Petrol Price: ಕಳೆದ 3 ದಿನಗಳಿಂದ ಪೆಟ್ರೋಲ್ ಬೆಲೆಯಲ್ಲಿ ನಿರಂತರ ಏರಿಕೆ; ಇಂದಿನ ದರವೆಷ್ಟು ಗೊತ್ತೇ?

Petrol price Today: ನಿನ್ನೆ (ನವೆಂಬರ್ 28) ಪ್ರತಿ ಲೀಟರ್ ಪೆಟ್ರೋಲ್ ಮೇಲೆ 24 ಪೈಸೆ ಹೆಚ್ಚಳ ಮಾಡಲಾಗಿದೆ. ಹಾಗೂ ಪ್ರತಿ ಲೀಟರ್ ಡೀಸೆಲ್ ಮೇಲೆ 27 ಪೈಸೆ ಏರಿಕೆ ಮಾಡಲಾಗಿದೆ. ಇಂದು ಪ್ರತಿ ಲೀಟರ್ ಪೆಟ್ರೋಲ್ ಮೇಲೆ 21 ಪೈಸೆ ಹಾಗೂ ಪ್ರತಿ ಲೀಟರ್ ಡೀಸೆಲ್ ಮೇಲೆ 29 ಪೈಸೆ ಏರಿಸಲಾಗಿದೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
ನವದೆಹಲಿ(ನ. 29): ಅಂತರಾಷ್ಟ್ರೀಯ ಮಟ್ಟದಲ್ಲಿ ಕ್ರೂಡ್ ಆಯಿಲ್ ಬೆಲೆ ಗಣನೀಯವಾಗಿ ಕಡಿಮೆ ಆಗುತ್ತಿದ್ದರೂ, ಕ್ರೂರಿ ಕೊರೋನಾ ಮತ್ತು ಲಾಕ್​ಡೌನ್​​ ಕಾರಣಗಳಿಂದ ಜನಸಾಮಾನ್ಯರು ಕಷ್ಟದಲ್ಲಿದ್ದರೂ, ಸಾರ್ವಜನಿಕರು ವ್ಯಾಪಕವಾದ ವಿರೋಧ ವ್ಯಕ್ತಪಡಿಸುತ್ತಿದ್ದರೂ ಇದ್ಯಾವುದನ್ನೂ ಪರಿಗಣಿಸದ ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ನಿರಂತರವಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಹೆಚ್ಚಳ ಮಾಡುತ್ತಲೇ ಇದೆ. ಕಳೆದ ವಾರಾಂತ್ಯದಲ್ಲಿ (ಶುಕ್ರವಾರ, ಶನಿವಾರ, ಭಾನುವಾರ ಮತ್ತು ಸೋಮವಾರ) ಸತತವಾಗಿ ನಾಲ್ಕು ದಿನ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಹೆಚ್ಚಳ ಮಾಡಲಾಗಿತ್ತು. ಈಗ ಮತ್ತೆ ನವೆಂಬರ್ 27ರಿಂದ ನಿರಂತರವಾಗಿ ಪೆಟ್ರೋಲ್-ಡೀಸೆಲ್ ಬೆಲೆ ಏರಿಸಲಾಗುತ್ತಿದೆ‌.

ಮೊನ್ನೆ (ನವೆಂಬರ್ 27) ಪ್ರತಿ ಲೀಟರ್ ಪೆಟ್ರೋಲ್ ಮೇಲೆ 19 ಪೈಸೆ ಹೆಚ್ಚಳ ಮಾಡಲಾಗಿದೆ. ಹಾಗೂ ಪ್ರತಿ ಲೀಟರ್ ಡೀಸೆಲ್ ಮೇಲೆ 24 ಪೈಸೆ ಏರಿಕೆ ಮಾಡಲಾಗಿತ್ತು. ನಿನ್ನೆ (ನವೆಂಬರ್ 28) ಪ್ರತಿ ಲೀಟರ್ ಪೆಟ್ರೋಲ್ ಮೇಲೆ 24 ಪೈಸೆ ಹೆಚ್ಚಳ ಮಾಡಲಾಗಿದೆ. ಹಾಗೂ ಪ್ರತಿ ಲೀಟರ್ ಡೀಸೆಲ್ ಮೇಲೆ 27 ಪೈಸೆ ಏರಿಕೆ ಮಾಡಲಾಗಿದೆ. ಇಂದು ಪ್ರತಿ ಲೀಟರ್ ಪೆಟ್ರೋಲ್ ಮೇಲೆ 21 ಪೈಸೆ ಹಾಗೂ ಪ್ರತಿ ಲೀಟರ್ ಡೀಸೆಲ್ ಮೇಲೆ 29 ಪೈಸೆ ಏರಿಸಲಾಗಿದೆ.

8 ತಿಂಗಳ ಬಳಿಕ ಮುಂಬೈನಲ್ಲಿ ಬಾಗಿಲು ತೆರೆದ ಚರ್ಚ್​ಗಳು; ಇಂದಿನಿಂದ ಸಾಮೂಹಿಕ ಪ್ರಾರ್ಥನೆಗೆ ಅವಕಾಶ

ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕ್ರೂಡ್ ಆಯಿಲ್ ದರ ಹೆಚ್ಚಳವಾದಾಗ ದೇಶಿಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಹೆಚ್ಚಿಸುವುದು, ಹಾಗೆಯೇ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕ್ರೂಡ್ ಆಯಿಲ್ ದರ ಕಡಿಮೆಯಾದಾಗ ದೇಶಿಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಇಳಿಸುವುದು ಸಾಮಾನ್ಯವಾದ ಸಂಗತಿ.

ಇದು ಬಹಳ‌ ಹಿಂದಿನಿಂದಲೂ ಇದು ನಡೆದುಕೊಂಡ ಬಂದಿರುವ ರೀತಿ. ಆದರೆ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಈ‌ ಸತ್ಸಂಪ್ರದಾಯವನ್ನು ಮರೆತಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕ್ರೂಡ್ ಆಯಿಲ್ ದರ ಗಣನೀಯವಾಗಿ ಏರಿಕೆ ಆಗದಿದ್ದರೂ ದೇಶಿಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ನಿರಂತರವಾಗಿ ಹೆಚ್ಚಳ ಮಾಡುತ್ತಲೇ ಇದೆ.

ಲಾಕ್​ಡೌನ್  ಮತ್ತು ಕೊರೋನಾ ವ್ಯಾಪಕವಾಗಿ ಜನರ ಮೇಲೆ ದುಷ್ಪರಿಣಾಮ ಬೀರಿದ್ದ ಜೂನ್ ತಿಂಗಳಲ್ಲಿ ಬರೊಬ್ಬರಿ 23 ದಿನ‌ ನಿರಂತರವಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಏರಿಕೆ ಮಾಡಲಾಗಿತ್ತು. ಜುಲೈ ತಿಂಗಳಿನಲ್ಲೂ 8 ದಿನ ನಿರಂತರವಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಮಾಡಲಾಗಿತ್ತು. ಆಗಸ್ಟ್, ಸೆಪ್ಟೆಂಬರ್ ಮತ್ತು ಅಕ್ಟೋಬರ್ ಗಳಲ್ಲಿ ಮಧ್ಯೆ ಮಧ್ಯೆ ಹೆಚ್ಚಳ ಮಾಡಲಾಗಿತ್ತು. ಈಗ ನವೆಂಬರ್ ತಿಂಗಳಲ್ಲಿ ನಿರಂತರವಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಸಲಾಗುತ್ತಿದೆ.
Published by:Latha CG
First published: