HOME » NEWS » National-international » PETROL PRICE DIESEL PRICE HIKED FOR 4TH DAY IN A ROW CHECK 1 LITER PRICE HERE DBDEL RMD

Petrol price: ಸತತ ನಾಲ್ಕನೇ ದಿನವೂ ಏರಿಕೆ ಕಂಡ ಪೆಟ್ರೋಲ್​-ಡೀಸೆಲ್​ ಬೆಲೆ; ಇಲ್ಲಿದೆ ಇಂದಿನ ದರ

Petrol Diesel Price: ವಿಶ್ವ ಮಾರುಕಟ್ಟೆಯಲ್ಲಿ ತೈಲ ಬೆಲೆ ಅತ್ಯಂತ ಪಾತಾಳಕ್ಕೆ ಕುಸಿದಿರುವ ಸಮಯದಲ್ಲೂ ಸಹ ಕೇಂದ್ರ ಸರ್ಕಾರ ತೈಲ ಬೆಲೆಯನ್ನು ಏರಿಸುತ್ತಿರುವುದು ಸಾಮಾನ್ಯವಾಗಿ ಜನರ ಆಕ್ರೋಶ ಕಾರಣವಾಗಿದೆ.  

news18-kannada
Updated:November 23, 2020, 10:28 AM IST
Petrol price: ಸತತ ನಾಲ್ಕನೇ ದಿನವೂ ಏರಿಕೆ ಕಂಡ ಪೆಟ್ರೋಲ್​-ಡೀಸೆಲ್​ ಬೆಲೆ; ಇಲ್ಲಿದೆ ಇಂದಿನ ದರ
ಸಾಂದರ್ಭಿಕ ಚಿತ್ರ
  • Share this:
ನವದೆಹಲಿ (ನ. 23): ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲ ಬೆಲೆ ಗಣನೀಯವಾಗಿ ಕಡಿಮೆ ಆಗುತ್ತಿದ್ದರೂ, ಕ್ರೂರಿ ಕೊರೊನಾ ಮತ್ತು ಲಾಕ್​ಡೌನ್ ಕಾರಣಗಳಿಂದ ಜನ ಸಾಮಾನ್ಯರು ಕಷ್ಟದಲ್ಲಿದ್ದರೂ, ಸಾರ್ವಜನಿಕರು ವ್ಯಾಪಕವಾದ ವಿರೋಧ ವ್ಯಕ್ತಪಡಿಸುತ್ತಿದ್ದರೂ ಇದ್ಯಾವುದನ್ನೂ ಪರಿಗಣಿಸದ ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ನಿರಂತರವಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಹೆಚ್ಚಳ ಮಾಡುತ್ತಲೇ ಇದೆ.

ಈಗ ಸತತವಾಗಿ ನಾಲ್ಕು ದಿನಗಳಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಹೆಚ್ಚಳ ಮಾಡಲಾಗುತ್ತಿದ್ದು ಸೋಮವಾರ ಪ್ರತಿ ಲೀಟರ್ ಪೆಟ್ರೋಲ್ ಮೇ 7 ಪೈಸೆ ಹೆಚ್ಚಳ ಮಾಡಲಾಗಿದೆ. ಹಾಗೂ ಪ್ರತಿ ಲೀಟರ್ ಡೀಸೆಲ್ ಮೇಲೆ 18 ಪೈಸೆ ಏರಿಕೆ ಮಾಡಲಾಗಿದೆ. ಇದರಿಂದ ದೇಶದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 81.53 ರೂಪಾಯಿಗೆ ಏರಿಕೆಯಾಗಿದೆ. ಪ್ರತಿ ಲೀಟರ್ ಡೀಸೆಲ್ ಬೆಲೆ 71.25 ರೂಪಾಯಿಗೆ ಏರಿಕೆಯಾಗಿದೆ. ರಾಜ್ಯದಲ್ಲಿ  ಲೀಟರ್​ ಪೆಟ್ರೋಲ್​ ದರ 84.18 ರೂಪಾಯಿ ಹಾಗೂ ಡೀಸೆಲ್​ ಲೀಟರ್​ಗೆ 75.34 ರೂಪಾಯಿ ಇದೆ.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕ್ರೂಡ್ ಆಯಿಲ್ ದರ ಹೆಚ್ಚಳವಾದಾಗ ದೇಶಿಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಹೆಚ್ಚಿಸುವುದು, ಹಾಗೆಯೇ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕ್ರೂಡ್ ಆಯಿಲ್ ದರ ಕಡಿಮೆಯಾದಾಗ ದೇಶಿಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಇಳಿಸುವುದು ಸಾಮಾನ್ಯವಾದ ಸಂಗತಿ. ಇದು ಬಹಳ‌ ಹಿಂದಿನಿಂದಲೂ ಇದು ನಡೆದುಕೊಂಡ ಬಂದಿರುವ ರೀತಿ. ಆದರೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಈ‌ ಸತ್ಸಂಪ್ರದಾಯವನ್ನು ಮರೆತಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕ್ರೂಡ್ ಆಯಿಲ್ ದರ ಗಣನೀಯವಾಗಿ ಕಡಿಮೆ ಆಗುತ್ತಿದ್ದರೂ ದೇಶಿಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ನಿರಂತರವಾಗಿ ಹೆಚ್ಚಳ ಮಾಡುತ್ತಲೇ ಇದೆ.

ಲಾಕ್ಡೌನ್ ಮತ್ತು ಕೊರೊನಾ ವ್ಯಾಪಕವಾಗಿ ಜನರ ಮೇಲೆ ದುಷ್ಪರಿಣಾಮ ಬೀರಿದ್ದ ಜೂನ್ ತಿಂಗಳಲ್ಲಿ ಬರೊಬ್ಬರಿ 23 ದಿನ‌ ನಿರಂತರವಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಏರಿಕೆ ಮಾಡಲಾಗಿತ್ತು. ಜುಲೈ ತಿಂಗಳಿನಲ್ಲೂ 8 ದಿನ ನಿರಂತರವಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಮಾಡಲಾಗಿತ್ತು. ಆಗಸ್ಟ್, ಸೆಪ್ಟೆಂಬರ್ ಮತ್ತು ಅಕ್ಟೋಬರ್ ಗಳಲ್ಲಿ ಮಧ್ಯೆ ಮಧ್ಯೆ ಹೆಚ್ಚಳ ಮಾಡಲಾಗಿತ್ತು. ಈಗ ನವೆಂಬರ್ ತಿಂಗಳಲ್ಲಿ ನಿರಂತರವಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಸಲಾಗುತ್ತಿದೆ.



Petrol Price Hiked by 11 Paise Today Petrol Rate Today
ಪ್ರಾತಿನಿಧಿಕ ಚಿತ್ರ.


ಭಾರತದ ತೈಲೋದ್ಯಮ ಇತಿಹಾಸದಲ್ಲೇ ಮೊದಲ ಬಾರಿಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ 80 ರಿಂದ 90ರ ಗಡಿಗೆ ಬಂದು ನಿಂತಿದೆ. ವಿಶ್ವ ಮಾರುಕಟ್ಟೆಯಲ್ಲಿ ತೈಲ ಬೆಲೆ ಅತ್ಯಂತ ಪಾತಾಳಕ್ಕೆ ಕುಸಿದಿರುವ ಸಮಯದಲ್ಲೂ ಸಹ ಕೇಂದ್ರ ಸರ್ಕಾರ ತೈಲ ಬೆಲೆಯನ್ನು ಏರಿಸುತ್ತಿರುವುದು ಸಾಮಾನ್ಯವಾಗಿ ಜನರ ಆಕ್ರೋಶ ಕಾರಣವಾಗಿದೆ.
Published by: Rajesh Duggumane
First published: November 23, 2020, 10:22 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories