Petrol Price: ಒಂಬತ್ತು ದಿನದಲ್ಲಿ ನಾಲ್ಕನೇ ಬಾರಿ ಡೀಸೆಲ್ ದರ ಏರಿಸಿದ ಕೇಂದ್ರ; ತತ್ತರಿಸಿದ ಸಾಮಾನ್ಯರು

Petrol Rate Today: ಕಳೆದ ತಿಂಗಳು ಬರೊಬ್ಬರಿ 23 ದಿನ‌ ನಿರಂತರವಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಏರಿಕೆ ಮಾಡಲಾಗಿತ್ತು. ಈಗ ಕಳೆದ ಒಂಬತ್ತು ದಿನದಲ್ಲಿ ನಾಲ್ಕನೇ ಬಾರಿ ಡೀಸೆಲ್ ಬೆಲೆ ಹೆಚ್ಚಳ ಮಾಡಲಾಗಿದೆ.

news18-kannada
Updated:July 15, 2020, 9:29 AM IST
Petrol Price: ಒಂಬತ್ತು ದಿನದಲ್ಲಿ ನಾಲ್ಕನೇ ಬಾರಿ ಡೀಸೆಲ್ ದರ ಏರಿಸಿದ ಕೇಂದ್ರ; ತತ್ತರಿಸಿದ ಸಾಮಾನ್ಯರು
ಸಾಂದರ್ಭಿಕ ಚಿತ್ರ
  • Share this:
ನವದೆಹಲಿ (ಜು.15): ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲದ ಬೆಲೆ ಗಣನೀಯವಾಗಿ ಕಡಿಮೆ ಆಗುತ್ತಿದೆ.  ಮಹಾ ಕ್ರೂರಿ ಕೊರೊನಾ ಮತ್ತು ಲಾಕ್​ಡೌನ್​ಗೆ ಜನ ಸಾಮಾನ್ಯರು ತತ್ತರಿಸಿದ್ದಾರೆ. ಇದ್ಯಾವುದನ್ನೂ ಪರಿಗಣಿಸದ ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ನಿರಂತರವಾಗಿ ಪೆಟ್ರೋಲ್​-ಡೀಸೆಲ್​ ದರ ಹೆಚ್ಚಿಸುತ್ತಿದೆ.  ಬುಧವಾರ ಕೂಡ ಡೀಸೆಲ್​ ದರದಲ್ಲಿ ಏರಿಕೆ ಕಂಡಿದೆ. 

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕ್ರೂಡ್ ಆಯಿಲ್ ದರ ಹೆಚ್ಚಳವಾದಾಗ ದೇಶಿಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಹೆಚ್ಚಿಸುವುದು, ಹಾಗೆಯೇ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕ್ರೂಡ್ ಆಯಿಲ್ ದರ ಕಡಿಮೆಯಾದಾಗ ದೇಶಿಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಇಳಿಸುವುದು ಸಾಮಾನ್ಯವಾದ ಸಂಗತಿ. ಬಹಳ‌ ಹಿಂದಿನಿಂದಲೂ ಇದು ನಡೆದುಕೊಂಡ ಬಂದಿರುವ ರೀತಿ. ಆದರೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಈ‌ ಸತ್ಸಂಪ್ರದಾಯವನ್ನು ಮರೆತಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕ್ರೂಡ್ ಆಯಿಲ್ ದರ ಗಣನೀಯವಾಗಿ ಕಡಿಮೆ ಆಗುತ್ತಿದ್ದರೂ ದೇಶಿಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ನಿರಂತರವಾಗಿ ಹೆಚ್ಚಳ ಮಾಡುತ್ತಲೇ ಇದೆ.

ಕಳೆದ ತಿಂಗಳು ಬರೊಬ್ಬರಿ 23 ದಿನ‌ ನಿರಂತರವಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಏರಿಕೆ ಮಾಡಲಾಗಿತ್ತು. ಈಗ ಕಳೆದ ಒಂಬತ್ತು ದಿನದಲ್ಲಿ ನಾಲ್ಕನೇ ಬಾರಿ ಡೀಸೆಲ್ ಬೆಲೆ ಹೆಚ್ಚಳ ಮಾಡಲಾಗಿದೆ. ಮೊದಲು ಜುಲೈ 7ರಂದು ಪ್ರತಿ ಲೀಟರ್ ಡೀಸೆಲ್ ಗೆ 25 ಪೈಸೆ ಹೆಚ್ಚಳ ಮಾಡಲಾಗಿತ್ತು. ನಂತರ ಜುಲೈ 12ರಂದು ಮತ್ತೆ 16 ಪೈಸೆ ಬೆಲೆ ಏರಿಕೆ ಮಾಡಲಾಗಿತ್ತು. ಜುಲೈ 13ರಂದು ಪ್ರತಿ ಲೀಟರ್ ಡೀಸೆಲ್ ಗೆ 11 ಪೈಸೆ ಹೆಚ್ಚಳ ಮಾಡಲಾಗಿತ್ತು. ಈಗ ಜುಲೈ 15ರಂದು ಮತ್ತೆ ಪ್ರತಿ ಲೀಟರ್ ಡೀಸೆಲ್ ಗೆ 13 ಪೈಸೆ ಹೆಚ್ಚಳ ಮಾಡಲಾಗಿದೆ.

ಇದನ್ನೂ ಓದಿ: ಹನಿಮೂನ್​ಗೆಂದು ಕೂಡಿಟ್ಟ 6 ಲಕ್ಷ ರೂಪಾಯಿಯಲ್ಲಿ ಗೇಮಿಂಗ್ ಕಂಪ್ಯೂಟರ್ ತಂದ ಬಾಯ್​ಫ್ರೆಂಡ್​; ಬ್ರೇಕಪ್​ಗೆ ಮುಂದಾದ ಪ್ರೇಯಸಿ

ಕಳೆದ ಒಂದು ತಿಂಗಳಿನಿಂದ ಪ್ರತಿ ಲೀಟರ್ ಡೀಸೆಲ್ ಗೆ ಒಟ್ಟು 11.66 ರೂಪಾಯಿ ಹೆಚ್ಚಳವಾದಂತಾಗಿದೆ. ದೇಶದ ವಿವಿಧ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಈ ರೀತಿ ಇವೆ.

ದೇಶದ ವಿವಿಧ ನಗರಗಳಲ್ಲಿನ ಪೆಟ್ರೋಲ್ -ಡೀಸೆಲ್ ಬೆಲೆ
ಭೂಪಾಲ್- ಪೆಟ್ರೋಲ್ 88.08 ರೂ., ಡೀಸೆಲ್ 80.52 ರೂ.ಮುಂಬೈ- ಪೆಟ್ರೋಲ್ 87.19 ರೂ., ಡೀಸೆಲ್ 79.41 ರೂ.
ಚೆನ್ನೈ- ಪೆಟ್ರೋಲ್ 83.63 ರೂ., ಡೀಸೆಲ್ 78.25 ರೂ.
ಪಾಟ್ನಾ- ಪೆಟ್ರೋಲ್ 83.31ರೂ., ಡೀಸೆಲ್ 78.01 ರೂ.
ಬೆಂಗಳೂರು- ಪೆಟ್ರೋಲ್ 83.02 ರೂ., ಡೀಸೆಲ್ 76.73 ರೂ.
ಕೋಲ್ಕತ್ತಾ- ಪೆಟ್ರೋಲ್ 82.10 ರೂ., ಡೀಸೆಲ್ 76.29 ರೂ.
ಲಕ್ನೋ- ಪೆಟ್ರೋಲ್ 80.98 ರೂ., ಡೀಸೆಲ್ 73.05 ರೂ.
ದೆಹಲಿ- ಪೆಟ್ರೋಲ್ 80.43 ರೂ., ಡೀಸೆಲ್ 81.18 ರೂ.
ರಾಂಚಿ- ಪೆಟ್ರೋಲ್ 80.29 ರೂ., ಡೀಸೆಲ್ 77.08 ರೂ.
Published by: Rajesh Duggumane
First published: July 15, 2020, 9:29 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading