HOME » NEWS » National-international » PETROL DIESEL PRICE RISED IN BENGALURU CHECK LATEST PETROL AND DIESEL RATES IN INDIA DBDEL LG

Petrol Diesel Price: ಮತ್ತೆ ಪೆಟ್ರೋಲ್ - ಡೀಸೆಲ್ ಬೆಲೆಯಲ್ಲಿ ಏರಿಕೆ; ವಿವಿಧ ನಗರಗಳಲ್ಲಿ ಇಂದಿನ ದರವೆಷ್ಟು ಗೊತ್ತೇ?

Petrol Price Today: ಡಿಸೆಂಬರ್ 3ರಂದು ಪ್ರತಿ ಲೀಟರ್ ಮೇಲೆ 17ಪೈಸೆ ಹಾಗೂ ಪ್ರತಿ ಲೀಟರ್ ಡೀಸೆಲ್ ಮೇಲೆ 19 ಪೈಸೆ ಏರಿಸಲಾಗಿತ್ತು. ಈಗ ಡಿಸೆಂಬರ್ 4ರಂದು ಪ್ರತಿ ಲೀಟರ್ ಮೇಲೆ 20 ಪೈಸೆ ಹಾಗೂ ಪ್ರತಿ ಲೀಟರ್ ಡೀಸೆಲ್ ಮೇಲೆ 23 ಪೈಸೆ ಹೆಚ್ಚಳ ಮಾಡಲಾಗಿದೆ.

news18-kannada
Updated:December 4, 2020, 11:47 AM IST
Petrol Diesel Price: ಮತ್ತೆ ಪೆಟ್ರೋಲ್ - ಡೀಸೆಲ್ ಬೆಲೆಯಲ್ಲಿ ಏರಿಕೆ; ವಿವಿಧ ನಗರಗಳಲ್ಲಿ ಇಂದಿನ ದರವೆಷ್ಟು ಗೊತ್ತೇ?
ಸಾಂದರ್ಭಿಕ ಚಿತ್ರ
  • Share this:
ನವದೆಹಲಿ, (ಡಿ. 4): ಅಂತರಾಷ್ಟ್ರೀಯ ಮಟ್ಟದಲ್ಲಿ ಕ್ರೂಡ್ ಆಯಿಲ್ ಬೆಲೆ ಗಣನೀಯವಾಗಿ ಕಡಿಮೆ ಆಗುತ್ತಿದ್ದರೂ, ಕ್ರೂರಿ ಕೊರೋನಾ ಮತ್ತು ಲಾಕ್ಡೌನ್ ಕಾರಣಗಳಿಂದ ಜನ ಸಾಮಾನ್ಯರು ಕಷ್ಟದಲ್ಲಿದ್ದರೂ, ಸಾರ್ವಜನಿಕರು ವ್ಯಾಪಕವಾದ ವಿರೋಧ ವ್ಯಕ್ತಪಡಿಸುತ್ತಿದ್ದರೂ ಇದ್ಯಾವುದನ್ನೂ ಪರಿಗಣಿಸದ ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮತ್ತೆ ನಿರಂತರವಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಏರಿಸಿದೆ. ನವೆಂಬರ್ 20, 21, 22, 23, 27, 28 ಹಾಗೂ 29ರಂದು ನಿರಂತರವಾಗಿ ಪೆಟ್ರೋಲ್-ಡೀಸೆಲ್ ಬೆಲೆ ಏರಿಸಲಾಗಿತ್ತು. ಇದಾದ ಮೇಲೆ ಡಿಸೆಂಬರ್ ಮತ್ತು 3ರಂದು ಮತ್ತೆ ಪೆಟ್ರೋಲ್-ಡೀಸಲ್ ಬೆಲೆ ಹೆಚ್ಚಳ ಮಾಡಲಾಗಿತ್ತು. ಇದೀಗ ಡಿಸೆಂಬರ್ 4ರಂದು ಕೂಡ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳನ್ನು ಹೆಚ್ಚಳ ಮಾಡಲಾಗಿದೆ.

ನವೆಂಬರ್ 27 ರಂದು ಪ್ರತಿ ಲೀಟರ್ ಪೆಟ್ರೋಲ್ ಮೇಲೆ 19 ಪೈಸೆ, ಪ್ರತಿ ಲೀಟರ್ ಡೀಸೆಲ್ ಮೇಲೆ 24 ಪೈಸೆ ಏರಿಕೆ ಮಾಡಲಾಗಿತ್ತು. ನವೆಂಬರ್ 28ರಂದು ಪ್ರತಿ ಲೀಟರ್ ಪೆಟ್ರೋಲ್ ಮೇಲೆ 24 ಪೈಸೆ, ಪ್ರತಿ ಲೀಟರ್ ಡೀಸೆಲ್ ಮೇಲೆ 27 ಪೈಸೆ ಏರಿಕೆ ಮಾಡಲಾಗಿತ್ತು. ನವೆಂಬರ್ 29ರಂದು ಪ್ರತಿ ಲೀಟರ್ ಪೆಟ್ರೋಲ್ ಮೇಲೆ 21 ಪೈಸೆ, ಪ್ರತಿ ಲೀಟರ್ ಡೀಸೆಲ್ ಮೇಲೆ 29 ಪೈಸೆ ಏರಿಸಲಾಗಿತ್ತು. ಡಿಸೆಂಬರ್ 2ರಂದು ಪ್ರತಿ ಲೀಟರ್ ಮೇಲೆ 15 ಪೈಸೆ ಹಾಗೂ ಪ್ರತಿ ಲೀಟರ್ ಡೀಸೆಲ್ ಮೇಲೆ 23 ಪೈಸೆ ಹೆಚ್ಚಿಸಲಾಗಿತ್ತು. ಡಿಸೆಂಬರ್ 3ರಂದು ಪ್ರತಿ ಲೀಟರ್ ಮೇಲೆ 17ಪೈಸೆ ಹಾಗೂ ಪ್ರತಿ ಲೀಟರ್ ಡೀಸೆಲ್ ಮೇಲೆ 19 ಪೈಸೆ ಏರಿಸಲಾಗಿತ್ತು. ಈಗ ಡಿಸೆಂಬರ್ 4ರಂದು ಪ್ರತಿ ಲೀಟರ್ ಮೇಲೆ 20 ಪೈಸೆ ಹಾಗೂ ಪ್ರತಿ ಲೀಟರ್ ಡೀಸೆಲ್ ಮೇಲೆ 23 ಪೈಸೆ ಹೆಚ್ಚಳ ಮಾಡಲಾಗಿದೆ.

ಕೊರೋನಾ ಹಿನ್ನೆಲೆ; ಇರುಮುಡಿ ಹೊತ್ತು 18 ಮೆಟ್ಟಿಲೇರಲು ಚಿತ್ರದುರ್ಗದ ಅಯ್ಯಪ್ಪಸ್ವಾಮಿ ದೇವಾಲಯ ಆಯ್ಕೆ

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕ್ರೂಡ್ ಆಯಿಲ್ ದರ ಹೆಚ್ಚಳವಾದಾಗ ದೇಶಿಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಹೆಚ್ಚಿಸುವುದು, ಹಾಗೆಯೇ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕ್ರೂಡ್ ಆಯಿಲ್ ದರ ಕಡಿಮೆಯಾದಾಗ ದೇಶಿಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಇಳಿಸುವುದು ಸಾಮಾನ್ಯವಾದ ಸಂಗತಿ.

ಇದು ಬಹಳ‌ ಹಿಂದಿನಿಂದಲೂ ಇದು ನಡೆದುಕೊಂಡ ಬಂದಿರುವ ರೀತಿ. ಆದರೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಈ‌ ಸತ್ಸಂಪ್ರದಾಯವನ್ನು ಮರೆತಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕ್ರೂಡ್ ಆಯಿಲ್ ದರ ಗಣನೀಯವಾಗಿ ಏರಿಕೆ ಆಗದಿದ್ದರೂ ದೇಶಿಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ನಿರಂತರವಾಗಿ ಹೆಚ್ಚಳ ಮಾಡುತ್ತಲೇ ಇದೆ.

ಲಾಕ್​ಡೌನ್​ ಮತ್ತು ಕೊರೋನಾ ವ್ಯಾಪಕವಾಗಿ ಜನರ ಮೇಲೆ ದುಷ್ಪರಿಣಾಮ ಬೀರಿದ್ದ ಜೂನ್ ತಿಂಗಳಲ್ಲಿ ಬರೊಬ್ಬರಿ 23 ದಿನ‌ ನಿರಂತರವಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಏರಿಕೆ ಮಾಡಲಾಗಿತ್ತು. ಜುಲೈ ತಿಂಗಳಿನಲ್ಲೂ 8 ದಿನ ನಿರಂತರವಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಮಾಡಲಾಗಿತ್ತು. ಆಗಸ್ಟ್, ಸೆಪ್ಟೆಂಬರ್, ಅಕ್ಟೋಬರ್, ನವೆಂಬರ್ ಗಳಲ್ಲಿ ಮಧ್ಯೆ ಮಧ್ಯೆ ಹೆಚ್ಚಳ ಮಾಡಲಾಗಿತ್ತು. ಈಗ ಡಿಸೆಂಬರ್ ತಿಂಗಳಲ್ಲಿ ನಿರಂತರವಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಸಲಾಗುತ್ತಿದೆ.
Published by: Latha CG
First published: December 4, 2020, 9:27 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories