ನವದೆಹಲಿ, (ಡಿ. 7): ಅಂತಾರಾಷ್ಟ್ರೀಯ ಮಟ್ಟದಲ್ಲಿ ಕ್ರೂಡ್ ಆಯಿಲ್ ಬೆಲೆ ಗಣನೀಯವಾಗಿ ಕಡಿಮೆ ಆಗುತ್ತಿದ್ದರೂ, ಕ್ರೂರಿ ಕೊರೊನಾ ಮತ್ತು ಲಾಕ್ಡೌನ್ ಕಾರಣಗಳಿಂದ ಜನ ಸಾಮಾನ್ಯರು ಕಷ್ಟದಲ್ಲಿದ್ದರೂ, ಸಾರ್ವಜನಿಕರು ವ್ಯಾಪಕವಾದ ವಿರೋಧ ವ್ಯಕ್ತಪಡಿಸುತ್ತಿದ್ದರೂ ಇದ್ಯಾವುದನ್ನೂ ಪರಿಗಣಿಸದ ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಡಿಸೆಂಬರ್ 2ರಿಂದ ನಿರಂತರವಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಏರಿಸುತ್ತಲೇ ಇದೆ. ನವೆಂಬರ್ 20, 21, 22, 23, 27, 28 ಹಾಗೂ 29ರಂದು ನಿರಂತರವಾಗಿ ಪೆಟ್ರೋಲ್-ಡೀಸೆಲ್ ಬೆಲೆ ಏರಿಸಲಾಗಿತ್ತು. ಇದಾದ ಮೇಲೆ ಡಿಸೆಂಬರ್ 2, 3, 4, 5 ಹಾಗೂ 6ರಂದು ಮತ್ತೆ ಪೆಟ್ರೋಲ್-ಡೀಸಲ್ ಬೆಲೆ ಹೆಚ್ಚಳ ಮಾಡಲಾಗಿತ್ತು. ಇದೀಗ ಡಿಸೆಂಬರ್ 7ರಂದು ಕೂಡ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳನ್ನು ಏರಿಸಲಾಗಿದೆ. ನವೆಂಬರ್ 27 ರಂದು ಪ್ರತಿ ಲೀಟರ್ ಪೆಟ್ರೋಲ್ ಮೇಲೆ 19 ಪೈಸೆ, ಪ್ರತಿ ಲೀಟರ್ ಡೀಸೆಲ್ ಮೇಲೆ 24 ಪೈಸೆ ಏರಿಕೆ ಮಾಡಲಾಗಿತ್ತು. ನವೆಂಬರ್ 28ರಂದು ಪ್ರತಿ ಲೀಟರ್ ಪೆಟ್ರೋಲ್ ಮೇಲೆ 24 ಪೈಸೆ, ಪ್ರತಿ ಲೀಟರ್ ಡೀಸೆಲ್ ಮೇಲೆ 27 ಪೈಸೆ ಏರಿಕೆ ಮಾಡಲಾಗಿತ್ತು. ನವೆಂಬರ್ 29ರಂದು ಪ್ರತಿ ಲೀಟರ್ ಪೆಟ್ರೋಲ್ ಮೇಲೆ 21 ಪೈಸೆ, ಪ್ರತಿ ಲೀಟರ್ ಡೀಸೆಲ್ ಮೇಲೆ 29 ಪೈಸೆ ಏರಿಸಲಾಗಿತ್ತು.
ಇದನ್ನೂ ಓದಿ: Farmers Protest: ದೆಹಲಿ ಗಡಿಯಲ್ಲಿ 12 ದಿನದಿಂದ ರೈತರ ಪ್ರತಿಭಟನೆ; ಇಂದಿನಿಂದ ಇನ್ನಷ್ಟು ತೀವ್ರಗೊಳ್ಳುವ ಸಾಧ್ಯತೆ
ಡಿಸೆಂಬರ್ 2ರಂದು ಪ್ರತಿ ಲೀಟರ್ ಮೇಲೆ 15 ಪೈಸೆ ಹಾಗೂ ಪ್ರತಿ ಲೀಟರ್ ಡೀಸೆಲ್ ಮೇಲೆ 23 ಪೈಸೆ ಹೆಚ್ಚಿಸಲಾಗಿತ್ತು. ಡಿಸೆಂಬರ್ 3ರಂದು ಪ್ರತಿ ಲೀಟರ್ ಮೇಲೆ 17ಪೈಸೆ ಹಾಗೂ ಪ್ರತಿ ಲೀಟರ್ ಡೀಸೆಲ್ ಮೇಲೆ 19 ಪೈಸೆ ಏರಿಸಲಾಗಿತ್ತು. ಡಿಸೆಂಬರ್ 4ರಂದು ಪ್ರತಿ ಲೀಟರ್ ಮೇಲೆ 20 ಪೈಸೆ ಹಾಗೂ ಪ್ರತಿ ಲೀಟರ್ ಡೀಸೆಲ್ ಮೇಲೆ 23 ಪೈಸೆ ಹೆಚ್ಚಳ ಮಾಡಲಾಗಿತ್ತು. ಡಿಸೆಂಬರ್ 5ರಂದು ಪ್ರತಿ ಲೀಟರ್ ಮೇಲೆ 27 ಪೈಸೆ ಹಾಗೂ ಪ್ರತಿ ಲೀಟರ್ ಡೀಸೆಲ್ ಮೇಲೆ 25 ಪೈಸೆ ಏರಿಸಲಾಗಿತ್ತು. ಡಿಸೆಂಬರ್ 6ರಂದು ಪ್ರತಿ ಲೀಟರ್ ಮೇಲೆ 28 ಪೈಸೆ ಹಾಗೂ ಪ್ರತಿ ಲೀಟರ್ ಡೀಸೆಲ್ ಮೇಲೆ 29 ಪೈಸೆ ಏರಿಸಲಾಗಿತ್ತು. ಇಂದು ಪ್ರತಿ ಲೀಟರ್ ಪೆಟ್ರೋಲ್ ಮೇಲೆ 28 ಪೈಸೆ ಹಾಗೂ ಪ್ರತಿ ಲೀಟರ್ ಡೀಸೆಲ್ ಮೇಲೆ 29 ಪೈಸೆ ಹೆಚ್ಚಳ ಮಾಡಲಾಗಿದೆ.
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕ್ರೂಡ್ ಆಯಿಲ್ ದರ ಹೆಚ್ಚಳವಾದಾಗ ದೇಶಿಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಹೆಚ್ಚಿಸುವುದು, ಹಾಗೆಯೇ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕ್ರೂಡ್ ಆಯಿಲ್ ದರ ಕಡಿಮೆಯಾದಾಗ ದೇಶಿಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಇಳಿಸುವುದು ಸಾಮಾನ್ಯವಾದ ಸಂಗತಿ. ಇದು ಬಹಳ ಹಿಂದಿನಿಂದಲೂ ಇದು ನಡೆದುಕೊಂಡ ಬಂದಿರುವ ರೀತಿ. ಆದರೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಈ ಸತ್ಸಂಪ್ರದಾಯವನ್ನು ಮರೆತಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕ್ರೂಡ್ ಆಯಿಲ್ ದರ ಗಣನೀಯವಾಗಿ ಏರಿಕೆ ಆಗದಿದ್ದರೂ ದೇಶಿಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ನಿರಂತರವಾಗಿ ಹೆಚ್ಚಳ ಮಾಡುತ್ತಲೇ ಇದೆ.
ಲಾಕ್ಡೌನ್ ಮತ್ತು ಕೊರೊನಾ ವ್ಯಾಪಕವಾಗಿ ಜನರ ಮೇಲೆ ದುಷ್ಪರಿಣಾಮ ಬೀರಿದ್ದ ಜೂನ್ ತಿಂಗಳಲ್ಲಿ ಬರೊಬ್ಬರಿ 23 ದಿನ ನಿರಂತರವಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಏರಿಕೆ ಮಾಡಲಾಗಿತ್ತು. ಜುಲೈ ತಿಂಗಳಿನಲ್ಲೂ 8 ದಿನ ನಿರಂತರವಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಮಾಡಲಾಗಿತ್ತು. ಆಗಸ್ಟ್, ಸೆಪ್ಟೆಂಬರ್, ಅಕ್ಟೋಬರ್, ನವೆಂಬರ್ ಗಳಲ್ಲಿ ಮಧ್ಯೆ ಮಧ್ಯೆ ಹೆಚ್ಚಳ ಮಾಡಲಾಗಿತ್ತು. ಈಗ ಡಿಸೆಂಬರ್ ತಿಂಗಳಲ್ಲಿ ನಿರಂತರವಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಸಲಾಗುತ್ತಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ