HOME » NEWS » National-international » PERSON ABOVE 18 YRS FREE TO CHOOSE RELIGION SC REFUSES TO ENTERTAIN PLEA AGAINST RELIGIOUS CONVERSIONS MAK

18 ವರ್ಷಕ್ಕಿಂತ ಮೇಲ್ಪಟ್ಟ ವ್ಯಕ್ತಿ ಯಾವುದೇ ಧರ್ಮವನ್ನು ಆಯ್ಕೆ ಮಾಡಲು ಮುಕ್ತನಾಗಿರುತ್ತಾನೆ: ಸುಪ್ರೀಂ ಕೋರ್ಟ್

ಶಂಕರನಾರಾಯಣನ್ ಅವರು ಅರ್ಜಿಯನ್ನು ಹಿಂಪಡೆಯುವುದಾಗಿ ಹಾಗೂ ಸರ್ಕಾರ ಮತ್ತು ಕಾನೂನು ಆಯೋಗಕ್ಕೆ ಮನವಿ ನೀಡಲು ಅನುಮತಿ ಕೇಳಿದರು. ಆದರೆ ನ್ಯಾಯಾಲವು ಇದಕ್ಕೆ ಅನುಮತಿ ನೀಡಲು ಸಾಧ್ಯವಿಲ್ಲ ಎಂದು ಹೇಳಿದೆ.

news18-kannada
Updated:April 9, 2021, 6:29 PM IST
18 ವರ್ಷಕ್ಕಿಂತ ಮೇಲ್ಪಟ್ಟ ವ್ಯಕ್ತಿ ಯಾವುದೇ ಧರ್ಮವನ್ನು ಆಯ್ಕೆ ಮಾಡಲು ಮುಕ್ತನಾಗಿರುತ್ತಾನೆ: ಸುಪ್ರೀಂ ಕೋರ್ಟ್
ಸರ್ವೋಚ್ಚ ನ್ಯಾಯಾಲಯ
  • Share this:
ನವ ದೆಹಲಿ (ಏಪ್ರಿಲ್ 09); 18 ವರ್ಷಕ್ಕಿಂತ ಮೇಲ್ಪಟ್ಟ ವ್ಯಕ್ತಿಗಳು ತಮ್ಮ ಧರ್ಮ ಆಯ್ಕೆ ಮಾಡಲು ಮುಕ್ತರಾಗಿದ್ದಾರೆ ಎಂದು ಸುಪ್ರೀಂಕೋರ್ಟ್ ಶುಕ್ರವಾರ ಹೇಳಿದೆ. ಮಾಟ ಮತ್ತು ಧಾರ್ಮಿಕ ಮತಾಂತರವನ್ನು ನಿಯಂತ್ರಿಸಲು ಕೇಂದ್ರ ಮತ್ತು ರಾಜ್ಯಗಳಿಗೆ ನಿರ್ದೇಶನಗಳನ್ನು ನೀಡಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಮನವಿಯನ್ನು ನಿರಾಕರಿಸಿರುವ ಸುಪ್ರೀಂ ಕೋರ್ಟ್​, "ಸಂವಿಧಾನದ ಆಶಯದಂತೆ 18 ವರ್ಷಕ್ಕೆ ಮೇಲ್ಪಟ್ಟ ವ್ಯಕ್ತಿ ಯಾವುದೇ ಧರ್ಮವನ್ನು ಅನುಸರಿಸುವ ಹಕ್ಕು ಮತ್ತು ಸ್ವಾತಂತ್ರ್ಯವನ್ನು ಹೊಂದಿದ್ದಾನೆ" ಎಂದು ಅಭಿಪ್ರಾಯಪಟ್ಟಿದೆ. ವಕೀಲ ಅಶ್ವಿನಿ ಉಪಾಧ್ಯಾಯ ಅವರ ಪರವಾಗಿ ಹಿರಿಯ ವಕೀಲ ಗೋಪಾಲ್ ಶಂಕರನಾರಾಯಣ ಅವರು ಈ ಅರ್ಜಿಯನ್ನು ಸುಪ್ರೀಂಕೋರ್ಟ್‌ಗೆ ಸಲ್ಲಿಸಿದ್ದರು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿಗಳಾದ ಆರ್.ಎಫ್.ನಾರಿಮನ್, ಬಿ ಆರ್ ಗವಾಯಿ ಮತ್ತು ಹೃಷಿಕೇಶ ರಾಯ್ ಅವರ ನ್ಯಾಯಪೀಠವು, "ಆರ್ಟಿಕಲ್ 32 ರ ಅಡಿಯಲ್ಲಿ ಇದು ಯಾವ ರೀತಿಯ ರಿಟ್ ಅರ್ಜಿ? 18 ವರ್ಷಕ್ಕಿಂತ ಮೇಲ್ಪಟ್ಟ ವ್ಯಕ್ತಿಯು ತನಗೆ ಬೇಕಾದ ಧರ್ಮವನ್ನು ಆಯ್ಕೆ ಮಾಡಲು ಅವಕಾಶ ನೀಡದಂತೆ ಮಾಡಲು ಯಾವುದೇ ಕಾರಣವಿಲ್ಲ" ಎಂದು ಹೇಳಿದೆ.

ಇದನ್ನೂ ಓದಿ: IPL 2021: ಕೋವಿಡ್‌ ಪ್ರಕರಣಗಳ ಹೆಚ್ಚಳ: ಕೊನೆಯ ಕ್ಷಣದಲ್ಲಿ ಐಪಿಎಲ್‌ ರದ್ದಾಗದಿರಲಿ ಎಂದು ಅಭಿಮಾನಿಗಳ ಪ್ರಾರ್ಥನೆ..!

ನಂತರ ಶಂಕರನಾರಾಯಣನ್ ಅವರು ಅರ್ಜಿಯನ್ನು ಹಿಂಪಡೆಯುವುದಾಗಿ ಹಾಗೂ ಸರ್ಕಾರ ಮತ್ತು ಕಾನೂನು ಆಯೋಗಕ್ಕೆ ಮನವಿ ನೀಡಲು ಅನುಮತಿ ಕೇಳಿದರು. ಆದರೆ ನ್ಯಾಯಾಲವು ಇದಕ್ಕೆ ಅನುಮತಿ ನೀಡಲು ಸಾಧ್ಯವಿಲ್ಲ ಎಂದು ಹೇಳಿದೆ. ಜೊತೆಗೆ ಅರ್ಜಿಯನ್ನು ಹಿಂಪಡೆಯಲಾಗಿದೆ ಎಂದು ಅರ್ಜಿಯನ್ನು ವಜಾಗೊಳಿಸಿದೆ.
Youtube Video

ಮಾಟ, ಮೂಢನಂಬಿಕೆ ಮತ್ತು ಮೋಸದ ಧಾರ್ಮಿಕ ಮತಾಂತರದ ಭೀತಿಯನ್ನು ನಿಯಂತ್ರಿಸುವುದು ಸಂವಿಧಾನದ ಆರ್ಟಿಕಲ್ 51 ಎ ಅಡಿಯಲ್ಲಿ ಕರ್ತವ್ಯವಾಗಿದ್ದರೂ, ಕೇಂದ್ರ ಮತ್ತು ರಾಜ್ಯಗಳು ವಿಫಲವಾಗಿವೆ ಎಂದು ಅರ್ಜಿದಾರರು ಹೇಳಿದ್ದರು.
Published by: MAshok Kumar
First published: April 9, 2021, 6:29 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories