ಜಮ್ಮು ಕಾಶ್ಮೀರ: ಕೇಂದ್ರ ಸರ್ಕಾರ ಕಲಂ 370ರ ಅಡಿಯಲ್ಲಿ ಜಮ್ಮು-ಕಾಶ್ಮೀರಕ್ಕೆ ನೀಡುತ್ತಿದ್ದ ವಿಶೇಷ ಸ್ಥಾನಮಾನವನ್ನು ಕಳೆದ ವರ್ಷ ಆಗಸ್ಟ್ 05 ರಂದು ತೆಗೆದುಹಾಕಿತ್ತು. ಪರಿಣಾಮ ಹಣಿವೆ ರಾಜ್ಯ ದೊಡ್ಡ ಮಟ್ಟದ ಪ್ರತಿಭಟನೆಗೆ ಸಾಕ್ಷಿಯಾಗಿತ್ತು. ಕೇಂದ್ರ ಸರ್ಕಾರ ಹರಸಾಹಸಪಟ್ಟು ಈ ಪ್ರತಿಭಟನೆಯನ್ನು ಹತ್ತಿಕ್ಕುವಲ್ಲಿ ಯಶಸ್ವಿಯಾಗಿತ್ತು. ಅಲ್ಲದೆ, ಮುಂಜಾಗ್ರತಾ ಕ್ರಮವಾಗಿ ಜಮ್ಮು-ಕಾಶ್ಮೀರದ ಬಹುತೇಕ ಎಲ್ಲಾ ರಾಜಕೀಯ ನಾಯಕರನ್ನೂ ಮಾಜಿ ಮುಖ್ಯಮಂತ್ರಿಗಳನ್ನು ಗೃಹ ಬಂಧನದಲ್ಲಿರಿಸಿತ್ತು. ಪರಿಣಾಮ ಇದೀಗ ಪರಿಸ್ಥಿತಿ ತಿಳಿಯಾಗುತ್ತಿದೆ ಎನ್ನುವಷ್ಟರಲ್ಲಿ ನ್ಯಾಷನಲ್ ಕಾನ್ಫರೆನ್ಸ್, ಪಿಡಿಪಿ, ಪೀಪಲ್ಸ್ ಕಾನ್ಫರೆನ್ಸ್, ಪೀಪಲ್ಸ್ ಮೂವ್‌ಮೆಂಟ್ ಹಾಗೂ ಸಿಪಿಐಎಂ ಸೇರಿದಂತೆ ಜಮ್ಮು ಕಾಶ್ಮೀರದ ಪ್ರಮುಖ ರಾಜಕೀಯ ಪಕ್ಷಗಳ ನಾಯಕರು ಕಾಶ್ಮೀರದಲ್ಲಿ ಮತ್ತೇ 370 ರ ವಿಧಿ ಮರುಸ್ಥಾಪನೆಗಾಗಿ ಒಂದಾಗಿದ್ದಾರೆ. ಈ ಸಂಬಂಧ ಕೇಂದ್ರ ಸರ್ಕಾರದ ವಿರುದ್ಧ ಹೋರಾಟಕ್ಕೆ ಮುಂದಾಗಿದ್ದಾರೆ. ಅಲ್ಲದೆ ತಮ್ಮ ಮೈತ್ರಿ ಕೂಟಕ್ಕೆ ’ಪೀಪಲ್ಸ್ ಅಲಯನ್ಸ್ ಫಾರ್ ಗುಪ್ಕರ್ ಡಿಕ್ಲರೇಷನ್’ ಎಂದು ಹೆಸರಿಟ್ಟಿದ್ದಾರೆ.
ನಿನ್ನೆ ಸಂಜೆ ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ನಿವಾಸದಲ್ಲಿ ಸಭೆ ನಡೆದಿದ್ದು, ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ, ಪೀಪಲ್ಸ್ ಕಾನ್ಫರೆನ್ಸ್ ಅಧ್ಯಕ್ಷ ಸಜಾದ್ ಲೋನ್, ಪೀಪಲ್ಸ್ ಮೂವ್ಮೆಂಟ್ ನಾಯಕ ಜಾವೈದ್ ಮಿರ್ ಮತ್ತು ಸಿಪಿಐಎಂ ಮುಖಂಡ ಮೊಹಮ್ಮದ್ ಯೂಸುಫ್ ತರಿಗಾಮಿ ಸಭೆಯಲ್ಲಿ ಹಾಜರಿದ್ದರು.
ಮೆಹಬೂಬಾ ಮುಫ್ತಿಯನ್ನು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ಕಿತ್ತು ಹಾಕಿದ ಬೆನ್ನಿಗೆ ಬಂಧಿಸಲಾಗಿತ್ತು, ಮಂಗಳವಾರ ಬಿಡುಗಡೆಗೊಳಿಸಲಾಗಿದೆ. ಫಾರೂಕ್ ಅಬ್ದುಲ್ಲಾ ಅವರನ್ನು ಮಾರ್ಚ್‌ನಲ್ಲಿ ಬಿಡುಗಡೆಗೊಳಿಸಲಾಗಿತ್ತು.
ಇದನ್ನೂ ಓದಿ : ಪಂಜಾಬ್ನಲ್ಲಿ ಭಯೋತ್ಪಾದಕರ ಗುಂಡಿಗೆ ಬಲಿಯಾದ ಶೌರ್ಯ ಚಕ್ರ ಪ್ರಶಸ್ತಿ ಪುರಸ್ಕೃತ ಯೋಧ ಬಲ್ವಿಂದರ್ ಸಿಂಗ್
ನ್ಯಾಷನಲ್ ಕಾನ್ಫರೆನ್ಸ್, ಪಿಡಿಪಿ, ಪೀಪಲ್ಸ್ ಕಾನ್ಫರೆನ್ಸ್, ಪೀಪಲ್ಸ್ ಮೂವ್‌ಮೆಂಟ್ ಹಾಗೂ ಸಿಪಿಐಎಂ ಸೇರಿದಂತೆ ಜಮ್ಮು ಕಾಶ್ಮೀರದ ಪ್ರಮುಖ ರಾಜಕೀಯ ಪಕ್ಷಗಳ ನಾಯಕರು ಕಾಶ್ಮೀರದಲ್ಲಿ ಮತ್ತೇ 370 ರ ವಿಧಿ ಮರುಸ್ಥಾಪನೆ ಬೇಕಾಗಿ ಒಂದಾಗಿದ್ದಾರೆ. ಅಲ್ಲದೆ ತಮ್ಮ ಮೈತ್ರಿ ಕೂಟಕ್ಕೆ ’ಪೀಪಲ್ಸ್ ಅಲಯನ್ಸ್ ಫಾರ್ ಗುಪ್ಕರ್ ಡಿಕ್ಲರೇಷನ್’ ಎಂದು ಹೆಸರಿಟ್ಟಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ