HOME » NEWS » National-international » PETROL PRICE PETROL PRICE IS INCREASING FROM LAST FIVE DAYS AND HERE IS RATE IN VARIOUS CITIES LG

Petrol Price: 5ನೇ ದಿನವೂ ಪೆಟ್ರೋಲ್ ಬೆಲೆಯಲ್ಲಿ ಏರಿಕೆ; ಯಾವ ನಗರದಲ್ಲಿ ಎಷ್ಟು ದರ? ಇಲ್ಲಿದೆ ಮಾಹಿತಿ

ಆಗಸ್ಟ್‌ 21ರಂದು 19 ಪೈಸೆ ಹೆಚ್ಚಿಸಲಾಗಿದೆ. ಒಟ್ಟು ಕಳೆದ 5  ದಿನಗಳಿಂದ ಪ್ರತಿ ಲೀಟರ್ ಪೆಟ್ರೋಲ್ ಮೇಲೆ 76 ಪೈಸೆಯನ್ನು ಏರಿಕೆ ಮಾಡಲಾಗಿದೆ.

news18-kannada
Updated:August 21, 2020, 7:52 AM IST
Petrol Price: 5ನೇ ದಿನವೂ ಪೆಟ್ರೋಲ್ ಬೆಲೆಯಲ್ಲಿ ಏರಿಕೆ; ಯಾವ ನಗರದಲ್ಲಿ ಎಷ್ಟು ದರ? ಇಲ್ಲಿದೆ ಮಾಹಿತಿ
ಸಾಂದರ್ಭಿಕ ಚಿತ್ರ
  • Share this:
ನವದೆಹಲಿ(ಆ. 21): ಜೂನ್ ಮತ್ತು ಜುಲೈ ತಿಂಗಳಲ್ಲಿ ನಿರಂತರವಾಗಿ ಇಂಧನ ಬೆಲೆ ಏರಿಸಿದ್ದ ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಈಗ ಮತ್ತೆ ಅದೇ ಚಾಳಿ ಮುಂದುವರೆಸಿದ್ದು, ಕಳೆದ ಐದು ದಿನಗಳಿಂದ ಪೆಟ್ರೋಲ್ ಬೆಲೆಯನ್ನು ಏರಿಕೆ ಮಾಡುತ್ತಿದೆ. ಆಗಸ್ಟ್ 16ರಂದು ಪ್ರತಿ ಲೀಟರ್ ಪೆಟ್ರೋಲ್ ಮೇಲೆ 14 ಪೈಸೆ ಹೆಚ್ಚಳ ಮಾಡಿತ್ತು. ಆಗಸ್ಟ್ 17ರಂದು 16 ಪೈಸೆ ಹೆಚ್ಚಿಸಲಾಗಿತ್ತು. ಆಗಸ್ಟ್ 18ರಂದು 17 ಪೈಸೆ ಹೆಚ್ಚಳ ಮಾಡಲಾಗಿತ್ತು. ಆಗಸ್ಟ್ 20ರಂದು ಮತ್ತೆ ಪ್ರತಿ ಲೀಟರ್ ಪೆಟ್ರೋಲ್ ಮೇಲೆ 10 ಪೈಸೆ ಏರಿಕೆ ಮಾಡಲಾಗಿತ್ತು.‌ ಈಗ ಮತ್ತೆ ಆಗಸ್ಟ್‌ 21ರಂದು 19 ಪೈಸೆ ಹೆಚ್ಚಿಸಲಾಗಿದೆ. ಒಟ್ಟು ಕಳೆದ 5  ದಿನಗಳಿಂದ ಪ್ರತಿ ಲೀಟರ್ ಪೆಟ್ರೋಲ್ ಮೇಲೆ 76 ಪೈಸೆಯನ್ನು ಏರಿಕೆ ಮಾಡಲಾಗಿದೆ.

ಅಂತರಾಷ್ಟ್ರೀಯ ಮಟ್ಟದಲ್ಲಿ ಕ್ರೂಡ್ ಆಯಿಲ್ ಬೆಲೆ ಗಣನೀಯವಾಗಿ ಕಡಿಮೆ ಆಗುತ್ತಿದ್ದರೂ, ಮಹಾ ಕ್ರೂರಿ ಕೊರೋನಾ ಮತ್ತು ಲಾಕ್​ಡೌನ್ ಕಾರಣಗಳಿಂದ ಜನ ಸಾಮಾನ್ಯರು ಎಷ್ಟೇ ಕಷ್ಟದಲ್ಲಿದ್ದರೂ ಹಾಗೂ ಕಾಂಗ್ರೆಸ್ ನಾಯಕರು ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆಗೆ ವ್ಯಾಪಕವಾದ ವಿರೋಧ ವ್ಯಕ್ತಪಡಿಸುತ್ತಿದ್ದರೂ ಇದ್ಯಾವುದನ್ನೂ ಪರಿಗಣಿಸದ ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪೆಟ್ರೋಲ್ ಬೆಲೆಯನ್ನು ಏರಿಸುತ್ತಲೇ ಇದೆ.

ಕೇಂದ್ರ ಸರ್ಕಾರದ ವಿರುದ್ದ ರೈತರು ದಂಗೆ ಏಳಲಿದ್ದಾರೆ; ಕಾಂಗ್ರೆಸ್ ಕಿಸಾನ್ ಕೇತ್ ರಾಜ್ಯಾಧ್ಯಕ್ಷ್ಯ‌ ಸಚಿನ್ ಮಿಗಾ ಎಚ್ಚರಿಕೆ

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕ್ರೂಡ್ ಆಯಿಲ್ ದರ ಹೆಚ್ಚಳವಾದಾಗ ದೇಶಿಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಹೆಚ್ಚಿಸುವುದು, ಹಾಗೆಯೇ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕ್ರೂಡ್ ಆಯಿಲ್ ದರ ಕಡಿಮೆಯಾದಾಗ ದೇಶಿಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಇಳಿಸುವುದು ಸಾಮಾನ್ಯವಾದ ಸಂಗತಿ. ಬಹಳ‌ ಹಿಂದಿನಿಂದಲೂ ಇದು ನಡೆದುಕೊಂಡ ಬಂದಿರುವ ರೀತಿ.

ಆದರೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಈ‌ ಸತ್ಸಂಪ್ರದಾಯವನ್ನು ಮರೆತಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕ್ರೂಡ್ ಆಯಿಲ್ ದರ ಗಣನೀಯವಾಗಿ ಕಡಿಮೆ ಆಗುತ್ತಿದ್ದರೂ ದೇಶಿಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ನಿರಂತರವಾಗಿ ಹೆಚ್ಚಳ ಮಾಡುತ್ತಲೇ ಇದೆ.

ಜೂನ್ ತಿಂಗಳಲ್ಲಿ ಬರೊಬ್ಬರಿ 23 ದಿನ‌ ನಿರಂತರವಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಏರಿಕೆ ಮಾಡಲಾಗಿತ್ತು. ನಂತರ ಜುಲೈ 7ರಂದು ಪ್ರತಿ ಲೀಟರ್ ಡೀಸೆಲ್ ಗೆ 25 ಪೈಸೆ, ಜುಲೈ 12ರಂದು 16 ಪೈಸೆ, ಜುಲೈ 13ರಂದು 11 ಪೈಸೆ, ಜುಲೈ 15ರಂದು 13 ಪೈಸೆ,  ಜುಲೈ 17ರಂದು 17 ಪೈಸೆ, ಜುಲೈ 18ರಂದು ಮತ್ತೆ 17 ಪೈಸೆ, ಜುಲೈ 20ರಂದು 12 ಪೈಸೆ ಹಾಗೂ ಜುಲೈ 26ರಂದು 15 ಪೈಸೆ ಹೆಚ್ಚಳ ಮಾಡಿತ್ತು. ಈಗ ಆಗಸ್ಟ್ ನಲ್ಲಿ ಮತ್ತೆ ಇಂಧನ ಬೆಲೆ ಏರಿಸಿ ತಿಜೋರಿ ತುಂಬಿಕೊಳ್ಳುತ್ತಿದೆ.
Published by: Latha CG
First published: August 21, 2020, 7:52 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories