HOME » NEWS » National-international » PETROL DIESEL PRICE PETROL RATE HIKE PAUSED TODAY IN BANGALORE CHECK LATEST PETROL AND DIESEL PRICE IN INDIA DBDEL LG

Petrol Diesel Price:ತೀವ್ರ ವಿರೋಧಕ್ಕೆ ಬೆದರಿದ ಕೇಂದ್ರ ಸರ್ಕಾರ; ಇಂದು ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಇಲ್ಲ

ಕಳೆದ 53 ದಿನಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ 24 ಬಾರಿ ಹೆಚ್ಚಾಗಿದೆ. ಜನವರಿ 1ರಿಂದೀಚೆಗೆ 7.30 ರೂಪಾಯಿ ಹೆಚ್ಚಾಗಿದೆ. ಫೆಬ್ರವರಿ ತಿಂಗಳಲ್ಲಿ 14ನೇ ಬಾರಿಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಸಲಾಗಿತ್ತು.

news18-kannada
Updated:February 22, 2021, 10:38 AM IST
Petrol Diesel Price:ತೀವ್ರ ವಿರೋಧಕ್ಕೆ ಬೆದರಿದ ಕೇಂದ್ರ ಸರ್ಕಾರ; ಇಂದು ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಇಲ್ಲ
ಸಾಂದರ್ಭಿಕ ಚಿತ್ರ.
  • Share this:
ನವದೆಹಲಿ(ಫೆ. 22): ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕ್ರೂಡ್ ಆಯಿಲ್ ಬೆಲೆ ಕಡಿಮೆ ಇದ್ದರೂ 12 ದಿನ ನಿರಂತರವಾಗಿ ಬೆಲೆ ಏರಿಕೆ ಮಾಡಿದ್ದ ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕಡೆಗೂ ಸಾರ್ವಜನಿಕರ ವ್ಯಾಪಕ ವಿರೋಧಕ್ಕೆ ಬೆದರಿದ್ದು 14ನೇ ದಿನವಾದ ಇಂದು ಕೂಡ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಹೆಚ್ಚಳ ಮಾಡಿಲ್ಲ.

ಕಳೆದ 53 ದಿನಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ 24 ಬಾರಿ ಹೆಚ್ಚಾಗಿದೆ. ಜನವರಿ 1ರಿಂದೀಚೆಗೆ 7.30 ರೂಪಾಯಿ ಹೆಚ್ಚಾಗಿದೆ. ಫೆಬ್ರವರಿ ತಿಂಗಳಲ್ಲಿ 14ನೇ ಬಾರಿಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಸಲಾಗಿತ್ತು. ಕಳೆದ 12 ದಿನಗಳಿಂದ ನಿರಂತರವಾಗಿ ಬೆಲೆ ಏರಿಕೆ ಏರಿಸಿದ್ದು 12 ದಿನಗಳಿಂದ ಒಟ್ಟು 4.34 ಪೈಸೆ ಬೆಲೆ ಹೆಚ್ಚಳ ಮಾಡಲಾಗಿತ್ತು. 13ನೇ ದಿನವಾದ ನಿನ್ನೆ ಮತ್ತು 14 ದಿನವಾದ ಇಂದು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳಲ್ಲಿ ಯಾವುದೇ ವ್ಯತ್ಯಾಸ ಆಗಿಲ್ಲ.

ಪ್ರತಿ ಲೀಟರ್ ಪೆಟ್ರೋಲ್ ಹಾಗೂ ಡೀಸೆಲ್ ಮೇಲೆ ಫೆಬ್ರವರಿ 4ರಂದು ತಾರೀಖು ತಲಾ 37 ಪೈಸೆ, ಫೆಬ್ರವರಿ 5ರಂದು 37 ಪೈಸೆ, ಫೆಬ್ರವರಿ 9ರಂದು 42 ಪೈಸೆ, ಫೆಬ್ರವರಿ 10ರಂದು 31 ಪೈಸೆ, ಫೆಬ್ರವರಿ 11ರಂದು 38 ಪೈಸೆ, ಫೆಬ್ರವರಿ 12ರಂದು 38 ಪೈಸೆ, ಫೆಬ್ರವರಿ 13ರಂದು 39 ಪೈಸೆ, ಫೆಬ್ರವರಿ 14ರಂದು 34 ಪೈಸೆ, ಫೆಬ್ರವರಿ 15ರಂದು 30 ಪೈಸೆ, ಫೆಬ್ರವರಿ 16ರಂದು 38 ಪೈಸೆ, ಫೆಬ್ರವರಿ 17ರಂದು 27 ಪೈಸೆ, ಫೆಬ್ರವರಿ 18ರಂದು 36 ಪೈಸೆ,  ಫೆಬ್ರವರಿ 19ರಂದು 36 ಪೈಸೆ ಹಾಗೂ ಫೆಬ್ರವರಿ 20ರಂದು 41 ಪೈಸೆ ಹೆಚ್ಚಳ ಮಾಡಲಾಗಿತ್ತು.

Bigg Boss 14 Winner Rubina Dilaik: ಬಿಗ್​ ಬಾಸ್ 14ರ ವಿನ್ನರ್​ ಪಟ್ಟ ಗಿಟ್ಟಿಸಿಕೊಂಡ​ ಹಿಂದಿ ಕಿರುತೆರೆಯ ನಟಿ ರುಬೀನಾ ದಿಲೈಕ್​..!

ಡಾಲರ್ ಎದುರು ರೂಪಾಯಿ ಮೌಲ್ಯ 72.85 ರೂಪಾಯಿ ಇದೆ. ಬ್ರೆಂಟ್ ಕಚ್ಚಾ ತೈಲವು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಪ್ರತಿ ಬ್ಯಾರೆಲ್‌ಗೆ 60.60ನಂತೆ ಲಭ್ಯವಾಗುತ್ತಿದೆ. ಆದರೂ ಭಾರತದಲ್ಲಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ನಿರಂತರವಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಹೆಚ್ಚಳ ಮಾಡುತ್ತಿದೆ. ದೇಶದ ವಿವಿಧ ನಗರಗಳಲ್ಲಿನ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳ ವಿವರ ಹೀಗಿದೆ.

ದೇಶದ ವಿವಿಧ ನಗರಗಳಲ್ಲಿನ ಪೆಟ್ರೋಲ್ -ಡೀಸೆಲ್ ಬೆಲೆ

ಬೆಂಗಳೂರು- ಪೆಟ್ರೋಲ್ 93.61 ರೂ., ಡೀಸೆಲ್ 85.84 ರೂ.ಭೂಪಾಲ್- ಪೆಟ್ರೋಲ್ 98.60 ರೂ., ಡೀಸೆಲ್ 89.23 ರೂ.
ಮುಂಬೈ- ಪೆಟ್ರೋಲ್ 97 ರೂ., ಡೀಸೆಲ್ 88.06 ರೂ.
ಜೈಪುರ - ಪೆಟ್ರೋಲ್ 97.10 ರೂ., ಡೀಸೆಲ್ 89.44 ರೂ.
ಪಾಟ್ನಾ- ಪೆಟ್ರೋಲ್ 92.91 ರೂ., ಡೀಸೆಲ್ 86.22 ರೂ.
ಚೆನ್ನೈ- ಪೆಟ್ರೋಲ್ 92.59 ರೂ., ಡೀಸೆಲ್ 85.98 ರೂ.
ಕೋಲ್ಕತ್ತಾ- ಪೆಟ್ರೋಲ್ 91.78 ರೂ., ಡೀಸೆಲ್ 84.56 ರೂ.

ದೆಹಲಿ- ಪೆಟ್ರೋಲ್ 90.58 ರೂ., ಡೀಸೆಲ್ 80.97 ರೂ.
ಲಕ್ನೋ- ಪೆಟ್ರೋಲ್ 88.86 ರೂ., ಡೀಸೆಲ್ 81.35 ರೂ.
ನೋಯ್ಡಾ- ಪೆಟ್ರೋಲ್ 88.54 ರೂ., ಡೀಸೆಲ್ 80 ರೂ.
ಗುರುಗಾವ್ - ಪೆಟ್ರೋಲ್ 87.60 ರೂ., ಡೀಸೆಲ್ 78.60 ರೂ.
ರಾಂಚಿ- ಪೆಟ್ರೋಲ್ 88.08 ರೂ., ಡೀಸೆಲ್ 85.60 ರೂ.
Published by: Latha CG
First published: February 22, 2021, 10:38 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories