HOME » NEWS » National-international » PETROL PRICE IS INCREASING FROM LAST FOUR DAYS HERE IS PRICE OF PETROL IN VARIOUS CITIES LG

Petrol Price: ಮತ್ತೆ ಪೆಟ್ರೋಲ್ ಬೆಲೆಯಲ್ಲಿ ಏರಿಕೆ; ವಿವಿಧ ನಗರಗಳಲ್ಲಿ ಇಂದಿನ ಬೆಲೆ ಎಷ್ಟು?

Petrol Diesel Price: ಜೂನ್ ತಿಂಗಳಲ್ಲಿ ಬರೋಬ್ಬರಿ 23 ದಿನ‌ ನಿರಂತರವಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಏರಿಕೆ ಮಾಡಲಾಗಿತ್ತು.

news18-kannada
Updated:August 20, 2020, 9:43 AM IST
Petrol Price: ಮತ್ತೆ ಪೆಟ್ರೋಲ್ ಬೆಲೆಯಲ್ಲಿ ಏರಿಕೆ; ವಿವಿಧ ನಗರಗಳಲ್ಲಿ ಇಂದಿನ ಬೆಲೆ ಎಷ್ಟು?
ಸಾಂದರ್ಭಿಕ ಚಿತ್ರ
  • Share this:
ನವದೆಹಲಿ (ಆ.20): ಜೂನ್ ಮತ್ತು ಜುಲೈ ತಿಂಗಳಲ್ಲಿ ನಿರಂತರವಾಗಿ ಇಂಧನ ಬೆಲೆ ಏರಿಸಿದ್ದ ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಈಗ ಮತ್ತೆ ಅದೇ ಚಾಳಿ ಮುಂದುವರೆಸಿದ್ದು ಕಳೆದ ನಾಲ್ಕು ದಿನಗಳಿಂದ ಪೆಟ್ರೋಲ್ ಬೆಲೆಯನ್ನು ಏರಿಸುತ್ತಿದೆ. ಆಗಸ್ಟ್ 16ರಂದು ಪ್ರತಿ ಲೀಟರ್ ಪೆಟ್ರೋಲ್ ಮೇಲೆ 14 ಪೈಸೆ ಹೆಚ್ಚಳ ಮಾಡಿತ್ತು. ಆಗಸ್ಟ್ 17ರಂದು 16 ಪೈಸೆ ಹೆಚ್ಚಿಸಲಾಗಿತ್ತು. ಆಗಸ್ಟ್ 18ರಂದು ಪ್ರತಿ ಲೀಟರ್ ಪೆಟ್ರೋಲ್ ಮೇಲೆ 17 ಪೈಸೆ ಹೆಚ್ಚಳ ಮಾಡಲಾಗಿತ್ತು. ಈಗ ಆಗಸ್ಟ್ 20ರಂದು ಮತ್ತೆ ಪ್ರತಿ ಲೀಟರ್ ಪೆಟ್ರೋಲ್ ಮೇಲೆ 10 ಪೈಸೆ ಹೆಚ್ಚಳ ಮಾಡಿದೆ. ಒಟ್ಟು ಕಳೆದ 4  ದಿನಗಳಿಂದ ಪ್ರತಿ ಲೀಟರ್ ಪೆಟ್ರೋಲ್ ಮೇಲೆ 57 ಪೈಸೆಯನ್ನು ಏರಿಸಿದೆ.

ಅಂತರಾಷ್ಟ್ರೀಯ ಮಟ್ಟದಲ್ಲಿ ಕ್ರೂಡ್ ಆಯಿಲ್ ಬೆಲೆ ಗಣನೀಯವಾಗಿ ಕಡಿಮೆ ಆಗುತ್ತಿದ್ದರೂ,  ಕೊರೋನಾ ಮತ್ತು ಲಾಕ್​ಡೌನ್​ ಕಾರಣಗಳಿಂದ ಜನ ಸಾಮಾನ್ಯರು ಎಷ್ಟೇ ಕಷ್ಟದಲ್ಲಿದ್ದರೂ ಹಾಗೂ ಕಾಂಗ್ರೆಸ್ ನಾಯಕರು ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆಗೆ ವ್ಯಾಪಕವಾದ ವಿರೋಧ ವ್ಯಕ್ತಪಡಿಸುತ್ತಿದ್ದರೂ, ಇದ್ಯಾವುದನ್ನೂ ಪರಿಗಣಿಸದ ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪೆಟ್ರೊಲ್ ಬೆಲೆಯನ್ನು ಹೆಚ್ಚಳ ಮಾಡಿದೆ.

13 ವರ್ಷಗಳ ಬಳಿಕ ಯರಗೋಳ್ ಡ್ಯಾಂ ಕಾಮಗಾರಿ ಬಹುತೇಕ ಪೂರ್ಣ; ಜನವರಿಯಲ್ಲಿ ಲೋಕಾರ್ಪಣೆಗೆ ಸಿದ್ದತೆ

ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕ್ರೂಡ್ ಆಯಿಲ್ ದರ ಹೆಚ್ಚಳವಾದಾಗ ದೇಶಿಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಹೆಚ್ಚಿಸುವುದು, ಹಾಗೆಯೇ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕ್ರೂಡ್ ಆಯಿಲ್ ದರ ಕಡಿಮೆಯಾದಾಗ ದೇಶಿಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಇಳಿಸುವುದು ಸಾಮಾನ್ಯವಾದ ಸಂಗತಿ.

ಬಹಳ‌ ಹಿಂದಿನಿಂದಲೂ ಇದು ನಡೆದುಕೊಂಡ ಬಂದಿರುವ ರೀತಿ. ಆದರೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಈ‌ ಸತ್ಸಂಪ್ರದಾಯವನ್ನು ಮರೆತಿದೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕ್ರೂಡ್ ಆಯಿಲ್ ದರ ಗಣನೀಯವಾಗಿ ಕಡಿಮೆ ಆಗುತ್ತಿದ್ದರೂ ದೇಶಿಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ನಿರಂತರವಾಗಿ ಹೆಚ್ಚಳ ಮಾಡುತ್ತಲೇ ಇದೆ.

ಜೂನ್ ತಿಂಗಳಲ್ಲಿ ಬರೋಬ್ಬರಿ 23 ದಿನ‌ ನಿರಂತರವಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಏರಿಕೆ ಮಾಡಲಾಗಿತ್ತು. ನಂತರ ಜುಲೈ 7ರಂದು ಪ್ರತಿ ಲೀಟರ್ ಡೀಸೆಲ್ ಗೆ 25 ಪೈಸೆ, ಜುಲೈ 12ರಂದು 16 ಪೈಸೆ, ಜುಲೈ 13ರಂದು 11 ಪೈಸೆ, ಜುಲೈ 15ರಂದು 13 ಪೈಸೆ,  ಜುಲೈ 17ರಂದು 17 ಪೈಸೆ, ಜುಲೈ 18ರಂದು ಮತ್ತೆ 17 ಪೈಸೆ, ಜುಲೈ 20ರಂದು 12 ಪೈಸೆ ಹಾಗೂ ಜುಲೈ 26ರಂದು 15 ಪೈಸೆ ಹೆಚ್ಚಳ ಮಾಡಿತ್ತು. ಈಗ ಆಗಸ್ಟ್ ನಲ್ಲಿ ಮತ್ತೆ ಇಂಧನ ಬೆಲೆ ಏರಿಸುತ್ತಿದೆ.
Published by: Latha CG
First published: August 20, 2020, 9:32 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories