Kashmir Tension: ಕಾಶ್ಮೀರ ವಿಶೇಷ ಸ್ಥಾನಮಾನ ರದ್ದು ಆದೇಶ ಪ್ರಶ್ನಿಸಿ ಸುಪ್ರೀಂಗೆ ಮೊದಲ ಅರ್ಜಿ

ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿದ್ದ ಸಂವಿಧಾನದ 35ಎ ಮತ್ತು 370ನೇ ವಿಧಿಗಳನ್ನು ಕೇಂದ್ರ ಸರ್ಕಾರ ರದ್ದು ಮಾಡಿದೆ. ಹಾಗೆಯೇ ಕಣಿವೆ ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಿದೆ.

Ganesh Nachikethu | news18
Updated:August 7, 2019, 7:44 PM IST
Kashmir Tension: ಕಾಶ್ಮೀರ ವಿಶೇಷ ಸ್ಥಾನಮಾನ ರದ್ದು ಆದೇಶ ಪ್ರಶ್ನಿಸಿ ಸುಪ್ರೀಂಗೆ ಮೊದಲ ಅರ್ಜಿ
ಸುಪ್ರೀಂಕೋರ್ಟ್​
  • News18
  • Last Updated: August 7, 2019, 7:44 PM IST
  • Share this:
ನವದೆಹಲಿ(ಆಗಸ್ಟ್​​.07): ಜಮ್ಮು- ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದುಗೊಳಿಸಿ ಆದೇಶ ಹೊರಡಿಸಿದ ಕೇಂದ್ರ ಸರ್ಕಾರದ ವಿರುದ್ಧ ಸುಪ್ರೀಂಕೋರ್ಟ್​​ನಲ್ಲಿ ಮೊದಲ ಅರ್ಜಿ ಸಲ್ಲಿಕೆಯಾಗಿದೆ. ಭಾರತ ಪ್ರಜಾಪ್ರಭುತ್ವ ದೇಶ. ಸಂವಿಧಾನದ ಪರಿಚ್ಛೇದ ತಿದ್ದುಪಡಿಗೆ ಸಂಸತ್ ಮಾರ್ಗ ಬಳಸಬಾರದು. 370ನೇ ವಿಧಿ ರದ್ದುಗೊಳಿಸಲು ಕೇಂದ್ರ ಸರ್ಕಾರ ಸಂಸತ್​​ ಮಾರ್ಗ ಬಳಸಿದ್ದೇಗೆ ಸರಿ? ಎಂದು ಪ್ರಶ್ನಿಸಿ ವಕೀಲ ಎಂಎಲ್ ಶರ್ಮಾ ಎಂಬುವರು ಸುಪ್ರೀಂಕೋರ್ಟ್​​ನಲ್ಲಿ ಪಿಟೀಷನ್​​ ಹಾಕಿದ್ದಾರೆ. ರಾಷ್ಟ್ರಪತಿಗಳ ಪರಮಾಧಿಕಾರ ದುರುಪಯೋಗ ಮಾಡಿಕೊಳ್ಳುವ ಮುಖೇನ ಕೇಂದ್ರ ಸರ್ಕಾರ ಕಣಿವೆ ರಾಜ್ಯದ ಅಧಿಕಾರ ಕಿತ್ತುಕೊಂಡಿದೆ. ಈ ಆದೇಶ ಕೂಡಲೇ ರದ್ದುಗೊಳಿಸಿ ತೀರ್ಪು ನೀಡಬೇಕೆಂದು ಸುಪ್ರೀಂಕೋರ್ಟ್​​ಗೆ ಮನವಿ ಮಾಡಲಾಗಿದೆ.

370ನೇ ವಿಧಿ ರದ್ದುಪಡಿಸಿದ ಕೇಂದ್ರ ಸರ್ಕಾರದ ವಿರುದ್ಧ ಕಣಿವೆ ರಾಜ್ಯದಲ್ಲಿ ಪ್ರತಿಭಟನೆಗಳು ಪ್ರಾರಂಭವಾಗಿವೆ. ನಿಷೇಧಾಜ್ಞೆ ಜಾರಿಯಲ್ಲಿದ್ದರೂ ಹಲವು ಕಾಶ್ಮೀರಿಗಳು ರಸ್ತೆಗಳಿಗೆ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ, ಒಬ್ಬ ಪ್ರತಿಭಟನಾಕಾರ ಸಾವನ್ನಪ್ಪಿದ್ದಾರೆ. ಆರು ಮಂದಿ ಗಾಯಗೊಂಡಿದ್ಧಾರೆ ಎಂದು ಎಎಫ್​ಪಿ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಶ್ರೀನಗರದಲ್ಲಿ ಬುಧವಾರ ಬೆಳಗ್ಗೆ ಈ ದುರಂತ ಸಂಭವಿಸಿದೆ. ಪೊಲೀಸರು ಪ್ರತಿಭಟನಾಕಾರರನ್ನು ಚದುರಿಸುವ ವೇಳೆ ಸಾವು ನೋವು ಘಟಿಸಿವೆ. ಕರ್ಫ್ಯೂ ಜಾರಿಯಲ್ಲಿದ್ದರೂ ಪ್ರತಿಭಟನೆ ನಡೆಸಿದ ಜನರ ಗುಂಪನ್ನು ಚದುರಿಸಲು ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಒಬ್ಬ ಸಾವನ್ನಪ್ಪಿದ್ದು, ಹಲವರಿಗೆ ಗಾಯಗಳಾಗಿವೆ. ಪೊಲೀಸರ ಪ್ರಕಾರ, ತಪ್ಪಿಸಿಕೊಳ್ಳಲು ಹೋದ ಒಬ್ಬ ಪ್ರತಿಭಟನಾಕಾರ ಝೀಲಂ ನದಿಗೆ ಬಿದ್ದು ಸಾವನ್ನಪ್ಪಿದ್ದಾರೆನ್ನಲಾಗಿದೆ.

ಇದನ್ನೂ ಓದಿ: ಬಾರದ ಲೋಕದತ್ತ ಬಿಜೆಪಿ ಕಟ್ಟಾಳು; ಸರ್ಕಾರಿ ಗೌರವದೊಂದಿಗೆ ಸುಷ್ಮಾ ಸ್ವರಾಜ್​​ ಅಂತ್ಯಕ್ರಿಯೆ

ಇತ್ತೀಚೆಗೆ ಕಾಶ್ಮೀರ ವಿಶೇಷ ಸ್ಥಾನಮಾನ ರದ್ದು ಮಾಡುವ ಮುನ್ನವೇ ಕೇಂದ್ರ ಸರ್ಕಾರವು ಒಮರ್ ಅಬ್ದುಲ್ಲಾ, ಮೆಹಬೂಬ ಮುಫ್ತಿ, ಫಾರೂಕ್ ಅಬ್ದುಲ್ಲಾ ಮೊದಲಾದ ಕಾಶ್ಮೀರೀ ಮುಖಂಡರನ್ನು ಗೃಹ ಬಂಧನದಲ್ಲಿರಿಸಿತ್ತು. ಹಾಗೆಯೇ, ಮೊಬೈಲ್ ಸಂಪರ್ಕವನ್ನೂ ಸ್ಥಗಿತಗೊಳಿಸಿತ್ತು. ಇವತ್ತು ಹಿಂಸಾಚಾರ, ಪ್ರತಿಭಟನೆಗಳು ನಡೆಯುವ ನಿರೀಕ್ಷೆಯಲ್ಲಿ ರಾಜಕಾರಣಿಗಳು ಸೇರಿದಂತೆ ನೂರಾರು ಮಂದಿಯನ್ನು ಮುನ್ನೆಚ್ಚರಿಕೆ ಕ್ರಮವಾಗಿ ಬಂಧಿಸಲಾಗಿದೆ. ಕಾಶ್ಮೀರದ ಅಧಿಕಾರಿಗಳು ಈ ಕ್ರಮ ತೆಗೆದುಕೊಂಡಿರುವುದನ್ನು ಖಚಿತಪಡಿಸಿದ್ಧಾರೆ.

ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿದ್ದ ಸಂವಿಧಾನದ 35ಎ ಮತ್ತು 370ನೇ ವಿಧಿಗಳನ್ನು ಕೇಂದ್ರ ಸರ್ಕಾರ ರದ್ದು ಮಾಡಿದೆ. ಹಾಗೆಯೇ ಕಣಿವೆ ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಿದೆ. ಇವುಗಳಿಗೆ ಸಂಸತ್​ನ ಎರಡೂ ಸದನಗಳಲ್ಲಿ ಅನುಮೋದನೆಯೂ ಸಿಕ್ಕಿದೆ. ಇದೀಗ ರಾಷ್ಟ್ರಪತಿಗಳ ಅಂಕಿತದೊಂದಿಗೆ ಅಧಿಕೃತವಾಗಿ ಚಾಲನೆಗೆ ಬರಲಿದೆ.
-------------
First published:August 7, 2019
ಮತ್ತಷ್ಟು ಓದಿರಿ
ಮುಂದಿನ ಸುದ್ದಿ
corona virus btn
corona virus btn
Loading