ಚೆನ್ನೈ: ತಮಿಳುನಾಡಿನ ಜನರಿಗೆ ಖುಷಿ ಪಡುವ ಸಂದರ್ಭ ಬಂದಿದೆ. ಅಲ್ಲಿನ ವಿತ್ತ ಸಚಿವ ಪಿ ತ್ಯಾಗರಾಜನ್ ಪೆಟ್ರೋಲ್ ಮೇಲಿನ ರಾಜ್ಯ ಸುಂಕವನ್ನು ಕಡಿತಗೊಳಿಸಿ ಆದೇಶಿಸಿದ್ದಾರೆ. ಈ ಆದೇಶ ಜಾರಿಯಾದ ಕೂಡಲೇ ಒಂದು ಲೀಟರ್ ಪೆಟ್ರೋಲ್ ಬೆಲೆ 3 ರೂಪಾಯಿಗಳಷ್ಟು ಕಡಿತಗೊಳ್ಳಲಿದೆ. ಆದ್ರೆ ರಾಜ್ಯ ಸರ್ಕಾರದ ಬೊಕ್ಕಸಕ್ಕೆ ಇದರಿಂದ ಬರೋಬ್ಬರಿ 1,160 ಕೋಟಿ ರೂಪಾಯಿ ನಷ್ಟವಾಗಲಿದೆ ಎಂದು ಸಚಿವರು ತಿಳಿಸಿದ್ದಾರೆ. ಈ ಸರ್ಕಾರ ದುಡಿಯುವ ವರ್ಗಕ್ಕೆ ಸ್ವಲ್ಪ ಸಮಾಧಾನ ನೀಡುವ ಪ್ರಯತ್ನ ಮಾಡುತ್ತಿದೆ. ಪೆಟ್ರೋಲ್ ಮೇಲೆ ಇರುವ ರಾಜ್ಯದ ಸುಂಕವನ್ನು ಪ್ರತೀ ಲೀಟರ್ಗೆ 3 ರೂಪಾಯಿಗಳಷ್ಟು ಕಡಿತ ಮಾಡಿದೆ. ಇದರಿಂದ ರಾಜ್ಯದ ಬೊಕ್ಕಸಕ್ಕೆ ವಾರ್ಷಿಕ 1160 ಕೋಟಿ ರೂಪಾಯಿಯಷ್ಟು ಭಾರೀ ಹೊಡೆತ ಬೀಳಲಿದೆ ಎಂದು ತಮ್ಮ ಪರಿಷ್ಕೃತ ಬಜೆಟ್ ದಾಖಲೆಗಳಲ್ಲಿ ತಿಳಿಸಿದ್ದಾರೆ.
ಡಿಎಂಕೆ ಪಕ್ಷವು ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಜನರಿಗೆ ಪೆಟ್ರೋಲ್ ಬೆಲೆಯನ್ನು ಪ್ರತೀ ಲೀಟರ್ಗೆ 5 ರೂಪಾಯಿಗಳಷ್ಟು ಕಡಿತ ಮಾಡುವುದಾಗಿ ಘೋಷಿಸಿತ್ತು. ಆ ಮಾತಿನಂತೆಯೇ ಈಗ 3 ರೂಪಾಯಿಗಳಷ್ಟು ಕಡಿತ ಮಾಡಲಾಗಿದೆ ಎಂದು ವಿತ್ತ ಸಚಿವ ಪಿ ತ್ಯಾಗರಾಜನ್ ಹೇಳಿದ್ದಾರೆ.
ಮೇ ತಿಂಗಳಲ್ಲಿ ಈಗಾಗಲೇ ದೇಶದ ಎಲ್ಲಾ ಪ್ರಮುಖ ನಗರಗಳಲ್ಲೂ ಇಂಧನ ಬೆಲೆಗಳು ಗಗನಕ್ಕೇರಿವೆ. ಮೇ 3ರ ನಂತರವಂತೂ ಬಹುತೇಕ ಎಲ್ಲಾ ಕಡೆ ಪೆಟ್ರೋಲ್ ಬೆಲೆ ಒಂದು ಲೀಟರ್ಗೆ 100 ರೂಪಾಯಿಯ ಗಡಿ ದಾಟಿದೆ. ಮಧ್ಯ ಪ್ರದೇಶ, ಮಹಾರಾಷ್ಟ್ರ, ಆಂಧ್ರ ಪ್ರದೇಶ, ತೆಲಂಗಾಣ, ಕರ್ನಾಟಕ, ಒಡಿಶ್ಶಾ, ತಮಿಳುನಾಡು, ಕೇರಳ, ಬಿಹಾರ, ಪಂಜಾಬ್, ಉತ್ತರ ಪ್ರದೇಶದ ಕೆಲ ಜಿಲ್ಲೆಗಳು, ಹರ್ಯಾಣ ಮತ್ತು ರಾಜಸ್ಥಾನವೂ ಸೇರಿದಂತೆ 15 ರಾಜ್ಯಗಳಲ್ಲಿ ಈ ಬೆಲೆಯೇರಿಕೆಯ ಬಿಸಿ ತಟ್ಟಿದೆ.
ಏಪ್ರಿಲ್ 2020ರಿಂದ ಪೆಟ್ರೋಲ್ ದರಗಳು ಪ್ರತೀ ಲೀಟರ್ಗೆ 32.25 ರೂಪಾಯಿಗಳಷ್ಟು ಹೆಚ್ಚಾಗಿದೆ. ದೆಹಲಿಯಲ್ಲಿ ಒಂದು ಲೀಟರ್ ಪೆಟ್ರೋಲ್ ಬೆಲೆ 69.59ರಿಂದ ಸೀದಾ 101.84 ರೂಪಾಯಿಗೆ ತಲುಪಿದೆ. ಅದೇ ರೀತಿ ಇದೇ ಸಂದರ್ಭದಲ್ಲಿ ಡೀಸೆಲ್ ಬೆಲೆ 27.58 ಪ್ರತೀ ಲೀಟರ್ಗಳಷ್ಟು ಹೆಚ್ಚಿದೆ. 62.29 ರೂಪಾಯಿ ಇದ್ದ ಡೀಸೆಲ್ ಬೆಲೆ ಈ ಬೆಲೆಯೇರಿಕೆ ನಂತರ ಪ್ರತೀ ಲೀಟರ್ಗೆ 89.87 ರೂಪಾಯಿಗಳಷ್ಟಾಗಿದೆ.
ನ್ಯೂಸ್18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್ ಕೇಸ್ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್ ನಿಯಮಗಳಾದ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ತಮ್ಮ ತಮ್ಮ ಸರದಿ ಬಂದಾಗ ತಪ್ಪದೇ ಲಸಿಕೆ ಪಡೆಯಬೇಕು. ಈಗಿನ ಪರಿಸ್ಥಿತಿಯಲ್ಲಿ ಲಸಿಕೆ ಒಂದೇ ಸೋಂಕಿನ ವಿರುದ್ಧ ಹೋರಾಡುವ ಮಾರ್ಗವಾಗಿದೆ. ಅತ್ಯಗತ್ಯವಿದ್ದರೆ ಮಾತ್ರವೇ ಮನೆಯಿಂದ ಹೊರಗೆ ಹೋಗುವ ಅಭ್ಯಾಸ ರೂಢಿಸಿಕೊಳ್ಳಬೇಕು. ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ