HOME » NEWS » National-international » PETROL AND DIESEL PRICE MAY INCREASED IN 5 STATES WHICH THEY HAVE ASSEMBLY ELECTIONS DBDEL LG

Petrol Diesel Price: ಚುನಾವಣೆ ನಡೆಯುತ್ತಿರುವ 5 ರಾಜ್ಯಗಳಲ್ಲಿ ಮಾತ್ರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಕೆ ಸಂಭವ

ಈಗ ಪಶ್ಚಿಮ ಬಂಗಾಳ, ತಮಿಳುನಾಡು, ಅಸ್ಸಾಂ, ಕೇರಳ ಮತ್ತು ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿಗಳಿಗೆ ಚುನಾವಣೆಯ ದಿನಾಂಕ ನಿಗದಿಯಾಗಿದೆ. ಚುನಾವಣಾ ನೀತಿ ಸಂಹಿತೆಯೂ ಆರಂಭವಾಗಿದೆ. ಈ ಐದೂ 5 ರಾಜ್ಯಗಳಲ್ಲೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ವಿಷಯವೇ ಪ್ರಮುಖ ಚರ್ಚೆಯ ವಿಷಯವಾಗಿದೆ.

news18-kannada
Updated:March 10, 2021, 10:06 AM IST
Petrol Diesel Price: ಚುನಾವಣೆ ನಡೆಯುತ್ತಿರುವ 5 ರಾಜ್ಯಗಳಲ್ಲಿ ಮಾತ್ರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಕೆ ಸಂಭವ
ಸಾಂದರ್ಭಿಕ ಚಿತ್ರ
  • Share this:
ನವದೆಹಲಿ (ಮಾ. 10): ದೇಶದಲ್ಲಿ ನಿರಂತರವಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಮಾಡಲಾಗುತ್ತಿದೆ. ಇದರಿಂದ ಜೀವನಾವಶ್ಯಕ ವಸ್ತುಗಳ ಬೆಲೆ ಗಣನೀಯವಾಗಿ ಏರುತ್ತಿದೆ. ಈ ಬಗ್ಗೆ ದೇಶಾದ್ಯಂತ ವ್ಯಾಪಕವಾಗಿ ಚರ್ಚೆ ಆಗುತ್ತಿದೆ. ಕಳೆದ ಎರಡು ದಿನಗಳಿಂದ ಸಂಸತ್ ಅಧಿವೇಶನವನ್ನು ಬಲಿ ಪಡೆದುಕೊಂಡಿದೆ. ಎಲ್ಲಕ್ಕಿಂತ ಹೆಚ್ಚಾಗಿ ಸದ್ಯ ಚುನಾವಣೆ ನಡೆಯುತ್ತಿರುವ ರಾಜ್ಯಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ವಿಚಾರವೇ ಪ್ರಮುಖ ಚುನಾವಣಾ ವಿಷಯ ಆಗಿದೆ. ಈ‌ ಹಿನ್ನೆಲೆಯಲ್ಲಿ ಚುನಾವಣೆ ನಡೆಯುತ್ತಿರುವ ರಾಜ್ಯಗಳಲ್ಲಿ ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಕೆ ಮಾಡುವ ಸಾಧ್ಯತೆ ಇದೆ ಎಂದು ಕೇಳಿ ಬರುತ್ತಿದೆ.

ಈಗ ಪಶ್ಚಿಮ ಬಂಗಾಳ, ತಮಿಳುನಾಡು, ಅಸ್ಸಾಂ, ಕೇರಳ ಮತ್ತು ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿಗಳಿಗೆ ಚುನಾವಣೆಯ ದಿನಾಂಕ ನಿಗದಿಯಾಗಿದೆ. ಚುನಾವಣಾ ನೀತಿ ಸಂಹಿತೆಯೂ ಆರಂಭವಾಗಿದೆ. ಈ ಐದೂ 5 ರಾಜ್ಯಗಳಲ್ಲೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ವಿಷಯವೇ ಪ್ರಮುಖ ಚರ್ಚೆಯ ವಿಷಯವಾಗಿರುವುದರಿಂದ ಕಂಗಾಲಾಗಿರುವ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಚುನಾವಣೆ ನಡೆಯುತ್ತಿರುವ ರಾಜ್ಯಗಳಲ್ಲಿ ಮಾತ್ರ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಮೇಲಿನ ತೆರಿಗೆ ಇಳಿಸಲಿದೆ. ಆ ಮೂಲಕ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಸಲಿದೆ ಎಂದು ಗೊತ್ತಾಗಿದೆ.

ದಕ್ಷಿಣ ಕನ್ನಡ: ಮಂಗಳೂರನ್ನು ಕಾಯುವ ಪಾಂಡೇಶ್ವರ ಮಹಾಲಿಂಗೇಶ್ವರ

ಮೊದಲಿಗೆ ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯ ಬೆಲೆಗಳಿಗೆ ಅನುಗುಣವಾಗಿ ತೈಲ ಮಾರಾಟ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ನಿಗದಿ ಮಾಡುತ್ತಿದ್ದವು. ಈಗ ಕೇಂದ್ರ ಸರ್ಕಾರವೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ನಿಗದಿ ಮಾಡುತ್ತಿದೆ. ಇತ್ತೀಚೆಗೆ ಲೋಕಸಭೆಯಲ್ಲಿ ಹೆಚ್ಚುತ್ತಿರುವ ಇಂಧನ ಬೆಲೆಗಳ ಕುರಿತು ಹಲವಾರು ಪ್ರಶ್ನೆಗಳಿಗೆ ಲಿಖಿತ ಉತ್ತ ನೀಡಿರುವ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್ ಕೂಡ "ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಕ್ರಮವಾಗಿ ಜೂನ್ 26, 2010 ಮತ್ತು ಅಕ್ಟೋಬರ್ 19, 2014ರಿಂದ ಕೇಂದ್ರ ಸರ್ಕಾರವು ನಿರ್ಧರಿಸುತ್ತಿದೆ" ಎಂದು ಹೇಳಿದ್ದಾರೆ.

"ಅಂದಿನಿಂದ, ಸಾರ್ವಜನಿಕ ವಲಯದ ತೈಲ ಮಾರುಕಟ್ಟೆ ಕಂಪನಿಗಳು (ಒಎಂಸಿಗಳು) ತಮ್ಮ ಅಂತರರಾಷ್ಟ್ರೀಯ ಉತ್ಪನ್ನ ಬೆಲೆಗಳು, ವಿನಿಮಯ ದರ, ತೆರಿಗೆ ರಚನೆ, ಒಳನಾಡಿನ ಸರಕು ಸಾಗಣೆ ಮತ್ತು ಇತರ ವೆಚ್ಚದ ಅಂಶಗಳಿಗೆ ಅನುಗುಣವಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳ ಬಗ್ಗೆ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತವೆ" ಎಂದು ಕೂಡ ಹೇಳಿದ್ದಾರೆ. ಇದರಿಂದಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳ ಏರಿಕೆ ಅಥವಾ ಇಳಿಕೆಯಲ್ಲಿ ಕೇಂದ್ರ ಸರ್ಕಾರ ವಿಧಿಸುವ ತೆರಿಗೆ ಪ್ರಧಾನ ಪಾತ್ರ ವಹಿಸುತ್ತದೆ.

ಆದರೂ, ಸಾರ್ವಜನಿಕವಾಗಿ ವ್ಯಾಪಕ ಟೀಕೆ ವ್ಯಕ್ತವಾಗುತ್ತಿದ್ದರೂ, ಜನ ಕೊರೋನಾ ಮತ್ತು ಲಾಕ್ಡೌನ್ ನಂತಹ ಕಂಡುಕೇಳರಿಯದ ಕಷ್ಟ ಅನುಭವಿಸುತ್ತಿದ್ದರೂ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳ ಮೇಲಿನ ತೆರಿಗೆ ಇಳಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಏರಿಕೆ ಆಗದಂತೆ ಕ್ರಮ ತೆಗೆದುಕೊಂಡಿರಲಿಲ್ಲ. 2020ರ ಜೂನ್ ನಿಂದ ನಿರಂತರವಾಗಿ ಬೆಲೆ ಏರಿಸುತ್ತಿರುವ ಕೇಂದ್ರ ಸರ್ಕಾರ ಲಾಕ್ಡೌನ್ ಜಾರಿ ಇದ್ದಾಗಲೂ ಬೆಲೆ ಏರಿಸಿ ಜನರ ಜೇಬಿನಿಂದ ಹಣವನ್ನು ಸೂರೆ ಹೊಡೆದಿತ್ತು. ಈಗ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣೆ ನಡೆಯುತ್ತಿರುವ ರಾಜ್ಯಗಳಲ್ಲಿ ಮಾತ್ರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಇಳಿಸಲು ಮುಂದಾಗುತ್ತಿದೆ.
ಫೆಬ್ರವರಿ ತಿಂಗಳಲ್ಲಿ 16ನೇ ಬಾರಿಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಸಲಾಗಿದೆ. ಕಳೆದ 16ದಿನಗಳಿಂದ  4.97 ಪೈಸೆ ಬೆಲೆ ಹೆಚ್ಚಳ ಮಾಡಲಾಗಿದೆ. ಪ್ರತಿ ಲೀಟರ್ ಪೆಟ್ರೋಲ್ ಹಾಗೂ ಡೀಸೆಲ್ ಮೇಲೆ ಫೆಬ್ರವರಿ 4ರಂದು ತಾರೀಖು ತಲಾ 37 ಪೈಸೆ, ಫೆಬ್ರವರಿ 5ರಂದು 37 ಪೈಸೆ, ಫೆಬ್ರವರಿ 9ರಂದು 42 ಪೈಸೆ, ಫೆಬ್ರವರಿ 10ರಂದು 31 ಪೈಸೆ, ಫೆಬ್ರವರಿ 11ರಂದು 38 ಪೈಸೆ, ಫೆಬ್ರವರಿ 12ರಂದು 38 ಪೈಸೆ, ಫೆಬ್ರವರಿ 13ರಂದು 39 ಪೈಸೆ, ಫೆಬ್ರವರಿ 14ರಂದು 34 ಪೈಸೆ, ಫೆಬ್ರವರಿ 15ರಂದು 30 ಪೈಸೆ, ಫೆಬ್ರವರಿ 16ರಂದು 38 ಪೈಸೆ, ಫೆಬ್ರವರಿ 17ರಂದು 27 ಪೈಸೆ, ಫೆಬ್ರವರಿ 18ರಂದು 36 ಪೈಸೆ ಹೆಚ್ಚಳ, ಫೆಬ್ರವರಿ 19ರಂದು 36 ಪೈಸೆ, ಫೆಬ್ರವರಿ 20ರಂದು 41 ಪೈಸೆ, ಫೆಬ್ರವರಿ 23ರಂದು 38 ಪೈಸೆ ಹಾಗೂ ಫೆಬ್ರವರಿ 27ರಂದು ಮತ್ತೆ ಪ್ರತಿ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ 25 ಪೈಸೆ ಹೆಚ್ಚಳ ಮಾಡಲಾಗಿದೆ.
Published by: Latha CG
First published: March 10, 2021, 10:06 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories