Petrol Price Today: ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ; ಬೆಂಗಳೂರು ಸೇರಿ ವಿವಿಧ ನಗರಗಳಲ್ಲಿ ಇಂದಿನ ದರವೆಷ್ಟು?

ಆಗಸ್ಟ್, ಸೆಪ್ಟೆಂಬರ್, ಅಕ್ಟೋಬರ್, ನವೆಂಬರ್ ಮತ್ತು ಡಿಸೆಂಬರ್ ತಿಂಗಳುಗಳಲ್ಲೂ ಆಗಾಗ್ಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಹೆಚ್ಚಳ ಮಾಡಲಾಗಿತ್ತು. ಈಗ ಜನವರಿ, ಫೆಬ್ರವರಿ ತಿಂಗಳಿನಲ್ಲೂ ನಿರಂತರವಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಸಲಾಗುತ್ತದೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
ನವದೆಹಲಿ(ಫೆ. 4): ಅಂತಾರಾಷ್ಟ್ರೀಯ ಮಟ್ಟದಲ್ಲಿ ಕ್ರೂಡ್ ಆಯಿಲ್ ಬೆಲೆ ಗಣನೀಯವಾಗಿ ಕಡಿಮೆ ಆಗುತ್ತಿದ್ದರೂ, ಮಹಾ ಕ್ರೂರಿ ಕೊರೊನಾ ಮತ್ತು ಲಾಕ್​ಡೌನ್​ ಕಾರಣಗಳಿಂದ ಜನ ಸಾಮಾನ್ಯರು ಎಷ್ಟೇ ಕಷ್ಟದಲ್ಲಿದ್ದರೂ ಹಾಗೂ ಕಾಂಗ್ರೆಸ್ ನಾಯಕರು ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆಗೆ ವ್ಯಾಪಕವಾದ ವಿರೋಧ ವ್ಯಕ್ತಪಡಿಸುತ್ತಿದ್ದರೂ, ಇದ್ಯಾವುದನ್ನೂ ಪರಿಗಣಿಸದ ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಹೆಚ್ಚಳ ಮಾಡಿದೆ.

ಗುರುವಾರ (ಫೆಬ್ರವರಿ 4) ಮಾತ್ರವಲ್ಲ, ಕಳೆದ ತಿಂಗಳು ನಿರಂತರವಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಮಾಡಲಾಗಿತ್ತು. ಫೆಬ್ರವರಿಯಲ್ಲಿ ಈಗ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಶುರುವಾಗಿದೆ. ಗುರುವಾರ ಪ್ರತಿ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ 37 ಪೈಸೆ ಹೆಚ್ಚಳ ಮಾಡಲಾಗಿದೆ.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕ್ರೂಡ್ ಆಯಿಲ್ ದರ ಹೆಚ್ಚಳವಾದಾಗ ದೇಶಿಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಹೆಚ್ಚಿಸುವುದು, ಹಾಗೆಯೇ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕ್ರೂಡ್ ಆಯಿಲ್ ದರ ಕಡಿಮೆಯಾದಾಗ ದೇಶಿಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಇಳಿಸುವುದು ಸಾಮಾನ್ಯವಾದ ಸಂಗತಿ. ಬಹಳ‌ ಹಿಂದಿನಿಂದಲೂ ಇದು ನಡೆದುಕೊಂಡ ಬಂದಿರುವ ರೀತಿ.

Aero India 2021: ಇಂದು ಎರಡನೇ ದಿನದ ಏರ್ ​ಶೋ; ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ

ಆದರೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಈ‌ ಸತ್ಸಂಪ್ರದಾಯವನ್ನು ಮರೆತಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕ್ರೂಡ್ ಆಯಿಲ್ ದರ ಗಣನೀಯವಾಗಿ ಕಡಿಮೆ ಆಗುತ್ತಿದ್ದರೂ ದೇಶಿಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ನಿರಂತರವಾಗಿ ಹೆಚ್ಚಳ ಮಾಡುತ್ತಲೇ ಇದೆ. 2020ರ ಜೂನ್ ತಿಂಗಳಲ್ಲಿ, ಅಂದರೆ ಜನ ಕೊರೋನಾ ಮತ್ತು ಲಾಕ್ಡೌನ್ ಎಂಬ ಎರಡು ಬಲು ದೊಡ್ಡ ಕಷ್ಟದಲ್ಲಿದ್ದಾಗ ನರೇಂದ್ರ ಮೋದಿ ನೇತೃತ್ವದ ಸರ್ಕಾರ ನಿರಂತರವಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಹೆಚ್ಚಿಸುವ ಪರಿಪಾಠ ಶುರುವಾಗಿತ್ತು.

ಉದಾಹರಣೆಗೆ ಜೂನ್ ತಿಂಗಳಲ್ಲಿ ಬರೊಬ್ಬರಿ 23 ದಿನ‌ ನಿರಂತರವಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಏರಿಕೆ ಮಾಡಲಾಗಿತ್ತು. ಜುಲೈ ತಿಂಗಳಲ್ಲಿ ದಿನ ಬಿಟ್ಟು ದಿನ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಮಾಡಲಾಗಿತ್ತು. ಆಗಸ್ಟ್, ಸೆಪ್ಟೆಂಬರ್, ಅಕ್ಟೋಬರ್, ನವೆಂಬರ್ ಮತ್ತು ಡಿಸೆಂಬರ್ ತಿಂಗಳುಗಳಲ್ಲೂ ಆಗಾಗ್ಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಹೆಚ್ಚಳ ಮಾಡಲಾಗಿತ್ತು. ಈಗ ಜನವರಿ, ಫೆಬ್ರವರಿ ತಿಂಗಳಿನಲ್ಲೂ ನಿರಂತರವಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಸಲಾಗುತ್ತದೆ. ದೇಶದ ವಿವಿಧ ನಗರಗಳಲ್ಲಿನ ಪೆಟ್ರೋಲ್ ಮತ್ತುಡೀಸೆಲ್ ಬೆಲೆಗಳ ವಿವರ ಹೀಗಿದೆ.

ದೇಶದ ವಿವಿಧ ನಗರಗಳಲ್ಲಿನ ಪೆಟ್ರೋಲ್ -ಡೀಸೆಲ್ ಬೆಲೆ
ಬೆಂಗಳೂರು- ಪೆಟ್ರೋಲ್ 89.54 ರೂ., ಡೀಸೆಲ್ 81.44 ರೂ.
ಮುಂಬೈ- ಪೆಟ್ರೋಲ್ 93.23 ರೂ., ಡೀಸೆಲ್ 83.67ರೂ.
ಚೆನ್ನೈ- ಪೆಟ್ರೋಲ್ 89.13 ರೂ., ಡೀಸೆಲ್ 82.04 ರೂ.
ಪಾಟ್ನಾ- ಪೆಟ್ರೋಲ್ 89.11 ರೂ., ಡೀಸೆಲ್ 82 ರೂ.
ಭೂಪಾಲ್- ಪೆಟ್ರೋಲ್ 88.08 ರೂ., ಡೀಸೆಲ್ 81.08 ರೂ.
ಕೋಲ್ಕತ್ತಾ- ಪೆಟ್ರೋಲ್ 88.01 ರೂ., ಡೀಸೆಲ್ 80.41 ರೂ.
ದೆಹಲಿ- ಪೆಟ್ರೋಲ್ 86.65 ರೂ., ಡೀಸೆಲ್ 76.83 ರೂ.
ನೋಯ್ಡಾ- ಪೆಟ್ರೋಲ್ 85.91 ರೂ., ಡೀಸೆಲ್ 77.24 ರೂ.
ಲಕ್ನೋ- ಪೆಟ್ರೋಲ್ 85.85 ರೂ., ಡೀಸೆಲ್ 77.19 ರೂ.
ರಾಂಚಿ- ಪೆಟ್ರೋಲ್ 85.07 ರೂ., ಡೀಸೆಲ್ 81.28 ರೂ.
ಗುರುಗಾವ್ - ಪೆಟ್ರೋಲ್ 84.72 ರೂ., ಡೀಸೆಲ್ 77.39 ರೂ.
Published by:Latha CG
First published: