Petrol Diesel Price: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದಿನ ಪೆಟ್ರೋಲ್-ಡೀಸೆಲ್ ದರವೆಷ್ಟು?

ನವದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 83.71 ಪೈಸೆ, ಡೀಸೆಲ್ ಬೆಲೆ 73.87 ಪೈಸೆ ಇದೆ. ಮುಂಬೈನಲ್ಲಿ ಪೆಟ್ರೋಲ್ ಬೆಲೆ 90.34 ಪೈಸೆ ಇದ್ದರೆ, ಡೀಸೆಲ್ ಬೆಲೆ 80.51 ಪೈಸೆ ಇದೆ. ಚೆನ್ನೈನಲ್ಲಿ ಪೆಟ್ರೋಲ್ ಬೆಲೆ 86.51 ಪೈಸೆ ಇದ್ದರೆ, ಡೀಸೆಲ್ ಬೆಲೆ 79.21 ಪೈಸೆ ಇದೆ. ಕೊಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ 85.19 ಪೈಸೆ ಇದ್ದರೆ, ಡೀಸೆಲ್ ಬೆಲೆ 77.44 ಪೈಸೆ ಇದೆ. ಬೆಂಗಳೂರಿನಲ್ಲಿ ಇಂದು ಪ್ರತಿ ಲೀಟರ್ ಪೆಟ್ರೋಲ್ ಬೆಲೆ 86.51 ಪೈಸೆ ಇದೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
    ನವದೆಹಲಿ (ಡಿ. 12): ಅಂತಾರಾಷ್ಟ್ರೀಯ ಮಟ್ಟದಲ್ಲಿ ಕ್ರೂಡ್ ಆಯಿಲ್ ಬೆಲೆ ಗಣನೀಯವಾಗಿ ಕಡಿಮೆ ಆಗುತ್ತಿದ್ದರೂ, ಕ್ರೂರಿ ಕೊರೊನಾ ಮತ್ತು ಲಾಕ್ಡೌನ್ ಕಾರಣಗಳಿಂದ ಜನ ಸಾಮಾನ್ಯರು ಕಷ್ಟದಲ್ಲಿದ್ದರೂ, ಸಾರ್ವಜನಿಕರು ವ್ಯಾಪಕವಾದ ವಿರೋಧ ವ್ಯಕ್ತಪಡಿಸುತ್ತಿದ್ದರೂ ಇದ್ಯಾವುದನ್ನೂ ಪರಿಗಣಿಸದ ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಡಿಸೆಂಬರ್ 2ರಿಂದ ನಿರಂತರವಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಏರಿಸುತ್ತಲೇ ಇದೆ. ನವೆಂಬರ್ 20, 21, 22, 23, 27, 28 ಹಾಗೂ 29ರಂದು ನಿರಂತರವಾಗಿ ಪೆಟ್ರೋಲ್-ಡೀಸೆಲ್ ಬೆಲೆ ಏರಿಸಲಾಗಿತ್ತು. ಇದಾದ ಮೇಲೆ ಡಿಸೆಂಬರ್ 2, 3, 4, 5 ಹಾಗೂ 6ರಂದು ಮತ್ತೆ ಪೆಟ್ರೋಲ್-ಡೀಸಲ್ ಬೆಲೆ ಹೆಚ್ಚಳ ಮಾಡಲಾಗಿತ್ತು. ಡಿಸೆಂಬರ್ 7ರಂದು ಕೂಡ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳನ್ನು ಏರಿಸಲಾಗಿತ್ತು. ನವೆಂಬರ್ 27 ರಂದು ಪ್ರತಿ ಲೀಟರ್ ಪೆಟ್ರೋಲ್ ಮೇಲೆ 19 ಪೈಸೆ, ಪ್ರತಿ ಲೀಟರ್ ಡೀಸೆಲ್ ಮೇಲೆ 24 ಪೈಸೆ ಏರಿಕೆ ಮಾಡಲಾಗಿತ್ತು. ನವೆಂಬರ್ 28ರಂದು ಪ್ರತಿ ಲೀಟರ್ ಪೆಟ್ರೋಲ್ ಮೇಲೆ 24 ಪೈಸೆ, ಪ್ರತಿ ಲೀಟರ್ ಡೀಸೆಲ್ ಮೇಲೆ 27 ಪೈಸೆ ಏರಿಕೆ ಮಾಡಲಾಗಿತ್ತು. ನವೆಂಬರ್ 29ರಂದು ಪ್ರತಿ ಲೀಟರ್ ಪೆಟ್ರೋಲ್ ಮೇಲೆ 21 ಪೈಸೆ, ಪ್ರತಿ ಲೀಟರ್ ಡೀಸೆಲ್ ಮೇಲೆ 29 ಪೈಸೆ ಏರಿಸಲಾಗಿತ್ತು.

    ಡಿಸೆಂಬರ್ 2ರಂದು ಪ್ರತಿ ಲೀಟರ್ ಮೇಲೆ 15 ಪೈಸೆ ಹಾಗೂ ಪ್ರತಿ ಲೀಟರ್ ಡೀಸೆಲ್ ಮೇಲೆ 23 ಪೈಸೆ ಹೆಚ್ಚಿಸಲಾಗಿತ್ತು. ಡಿಸೆಂಬರ್ 3ರಂದು ಪ್ರತಿ ಲೀಟರ್ ಮೇಲೆ 17ಪೈಸೆ ಹಾಗೂ ಪ್ರತಿ ಲೀಟರ್ ಡೀಸೆಲ್ ಮೇಲೆ 19 ಪೈಸೆ ಏರಿಸಲಾಗಿತ್ತು. ಡಿಸೆಂಬರ್ 4ರಂದು ಪ್ರತಿ ಲೀಟರ್ ಮೇಲೆ 20 ಪೈಸೆ ಹಾಗೂ ಪ್ರತಿ ಲೀಟರ್ ಡೀಸೆಲ್ ಮೇಲೆ 23 ಪೈಸೆ ಹೆಚ್ಚಳ ಮಾಡಲಾಗಿತ್ತು.‌ ಡಿಸೆಂಬರ್ 5ರಂದು ಪ್ರತಿ ಲೀಟರ್ ಮೇಲೆ 27 ಪೈಸೆ ಹಾಗೂ ಪ್ರತಿ ಲೀಟರ್ ಡೀಸೆಲ್ ಮೇಲೆ 25 ಪೈಸೆ ಏರಿಸಲಾಗಿತ್ತು. ಡಿಸೆಂಬರ್ 6ರಂದು ಪ್ರತಿ ಲೀಟರ್ ಮೇಲೆ 28 ಪೈಸೆ ಹಾಗೂ ಪ್ರತಿ ಲೀಟರ್ ಡೀಸೆಲ್ ಮೇಲೆ 29 ಪೈಸೆ ಏರಿಸಲಾಗಿತ್ತು. ಕಳೆದ ಒಂದು ವಾರದಿಂದ ಪೆಟ್ರೋಲ್​, ಡೀಸೆಲ್​ ಬೆಲೆಯಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ.

    Farmers Protest: ದೆಹಲಿ ಗಡಿಯಲ್ಲಿ ರೈತರ ಪ್ರತಿಭಟನೆ ತೆರವುಗೊಳಿಸುವಂತೆ ಕೋರಿ ಸುಪ್ರೀಂ ಕೋರ್ಟ್​​ಗೆ ಅರ್ಜಿ

    ಇಂದು ವಿವಿಧ ನಗರಗಳಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ ಇಂತಿದೆ. ನವದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 83.71 ಪೈಸೆ, ಡೀಸೆಲ್ ಬೆಲೆ 73.87 ಪೈಸೆ ಇದೆ. ಮುಂಬೈನಲ್ಲಿ ಪೆಟ್ರೋಲ್ ಬೆಲೆ 90.34 ಪೈಸೆ ಇದ್ದರೆ, ಡೀಸೆಲ್ ಬೆಲೆ 80.51 ಪೈಸೆ ಇದೆ. ಚೆನ್ನೈನಲ್ಲಿ ಪೆಟ್ರೋಲ್ ಬೆಲೆ 86.51 ಪೈಸೆ ಇದ್ದರೆ, ಡೀಸೆಲ್ ಬೆಲೆ 79.21 ಪೈಸೆ ಇದೆ. ಕೊಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ 85.19 ಪೈಸೆ ಇದ್ದರೆ, ಡೀಸೆಲ್ ಬೆಲೆ 77.44 ಪೈಸೆ ಇದೆ. ಬೆಂಗಳೂರಿನಲ್ಲಿ ಇಂದು ಪ್ರತಿ ಲೀಟರ್ ಪೆಟ್ರೋಲ್ ಬೆಲೆ 86.51 ಪೈಸೆ ಇದೆ.

    ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕ್ರೂಡ್ ಆಯಿಲ್ ದರ ಹೆಚ್ಚಳವಾದಾಗ ದೇಶಿಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಹೆಚ್ಚಿಸುವುದು, ಹಾಗೆಯೇ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕ್ರೂಡ್ ಆಯಿಲ್ ದರ ಕಡಿಮೆಯಾದಾಗ ದೇಶಿಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಇಳಿಸುವುದು ಸಾಮಾನ್ಯವಾದ ಸಂಗತಿ. ಇದು ಬಹಳ‌ ಹಿಂದಿನಿಂದಲೂ ಇದು ನಡೆದುಕೊಂಡ ಬಂದಿರುವ ರೀತಿ.

    ಆದರೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಈ‌ ಸತ್ಸಂಪ್ರದಾಯವನ್ನು ಮರೆತಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕ್ರೂಡ್ ಆಯಿಲ್ ದರ ಗಣನೀಯವಾಗಿ ಏರಿಕೆ ಆಗದಿದ್ದರೂ ದೇಶಿಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ನಿರಂತರವಾಗಿ ಹೆಚ್ಚಳ ಮಾಡುತ್ತಲೇ ಇದೆ.

    ಲಾಕ್​ಡೌನ್​​ ಮತ್ತು ಕೊರೊನಾ ವ್ಯಾಪಕವಾಗಿ ಜನರ ಮೇಲೆ ದುಷ್ಪರಿಣಾಮ ಬೀರಿದ್ದ ಜೂನ್ ತಿಂಗಳಲ್ಲಿ ಬರೊಬ್ಬರಿ 23 ದಿನ‌ ನಿರಂತರವಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಏರಿಕೆ ಮಾಡಲಾಗಿತ್ತು. ಜುಲೈ ತಿಂಗಳಿನಲ್ಲೂ 8 ದಿನ ನಿರಂತರವಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಮಾಡಲಾಗಿತ್ತು. ಆಗಸ್ಟ್, ಸೆಪ್ಟೆಂಬರ್, ಅಕ್ಟೋಬರ್, ನವೆಂಬರ್ ಗಳಲ್ಲಿ ಮಧ್ಯೆ ಮಧ್ಯೆ ಹೆಚ್ಚಳ ಮಾಡಲಾಗಿತ್ತು. ಈಗ ಡಿಸೆಂಬರ್ ತಿಂಗಳಲ್ಲಿ ನಿರಂತರವಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಸಲಾಗುತ್ತಿದೆ.
    Published by:Latha CG
    First published: