ನವದೆಹಲಿ, ಜೂ. 11: ಒಂದೆಡೆ ನಿರಂತರವಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಸುತ್ತಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿರುದ್ಧ ಕಾಂಗ್ರೆಸ್ ಪಕ್ಷ ದೇಶಾದ್ಯಂತ ಇಂದು ಸಾಂಕೇತಿಕ ಪ್ರತಿಭಟನೆಗೆ ಕರೆ ಕೊಟ್ಟಿದೆ. ಇನ್ನೊಂದೆಡೆ ಕಾಂಗ್ರೆಸ್ ಪ್ರತಿಭಟನೆಯನ್ನು ಮತ್ತು ಕೊರೋನಾ ಹಾಗೂ ಲಾಕ್ಡೌನ್ ಗಳಿಂದ ದೇಶದ ಜನ ಅನುಭವಿಸುತ್ತಿರುವ ಕಷ್ಟ ಕಾರ್ಪಣ್ಯಗಳನ್ನು ಲೆಕ್ಕಿಸದೆ ಇಂದು ಮತ್ತೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಏರಿಸಲಾಗಿದೆ.
ನಿರಂತರವಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಸುತ್ತಿರುವ ಕೇಂದ್ರ ಸರ್ಕಾರ ವಿರುದ್ಧ ದೇಶಾದ್ಯಂತ ಪೆಟ್ರೋಲ್ ಬಂಕ್ ಗಳ ಮುಂದೆ ಪ್ರತಿಭಟನೆ ನಡೆಸುವಂತೆ ಕಾಂಗ್ರೆಸ್ ಕರೆ ಕೊಟ್ಟಿದೆ. ಕೊರೋನಾ ಹಿನ್ನೆಲೆಯಲ್ಲಿ ಪಕ್ಷವು ಸಾಂಕೇತಿಕವಾಗಿ ಪ್ರತಿಭಟನೆ ಮಾಡುತ್ತಿದೆ ಎಂದು ತಿಳಿಸಿದೆ. ಆದರೆ ಇನ್ನೊಂದೆಡೆ ಕೇಂದ್ರ ಸರ್ಕಾರವು ಇಂದು ಪ್ರತಿ ಲೀಟರ್ ಪೆಟ್ರೋಲ್ ಮೇಲೆ 29 ಪೈಸೆ ಹಾಗೂ ಪ್ರತಿ ಲೀಟರ್ ಡೀಸೆಲ್ ಮೇಲೆ 29 ಪೈಸೆ ಬೆಲೆ ಹೆಚ್ಚಳ ಮಾಡಿದೆ.
ಇದೇ ಕೇಂದ್ರ ಸರ್ಕಾರ ಕೊರೋನಾ ಮಹಾಮಾರಿಯಿಂದ ಜನ ಸಾಯುತ್ತಿದ್ದಾರೆ, ಲಾಕ್ಡೌನ್ ನಿಂದ ಕೋಟ್ಯಾಂತರ ಜನಕ್ಕೆ ನಿತ್ಯದ ಜೀವನ ನಿರ್ವಹಣೆಯೇ ದುಸ್ಸರವಾಗಿದೆ ಎನ್ನುವ ಹಿನ್ನಲೆಯಲ್ಲಿ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಯೋಜನೆಯ ಅವಧಿಯನ್ನು ವಿಸ್ತರಿಸಿ ಪಡಿತರ ವಿತರಿಸುತ್ತದೆ. ಇನ್ನೊಂದೆಡೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಸಿ ಕಷ್ಟ ಕಾಲದಲ್ಲೂ ಜನರ ಜೇಬಿನಿಂದ ಹಣ ಲೂಟಿ ಮಾಡುತ್ತಿದೆ.
ಇದನ್ನೂ ಓದಿ: Gold Price Today June 11: ಚಿನ್ನ ಖರೀದಿಸಲು ಯೋಚಿಸುತ್ತಿದ್ದೀರಾ?; ಹಾಗಿದ್ದರೆ ಇಲ್ಲಿದೆ ಗುಡ್ ನ್ಯೂಸ್
ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಸಿದರೆ ಅದು ಬೇರೆಲ್ಲಾ ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ಮುನ್ನುಡಿ ಬರೆದಂತೆ. ಇದು ಗೊತ್ತಿಲ್ಲದ ವಿಷಯವೇನಲ್ಲ. ಆದರೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಸಲಾಗುತ್ತಿದೆ. ಮೇ ತಿಂಗಳಲ್ಲಿ 16 ಬಾರಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಸಲಾಗಿತ್ತು. ಈ ತಿಂಗಳು ಕೂಡ ಕೇಂದ್ರ ಸರ್ಕಾರ ಅದೇ ಹಾದಿಯನ್ನು ಹಿಡಿದಿದೆ.
ದೇಶದ ವಿವಿಧ ನಗರಗಳಲ್ಲಿ ಪೆಟ್ರೋಲ್ -ಡೀಸೆಲ್ ಬೆಲೆ ಹೀಗಿದೆ...
ಬೆಂಗಳೂರು- ಪೆಟ್ರೋಲ್ 99.05 ರೂ., ಡೀಸೆಲ್ 91.97 ರೂ.
ಭೂಪಾಲ್- ಪೆಟ್ರೋಲ್ 104.01 ರೂ., ಡೀಸೆಲ್ 95.35 ರೂ.
ಜೈಪುರ - ಪೆಟ್ರೋಲ್ 102.44 ರೂ., ಡೀಸೆಲ್ 95.67 ರೂ.
ಮುಂಬೈ- ಪೆಟ್ರೋಲ್ 102.04 ರೂ., ಡೀಸೆಲ್ 94.15 ರೂ.
ಪಾಟ್ನಾ- ಪೆಟ್ರೋಲ್ 97.95 ರೂ., ಡೀಸೆಲ್ 92.05 ರೂ.
ಚೆನ್ನೈ- ಪೆಟ್ರೋಲ್ 97.19 ರೂ., ಡೀಸೆಲ್ 91.42 ರೂ.
ಕೋಲ್ಕತ್ತಾ- ಪೆಟ್ರೋಲ್ 95.80 ರೂ., ಡೀಸೆಲ್ 89.60 ರೂ.
ದೆಹಲಿ- ಪೆಟ್ರೋಲ್ 95.85 ರೂ., ಡೀಸೆಲ್ 86.75 ರೂ.
ಲಕ್ನೋ- ಪೆಟ್ರೋಲ್ 93.09 ರೂ., ಡೀಸೆಲ್ 87.15 ರೂ.
ರಾಂಚಿ- ಪೆಟ್ರೋಲ್ 92.08 ರೂ., ಡೀಸೆಲ್ 91.58 ರೂ.
ಈಗಾಗಲೇ ಕರ್ನಾಟಕ, ರಾಜಸ್ಥಾನ, ಮಹಾರಾಷ್ಟ್ರ ಸೇರಿ ಭಾರತದ 7 ರಾಜ್ಯಗಳಲ್ಲಿ 1 ಲೀಟರ್ ಪೆಟ್ರೋಲ್ ಬೆಲೆ 100 ರೂ. ಗಡಿ ದಾಟಿದೆ. ಕರ್ನಾಟಕದ ಉತ್ತರ ಕನ್ನಡದ ಶಿರಸಿ, ಶಿವಮೊಗ್ಗ, ಬಳ್ಳಾರಿ, ಚಿಕ್ಕಮಗಳೂರಿನಲ್ಲಿ ಪೆಟ್ರೋಲ್ ಬೆಲೆ 100 ರೂ. ದಾಟಿದೆ. ಬೆಂಗಳೂರಿನಲ್ಲೂ ಪೆಟ್ರೋಲ್ ಬೆಲೆ 99 ರೂ. ಗಡಿಯಲ್ಲಿದ್ದು, ಮುಂದಿನ ವಾರದೊಳಗೆ ಶತಕ ಬಾರಿಸುವ ಸಾಧ್ಯತೆಯಿದೆ. ಕರ್ನಾಟಕದ ಉಳಿದ ಜಿಲ್ಲೆಗಳಲ್ಲೂ ಪೆಟ್ರೋಲ್ ಬೆಲೆ 100 ರೂ.ನತ್ತ ದಾಪುಗಾಲಿಡುತ್ತಿದೆ.
ಇದನ್ನೂ ಓದಿ: Karnataka Weather Today: ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಇಂದಿನಿಂದ 1 ವಾರ ಭಾರೀ ಮಳೆ
ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಗಗನಕ್ಕೇರಿದೆ. ಕಳೆದ 2 ವರ್ಷಗಳಲ್ಲಿ ಪೆಟ್ರೋಲ್ ದರ ಇದುವರೆಗಿನ ಎಲ್ಲ ದಾಖಲೆಗಳನ್ನೂ ಮುರಿದಿದೆ. ಇಂದು ಕೂಡ ಪೆಟ್ರೋಲ್ ಬೆಲೆ ಮತ್ತೆ ಹೆಚ್ಚಳವಾಗಿದೆ. ಭಾರತದ ಪ್ರಮುಖ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಪ್ರತಿದಿನ ಏರಿಳಿತಗಳು ಉಂಟಾಗುತ್ತಲೇ ಇರುತ್ತವೆ. ಕಳೆದ 1 ವರ್ಷದಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಭಾರೀ ಹೆಚ್ಚಳವಾಗುತ್ತಿದೆ. ಕಳೆದೊಂದು ವಾರದಿಂದ ಮಹಾರಾಷ್ಟ್ರದ ಮುಂಬೈನಲ್ಲಿ 1 ಲೀಟರ್ ಪೆಟ್ರೋಲ್ ಬೆಲೆ 100 ರೂ. ದಾಟಿದೆ. ರಾಜಸ್ಥಾನದ ಜೈಪುರ, ಮಧ್ಯಪ್ರದೇಶ, ತೆಲಂಗಾಣ, ಕರ್ನಾಟಕ, ಆಂಧ್ರಪ್ರದೇಶದಲ್ಲೂ ಪೆಟ್ರೋಲ್ ದರ ಶತಕ ಬಾರಿಸಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ