• ಹೋಂ
  • »
  • ನ್ಯೂಸ್
  • »
  • ದೇಶ-ವಿದೇಶ
  • »
  • Petrol Price: ಫೆಬ್ರವರಿಯಲ್ಲಿ ಸತತವಾಗಿ ಪೆಟ್ರೋಲ್- ಡೀಸೆಲ್ ಬೆಲೆ ಏರಿಕೆ; ಪ್ರಮುಖ ನಗರಗಳಲ್ಲಿ ಪೆಟ್ರೋಲ್ ಬೆಲೆಯೆಷ್ಟು?

Petrol Price: ಫೆಬ್ರವರಿಯಲ್ಲಿ ಸತತವಾಗಿ ಪೆಟ್ರೋಲ್- ಡೀಸೆಲ್ ಬೆಲೆ ಏರಿಕೆ; ಪ್ರಮುಖ ನಗರಗಳಲ್ಲಿ ಪೆಟ್ರೋಲ್ ಬೆಲೆಯೆಷ್ಟು?

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

Petrol Diesel Price: ಕಳೆದ 43 ದಿನಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ 16 ಪಟ್ಟು ಹೆಚ್ಚಾಗಿದೆ. ಈ ತಿಂಗಳಲ್ಲಿ ಕಳೆದ 4 ದಿನಗಳಿಂದ ನಿರಂತರವಾಗಿ ಬೆಲೆ ಏರಿಕೆ ಮಾಡಲಾಗಿದೆ. 4 ದಿನಗಳಿಂದ ಒಟ್ಟು 1.43 ಪೈಸೆ ಬೆಲೆ ಹೆಚ್ಚಳ ಮಾಡಲಾಗಿದೆ.

  • Share this:

ನವದೆಹಲಿ, (ಫೆ. 12):ಇಂದು ಮತ್ತೆ ಇಂಧನದ ಬೆಲೆ ಹೆಚ್ಚಳವಾಗಿದ್ದು, ಭಾರತದ ವಿವಿಧ ನಗರಗಳಲ್ಲಿನ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳ ವಿವರ ಹೀಗಿದೆ. ಬೆಂಗಳೂರು- ಪೆಟ್ರೋಲ್ 91.09 ರೂ., ಡೀಸೆಲ್ 83.09 ರೂ., ಭೂಪಾಲ್- ಪೆಟ್ರೋಲ್ 96.08 ರೂ., ಡೀಸೆಲ್ 86.48 ರೂ., ಮುಂಬೈ- ಪೆಟ್ರೋಲ್ 94.64 ರೂ., ಡೀಸೆಲ್ 85.32 ರೂ., ಜೈಪುರ - ಪೆಟ್ರೋಲ್ 94.55 ರೂ., ಡೀಸೆಲ್ 86.65 ರೂ., ಪಾಟ್ನಾ- ಪೆಟ್ರೋಲ್ 90.55 ರೂ., ಡೀಸೆಲ್ 83.58 ರೂ., ಚೆನ್ನೈ- ಪೆಟ್ರೋಲ್ 90.44 ರೂ., ಡೀಸೆಲ್ 83.52 ರೂ., ಕೋಲ್ಕತ್ತಾ- ಪೆಟ್ರೋಲ್ 89.44 ರೂ., ಡೀಸೆಲ್ 81.96 ರೂ., ದೆಹಲಿ- ಪೆಟ್ರೋಲ್ 89.14 ರೂ., ಡೀಸೆಲ್ 78.38 ರೂ., ನೋಯ್ಡಾ- ಪೆಟ್ರೋಲ್ 86.58 ರೂ., ಡೀಸೆಲ್ 78.62 ರೂ.,
ಲಕ್ನೋ- ಪೆಟ್ರೋಲ್ 86.99 ರೂ., ಡೀಸೆಲ್ 78.75 ರೂ., ಗುರುಗಾವ್ - ಪೆಟ್ರೋಲ್ 86.44ರೂ., ಡೀಸೆಲ್ 79.60 ರೂ., ರಾಂಚಿ- ಪೆಟ್ರೋಲ್ 86.21 ರೂ., ಡೀಸೆಲ್ 82.90 ರೂ. ಇದೆ. 


ಅಂತಾರಾಷ್ಟ್ರೀಯ ಮಟ್ಟದಲ್ಲಿ ಕ್ರೂಡ್ ಆಯಿಲ್ ಬೆಲೆ ಗಣನೀಯವಾಗಿ ಕಡಿಮೆ ಆಗುತ್ತಿದ್ದರೂ, ಮಹಾ ಕ್ರೂರಿ ಕೊರೊನಾ ಮತ್ತು ಲಾಕ್ಡೌನ್ ಕಾರಣಗಳಿಂದ ಜನ ಸಾಮಾನ್ಯರು ಎಷ್ಟೇ ಕಷ್ಟದಲ್ಲಿದ್ದರೂ ಹಾಗೂ ಕಾಂಗ್ರೆಸ್ ನಾಯಕರು ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆಗೆ ವ್ಯಾಪಕವಾದ ವಿರೋಧ ವ್ಯಕ್ತಪಡಿಸುತ್ತಿದ್ದರೂ ಇದ್ಯಾವುದನ್ನೂ ಪರಿಗಣಿಸದ ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಹೆಚ್ಚಳ ಮಾಡಿದೆ.


ಕಳೆದ ತಿಂಗಳು ನಿರಂತರವಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಏರಿಕೆ ಮಾಡಲಾಗಿತ್ತು. ಈಗ ಫೆಬ್ರುವರಿಯಲ್ಲಿ 12 ದಿನಗಳ ಪೈಕಿ 6 ದಿನ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಮಾಡಲಾಗಿದೆ. ಪ್ರತಿ ಲೀಟರ್ ಪೆಟ್ರೋಲ್ ಹಾಗೂ ಡೀಸೆಲ್ ಮೇಲೆ ಫೆಬ್ರವರಿ 4ರಂದು 37 ಪೈಸೆ, ಫೆಬ್ರವರಿ 5ರಂದು 37 ಪೈಸೆ, ಫೆಬ್ರವರಿ 9ರಂದು 42 ಪೈಸೆ, ಫೆಬ್ರವರಿ 10ರಂದು 31 ಪೈಸೆ ಹಾಗೂ ಫೆಬ್ರವರಿ 11ರಂದು 32 ಪೈಸೆ ಏರಿಕೆ ಮಾಡಲಾಗಿತ್ತು. ಫೆಬ್ರವರಿ 12ರಂದು ಮತ್ತೆ ಪ್ರತಿ ಲೀಟರ್ ಪೆಟ್ರೋಲ್ ಹಾಗೂ ಡೀಸೆಲ್ ಮೇಲೆ ತಲಾ 38 ಪೈಸೆ ಏರಿಕೆ ಮಾಡಲಾಗಿದೆ.


ಇದನ್ನೂ ಓದಿ: Areca nut Price: ಅಡಕೆ ಬೆಲೆಯಲ್ಲಿ ದಾಖಲೆಯ ಏರಿಕೆ; ಅಡಕೆ ದರ ಹೆಚ್ಚಳಕ್ಕೆ ಕಾರಣವೇನು ಗೊತ್ತಾ?


ಕಳೆದ 43 ದಿನಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ 16 ಪಟ್ಟು ಹೆಚ್ಚಾಗಿದೆ. ಈ ತಿಂಗಳಲ್ಲಿ ಕಳೆದ 4 ದಿನಗಳಿಂದ ನಿರಂತರವಾಗಿ ಬೆಲೆ ಏರಿಕೆ ಮಾಡಲಾಗಿದೆ. 4 ದಿನಗಳಿಂದ ಒಟ್ಟು 1.43 ಪೈಸೆ ಬೆಲೆ ಹೆಚ್ಚಳ ಮಾಡಲಾಗಿದೆ. ಡಾಲರ್ ಎದುರು ರೂಪಾಯಿ ಮೌಲ್ಯ 72.85 ರೂಪಾಯಿ ಇದೆ. ಬ್ರೆಂಟ್ ಕಚ್ಚಾ ತೈಲವು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಪ್ರತಿ ಬ್ಯಾರೆಲ್‌ಗೆ 60.60ನಂತೆ ಲಭ್ಯವಾಗುತ್ತಿದೆ. ಆದರೂ ಭಾರತದಲ್ಲಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ನಿರಂತರವಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಹೆಚ್ಚಳ ಮಾಡುತ್ತಿದೆ.


ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕ್ರೂಡ್ ಆಯಿಲ್ ದರ ಹೆಚ್ಚಳವಾದಾಗ ದೇಶಿಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಹೆಚ್ಚಿಸುವುದು, ಹಾಗೆಯೇ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕ್ರೂಡ್ ಆಯಿಲ್ ದರ ಕಡಿಮೆಯಾದಾಗ ದೇಶಿಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಇಳಿಸುವುದು ಸಾಮಾನ್ಯವಾದ ಸಂಗತಿ. ಬಹಳ‌ ಹಿಂದಿನಿಂದಲೂ ಇದು ನಡೆದುಕೊಂಡ ಬಂದಿರುವ ರೀತಿ. ಆದರೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಈ‌ ಸತ್ಸಂಪ್ರದಾಯವನ್ನು ಮರೆತಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕ್ರೂಡ್ ಆಯಿಲ್ ದರ ಸ್ವಲ್ಪ ಹೆಚ್ಚಾಗಿದ್ದು ಅದನ್ನೇ ನೆಪ ಮಾಡಿಕೊಂಡು ದೇಶಿಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಹೆಚ್ಚಿಸುತ್ತಿದೆ
2020ರ ಜೂನ್ ತಿಂಗಳಲ್ಲಿ, ಅಂದರೆ ಜನ ಕೊರೋನಾ ಮತ್ತು ಲಾಕ್ಡೌನ್ ಎಂಬ ಎರಡು ಬಲು ದೊಡ್ಡ ಕಷ್ಟದಲ್ಲಿದ್ದಾಗ ನರೇಂದ್ರ ಮೋದಿ ನೇತೃತ್ವದ ಸರ್ಕಾರ ನಿರಂತರವಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಹೆಚ್ಚಿಸುವ ಪರಿಪಾಠ ಶುರುವಾಗಿತ್ತು.


ಉದಾಹರಣೆಗೆ, ಜೂನ್ ತಿಂಗಳಲ್ಲಿ ಬರೊಬ್ಬರಿ 23 ದಿನ‌ ನಿರಂತರವಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಏರಿಕೆ ಮಾಡಲಾಗಿತ್ತು. ಜುಲೈ ತಿಂಗಳಲ್ಲಿ ದಿನ ಬಿಟ್ಟು ದಿನ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಮಾಡಲಾಗಿತ್ತು. ಆಗಸ್ಟ್, ಸೆಪ್ಟೆಂಬರ್, ಅಕ್ಟೋಬರ್, ನವೆಂಬರ್ ಮತ್ತು ಡಿಸೆಂಬರ್ ತಿಂಗಳುಗಳಲ್ಲೂ ಆಗಾಗ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಹೆಚ್ಚಳ ಮಾಡಲಾಗಿತ್ತು. ಜನವರಿಯಲ್ಲೂ ನಿರಂತರವಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಸಲಾಗಿತ್ತು. ಇದೀಗ ಫೆಬ್ರವರಿಯಲ್ಲೂ ಮತ್ತೆ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ಮಾಡಲಾಗುತ್ತಿದೆ.

top videos
    First published: