HOME » NEWS » National-international » PETROL PRICE IN BANGALORE PETEOL PRICE RISED FOR 3RD DAY BY CENTRAL GOVERNMENT DBDEL LG

Petrol Price: ಪೆಟ್ರೋಲ್ ಬೆಲೆಯಲ್ಲಿ ನಿರಂತರ ಏರಿಕೆ; ಡೀಸೆಲ್ ದರವನ್ನೂ ಹೆಚ್ಚಿಸಿದ ಕೇಂದ್ರ ಸರ್ಕಾರ

Petrol price Today: ಲಾಕ್​ಡೌನ್​ ಮತ್ತು ಕೊರೋನಾ ವ್ಯಾಪಕವಾಗಿ ಜನರ ಮೇಲೆ ದುಷ್ಪರಿಣಾಮ ಬೀರಿದ್ದ ಜೂನ್ ತಿಂಗಳಲ್ಲಿ ಬರೋಬ್ಬರಿ 23 ದಿನ‌ ನಿರಂತರವಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಏರಿಕೆ ಮಾಡಲಾಗಿತ್ತು. ಜುಲೈ ತಿಂಗಳಿನಲ್ಲೂ 8 ದಿನ ನಿರಂತರವಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಮಾಡಲಾಗಿತ್ತು.

news18-kannada
Updated:November 28, 2020, 10:28 AM IST
Petrol Price: ಪೆಟ್ರೋಲ್ ಬೆಲೆಯಲ್ಲಿ ನಿರಂತರ ಏರಿಕೆ; ಡೀಸೆಲ್ ದರವನ್ನೂ ಹೆಚ್ಚಿಸಿದ ಕೇಂದ್ರ ಸರ್ಕಾರ
ಸಾಂದರ್ಭಿಕ ಚಿತ್ರ
  • Share this:
ನವದೆಹಲಿ(ನ. 27): ಅಂತರಾಷ್ಟ್ರೀಯ ಮಟ್ಟದಲ್ಲಿ ಕ್ರೂಡ್ ಆಯಿಲ್  ಬೆಲೆ ಗಣನೀಯವಾಗಿ ಕಡಿಮೆ ಆಗುತ್ತಿದ್ದರೂ, ಕ್ರೂರಿ ಕೊರೋನಾ ಮತ್ತು ಲಾಕ್​ಡೌನ್​ ಕಾರಣಗಳಿಂದ ಜನಸಾಮಾನ್ಯರು ಕಷ್ಟದಲ್ಲಿದ್ದರೂ, ಸಾರ್ವಜನಿಕರು ವ್ಯಾಪಕವಾದ ವಿರೋಧ ವ್ಯಕ್ತಪಡಿಸುತ್ತಿದ್ದರೂ ಇದ್ಯಾವುದನ್ನೂ ಪರಿಗಣಿಸದ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ನಿರಂತರವಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಹೆಚ್ಚಳ ಮಾಡುತ್ತಲೇ ಇದೆ. ಕಳೆದ ವಾರಾಂತ್ಯದಲ್ಲಿ (ಶುಕ್ರವಾರ, ಶನಿವಾರ, ಭಾನುವಾರ ಮತ್ತು ಸೋಮವಾರ) ಸತತವಾಗಿ ನಾಲ್ಕು ದಿನ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಹೆಚ್ಚಳ ಮಾಡಲಾಗಿತ್ತು. ಈಗ ಮತ್ತೆ ನಿನ್ನೆಯಿಂದ (ನವೆಂಬರ್ 27)ರಿಂದ ನಿರಂತರವಾಗಿ ಪೆಟ್ರೋಲ್-ಡೀಸೆಲ್ ಬೆಲೆ ಏರಿಸಲಾಗುತ್ತಿದೆ‌.

ನಿನ್ನೆ ಪ್ರತಿ ಲೀಟರ್ ಪೆಟ್ರೋಲ್ ಮೇಲೆ 19 ಪೈಸೆ ಹೆಚ್ಚಳ ಮಾಡಲಾಗಿದೆ.  ಪ್ರತಿ ಲೀಟರ್ ಡೀಸೆಲ್ ಮೇಲೆ 24 ಪೈಸೆ ಏರಿಕೆ ಮಾಡಲಾಗಿತ್ತು. ಇಂದು ಪ್ರತಿ ಲೀಟರ್ ಪೆಟ್ರೋಲ್ ಮೇಲೆ 24 ಪೈಸೆ ಹೆಚ್ಚಳ ಮಾಡಲಾಗಿದೆ. ಜೊತೆಗೆ  ಪ್ರತಿ ಲೀಟರ್ ಡೀಸೆಲ್ ಮೇಲೆ 27 ಪೈಸೆ ಏರಿಕೆ ಮಾಡಲಾಗಿದೆ.

Nivar Cyclone: ನಿವಾರ್ ಚಂಡಮಾರುತದ ಅಬ್ಬರಕ್ಕೆ ನಲುಗಿದ ರೈತರು; ಇನ್ನೂ ಕಟಾವು ಮಾಡದ ರಾಗಿ ಕೈತಪ್ಪುವ ಆತಂಕ

ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕ್ರೂಡ್ ಆಯಿಲ್ ದರ ಹೆಚ್ಚಳವಾದಾಗ ದೇಶಿಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಹೆಚ್ಚಿಸಲಾಗುತ್ತದೆ. ಹಾಗೆಯೇ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕ್ರೂಡ್ ಆಯಿಲ್ ದರ ಕಡಿಮೆಯಾದಾಗ ದೇಶಿಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಇಳಿಸುವುದು ಸಾಮಾನ್ಯವಾದ ಸಂಗತಿ.

ಇದು ಬಹಳ‌ ಹಿಂದಿನಿಂದಲೂ ಇದು ನಡೆದುಕೊಂಡ ಬಂದಿರುವ ರೀತಿ. ಆದರೆ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಈ‌ ಸತ್ಸಂಪ್ರದಾಯವನ್ನು ಮರೆತಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕ್ರೂಡ್ ಆಯಿಲ್ ದರ ಗಣನೀಯವಾಗಿ ಏರಿಕೆ ಆಗದಿದ್ದರೂ ದೇಶಿಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ನಿರಂತರವಾಗಿ ಹೆಚ್ಚಳ ಮಾಡುತ್ತಲೇ ಇದೆ.

ಲಾಕ್​ಡೌನ್​ ಮತ್ತು ಕೊರೋನಾ ವ್ಯಾಪಕವಾಗಿ ಜನರ ಮೇಲೆ ದುಷ್ಪರಿಣಾಮ ಬೀರಿದ್ದ ಜೂನ್ ತಿಂಗಳಲ್ಲಿ ಬರೋಬ್ಬರಿ 23 ದಿನ‌ ನಿರಂತರವಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಏರಿಕೆ ಮಾಡಲಾಗಿತ್ತು. ಜುಲೈ ತಿಂಗಳಿನಲ್ಲೂ 8 ದಿನ ನಿರಂತರವಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಮಾಡಲಾಗಿತ್ತು.
ಆಗಸ್ಟ್, ಸೆಪ್ಟೆಂಬರ್ ಮತ್ತು ಅಕ್ಟೋಬರ್ ಗಳಲ್ಲಿ ಮಧ್ಯೆ ಮಧ್ಯೆ ಹೆಚ್ಚಳ ಮಾಡಲಾಗಿತ್ತು. ಈಗ ನವೆಂಬರ್ ತಿಂಗಳಲ್ಲಿ ನಿರಂತರವಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಸಲಾಗುತ್ತಿದೆ.
Published by: Latha CG
First published: November 28, 2020, 10:28 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories