Petrol-Diesel Price: 4 ದಿನಗಳ ಬಳಿಕ ಮತ್ತೆ ಡೀಸೆಲ್ ಬೆಲೆ ಏರಿಸಿದ ಕೇಂದ್ರ ಸರ್ಕಾರ

ನಾಲ್ಕು ದಿನಗಳ ಹಿಂದೆ (ಜುಲೈ 7ರಂದು) ಪ್ರತಿ ಲೀಟರ್ ಡೀಸೆಲ್ ಗೆ 25 ಪೈಸೆ ಹೆಚ್ಚಳ ಮಾಡಲಾಗಿತ್ತು. ಭಾನುವಾರ ಮತ್ತೆ 16 ಪೈಸೆ ಬೆಲೆ ಏರಿಕೆ ಮಾಡಲಾಗಿದೆ. ಇದರಿಂದಾಗಿ ಕಳೆದ ಒಂದು ತಿಂಗಳಿನಿಂದ ಪ್ರತಿ ಲೀಟರ್ ಡೀಸೆಲ್ ಗೆ 11.42 ರೂಪಾಯಿ ಹೆಚ್ಚಳವಾದಂತಾಗಿದೆ.

news18-kannada
Updated:July 12, 2020, 9:54 AM IST
Petrol-Diesel Price: 4 ದಿನಗಳ ಬಳಿಕ ಮತ್ತೆ ಡೀಸೆಲ್ ಬೆಲೆ ಏರಿಸಿದ ಕೇಂದ್ರ ಸರ್ಕಾರ
ಸಾಂದರ್ಭಿಕ ಚಿತ್ರ
  • Share this:
ನವದೆಹಲಿ(ಜು.12): ಅಂತರಾಷ್ಟ್ರೀಯ ಮಟ್ಟದಲ್ಲಿ ಕ್ರೂಡ್ ಆಯಿಲ್ ಬೆಲೆ ಗಣನೀಯವಾಗಿ ಕಡಿಮೆ ಆಗುತ್ತಿದ್ದರೂ, ಮಹಾ ಕ್ರೂರಿ ಕೊರೋನಾ ಮತ್ತು ಲಾಕ್​ಡೌನ್​ ಕಾರಣಗಳಿಂದ ಜನ ಸಾಮಾನ್ಯರು ಎಷ್ಟೇ ಕಷ್ಟದಲ್ಲಿದ್ದರೂ ಹಾಗೂ ಕಾಂಗ್ರೆಸ್ ನಾಯಕರು ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆಗೆ ವ್ಯಾಪಕವಾದ ವಿರೋಧ ವ್ಯಕ್ತಪಡಿಸುತ್ತಿದ್ದರೂ ಇದ್ಯಾವುದನ್ನೂ ಪರಿಗಣಿಸದ ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಭಾನುವಾರ ಮತ್ತೊಮ್ಮೆ ಡೀಸೆಲ್ ಬೆಲೆಯನ್ನು ಹೆಚ್ಚಳ ಮಾಡಿದೆ.

ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕ್ರೂಡ್ ಆಯಿಲ್ ದರ ಹೆಚ್ಚಳವಾದಾಗ ದೇಶಿಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಹೆಚ್ಚಿಸುವುದು, ಹಾಗೆಯೇ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕ್ರೂಡ್ ಆಯಿಲ್ ದರ ಕಡಿಮೆಯಾದಾಗ ದೇಶಿಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಇಳಿಸುವುದು ಸಾಮಾನ್ಯವಾದ ಸಂಗತಿ. ಬಹಳ‌ ಹಿಂದಿನಿಂದಲೂ ಇದು ನಡೆದುಕೊಂಡ ಬಂದಿರುವ ರೀತಿ.

ಆದರೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಈ‌ ಸತ್ಸಂಪ್ರದಾಯವನ್ನು ಮರೆತಿದೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕ್ರೂಡ್ ಆಯಿಲ್ ದರ ಗಣನೀಯವಾಗಿ ಕಡಿಮೆ ಆಗುತ್ತಿದ್ದರೂ ದೇಶಿಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ನಿರಂತರವಾಗಿ ಹೆಚ್ಚಳ ಮಾಡುತ್ತಲೇ ಇದೆ.

ವಾಸುದೇವ ಮಯ್ಯ ಆತ್ಮಹತ್ಯೆ ಬೆನ್ನಲ್ಲೀಗ ಮತ್ತೊಂದು ಬಹುಕೋಟಿ ವಂಚನೆ ಆರೋಪ: 14 ಮಂದಿ ವಿರುದ್ಧ ಎಫ್​ಐಆರ್​​

ಕಳೆದ ತಿಂಗಳು ಬರೊಬ್ಬರಿ 23 ದಿನ‌ ನಿರಂತರವಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಏರಿಕೆ ಮಾಡಲಾಗಿತ್ತು. ಈಗ ನಾಲ್ಕು ದಿನಗಳ ಹಿಂದೆ (ಜುಲೈ 7ರಂದು) ಪ್ರತಿ ಲೀಟರ್ ಡೀಸೆಲ್ ಗೆ 25 ಪೈಸೆ ಹೆಚ್ಚಳ ಮಾಡಲಾಗಿತ್ತು. ಭಾನುವಾರ ಮತ್ತೆ 16 ಪೈಸೆ ಬೆಲೆ ಏರಿಕೆ ಮಾಡಲಾಗಿದೆ. ಇದರಿಂದಾಗಿ ಕಳೆದ ಒಂದು ತಿಂಗಳಿನಿಂದ ಪ್ರತಿ ಲೀಟರ್ ಡೀಸೆಲ್ ಗೆ 11.42 ರೂಪಾಯಿ ಹೆಚ್ಚಳವಾದಂತಾಗಿದೆ. ದೇಶದ ವಿವಿಧ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಈ ರೀತಿ ಇವೆ.

ದೇಶದ ವಿವಿಧ ನಗರಗಳಲ್ಲಿನ ಪೆಟ್ರೋಲ್ -ಡೀಸೆಲ್ ಬೆಲೆಭೂಪಾಲ್- ಪೆಟ್ರೋಲ್ 88.08 ರೂ., ಡೀಸೆಲ್ 80.28 ರೂ.
ಮುಂಬೈ- ಪೆಟ್ರೋಲ್ 87.19 ರೂ., ಡೀಸೆಲ್ 79.17 ರೂ.
ಚೆನ್ನೈ- ಪೆಟ್ರೋಲ್ 83.63 ರೂ., ಡೀಸೆಲ್ 78.01 ರೂ.
ಪಾಟ್ನಾ- ಪೆಟ್ರೋಲ್ 83.31ರೂ., ಡೀಸೆಲ್ 77.77 ರೂ.
ಬೆಂಗಳೂರು- ಪೆಟ್ರೋಲ್ 83.02 ರೂ., ಡೀಸೆಲ್ 76. 49 ರೂ.
ಕೋಲ್ಕತ್ತಾ- ಪೆಟ್ರೋಲ್ 82.10 ರೂ., ಡೀಸೆಲ್ 76.05 ರೂ.
ಲಕ್ನೋ- ಪೆಟ್ರೋಲ್ 80.98 ರೂ., ಡೀಸೆಲ್ 72.81 ರೂ.
ದೆಹಲಿ- ಪೆಟ್ರೋಲ್ 80.43 ರೂ., ಡೀಸೆಲ್ 80.94 ರೂ.
ರಾಂಚಿ- ಪೆಟ್ರೋಲ್ 80.29 ರೂ., ಡೀಸೆಲ್ 76.84 ರೂ.
Published by: Latha CG
First published: July 12, 2020, 9:54 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading