HOME » NEWS » National-international » PETROL PRICE PETROL PRICE IS INCREASING FROM LAST TWELVE DAYS AND HERE IS RATE IN VARIOUS CITIES LG

Petrol Price: 12 ದಿನಗಳಲ್ಲಿ 10 ಬಾರಿ ಪೆಟ್ರೋಲ್ ದರ ಏರಿಕೆ; ವಿವಿಧ ನಗರಗಳಲ್ಲಿನ ಇಂದಿನ ಬೆಲೆ ಇಂತಿದೆ

Petrol Price: ಆಗಸ್ಟ್ 27ರಂದು ಮತ್ತೆ ಪ್ರತಿ ಲೀಟರ್ ಪೆಟ್ರೋಲ್ ಮೇಲೆ  10 ಪೈಸೆ ಹೆಚ್ಚಳ ಮಾಡಲಾಗಿದೆ. ಆಗಸ್ಟ್ 16ರಿಂದ ಈವರೆಗೆ 12 ದಿನಗಳಲ್ಲಿ 10 ದಿನ ಪ್ರತಿ ಲೀಟರ್ ಪೆಟ್ರೋಲ್ ಮೇಲೆ 1.40 ಪೈಸೆಯನ್ನು ಏರಿಕೆ ಮಾಡಿದಂತಾಗಿದೆ.

news18-kannada
Updated:August 27, 2020, 9:15 AM IST
Petrol Price: 12 ದಿನಗಳಲ್ಲಿ 10 ಬಾರಿ ಪೆಟ್ರೋಲ್ ದರ ಏರಿಕೆ; ವಿವಿಧ ನಗರಗಳಲ್ಲಿನ ಇಂದಿನ ಬೆಲೆ ಇಂತಿದೆ
ಸಾಂದರ್ಭಿಕ ಚಿತ್ರ
  • Share this:
ನವದೆಹಲಿ(ಆ.27): ಜೂನ್ ಮತ್ತು ಜುಲೈ ತಿಂಗಳಲ್ಲಿ ನಿರಂತರವಾಗಿ ಇಂಧನ ಬೆಲೆ ಏರಿಸಿದ್ದ ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಈಗ ಮತ್ತೆ ಅದೇ ಚಾಳಿ ಮುಂದುವರೆಸಿದ್ದು, ಕಳೆದ 12 ದಿನಗಳಲ್ಲಿ 10 ಬಾರಿ ಪೆಟ್ರೋಲ್ ಬೆಲೆಯನ್ನು ಏರಿಕೆ ಮಾಡಿದೆ. ಆಗಸ್ಟ್ 16ರಿಂದ ಪೆಟ್ರೋಲ್ ಬೆಲೆ ಏರಿಕೆ ಆರಂಭವಾಗಿದೆ. ಆಗಸ್ಟ್‌ 16ರಂದು ಪ್ರತಿ ಲೀಟರ್ ಪೆಟ್ರೋಲ್ ಮೇಲೆ 14 ಪೈಸೆ, ಆಗಸ್ಟ್‌ 17ರಂದು 16 ಪೈಸೆ, ಆಗಸ್ಟ್‌ 18ರಂದು 17 ಪೈಸೆ ಏರಿಸಲಾಯಿತು. ಆಗಸ್ಟ್‌ 19ರಂದು ಯಾವುದೇ ರೀತಿಯ ಬೆಲೆ ಏರಿಕೆ ಆಗಿರಲಿಲ್ಲ. ಮತ್ತೆ ಆಗಸ್ಟ್‌  20ರಿಂದ ಬೆಲೆ ಏರಿಕೆ ಆರಂಭವಾಯಿತು.

ಆಗಸ್ಟ್‌ 20ರಂದು ಪ್ರತಿ ಲೀಟರ್ ಮೇಲೆ 10 ಪೈಸೆ, ಆಗಸ್ಟ್‌ 21ರಂದು 19 ಪೈಸೆ, ಆಗಸ್ಟ್‌ 22ರಂದು 16 ಪೈಸೆ, ಆಗಸ್ಟ್‌ 23ರಂದು 14 ಪೈಸೆ, ಆಗಸ್ಟ್ 24ರಂದು 13 ಪೈಸೆ ಮತ್ತು ಆಗಸ್ಟ್‌ 25ರಂದು 11 ಪೈಸೆ ಬೆಲೆ ಏರಿಸಲಾಯಿತು. ಆಗಸ್ಟ್‌ 26ರಂದು ಯಾವುದೇ ರೀತಿಯ ಬೆಲೆ ಏರಿಕೆ ಆಗಿರಲಿಲ್ಲ. ಈಗ ಆಗಸ್ಟ್ 27ರಂದು ಮತ್ತೆ ಪ್ರತಿ ಲೀಟರ್ ಪೆಟ್ರೋಲ್ ಮೇಲೆ  10 ಪೈಸೆ ಹೆಚ್ಚಳ ಮಾಡಲಾಗಿದೆ. ಆಗಸ್ಟ್ 16ರಿಂದ ಈವರೆಗೆ 12 ದಿನಗಳಲ್ಲಿ 10 ದಿನ ಪ್ರತಿ ಲೀಟರ್ ಪೆಟ್ರೋಲ್ ಮೇಲೆ 1.40 ಪೈಸೆಯನ್ನು ಏರಿಕೆ ಮಾಡಿದಂತಾಗಿದೆ.

ಅಂತರಾಷ್ಟ್ರೀಯ ಮಟ್ಟದಲ್ಲಿ ಕ್ರೂಡ್ ಆಯಿಲ್ ಬೆಲೆ ಗಣನೀಯವಾಗಿ ಕಡಿಮೆ ಆಗುತ್ತಿದ್ದರೂ, ಮಹಾ ಕ್ರೂರಿ ಕೊರೊನಾ ಮತ್ತು ಲಾಕ್ಡೌನ್ ಕಾರಣಗಳಿಂದ ಜನ ಸಾಮಾನ್ಯರು ಎಷ್ಟೇ ಕಷ್ಟದಲ್ಲಿದ್ದರೂ ಹಾಗೂ ಕಾಂಗ್ರೆಸ್ ನಾಯಕರು ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆಗೆ ವ್ಯಾಪಕವಾದ ವಿರೋಧ ವ್ಯಕ್ತಪಡಿಸುತ್ತಿದ್ದರೂ ಇದ್ಯಾವುದನ್ನೂ ಪರಿಗಣಿಸದ ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪೆಟ್ರೊಲ್ ಬೆಲೆಯನ್ನು ಏರಿಸುತ್ತಲೇ ಇದೆ.

ಆನ್​​ಲೈನ್​ನಲ್ಲೇ ನಡೆಯಿತು ಬಿಎಲ್​ಡಿಇ ಡೀಮ್ಡ್​ ವಿವಿ ಘಟಿಕೋತ್ಸವ: 8 ಚಿನ್ನದ ಪದಕ ಪಡೆದು ಮಿಂಚಿದ ವಿದ್ಯಾರ್ಥಿನಿ

ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕ್ರೂಡ್ ಆಯಿಲ್ ದರ ಹೆಚ್ಚಳವಾದಾಗ ದೇಶಿಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಹೆಚ್ಚಿಸುವುದು, ಹಾಗೆಯೇ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕ್ರೂಡ್ ಆಯಿಲ್ ದರ ಕಡಿಮೆಯಾದಾಗ ದೇಶಿಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಇಳಿಸುವುದು ಸಾಮಾನ್ಯವಾದ ಸಂಗತಿ. ಬಹಳ‌ ಹಿಂದಿನಿಂದಲೂ ಇದು ನಡೆದುಕೊಂಡ ಬಂದಿರುವ ರೀತಿ. ಆದರೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಈ‌ ಸತ್ಸಂಪ್ರದಾಯವನ್ನು ಮರೆತಿದೆ.

ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕ್ರೂಡ್ ಆಯಿಲ್ ದರ ಗಣನೀಯವಾಗಿ ಕಡಿಮೆ ಆಗುತ್ತಿದ್ದರೂ ದೇಶಿಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ನಿರಂತರವಾಗಿ ಹೆಚ್ಚಳ ಮಾಡುತ್ತಲೇ ಇದೆ. ಜೂನ್ ತಿಂಗಳಲ್ಲಿ ಬರೊಬ್ಬರಿ 23 ದಿನ‌ ನಿರಂತರವಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಏರಿಕೆ ಮಾಡಲಾಗಿತ್ತು. ನಂತರ ಜುಲೈ 7ರಂದು ಪ್ರತಿ ಲೀಟರ್ ಡೀಸೆಲ್ ಗೆ 25 ಪೈಸೆ, ಜುಲೈ 12ರಂದು 16 ಪೈಸೆ, ಜುಲೈ 13ರಂದು 11 ಪೈಸೆ, ಜುಲೈ 15ರಂದು 13 ಪೈಸೆ,  ಜುಲೈ 17ರಂದು 17 ಪೈಸೆ, ಜುಲೈ 18ರಂದು ಮತ್ತೆ 17 ಪೈಸೆ, ಜುಲೈ 20ರಂದು 12 ಪೈಸೆ ಹಾಗೂ ಜುಲೈ 26ರಂದು 15 ಪೈಸೆ ಹೆಚ್ಚಳ ಮಾಡಿತ್ತು. ಈಗ ಆಗಸ್ಟ್ ನಲ್ಲಿ ಮತ್ತೆ ಇಂಧನ ಬೆಲೆ ಏರಿಸಿ ಜನರ ಜೇಬಿಗೆ ಕೊಳ್ಳಿ ಇಡಲಾಗುತ್ತಿದೆ.
Published by: Latha CG
First published: August 27, 2020, 9:15 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories