HOME » NEWS » National-international » PETROL PRICE PETROL RATE HIKED IN BANGALORE CHECK LATEST PETROL AND DIESEL PRICE IN INDIA DBDEL SCT

Petrol Price: ಒಂದು ವಾರದಲ್ಲಿ‌ 4ನೇ ಬಾರಿ ಪೆಟ್ರೋಲ್ - ಡೀಸೆಲ್ ಬೆಲೆ ಏರಿಕೆ; ಇಂದಿನ ದರವೆಷ್ಟು?

Petrol Price Today: ಕಳೆದ ವಾರಾಂತ್ಯದಲ್ಲಿ ಸತತವಾಗಿ ನಾಲ್ಕು ದಿನ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಹೆಚ್ಚಳ ಮಾಡಲಾಗಿತ್ತು. ಇಂದು ಪ್ರತಿ ಲೀಟರ್ ಪೆಟ್ರೋಲ್ ಮೇಲೆ 15 ಪೈಸೆ ಹಾಗೂ ಪ್ರತಿ ಲೀಟರ್ ಡೀಸೆಲ್ ಮೇಲೆ 23 ಪೈಸೆ ಏರಿಕೆ ಮಾಡಲಾಗಿದೆ.

news18-kannada
Updated:December 2, 2020, 8:53 AM IST
Petrol Price: ಒಂದು ವಾರದಲ್ಲಿ‌ 4ನೇ ಬಾರಿ ಪೆಟ್ರೋಲ್ - ಡೀಸೆಲ್ ಬೆಲೆ ಏರಿಕೆ; ಇಂದಿನ ದರವೆಷ್ಟು?
ಸಾಂದರ್ಭಿಕ ಚಿತ್ರ
  • Share this:
ನವದೆಹಲಿ, (ಡಿ. 2): ಅಂತಾರಾಷ್ಟ್ರೀಯ ಮಟ್ಟದಲ್ಲಿ ಕ್ರೂಡ್ ಆಯಿಲ್ ಬೆಲೆ ಗಣನೀಯವಾಗಿ ಕಡಿಮೆ ಆಗುತ್ತಿದೆ. ಆದರೆ, ಕ್ರೂರಿ ಕೊರೊನಾ ಮತ್ತು ಲಾಕ್​ಡೌನ್ ಕಾರಣಗಳಿಂದ ಜನಸಾಮಾನ್ಯರು ಕಷ್ಟದಲ್ಲಿದ್ದರೂ, ಸಾರ್ವಜನಿಕರು ವ್ಯಾಪಕವಾದ ವಿರೋಧ ವ್ಯಕ್ತಪಡಿಸುತ್ತಿದ್ದರೂ ಇದ್ಯಾವುದನ್ನೂ ಪರಿಗಣಿಸದ ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕಳೆದ ವಾರದಂತೆ ಈ ವಾರದಲ್ಲೂ 4ನೇ ಬಾರಿಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಏರಿಸಿದೆ.

ಕಳೆದ ವಾರಾಂತ್ಯದಲ್ಲಿ (ಶುಕ್ರವಾರ, ಶನಿವಾರ, ಭಾನುವಾರ ಹಾಗೂ ಸೋಮವಾರ) ಸತತವಾಗಿ ನಾಲ್ಕು ದಿನ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಹೆಚ್ಚಳ ಮಾಡಲಾಗಿತ್ತು. ಇದಾದ ಮೇಲೆ ನವೆಂಬರ್ 27, 27 ಹಾಗೂ 28ರಂದು ನಿರಂತರವಾಗಿ ಪೆಟ್ರೋಲ್-ಡೀಸೆಲ್ ಬೆಲೆ ಏರಿಸಲಾಗಿತ್ತು. ಮತ್ತೀಗ ಡಿಸೆಂಬರ್ 2ರಂದು ಪುನಃ ಪೆಟ್ರೋಲ್-ಡೀಸಲ್ ಬೆಲೆ ಹೆಚ್ಚಳ ಮಾಡಲಾಗಿದೆ.

ನವೆಂಬರ್ 27ರಂದು ಪ್ರತಿ ಲೀಟರ್ ಪೆಟ್ರೋಲ್ ಮೇಲೆ 19 ಪೈಸೆ, ಪ್ರತಿ ಲೀಟರ್ ಡೀಸೆಲ್ ಮೇಲೆ 24 ಪೈಸೆ ಏರಿಕೆ ಮಾಡಲಾಗಿತ್ತು. ನವೆಂಬರ್ 28ರಂದು ಪ್ರತಿ ಲೀಟರ್ ಪೆಟ್ರೋಲ್ ಮೇಲೆ 24 ಪೈಸೆ, ಪ್ರತಿ ಲೀಟರ್ ಡೀಸೆಲ್ ಮೇಲೆ 27 ಪೈಸೆ ಏರಿಕೆ ಮಾಡಲಾಗಿದೆ. ನವೆಂಬರ್ 29ರಂದು ಪ್ರತಿ ಲೀಟರ್ ಪೆಟ್ರೋಲ್ ಮೇಲೆ 21 ಪೈಸೆ, ಪ್ರತಿ ಲೀಟರ್ ಡೀಸೆಲ್ ಮೇಲೆ 29 ಪೈಸೆ ಏರಿಸಲಾಗಿತ್ತು. ಡಿಸೆಂಬರ್ 2ರಂದು ಪ್ರತಿ ಲೀಟರ್ ಪೆಟ್ರೋಲ್ ಮೇಲೆ 15 ಪೈಸೆ ಹಾಗೂ ಪ್ರತಿ ಲೀಟರ್ ಡೀಸೆಲ್ ಮೇಲೆ 23 ಪೈಸೆ ಏರಿಕೆ ಮಾಡಲಾಗಿದೆ.

ಇದನ್ನೂ ಓದಿ: Farmers Protest - 7ನೇ ದಿನಕ್ಕೆ ಕಾಲಿಟ್ಟ ರೈತರ ಪ್ರತಿಭಟನೆ; ನಿನ್ನೆಯ ಸಭೆ ವಿಫಲ, ನಾಳೆ ಏನಾಗುತ್ತೊ?

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕ್ರೂಡ್ ಆಯಿಲ್ ದರ ಹೆಚ್ಚಳವಾದಾಗ ದೇಶಿಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಹೆಚ್ಚಿಸುವುದು, ಹಾಗೆಯೇ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕ್ರೂಡ್ ಆಯಿಲ್ ದರ ಕಡಿಮೆಯಾದಾಗ ದೇಶಿಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಇಳಿಸುವುದು ಸಾಮಾನ್ಯವಾದ ಸಂಗತಿ. ಇದು ಬಹಳ‌ ಹಿಂದಿನಿಂದಲೂ ಇದು ನಡೆದುಕೊಂಡ ಬಂದಿರುವ ರೀತಿ.

ಆದರೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಈ‌ ಸತ್ಸಂಪ್ರದಾಯವನ್ನು ಮರೆತಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕ್ರೂಡ್ ಆಯಿಲ್ ದರ ಗಣನೀಯವಾಗಿ ಏರಿಕೆ ಆಗದಿದ್ದರೂ ದೇಶಿಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ನಿರಂತರವಾಗಿ ಹೆಚ್ಚಳ ಮಾಡುತ್ತಲೇ ಇದೆ.
ಲಾಕ್ಡೌನ್ ಮತ್ತು ಕೊರೊನಾ ವ್ಯಾಪಕವಾಗಿ ಜನರ ಮೇಲೆ ದುಷ್ಪರಿಣಾಮ ಬೀರಿದ್ದ ಜೂನ್ ತಿಂಗಳಲ್ಲಿ ಬರೋಬ್ಬರಿ 23 ದಿನ‌ ನಿರಂತರವಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಏರಿಕೆ ಮಾಡಲಾಗಿತ್ತು.

ಜುಲೈ ತಿಂಗಳಿನಲ್ಲೂ 8 ದಿನ ನಿರಂತರವಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಮಾಡಲಾಗಿತ್ತು. ಆಗಸ್ಟ್, ಸೆಪ್ಟೆಂಬರ್ ಮತ್ತು ಅಕ್ಟೋಬರ್ ಗಳಲ್ಲಿ ಮಧ್ಯೆ ಮಧ್ಯೆ ಹೆಚ್ಚಳ ಮಾಡಲಾಗಿತ್ತು. ಈಗ ನವೆಂಬರ್ ತಿಂಗಳಲ್ಲಿ ನಿರಂತರವಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಸಲಾಗುತ್ತಿದೆ.
Published by: Sushma Chakre
First published: December 2, 2020, 8:48 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories