HOME » NEWS » National-international » PETROL PRICE PETROL RATE DIESEL PRICES RISE AGAIN AFTER TWO DAYS IN INDIA CHECK LATEST FUEL PRICE DBDEL SCT

Petrol Price: 2 ದಿನಗಳ ಬಳಿಕ ಇಂದು ಮತ್ತೆ ಪೆಟ್ರೋಲ್- ಡೀಸೆಲ್ ಬೆಲೆ ಏರಿಕೆ

ಕಳೆದ 2 ದಿನಗಳಿಂದ ಒಂದೇ ರೀತಿಯಲ್ಲಿದ್ದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಂದು ಮತ್ತೆ ಏರಿಕೆಯಾಗಿದೆ. ದೇಶದ ವಿವಿಧ ನಗರಗಳ ಇಂದಿನ ಪೆಟ್ರೋಲ್-ಡೀಸೆಲ್ ದರದ ಮಾಹಿತಿ ಇಲ್ಲಿದೆ...

news18-kannada
Updated:February 23, 2021, 9:16 AM IST
Petrol Price: 2 ದಿನಗಳ ಬಳಿಕ ಇಂದು ಮತ್ತೆ ಪೆಟ್ರೋಲ್- ಡೀಸೆಲ್ ಬೆಲೆ ಏರಿಕೆ
ಸಾಂದರ್ಭಿಕ ಚಿತ್ರ
  • Share this:
ನವದೆಹಲಿ, (ಫೆ. 23): 2 ದಿನಗಳಿಂದ ಯಥಾಸ್ಥಿತಿಯಲ್ಲಿದ್ದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಂದು ಮತ್ತೆ ಏರಿಕೆಯಾಗಿದೆ. ದೇಶದ ವಿವಿಧ ನಗರಗಳಲ್ಲಿನ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳ ವಿವರ ಹೀಗಿದೆ. ಬೆಂಗಳೂರು- ಪೆಟ್ರೋಲ್ 93.98 ರೂ., ಡೀಸೆಲ್ 86.21 ರೂ., ಭೂಪಾಲ್- ಪೆಟ್ರೋಲ್ 98.96 ರೂ., ಡೀಸೆಲ್ 89.60 ರೂ., ಮುಂಬೈ- ಪೆಟ್ರೋಲ್ 97.34 ರೂ., ಡೀಸೆಲ್ 88.44 ರೂ., ಜೈಪುರ - ಪೆಟ್ರೋಲ್ 97.47 ರೂ., ಡೀಸೆಲ್ 89.82 ರೂ., ಪಾಟ್ನಾ- ಪೆಟ್ರೋಲ್ 93.25 ರೂ., ಡೀಸೆಲ್ 86.57 ರೂ., ಚೆನ್ನೈ- ಪೆಟ್ರೋಲ್ 92.59 ರೂ., ಡೀಸೆಲ್ 86.31 ರೂ., ಕೋಲ್ಕತ್ತಾ- ಪೆಟ್ರೋಲ್ 91.78 ರೂ., ಡೀಸೆಲ್ 84.56 ರೂ., ದೆಹಲಿ- ಪೆಟ್ರೋಲ್ 90.93 ರೂ., ಡೀಸೆಲ್ 81.32 ರೂ., ಲಕ್ನೋ- ಪೆಟ್ರೋಲ್ 89.13 ರೂ., ಡೀಸೆಲ್ 81.70 ರೂ., ನೋಯ್ಡಾ- ಪೆಟ್ರೋಲ್ 88.54 ರೂ., ಡೀಸೆಲ್ 80 ರೂ., ಗುರುಗಾವ್ - ಪೆಟ್ರೋಲ್ 87.98 ರೂ., ಡೀಸೆಲ್ 78.98 ರೂ., ರಾಂಚಿ- ಪೆಟ್ರೋಲ್ 88.35 ರೂ., ಡೀಸೆಲ್ 85.97 ರೂ. ಆಗಿದೆ. 

ಅಂತಾರಾಷ್ಟ್ರೀಯ ಮಟ್ಟದಲ್ಲಿ ಕ್ರೂಡ್ ಆಯಿಲ್ ಬೆಲೆ ಗಣನೀಯವಾಗಿ ಕಡಿಮೆ ಆಗುತ್ತಿದ್ದರೂ, ಮಹಾ ಕ್ರೂರಿ ಕೊರೊನಾ ಮತ್ತು ಲಾಕ್ಡೌನ್ ಕಾರಣಗಳಿಂದ ಜನ ಸಾಮಾನ್ಯರು ಎಷ್ಟೇ ಕಷ್ಟದಲ್ಲಿದ್ದರೂ ಹಾಗೂ ಕಾಂಗ್ರೆಸ್ ನಾಯಕರು ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆಗೆ ವ್ಯಾಪಕವಾದ ವಿರೋಧ ವ್ಯಕ್ತಪಡಿಸುತ್ತಿದ್ದರೂ ಇದ್ಯಾವುದನ್ನೂ ಪರಿಗಣಿಸದ ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಹೆಚ್ಚಳ ಮಾಡಿದೆ. ನಿರಂತರವಾಗಿ 12 ದಿನ ಬೆಲೆ ಏರಿಸಿ ಎರಡು ದಿನ ಬಿಡುವು ನೀಡಿದ್ದ ಕೇಂದ್ರ ಸರ್ಕಾರ ಇಂದು ಮತ್ತೊಮ್ಮೆ ಜನತೆಯ ಮೇಲೆ ಬೆಲೆ ಏರಿಕೆಯ ಬರೆ ಎಳೆದಿದೆ.

ಕಳೆದ 52 ದಿನಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ 25 ಬಾರಿ ಹೆಚ್ಚಾಗಿದೆ. ಜನವರಿ 1ರಿಂದೀಚೆಗೆ 7.68 ರೂಪಾಯಿ ಹೆಚ್ಚಾಗಿದೆ. ಫೆಬ್ರವರಿ ತಿಂಗಳಲ್ಲಿ 15ನೇ ಬಾರಿಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಸಲಾಗಿದೆ. ಕಳೆದ 15ದಿನಗಳಿಂದ  4.72 ಪೈಸೆ ಬೆಲೆ ಹೆಚ್ಚಳ ಮಾಡಲಾಗಿದೆ.

ಇದನ್ನೂ ಓದಿ: Bangalore Crime: ದೆಹಲಿಯಿಂದ ಬಂದು ಬೆಂಗಳೂರಲ್ಲಿ ಸರ ದೋಚುತ್ತಿತ್ತು ಗ್ಯಾಂಗ್; 6 ಐಷಾರಾಮಿ ಕಳ್ಳರ ಬಂಧನ

ಪ್ರತಿ ಲೀಟರ್ ಪೆಟ್ರೋಲ್ ಹಾಗೂ ಡೀಸೆಲ್ ಮೇಲೆ ಫೆಬ್ರವರಿ 4ರಂದು ತಾರೀಖು ತಲಾ 37 ಪೈಸೆ, ಫೆಬ್ರವರಿ 5ರಂದು 37 ಪೈಸೆ, ಫೆಬ್ರವರಿ 9ರಂದು 42 ಪೈಸೆ, ಫೆಬ್ರವರಿ 10ರಂದು 31 ಪೈಸೆ, ಫೆಬ್ರವರಿ 11ರಂದು 38 ಪೈಸೆ, ಫೆಬ್ರವರಿ 12ರಂದು 38 ಪೈಸೆ, ಫೆಬ್ರವರಿ 13ರಂದು 39 ಪೈಸೆ, ಫೆಬ್ರವರಿ 14ರಂದು 34 ಪೈಸೆ, ಫೆಬ್ರವರಿ 15ರಂದು 30 ಪೈಸೆ, ಫೆಬ್ರವರಿ 16ರಂದು 38 ಪೈಸೆ, ಫೆಬ್ರವರಿ 17ರಂದು 27 ಪೈಸೆ, ಫೆಬ್ರವರಿ 18ರಂದು 36 ಪೈಸೆ ಹೆಚ್ಚಳ, ಫೆಬ್ರವರಿ 19ರಂದು 36 ಪೈಸೆ ಹಾಗೂ ಫೆಬ್ರವರಿ 20ರಂದು 41 ಪೈಸೆ ಹೆಚ್ಚಳ ಮಾಡಲಾಗಿತ್ತು. ಈಗ ಫೆಬ್ರವರಿ 23ರಂದು ಮತ್ತೆ ಪ್ರತಿ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ 38 ಪೈಸೆ ಹೆಚ್ಚಳ ಮಾಡಲಾಗಿದೆ.

ಡಾಲರ್ ಎದುರು ರೂಪಾಯಿ ಮೌಲ್ಯ 72.85 ರೂಪಾಯಿ ಇದೆ. ಬ್ರೆಂಟ್ ಕಚ್ಚಾ ತೈಲವು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಪ್ರತಿ ಬ್ಯಾರೆಲ್‌ಗೆ 60.60ನಂತೆ ಲಭ್ಯವಾಗುತ್ತಿದೆ. ಆದರೂ ಭಾರತದಲ್ಲಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ನಿರಂತರವಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಹೆಚ್ಚಳ ಮಾಡುತ್ತಿದೆ.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕ್ರೂಡ್ ಆಯಿಲ್ ದರ ಹೆಚ್ಚಳವಾದಾಗ ದೇಶಿಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಹೆಚ್ಚಿಸುವುದು, ಹಾಗೆಯೇ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕ್ರೂಡ್ ಆಯಿಲ್ ದರ ಕಡಿಮೆಯಾದಾಗ ದೇಶಿಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಇಳಿಸುವುದು ಸಾಮಾನ್ಯವಾದ ಸಂಗತಿ. ಬಹಳ‌ ಹಿಂದಿನಿಂದಲೂ ಇದು ನಡೆದುಕೊಂಡ ಬಂದಿರುವ ರೀತಿ. ಆದರೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಈ‌ ಸತ್ಸಂಪ್ರದಾಯವನ್ನು ಮರೆತಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕ್ರೂಡ್ ಆಯಿಲ್ ದರ ಗಣನೀಯವಾಗಿ ಕಡಿಮೆ ಆಗುತ್ತಿದ್ದರೂ ದೇಶಿಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ನಿರಂತರವಾಗಿ ಹೆಚ್ಚಳ ಮಾಡುತ್ತಲೇ ಇದೆ.

2020ರ ಜೂನ್ ತಿಂಗಳಲ್ಲಿ, ಅಂದರೆ ಜನ ಕೊರೋನಾ ಮತ್ತು ಲಾಕ್ಡೌನ್ ಎಂಬ ಎರಡು ಬಲು ದೊಡ್ಡ ಕಷ್ಟದಲ್ಲಿದ್ದಾಗ ನರೇಂದ್ರ ಮೋದಿ ನೇತೃತ್ವದ ಸರ್ಕಾರ ನಿರಂತರವಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಹೆಚ್ಚಿಸುವ ಪರಿಪಾಠ ಶುರುವಾಗಿತ್ತು. ಉದಾಹರಣೆಗೆ ಜೂನ್ ತಿಂಗಳಲ್ಲಿ ಬರೊಬ್ಬರಿ 23 ದಿನ‌ ನಿರಂತರವಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಏರಿಕೆ ಮಾಡಲಾಗಿತ್ತು. ಜುಲೈ ತಿಂಗಳಲ್ಲಿ ದಿನ ಬಿಟ್ಟು ದಿನ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಮಾಡಲಾಗಿತ್ತು. ಆಗಸ್ಟ್, ಸೆಪ್ಟೆಂಬರ್, ಅಕ್ಟೋಬರ್, ನವೆಂಬರ್ ಮತ್ತು ಡಿಸೆಂಬರ್ ತಿಂಗಳುಗಳಲ್ಲೂ ಆಗಾಗ್ಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಹೆಚ್ಚಳ ಮಾಡಲಾಗಿತ್ತು. ಈಗ ಜನವರಿಯಲ್ಲೂ ನಿರಂತರವಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಸಲಾಗುತ್ತದೆ.
Published by: Sushma Chakre
First published: February 23, 2021, 9:16 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories