಲು ಇಷ್ಟಪಡುವುದಿಲ್ಲ. ಇತಿಹಾಸದಲ್ಲಿಯೇ ಅತ್ಯಂತ ಕಳಪೆ ವಿರೋಧ ಪಕ್ಷ ಇದಾಗಿದೆ. ಅದಕ್ಕೆ ಗುಲಾಬ್ ಚಾಂದ್ ಕಟಾರಿಯ ನೇರ ಹೊಣೆ ಎಂದು ಆರೋಪಿಸಲಾಗಿದೆ.

  ಇದನ್ನೂ ಓದಿ: Crime News| ನಟ ಬುಲೆಟ್ ಪ್ರಕಾಶ್ ಪುತ್ರ ರಕ್ಷಕ್ ಮೇಲೆ ದರೋಡೆಗೆ ಯತ್ನ; ಕೂದಲೆಳೆಯ ಅಂತರದಲ್ಲಿ ಜೀವಾಪಾಯದಿಂದ ಪಾರು!

  ಈ ಕುರಿತು ಮಾತನಾಡಿರುವ ವಿರೋಧ ಪಕ್ಷದ ನಾಯಕ ಗುಲಾಬ್ ಚಂದ್ ಕಟಾರಿಯಾ, "ಅವರು ಹಿರಿಯರು ದೂರು ನೀಡಿದ್ದಾರೆ. ನಾನು ಈ ಕುರಿತು ಪ್ರತಿಕ್ರಿಯಿಸುವುದಿಲ್ಲ. ಪಕ್ಷವು ಈ ಬಗ್ಗೆ ತನಿಖೆ ನಡೆಸಬಹುದು. ಪಕ್ಷದ ನಿರ್ಧಾರಕ್ಕೆ ನಾನು ಬದ್ಧನಾಗಿರುತ್ತೇನೆ" ಎಂದಿದ್ದಾರೆ. ಈ ಎಲ್ಲಾ ಬೆಳವಣಿಗೆಗಳು ಸಾಮಾನ್ಯವಾಗಿ ಬಿಜೆಪಿ ಹಿನ್ನಡೆಗೆ ಕಾರಣವಾಗಿದೆ ಎನ್ನಲಾಗುತ್ತಿದೆ.

  ಈ ನಡುವೆ, ಬಿಜೆಪಿ ಪಕ್ಷದ ಒಳಗಿನ ಈ ಅಂತರಿಕ ಬಿಕ್ಕಟ್ಟಿನ ವಿರುದ್ಧ ಕಿಡಿಕಾರಿರುವ ಕಾಂಗ್ರೆಸ್​, "ವಿರೋಧ ಪಕ್ಷವಾದ ಬಿಜೆಪಿ ಆರು ಮುಖ್ಯಮಂತ್ರಿ ಅಭ್ಯರ್ಥಿಗಳನ್ನು ಹೊಂದಿರುವ ಪಕ್ಷ" ಎಂದು ಲೇವಡಿ ಮಾಡಿದೆ.

  ಇದನ್ನೂ ಓದಿ: DK Shivakumar| ಗಣಪತಿ ಮೂರ್ತಿ 2-4 ಅಡಿಗೆ ನಿರ್ಬಂಧ ಆದೇಶ ಹಿಂಪಡೆಯಬೇಕು; ಸರಕಾರಕ್ಕೆ ಡಿ.ಕೆ. ಶಿವಕುಮಾರ್ ಆಗ್ರಹ

  ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊ ಬ್ಬರು ಕೈ ಜೋಡಿಸಬೇಕು. ಲಾಕ್​​ಡೌನ್​ ನಿಯಮಗಳನ್ನು ಕಟ್ಟುನಿಟ್ಟಿ ನಿಂದ ಪಾಲಿಸಿ ಸೋಂಕಿನಿಂದ ತಮ್ಮನ್ನು ತಾವು ಕಾಪಾಡಿಕೊಳ್ಳುವ ಪ್ರತಿಜ್ಞೆ ತೆಗೆದುಕೊಳ್ಳಬೇಕು. ನಾವು ಸುರಕ್ಷಿತವಾಗಿ ಇದ್ದು, ನಮ್ಮಿಂದ ಇತರರಿಗೆ ಸೋಂಕು ಹಬ್ಬದಂತೆ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು.
  Published by:MAshok Kumar
  First published: