Petrol Price Today | ದಿನನಿತ್ಯ ಏರುತ್ತಲೇ ಇದೆ ತೈಲ ಬೆಲೆ; ದೆಹಲಿ, ಮುಂಬೈ, ಪುಣೆ, ಬೆಂಗಳೂರಿನಲ್ಲಿ ಇಂದಿನ ಬೆಲೆ ಎಷ್ಟು?

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕೊರೋನಾ ಕಾರಣದಿಂದಾಗಿ ಕಳೆದ ಒಂದು ವರ್ಷದಿಂದ ತೈಲ ಬೆಲೆಯನ್ನು ಸಾಕಷ್ಟು ಇಳಿಸಲಾಗಿತ್ತು. ಆದರೆ, ಕೇಂದ್ರ ಸರ್ಕಾರ ಈ ಲಾಭವನ್ನು ಜನರಿಗೆ ನೀಡದೆ ಪ್ರತಿದಿನ ತೈಲದ ಮೇಲೆ ತೆರಿಗೆಯನ್ನು ವಿಧಿಸುತ್ತಲೇ ಇದೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
    Fuel Price Today (ಬೆಂಗಳೂರು ಜುಲೈ 06): ಭಾರತದಲ್ಲಿ ಒಂದೆಡೆ ಕೊರೋನಾ ವೈರಸ್ ಅಬ್ಬರವಾದರೆ ಮತ್ತೊಂದೆಡೆ ಬೆಲೆಯೇರಿಕೆಯಿಂದ ಜನರು ತತ್ತರಿಸಿದ್ದಾರೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯ ಏರಿಕೆಯಿಂದ ಜನ ತಮ್ಮ ವಾಹನಗಳನ್ನು ರಸ್ತೆಗಿಳಿಸಲು ಯೋಚಿಸುವ ಪರಿಸ್ಥಿತಿ ಬಂದಿದೆ. ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಈಗಾಗಲೇ ಪೆಟ್ರೋಲ್ ಬೆಲೆ 100 ರೂ. ದಾಟಿದೆ. ಕರ್ನಾಟಕ ಮಾತ್ರವಲ್ಲದೆ ರಾಜಸ್ಥಾನ, ಹೈದರಾಬಾದ್​ನಲ್ಲಿ 1 ಲೀಟರ್ ಪೆಟ್ರೋಲ್ ಬೆಲೆ 102 ರೂ. ದಾಟಿದೆ. ಮುಂಬೈನಲ್ಲಿ ಪೆಟ್ರೋಲ್ ಬೆಲೆ 105 ರೂ. ಆಗಿದೆ. ಜೈಪುರದಲ್ಲಿ 1 ಲೀಟರ್ ಪೆಟ್ರೋಲ್ ಬೆಲೆ 106 ರೂ. ಆಗುವ ಮೂಲಕ ಹೊಸ ದಾಖಲೆ ಬರೆದಿದೆ. ಬೆಂಗಳೂರಿನಲ್ಲೂ 1 ಲೀಟರ್ ಪೆಟ್ರೋಲ್ 102 ರೂ. ಆಗಿದೆ. ಇಂದು ಮತ್ತೆ ಪೆಟ್ರೋಲ್ ಬೆಲೆಯನ್ನು ಏರಿಸಲಾಗಿದೆ. ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಪೆಟ್ರೋಲ್, ಡೀಸೆಲ್ ಬೆಲೆಯೆಷ್ಟು? ಇಲ್ಲಿದೆ ಮಾಹಿತಿ...

    ಕರ್ನಾಟಕ, ಮಹಾರಾಷ್ಟ್ರ, ಮಧ್ಯಪ್ರದೇಶ, ತೆಲಂಗಾಣ, ರಾಜಸ್ಥಾನ, ಒರಿಸ್ಸಾ, ಕೇರಳ, ಆಂಧ್ರಪ್ರದೇಶ, ಲಡಾಖ್, ಬಿಹಾರ, ಜಮ್ಮು ಕಾಶ್ಮೀರದಲ್ಲಿ 1 ಲೀಟರ್ ಪೆಟ್ರೋಲ್ ಬೆಲೆ 102.43 ರೂ. ದಾಟಿದೆ. ಕರ್ನಾಟಕದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಪೆಟ್ರೋಲ್ ಬೆಲೆ 102 ರೂ. ದಾಟಿದೆ. ಬೆಂಗಳೂರಿನಲ್ಲಿ 1 ಲೀಟರ್ ಪೆಟ್ರೋಲ್ಗೆ 102 ರೂ. ಆಗಿದೆ. ಇಂದು ಪೆಟ್ರೋಲ್ ಬೆಲೆ ಮತ್ತೆ ಏರಿಕೆಯಾಗಿದ್ದು, ಡೀಸೆಲ್ ಬೆಲೆಯಲ್ಲಿ ಯಾವುದೇ ಏರಿಕೆಯಾಗಿಲ್ಲ.

    ಇಂದು ನವದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 99.16 ರೂ. ಇದೆ. ಕೊಲ್ಕತ್ತಾದಲ್ಲಿ 99.04 ರೂ., ಮುಂಬೈನಲ್ಲಿ 105.24 ರೂ., ಚೆನ್ನೈನಲ್ಲಿ 100.13 ರೂ., ನೋಯ್ಡಾದಲ್ಲಿ 96.39 ರೂ., ಬೆಂಗಳೂರಿನಲ್ಲಿ 102.48 ರೂ., ಭುವನೇಶ್ವರದಲ್ಲಿ 99.77 ರೂ., ಹೈದರಾಬಾದ್ನಲ್ಲಿ 103.05 ರೂ., ಜೈಪುರದಲ್ಲಿ 106.18 ರೂ., ಲಕ್ನೋದಲ್ಲಿ 96.31 ರೂ., ಪಾಟ್ನಾದಲ್ಲಿ 101.49 ರೂ., ತಿರುವನಂತಪುರದಲ್ಲಿ 100.87 ರೂ. ಆಗಿದೆ.

    ಇದನ್ನೂ ಓದಿ: Karnataka Weather Today: ಇಂದು ಮತ್ತು ನಾಳೆ ರಾಜ್ಯದಲ್ಲಿ ಭಾರೀ ಮಳೆ; ಹವಾಮಾನ ಇಲಾಖೆ ಎಚ್ಚರಿಕೆ!

    ಭಾರತದ ಕೆಲವು ನಗರಗಳಲ್ಲಿ ಡೀಸೆಲ್ ಬೆಲೆ ಮತ್ತೆ ಏರಿಕೆಯಾಗಿದೆ. ರಾಜಸ್ಥಾನದಲ್ಲಿ ಈಗಾಗಲೇ ಡೀಸೆಲ್ ಬೆಲೆ ಶತಕ ಬಾರಿಸಿದೆ. ಬೆಂಗಳೂರು, ಮುಂಬೈ, ಹೈದರಾಬಾದ್, ಜೈಪುರ, ಭುವನೇಶ್ವರ, ಚೆನ್ನೈ ಸೇರಿ ವಿವಿಧ ನಗರಗಳಲ್ಲಿ ಇಂದಿನ ಡೀಸೆಲ್ ಬೆಲೆ ಹೀಗಿದೆ. ನವದೆಹಲಿಯಲ್ಲಿ ಇಂದು 1 ಲೀಟರ್ ಡೀಸೆಲ್ ಬೆಲೆ 89.18 ರೂ. ಇದೆ. ಚೆನ್ನೈನಲ್ಲಿ 93.72 ರೂ, ಮುಂಬೈನಲ್ಲಿ 96.72 ರೂ, ಬೆಂಗಳೂರಿನಲ್ಲಿ 94.54 ರೂ, ಹೈದರಾಬಾದ್ನಲ್ಲಿ 97.20 ರೂ. ಇದೆ.

    ಭಾರತದ ಪ್ರಮುಖ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಪ್ರತಿದಿನ ಏರಿಳಿತಗಳು ಉಂಟಾಗುತ್ತಲೇ ಇರುತ್ತವೆ. ಕಳೆದ 1 ವರ್ಷದಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಭಾರೀ ಹೆಚ್ಚಳವಾಗುತ್ತಿದೆ. ಮಹಾರಾಷ್ಟ್ರದ ಮುಂಬೈ, ರಾಜಸ್ಥಾನದ ಜೈಪುರ, ಮಧ್ಯಪ್ರದೇಶ, ತೆಲಂಗಾಣ, ಕರ್ನಾಟಕ, ಆಂಧ್ರಪ್ರದೇಶದಲ್ಲೂ ಪೆಟ್ರೋಲ್ ದರ ಶತಕ ಬಾರಿಸಿದೆ. ಈ ಸಂಖ್ಯೆ ಹೆಚ್ಚುತ್ತಲೇ ಇದೆ.

    ಇದನ್ನೂ ಓದಿ: Astrology: ಈ ರಾಶಿಯ ಹೆಣ್ಣು ಮಕ್ಕಳಿಗೆ ಕೂಡಲಿದೆ ಕಂಕಣ ಭಾಗ್ಯ; ಹೇಗಿದೆ ಈ ದಿನದ ಭವಿಷ್ಯ

    ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕ್ರೂಡ್ ಆಯಿಲ್ ದರ ಹೆಚ್ಚಳವಾದಾಗ ದೇಶಿಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಹೆಚ್ಚಿಸುವುದು, ಹಾಗೆಯೇ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕ್ರೂಡ್ ಆಯಿಲ್ ದರ ಕಡಿಮೆಯಾದಾಗ ದೇಶಿಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಇಳಿಸುವುದು ಸಾಮಾನ್ಯವಾದ ಸಂಗತಿ.

    ಆದರೆ, ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕೊರೋನಾ ಕಾರಣದಿಂದಾಗಿ ಕಳೆದ ಒಂದು ವರ್ಷದಿಂದ ತೈಲ ಬೆಲೆಯನ್ನು ಸಾಕಷ್ಟು ಇಳಿಸಲಾಗಿತ್ತು. ಆದರೆ, ಕೇಂದ್ರ ಸರ್ಕಾರ ಈ ಲಾಭವನ್ನು ಜನರಿಗೆ ನೀಡದೆ ಪ್ರತಿದಿನ ತೈಲದ ಮೇಲೆ ತೆರಿಗೆಯನ್ನು ವಿಧಿಸುತ್ತಲೇ ಇದೆ. ಪರಿಣಾಮ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾದರೆ ಸಹಜವಾಗಿ ನಿತ್ಯ ಬಳಕೆಯ ಬೇರೆಲ್ಲಾ ವಸ್ತುಗಳ ಬೆಲೆ ಹೆಚ್ಚಳವಾಗುತ್ತದೆ. ಇದರಿಂದ ಜನಸಾಮಾನ್ಯರಿಗೆ ಮತ್ತಷ್ಟು ತೊಂದರೆಯಾಗುತ್ತಿದೆ.
    Published by:MAshok Kumar
    First published: