• ಹೋಂ
  • »
  • ನ್ಯೂಸ್
  • »
  • ದೇಶ-ವಿದೇಶ
  • »
  • Petrol Price Today | ರಾಷ್ಟ್ರ ರಾಜಧಾನಿ ದೆಹಲಿಯಲ್ಲೂ 100ರ ಗಡಿ ದಾಟಿದ ಪೆಟ್ರೋಲ್; ದೇಶದ ವಿವಿಧ ನಗರಗಳಲ್ಲಿ ಇಂದಿನ ಬೆಲೆ?

Petrol Price Today | ರಾಷ್ಟ್ರ ರಾಜಧಾನಿ ದೆಹಲಿಯಲ್ಲೂ 100ರ ಗಡಿ ದಾಟಿದ ಪೆಟ್ರೋಲ್; ದೇಶದ ವಿವಿಧ ನಗರಗಳಲ್ಲಿ ಇಂದಿನ ಬೆಲೆ?

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಕರ್ನಾಟಕ ಮಾತ್ರವಲ್ಲದೆ ರಾಜಸ್ಥಾನ, ಹೈದರಾಬಾದ್​ನಲ್ಲಿ 1 ಲೀಟರ್ ಪೆಟ್ರೋಲ್ ಬೆಲೆ 102 ರೂ. ದಾಟಿದೆ. ಮುಂಬೈನಲ್ಲಿ ಪೆಟ್ರೋಲ್ ಬೆಲೆ 106 ರೂ.ಗೆ ಏರಿದ್ದು, ಸಾರ್ವಕಾಲಿಕ ದಾಖಲೆ ಬರೆದಿದೆ.

  • Share this:

Fuel Price Today (ಬೆಂಗಳೂರು ಜುಲೈ 08): ಕೊರೋನಾ ಮತ್ತು ಲಾಕ್​ಡೌನ್​ಗೆ ಜನ ನಲುಗುತ್ತಿದ್ದಾರೆ. ಒಂದೆಡೆ ಕೆಲಸ ಆದಾಯವಿಲ್ಲ, ಮತ್ತೊಂದೆಡೆ ದಿನೋಪ ಯೋಗಿ ವಸ್ತುಗಳ ಬೆಲೆ ಏರಿಕೆ ಜನರನ್ನು ಹಿಂಸಿಸುತ್ತಿದೆ. ಈ ನಡುವೆ ಕಳೆದ ಒಂದು ವರ್ಷಗಳಿಂದ ಪೆಟ್ರೋಲ್​-ಡೀಸೆಲ್​ ಬೆಲೆ ಸತತವಾಗಿ ಏರಿಕೆಯಾಗುತ್ತಿರು ವುದು ದಿನೋಪಯೋಗಿ ವಸ್ತುಗಳ ಬೆಲೆ ಮತ್ತಷ್ಟು ಏರಿಕೆಯಾಗುವಂತಾಗಿದೆ. ತೈಲ ಬೆಲೆಯಂತೂ ದೇಶದಲ್ಲಿ ಪ್ರತಿನಿತ್ಯ ಏರಿಕೆಯಾಗುತ್ತಿದೆ. ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಈಗಾಗಲೇ ಪೆಟ್ರೋಲ್ ಬೆಲೆ 104ರ ಗಡಿದಾಟಿದ್ದರೂ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 99.57 ರೂ ಆಗಿತ್ತು. ಆದರೆ, ಇದೇ ಮೊದಲ ಬಾರಿಗೆ ಇಂದು ದೆಹಲಿಯಲ್ಲೂ ಪೆಟ್ರೋಲ್ ಬೆಲೆ 100ರ ಗಡಿ ದಾಟಿದೆ. ದೆಹಲಿಯಲ್ಲಿ ಇಂದಿನ ಪೆಟ್ರೋಲ್ ಬೆಲೆ 100.21ರೂ.


ಭಾರತದಲ್ಲಿ ಒಂದೆಡೆ ಕೊರೋನಾ ವೈರಸ್ ಅಬ್ಬರವಾದರೆ ಮತ್ತೊಂದೆಡೆ ಬೆಲೆಯೇರಿಕೆಯಿಂದ ಜನರು ತತ್ತರಿಸಿದ್ದಾರೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯ ಏರಿಕೆಯಿಂದ ಜನ ತಮ್ಮ ವಾಹನಗಳನ್ನು ರಸ್ತೆಗಿಳಿಸಲು ಯೋಚಿಸುವ ಪರಿಸ್ಥಿತಿ ಬಂದಿದೆ. ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಈಗಾಗಲೇ ಪೆಟ್ರೋಲ್ ಬೆಲೆ 104 ರೂ. ದಾಟಿದೆ.


ಕರ್ನಾಟಕ ಮಾತ್ರವಲ್ಲದೆ ರಾಜಸ್ಥಾನ, ಹೈದರಾಬಾದ್​ನಲ್ಲಿ 1 ಲೀಟರ್ ಪೆಟ್ರೋಲ್ ಬೆಲೆ 102 ರೂ. ದಾಟಿದೆ. ಮುಂಬೈನಲ್ಲಿ ಪೆಟ್ರೋಲ್ ಬೆಲೆ 106 ರೂ.ಗೆ ಏರಿದ್ದು, ಸಾರ್ವಕಾಲಿಕ ದಾಖಲೆ ಬರೆದಿದೆ. ಜೈಪುರದಲ್ಲಿ 1 ಲೀಟರ್ ಪೆಟ್ರೋಲ್ ಬೆಲೆ ಈಗಾಗಲೇ 106 ರೂ. ಆಗುವ ಮೂಲಕ ಹೊಸ ದಾಖಲೆ ಬರೆದಿದೆ. ಬೆಂಗಳೂರಿನಲ್ಲೂ 1 ಲೀಟರ್ ಪೆಟ್ರೋಲ್ 103 ರೂ. ಆಗಿದೆ. ಇಂದು ಮತ್ತೆ ಪೆಟ್ರೋಲ್ ಬೆಲೆಯನ್ನು ಏರಿಸಲಾಗಿದೆ.


ಕರ್ನಾಟಕ, ಮಹಾರಾಷ್ಟ್ರ, ಮಧ್ಯಪ್ರದೇಶ, ತೆಲಂಗಾಣ, ರಾಜಸ್ಥಾನ, ಒರಿಸ್ಸಾ, ಕೇರಳ, ಆಂಧ್ರಪ್ರದೇಶ, ಲಡಾಖ್, ಬಿಹಾರ, ಜಮ್ಮು ಕಾಶ್ಮೀರದಲ್ಲಿ 1 ಲೀಟರ್ ಪೆಟ್ರೋಲ್ ಬೆಲೆ 103.43 ರೂ. ದಾಟಿದೆ. ಕರ್ನಾಟಕದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಪೆಟ್ರೋಲ್ ಬೆಲೆ 103 ರೂ. ದಾಟಿದೆ. ಬೆಂಗಳೂರಿನಲ್ಲಿ 1 ಲೀಟರ್ ಪೆಟ್ರೋಲ್ಗೆ 103 ರೂ. ಆಗಿದೆ. ಇಂದು ಪೆಟ್ರೋಲ್ ಬೆಲೆ ಮತ್ತೆ ಏರಿಕೆಯಾಗಿದ್ದು, ಡೀಸೆಲ್ ಬೆಲೆಯಲ್ಲಿ ಯಾವುದೇ ಏರಿಕೆಯಾಗಿಲ್ಲ.


ಇಂದು ನ ಕೊಲ್ಕತ್ತಾದಲ್ಲಿ 100.23 ರೂ, ಚೆನ್ನೈನಲ್ಲಿ 100.13 ರೂ., ನೋಯ್ಡಾದಲ್ಲಿ 96.39 ರೂ, ಭುವನೇಶ್ವರದಲ್ಲಿ 99.77 ರೂ., ಹೈದರಾಬಾದ್ನಲ್ಲಿ 103.05 ರೂ., ಜೈಪುರದಲ್ಲಿ 106.18 ರೂ., ಲಕ್ನೋದಲ್ಲಿ 96.31 ರೂ., ಪಾಟ್ನಾದಲ್ಲಿ 101.49 ರೂ., ತಿರುವನಂತಪುರದಲ್ಲಿ 100.87 ರೂ. ಆಗಿದೆ.


ಭಾರತದ ಕೆಲವು ನಗರಗಳಲ್ಲಿ ಡೀಸೆಲ್ ಬೆಲೆ ಮತ್ತೆ ಏರಿಕೆಯಾಗಿದೆ. ರಾಜಸ್ಥಾನದಲ್ಲಿ ಈಗಾಗಲೇ ಡೀಸೆಲ್ ಬೆಲೆ ಶತಕ ಬಾರಿಸಿದೆ. ಬೆಂಗಳೂರು, ಮುಂಬೈ, ಹೈದರಾಬಾದ್, ಜೈಪುರ, ಭುವನೇಶ್ವರ, ಚೆನ್ನೈ ಸೇರಿ ವಿವಿಧ ನಗರಗಳಲ್ಲಿ ಇಂದಿನ ಡೀಸೆಲ್ ಬೆಲೆ ಹೀಗಿದೆ. ನವದೆಹಲಿಯಲ್ಲಿ ಇಂದು 1 ಲೀಟರ್ ಡೀಸೆಲ್ ಬೆಲೆ 89.53 ರೂ. ಇದೆ. ಚೆನ್ನೈನಲ್ಲಿ 93.72 ರೂ, ಮುಂಬೈನಲ್ಲಿ 96.72 ರೂ, ಬೆಂಗಳೂರಿನಲ್ಲಿ 94.54 ರೂ, ಹೈದರಾಬಾದ್ನಲ್ಲಿ 97.20 ರೂ. ಇದೆ.


ಇದನ್ನೂ ಓದಿ; Astrology: ಕೆಲಸ ಬದಲಾಯಿಸಬೇಕು ಎನ್ನುವ ಈ ರಾಶಿಯವರ ಇಚ್ಛೆಗೆ ಈ ದಿನ ಸುದಿನ; ಇಲ್ಲಿದೆ ಈ ದಿನದ ಭವಿಷ್ಯ


ಭಾರತದ ಪ್ರಮುಖ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಪ್ರತಿದಿನ ಏರಿಳಿತಗಳು ಉಂಟಾಗುತ್ತಲೇ ಇರುತ್ತವೆ. ಕಳೆದ 1 ವರ್ಷದಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಭಾರೀ ಹೆಚ್ಚಳವಾಗುತ್ತಿದೆ. ಮಹಾರಾಷ್ಟ್ರದ ಮುಂಬೈ, ರಾಜಸ್ಥಾನದ ಜೈಪುರ, ಮಧ್ಯಪ್ರದೇಶ, ತೆಲಂಗಾಣ, ಕರ್ನಾಟಕ, ಆಂಧ್ರಪ್ರದೇಶದಲ್ಲೂ ಪೆಟ್ರೋಲ್ ದರ ಶತಕ ಬಾರಿಸಿದೆ. ಈ ಸಂಖ್ಯೆ ಹೆಚ್ಚುತ್ತಲೇ ಇದೆ.


ಇದನ್ನೂ ಓದಿ; Karnataka Weather Today: ಜುಲೈ.08ರ ನಂತರ ರಾಜ್ಯಕ್ಕೆ ಭಾರೀ ಮಳೆ ತರಲಿದೆ ನೈರುತ್ಯ ಮುಂಗಾರು; ಎಲ್ಲೆಲ್ಲಿ ಮಳೆ?


ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕ್ರೂಡ್ ಆಯಿಲ್ ದರ ಹೆಚ್ಚಳವಾದಾಗ ದೇಶಿಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಹೆಚ್ಚಿಸುವುದು, ಹಾಗೆಯೇ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕ್ರೂಡ್ ಆಯಿಲ್ ದರ ಕಡಿಮೆಯಾದಾಗ ದೇಶಿಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಇಳಿಸುವುದು ಸಾಮಾನ್ಯವಾದ ಸಂಗತಿ.


ಆದರೆ, ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕೊರೋನಾ ಕಾರಣದಿಂದಾಗಿ ಕಳೆದ ಒಂದು ವರ್ಷದಿಂದ ತೈಲ ಬೆಲೆಯನ್ನು ಸಾಕಷ್ಟು ಇಳಿಸಲಾಗಿತ್ತು. ಆದರೆ, ಕೇಂದ್ರ ಸರ್ಕಾರ ಈ ಲಾಭವನ್ನು ಜನರಿಗೆ ನೀಡದೆ ಪ್ರತಿದಿನ ತೈಲದ ಮೇಲೆ ತೆರಿಗೆಯನ್ನು ವಿಧಿಸುತ್ತಲೇ ಇದೆ. ಪರಿಣಾಮ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾದರೆ ಸಹಜವಾಗಿ ನಿತ್ಯ ಬಳಕೆಯ ಬೇರೆಲ್ಲಾ ವಸ್ತುಗಳ ಬೆಲೆ ಹೆಚ್ಚಳವಾಗುತ್ತದೆ. ಇದರಿಂದ ಜನಸಾಮಾನ್ಯರಿಗೆ ಮತ್ತಷ್ಟು ತೊಂದರೆಯಾಗುತ್ತಿದೆ.

First published: