ಅತ್ಯಾಚಾರಿಗಳಿಗೆ ಮರಣದಂಡನೆ ಬದಲು ಸಿಂಗಾಪುರ ಮಾದರಿಯಲ್ಲಿ ಶಿಕ್ಷೆಯಾಗಲಿ: ಪವನ್ ಕಲ್ಯಾಣ್

ಸಹೋದರಿ ಪ್ರಿಯಾಂಕಾ ರೆಡ್ಡಿ ಅತ್ಯಾಚಾರ ಪ್ರಕರಣದಲ್ಲಿ ಅಪರಾದಿಗಳಿಕೆ ಗಲ್ಲು ಶಿಕ್ಷೆ ನೀಡಬೇಕೆಂದು ಇಡೀ ದೇಶವೇ ಒತ್ತಾಯಿಸುತ್ತಿದೆ. ಜನ ಆಕ್ರೋಶಕ್ಕೊಳಗಾಗಿ ಹೀಗೆ ಆಗ್ರಹಿಸುತ್ತಿದ್ದಾರೆ. ಸಂವಿಧಾನ ಯಾರಿಗೂ ಯಾರನ್ನು ಕೊಲ್ಲುವ ಹಕ್ಕು ನೀಡಿಲ್ಲ. ಹಾಗಾಗಿ ಅತ್ಯಾಚಾರಿಗಳಿಗೆ ಮರಣದಂಡನೆ ಬದಲಿಗೆ ಸಿಂಗಾಪುರ ಮಾದರಿಯಲ್ಲಿ ಶಿಕ್ಷೆ ನೀಡಬೇಕು ಎಂದರು.

news18-kannada
Updated:December 4, 2019, 5:12 PM IST
ಅತ್ಯಾಚಾರಿಗಳಿಗೆ ಮರಣದಂಡನೆ ಬದಲು ಸಿಂಗಾಪುರ ಮಾದರಿಯಲ್ಲಿ ಶಿಕ್ಷೆಯಾಗಲಿ: ಪವನ್ ಕಲ್ಯಾಣ್
ಜನಸೇನಾ ಅಧ್ಯಕ್ಷ ಪವನ್ ಕಲ್ಯಾಣ್
  • Share this:
ಹೈದರಾಬಾದ್(ಡಿ.04):​​ ಅತ್ಯಾಚಾರಿಗಳಿಗೆ ಮರಣದಂಡನೆ ಬದಲು ಸಿಂಗಾಪುರ ಮಾದರಿಯಲ್ಲಿ ಶಿಕ್ಷೆಯಾಗಲಿ ಎಂದು ನಟ ಮತ್ತು ಜನಸೇನಾ ಅಧ್ಯಕ್ಷ ಪವನ್​​ ಕಲ್ಯಾಣ್​​ ಅಭಿಪ್ರಾಯಪಟ್ಟಿದ್ದಾರೆ. ಪ್ರಿಯಾಂಕಾ ರೆಡ್ಡಿ ಕೊಲೆ ಪ್ರಕರಣದಲ್ಲಿ ಅತ್ಯಾಚಾರಿಗಳಿಗೆ ಮರಣದಂಡನೆ ವಿಧಿಸಬೇಕೆಂದು ಒತ್ತಾಯಿಸಲಾಗುತ್ತಿದೆ. ಈ ವಿಚಾರಕ್ಕೆ ನನ್ನ ಸಹಮತ ಇಲ್ಲ ಎಂದು ಪವನ್​​ ಕಲ್ಯಾಣ್​​ ಹೇಳಿದ್ಧಾರೆ.

ಜನಸೇನೆ ಕಾರ್ಯಕರ್ತರನ್ನುದ್ದೇಶಿಸಿ ಮಾತಾಡುವ ವೇಳೆ ನಟ ಪವನ್​​ ಕಲ್ಯಾಣ್​​ ಈ ರೀತಿ ಹೇಳಿಕೆ ನೀಡಿದ್ದಾರೆ. ಸಹೋದರಿ ಪ್ರಿಯಾಂಕಾ ರೆಡ್ಡಿ ಅತ್ಯಾಚಾರ ಪ್ರಕರಣದಲ್ಲಿ ಅಪರಾದಿಗಳಿಕೆ ಗಲ್ಲು ಶಿಕ್ಷೆ ನೀಡಬೇಕೆಂದು ಇಡೀ ದೇಶವೇ ಒತ್ತಾಯಿಸುತ್ತಿದೆ. ಜನ ಆಕ್ರೋಶಕ್ಕೊಳಗಾಗಿ ಹೀಗೆ ಆಗ್ರಹಿಸುತ್ತಿದ್ದಾರೆ. ಸಂವಿಧಾನ ಯಾರಿಗೂ ಯಾರನ್ನು ಕೊಲ್ಲುವ ಹಕ್ಕು ನೀಡಿಲ್ಲ. ಹಾಗಾಗಿ ಅತ್ಯಾಚಾರಿಗಳಿಗೆ ಮರಣದಂಡನೆ ಬದಲಿಗೆ ಸಿಂಗಾಪುರ ಮಾದರಿಯಲ್ಲಿ ಶಿಕ್ಷೆ ನೀಡಬೇಕು ಎಂದರು.

ನಟ ಪವನ್​​ ಕಲ್ಯಾಣ್​​ ಹೇಳಿಕೆಗೀಗ ಪರ-ವಿರೋಧ ಅಭಿಪ್ರಾಯಗಳು ಕೇಳಿ ಬರುತ್ತಿವೆ. ಪವನ್​​ ಕಲ್ಯಾಣ್​​ ಬೇಜವಾಬ್ದಾರಿ ಹೇಳಿಕೆ ನೀಡುತ್ತಿದ್ದಾರೆ. ಇಂತಹ ಹೇಳಿಕೆಗಳು ಪವನ್​​ ಮನಸ್ಥಿತಿಯನ್ನು ತೋರಿಸುತ್ತದೆ. ಇಡೀ ದೇಶವೇ ಅತ್ಯಾಚಾರಿಗಳಿಗೆ ಮರಣದಂಡನೆ ವಿಧಿಸಬೇಕೆಂದು ಆಗ್ರಹಿಸುತ್ತಿದೆ. ಹೀಗಿರುವಾಗ ಪವನ್​ ಕಲ್ಯಾಣ್​​ ಹೇಗೆ ಇಂತಹ ಬೇಜವಾಬ್ದಾರಿ ಹೇಳಿಕೆ ನೀಡುತ್ತಾರೋ ಎಂದು ವೈಎಸ್​ಆರ್​​ ಕಾಂಗ್ರೆಸ್​​​ ಸಂಸದ ವಿಜಯ್​​ ಸಾಯ್​​ ರೆಡ್ಡಿ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ವೆಟರಿನರಿ ವೈದ್ಯೆ ಕೇಸ್​​: ತ್ವರಿತ ನ್ಯಾಯಾಲಯ ಸ್ಥಾಪಿಸಿ ವಿಚಾರಣೆ ಪೂರ್ಣಗೊಳಿಸುವಂತೆ ಸಿಎಂ ಕೆಸಿಆರ್​​ ಸೂಚನೆ

ಬುಧವಾರ(ನ.27) ವೆಟರಿನರಿ ವೈದ್ಯೆ ಪ್ರಿಯಾಂಕಾ ರೆಡ್ಡಿ ಹತ್ಯೆ ಪ್ರಕರಣವನ್ನು ಸೈಬಾರಾಬಾದ್ ಪೊಲೀಸರು ಭೇದಿಸಿದ್ದರು. ಈಕೆಯನ್ನು ಹತ್ಯೆ ಮಾಡುವ ಮುನ್ನ ದುಷ್ಕರ್ಮಿಗಳು ಅಪಹರಿಸಿ ಸಾಮೂಹಿಕವಾಗಿ ಅತ್ಯಾಚಾರವೆಸಗಿ ಕೊಲೆಗೈದಿರುವುದು ತಿಳಿದುಬಂದಿತ್ತು. ಈ ಪ್ರಕರಣ ಸಂಬಂಧ ಸೈಬಾರಾಬಾದ್ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರು ಟ್ರಕ್ ಡ್ರೈವರ್​ಗಳಾದ ಮೊಹಮ್ಮದ್ ಪಾಶಾ, ನವೀನ್ ಹಾಗೂ ಕ್ಲೀನರ್​ಗಳಾದ ಕೇಶವುಲು ಮತ್ತು ಶಿವ ಎನ್ನಲಾಗಿದೆ. ಈ ಅತ್ಯಾಚಾರಿಗಳಿಗೆ ಮರಣದಂಡನೆ ವಿಧಿಸಬೇಕೆಂದು ಇಡೀ ದೇಶವೇ ಒತ್ತಾಯಿಸುತ್ತಿದೆ.
First published:December 4, 2019
ಮತ್ತಷ್ಟು ಓದಿರಿ
ಮುಂದಿನ ಸುದ್ದಿ