HOME » NEWS » National-international » PETROL PRICE TODAY FUEL PRICE HITS HISTRORIC HIGH AFTER NEW HIKE ON JUNE 22 PETROL RATE IN BENGALURU DIESEL PRICE SCT

Petrol Price Today: ಭಾರತದಲ್ಲಿ ಹೊಸ ದಾಖಲೆ ಬರೆದ ಪೆಟ್ರೋಲ್- ಡೀಸೆಲ್ ಬೆಲೆ; ವಾಹನ ರಸ್ತೆಗಿಳಿಸೋದೇ ಕಷ್ಟ ಸ್ವಾಮಿ!

Petrol and Diesel Price on June 22: ಇಂದು ಮತ್ತೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾಗುವ ಮೂಲಕ ಹೊಸ ದಾಖಲೆ ಬರೆದಿದೆ.

news18-kannada
Updated:June 22, 2021, 10:56 AM IST
Petrol Price Today: ಭಾರತದಲ್ಲಿ ಹೊಸ ದಾಖಲೆ ಬರೆದ ಪೆಟ್ರೋಲ್- ಡೀಸೆಲ್ ಬೆಲೆ; ವಾಹನ ರಸ್ತೆಗಿಳಿಸೋದೇ ಕಷ್ಟ ಸ್ವಾಮಿ!
ಸಾಂದರ್ಭಿಕ ಚಿತ್ರ
  • Share this:
Fuel Price Today: ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯ ಏರಿಕೆಯಿಂದ ಈಗಾಗಲೇ ವಾಹನ ಸವಾರರು ಕಂಗಾಲಾಗಿದ್ದಾರೆ. ವಾಹನವನ್ನು ರಸ್ತೆಗೆ ಇಳಿಸಲು ಯೋಚಿಸುವಂತಹ ಪರಿಸ್ಥಿತಿ ಎದುರಾಗಿದೆ. ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಈಗಾಗಲೇ ಪೆಟ್ರೋಲ್ ಬೆಲೆ 100 ರೂ. ದಾಟಿದೆ. ಕರ್ನಾಟಕ ಮಾತ್ರವಲ್ಲದೆ ರಾಜಸ್ಥಾನ, ಮಹಾರಾಷ್ಟ್ರ, ಹೈದರಾಬಾದ್​ನಲ್ಲಿ ಪೆಟ್ರೋಲ್ ಬೆಲೆ 1 ಲೀಟರ್​ಗೆ 101 ರೂ. ದಾಟಿದೆ. ಈ ಮೂಲಕ ಭಾರತದ ಇತಿಹಾಸದಲ್ಲೇ ಪೆಟ್ರೋಲ್ ಬೆಲೆ ದಾಖಲೆ ಬರೆದಿದೆ. ಇಷ್ಟಾದರೂ ಇನ್ನೂ ಪೆಟ್ರೋಲ್ ಬೆಲೆಯೇರಿಕೆ ಕಡಿಮೆಯಾಗುವ ಲಕ್ಷಣಗಳೇನೂ ಕಾಣುತ್ತಿಲ್ಲ. ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಪೆಟ್ರೋಲ್, ಡೀಸೆಲ್ ಬೆಲೆಯೆಷ್ಟು? ಎಂಬ ಬಗ್ಗೆ ಇಲ್ಲಿದೆ ಮಾಹಿತಿ...

ಇಂದು ಮತ್ತೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾಗುವ ಮೂಲಕ ಹೊಸ ದಾಖಲೆ ಬರೆದಿದೆ. ಕರ್ನಾಟಕದ ಬೆಂಗಳೂರು, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಬಾಗಲಕೋಟೆ, ಬೆಳಗಾವಿ, ಬೀದರ್, ಚಾಮರಾಜನಗರ, ಹಾವೇರಿ, ಬೆಂಗಳೂರು ಗ್ರಾಮಾಂತರ, ಧಾರವಾಡ, ಗುಲ್ಬರ್ಗ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಗದಗ, ಹಾಸನ, ಹಾವೇರಿ, ಕೊಡಗು, ರಾಯಚೂರು, ರಾಮನಗರ, ದಾವಣಗೆರೆ, ತುಮಕೂರು, ಯಾದಗಿರಿ, ಬಳ್ಳಾರಿ, ಚಿಕ್ಕಮಗಳೂರಿನಲ್ಲಿ ಪೆಟ್ರೋಲ್ ಬೆಲೆ 100 ರೂ. ದಾಟಿದೆ. ಉಳಿದ ಜಿಲ್ಲೆಗಳಲ್ಲೂ ಸದ್ಯದಲ್ಲೇ ಪೆಟ್ರೋಲ್ ಬೆಲೆ ಶತಕ ಬಾರಿಸಲಿದೆ.

ರಾಜಸ್ಥಾನದ ಶ್ರೀಗಂಗಾನಗರದಲ್ಲಿ ಪೆಟ್ರೋಲ್ ಬೆಲೆ 1 ಲೀಟರ್​ಗೆ 108.43 ರೂ. ಆಗುವ ಮೂಲಕ ಇಡೀ ದೇಶದಲ್ಲೇ ದುಬಾರಿ ನಗರ ಎನಿಸಿಕೊಂಡಿದೆ. ಇಂದು ನವದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 97.50 ರೂ. ಇದೆ. ಕೊಲ್ಕತ್ತಾದಲ್ಲಿ 97.38 ರೂ., ಮುಂಬೈನಲ್ಲಿ 103.63 ರೂ., ಚೆನ್ನೈನಲ್ಲಿ 98.65 ರೂ., ನೋಯ್ಡಾದಲ್ಲಿ 94.92 ರೂ., ಬೆಂಗಳೂರಿನಲ್ಲಿ 100.76 ರೂ., ಭುವನೇಶ್ವರದಲ್ಲಿ 98.27 ರೂ., ಚಂಡೀಗಢದಲ್ಲಿ 93.77 ರೂ., ಹೈದರಾಬಾದ್​ನಲ್ಲಿ 101.33 ರೂ., ಜೈಪುರದಲ್ಲಿ 104.14 ರೂ., ಲಕ್ನೋದಲ್ಲಿ 94.70 ರೂ., ಪಾಟ್ನಾದಲ್ಲಿ 99.86 ರೂ., ತಿರುವನಂತಪುರದಲ್ಲಿ 99.62 ರೂ. ಇದೆ.

ಇದನ್ನೂ ಓದಿ: Gold Price Today: ಚಿನ್ನ ಖರೀದಿಸುವವರಿಗೆ ಶುಭ ಸುದ್ದಿ; ಬೆಳ್ಳಿ ಬೆಲೆ ಒಂದೇ ದಿನದಲ್ಲಿ 200 ರೂ. ಏರಿಕೆ

ಭಾರತದ ಕೆಲವು ನಗರಗಳಲ್ಲಿ ಡೀಸೆಲ್ ಬೆಲೆ ಭಾರೀ ಏರಿಕೆಯಾಗಿದೆ. ರಾಜಸ್ಥಾನದಲ್ಲಿ ಮೊದಲ ಬಾರಿಗೆ ಡೀಸೆಲ್ ಬೆಲೆ ಶತಕ ಬಾರಿಸಿದೆ. ಬೆಂಗಳೂರು, ಮುಂಬೈ, ಹೈದರಾಬಾದ್, ಜೈಪುರ, ಭುವನೇಶ್ವರ, ಚೆನ್ನೈ ಸೇರಿ ವಿವಿಧ ನಗರಗಳಲ್ಲಿ ಇಂದಿನ ಡೀಸೆಲ್ ಬೆಲೆ ಹೀಗಿದೆ. ರಾಜಸ್ಥಾನದ ಶ್ರೀಗಂಗಾನಗರದಲ್ಲಿ ಇಂದು ಡೀಸೆಲ್ ಬೆಲೆ 101.40 ರೂ. ಆಗಿದೆ. ನವದೆಹಲಿಯಲ್ಲಿ ಇಂದು 1 ಲೀಟರ್ ಡೀಸೆಲ್​ಗೆ 88.23 ರೂ. ಇದೆ. ಚೆನ್ನೈನಲ್ಲಿ 92.83 ರೂ, ಮುಂಬೈನಲ್ಲಿ 95.72 ರೂ, ಬೆಂಗಳೂರಿನಲ್ಲಿ 93.54 ರೂ, ಹೈದರಾಬಾದ್​ನಲ್ಲಿ 96.17 ರೂ. ಇದೆ.

ಭಾರತದ ಪ್ರಮುಖ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಪ್ರತಿದಿನ ಏರಿಳಿತಗಳು ಉಂಟಾಗುತ್ತಲೇ ಇರುತ್ತವೆ. ಕಳೆದ 1 ವರ್ಷದಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಭಾರೀ ಹೆಚ್ಚಳವಾಗುತ್ತಿದೆ. ಮಹಾರಾಷ್ಟ್ರದ ಮುಂಬೈ, ರಾಜಸ್ಥಾನದ ಜೈಪುರ, ಮಧ್ಯಪ್ರದೇಶ, ತೆಲಂಗಾಣ, ಕರ್ನಾಟಕ, ಆಂಧ್ರಪ್ರದೇಶದಲ್ಲೂ ಪೆಟ್ರೋಲ್ ದರ ಶತಕ ಬಾರಿಸಿದೆ. ದೇಶದಲ್ಲಿ ಪೆಟ್ರೋಲ್ ಬೆಲೆ ಶತಕ ಬಾರಿಸಿದ ರಾಜ್ಯಗಳ ಪೈಕಿ ಕರ್ನಾಟಕ 7ನೇ ರಾಜ್ಯವಾಗಿದೆ.

ಇದನ್ನೂ ಓದಿ: Karnataka Unlock 2.0: ಶಿವಮೊಗ್ಗ, ಉಡುಪಿ ಸೇರಿ 6 ಜಿಲ್ಲೆಗಳು ಇಂದಿನಿಂದ ಅನ್​ಲಾಕ್; ಬಾರ್, ಅಂಗಡಿ, ರೆಸ್ಟೋರೆಂಟ್​ಗಳು ಓಪನ್ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕ್ರೂಡ್ ಆಯಿಲ್ ದರ ಹೆಚ್ಚಳವಾದಾಗ ದೇಶಿಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಹೆಚ್ಚಿಸುವುದು, ಹಾಗೆಯೇ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕ್ರೂಡ್ ಆಯಿಲ್ ದರ ಕಡಿಮೆಯಾದಾಗ ದೇಶಿಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಇಳಿಸುವುದು ಸಾಮಾನ್ಯವಾದ ಸಂಗತಿ.

ಕೊರೋನಾ ಮಹಾಮಾರಿಯಿಂದ ಜನ ಸಾಯುತ್ತಿದ್ದಾರೆ. ಲಾಕ್ಡೌನ್ನಿಂದ ಕೋಟ್ಯಾಂತರ ಜನಕ್ಕೆ ನಿತ್ಯದ ಜೀವನ ನಿರ್ವಹಣೆಯೇ ದುಸ್ತರವಾಗಿದೆ. ದೇಶದ ಆರ್ಥಿಕ ಚಟುವಟಿಕೆಗೆ ಪಾರ್ಶ್ವವಾಯು ಬಡಿದಿದೆ. ಆದರೂ ಪೆಟ್ರೋಲ್ ಬೆಲೆ ಮಾತ್ರ ಕಡಿಮೆಯಾಗಿಲ್ಲ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾದರೆ ಸಹಜವಾಗಿ ನಿತ್ಯ ಬಳಕೆಯ ಬೇರೆಲ್ಲಾ ವಸ್ತುಗಳ ಬೆಲೆ ಹೆಚ್ಚಳವಾಗುತ್ತದೆ. ಇದರಿಂದ ಜನಸಾಮಾನ್ಯರಿಗೆ ಮತ್ತಷ್ಟು ಹೊರೆಯಾದಂತಾಗಿದೆ.
Youtube Video

ಭಾರತದಲ್ಲಿ ಕೊರೋನಾ ವೈರಸ್ ಅಬ್ಬರದಿಂದ ಕಳೆದೊಂದು ವರ್ಷದಿಂದ ಜನಜೀವನ ಅಸ್ತವ್ಯಸ್ತವಾಗಿದೆ. ಇದರಿಂದ ಭಾರತದ ಆರ್ಥಿಕತೆಯ ಮೇಲೂ ಪರಿಣಾಮ ಬೀರಿದೆ. ಆದಾಯವನ್ನು ಸರಿದೂಗಿಸಲು ಪೆಟ್ರೋಲ್- ಡೀಸೆಲ್ ಬೆಲೆಯನ್ನು ಹೆಚ್ಚಿಸಲಾಗುತ್ತಿದೆ. ಹಾಗೇ, ಇಂಧನದ ಆಮದಿನ ಪ್ರಮಾಣವೂ ಇಳಿಕೆಯಾಗಿದೆ. ಪೆಟ್ರೋಲ್- ಡೀಸೆಲ್ ಬೆಲೆಯ ಹೆಚ್ಚಳ ಎಲ್ಲದರ ಮೇಲೂ ಪರಿಣಾಮ ಬೀರಿದೆ. ಈಗಾಗಲೇ ಕಾರು, ಬೈಕ್ ಸೇರಿದಂತೆ ಬಹುತೇಕ ಎಲ್ಲ ವಾಹನಗಳ ಬೆಲೆಯೂ ಹೆಚ್ಚಳವಾಗಿದೆ.
Published by: Sushma Chakre
First published: June 22, 2021, 10:53 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories