Fuel Price Today: ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಿಂದ ಜನರು ತಮ್ಮ ವಾಹನಗಳನ್ನು ರಸ್ತೆಗಿಳಿಸಲು ಯೋಚಿಸುವ ಸ್ಥಿತಿ ಬಂದಿದೆ. ಸದ್ಯಕ್ಕಂತೂ ಪೆಟ್ರೋಲ್, ಡೀಸೆಲ್ ಬೆಲೆ ಕಡಿಮೆಯಾಗುವ ಯಾವುದೇ ಲಕ್ಷಣಗಳೂ ಕಾಣುತ್ತಿಲ್ಲ. ಜೂನ್ ತಿಂಗಳೊಂದರಲ್ಲೇ ಪೆಟ್ರೋಲ್ ಬೆಲೆ ಬರೋಬ್ಬರಿ 15 ಬಾರಿ ಏರಿಕೆಯಾಗಿದೆ. ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಈಗಾಗಲೇ ಪೆಟ್ರೋಲ್ ಬೆಲೆ 100 ರೂ. ದಾಟಿದೆ. ಕರ್ನಾಟಕ ಮಾತ್ರವಲ್ಲದೆ ರಾಜಸ್ಥಾನ, ಹೈದರಾಬಾದ್ನಲ್ಲಿ 1 ಲೀಟರ್ ಪೆಟ್ರೋಲ್ ಬೆಲೆ 102 ರೂ. ದಾಟಿದೆ. ಇದೇ ಮೊದಲ ಬಾರಿಗೆ ಮಹಾರಾಷ್ಟ್ರದ ಮುಂಬೈ, ಜೈಪುರದಲ್ಲಿ 1 ಲೀಟರ್ ಪೆಟ್ರೋಲ್ ಬೆಲೆ 105 ರೂ. ಆಗುವ ಮೂಲಕ ಹೊಸ ದಾಖಲೆ ಬರೆದಿದೆ. ಬೆಂಗಳೂರಿನಲ್ಲೂ 1 ಲೀಟರ್ ಪೆಟ್ರೋಲ್ 102 ರೂ. ಆಗಿದೆ. ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಪೆಟ್ರೋಲ್, ಡೀಸೆಲ್ ಬೆಲೆಯೆಷ್ಟು? ಇಲ್ಲಿದೆ ಮಾಹಿತಿ...
ಕರ್ನಾಟಕ, ಮಹಾರಾಷ್ಟ್ರ, ಮಧ್ಯಪ್ರದೇಶ, ತೆಲಂಗಾಣ, ರಾಜಸ್ಥಾನ, ಒರಿಸ್ಸಾ, ಕೇರಳ, ಆಂಧ್ರಪ್ರದೇಶ, ಲಡಾಖ್, ಬಿಹಾರ, ಜಮ್ಮು ಕಾಶ್ಮೀರದಲ್ಲಿ 1 ಲೀಟರ್ ಪೆಟ್ರೋಲ್ ಬೆಲೆ 100 ರೂ. ದಾಟಿದೆ. ಕರ್ನಾಟಕದ ಬೆಂಗಳೂರು, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಪೆಟ್ರೋಲ್ ಬೆಲೆ 100 ರೂ. ದಾಟಿದೆ. ಇಂದು ಕೂಡ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಏರಿಕೆಯಾಗಿಲ್ಲ.
ಇಂದು ನವದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 98.81 ರೂ. ಇದೆ. ಕೊಲ್ಕತ್ತಾದಲ್ಲಿ 98.64 ರೂ., ಮುಂಬೈನಲ್ಲಿ 105 ರೂ., ಚೆನ್ನೈನಲ್ಲಿ 99.82 ರೂ., ನೋಯ್ಡಾದಲ್ಲಿ 96.05 ರೂ., ಬೆಂಗಳೂರಿನಲ್ಲಿ 102.11 ರೂ., ಭುವನೇಶ್ವರದಲ್ಲಿ 99.96 ರೂ., ಹೈದರಾಬಾದ್ನಲ್ಲಿ 102.69 ರೂ., ಜೈಪುರದಲ್ಲಿ 105.74 ರೂ., ಲಕ್ನೋದಲ್ಲಿ 95.84 ರೂ., ಪಾಟ್ನಾದಲ್ಲಿ 100.47 ರೂ., ತಿರುವನಂತಪುರದಲ್ಲಿ 101.04 ರೂ. ಚಂಡೀಗಢದಲ್ಲಿ 94.69 ರೂ. ಆಗಿದೆ.
ಭಾರತದ ಕೆಲವು ನಗರಗಳಲ್ಲಿ ಡೀಸೆಲ್ ಬೆಲೆ ಮತ್ತೆ ಏರಿಕೆಯಾಗಿದೆ. ರಾಜಸ್ಥಾನದಲ್ಲಿ ಈಗಾಗಲೇ ಡೀಸೆಲ್ ಬೆಲೆ ಶತಕ ಬಾರಿಸಿದೆ. ಬೆಂಗಳೂರು, ಮುಂಬೈ, ಹೈದರಾಬಾದ್, ಜೈಪುರ, ಭುವನೇಶ್ವರ, ಚೆನ್ನೈ ಸೇರಿ ವಿವಿಧ ನಗರಗಳಲ್ಲಿ ಇಂದಿನ ಡೀಸೆಲ್ ಬೆಲೆ ಹೀಗಿದೆ. ನವದೆಹಲಿಯಲ್ಲಿ ಇಂದು 1 ಲೀಟರ್ ಡೀಸೆಲ್ ಬೆಲೆ 89.18 ರೂ. ಇದೆ. ಚೆನ್ನೈನಲ್ಲಿ 93.74 ರೂ, ಮುಂಬೈನಲ್ಲಿ 96.72 ರೂ, ಬೆಂಗಳೂರಿನಲ್ಲಿ 94.65 ರೂ, ಹೈದರಾಬಾದ್ನಲ್ಲಿ 97.20 ರೂ. ಇದೆ.
ಇದನ್ನೂ ಓದಿ: Gold Price Today: ಚಿನ್ನ ಖರೀದಿಸಲು ಯೋಚಿಸುತ್ತಿದ್ದೀರಾ?; ಇಂದಿನ ಬೆಲೆಯ ಮಾಹಿತಿ ಇಲ್ಲಿದೆ
ಭಾರತದ ಪ್ರಮುಖ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಪ್ರತಿದಿನ ಏರಿಳಿತಗಳು ಉಂಟಾಗುತ್ತಲೇ ಇರುತ್ತವೆ. ಕಳೆದ 1 ವರ್ಷದಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಭಾರೀ ಹೆಚ್ಚಳವಾಗುತ್ತಿದೆ. ಮಹಾರಾಷ್ಟ್ರದ ಮುಂಬೈ, ರಾಜಸ್ಥಾನದ ಜೈಪುರ, ಮಧ್ಯಪ್ರದೇಶ, ತೆಲಂಗಾಣ, ಕರ್ನಾಟಕ, ಆಂಧ್ರಪ್ರದೇಶದಲ್ಲೂ ಪೆಟ್ರೋಲ್ ದರ ಶತಕ ಬಾರಿಸಿದೆ. ಈ ಸಂಖ್ಯೆ ಹೆಚ್ಚುತ್ತಲೇ ಇದೆ.
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕ್ರೂಡ್ ಆಯಿಲ್ ದರ ಹೆಚ್ಚಳವಾದಾಗ ದೇಶಿಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಹೆಚ್ಚಿಸುವುದು, ಹಾಗೆಯೇ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕ್ರೂಡ್ ಆಯಿಲ್ ದರ ಕಡಿಮೆಯಾದಾಗ ದೇಶಿಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಇಳಿಸುವುದು ಸಾಮಾನ್ಯವಾದ ಸಂಗತಿ.
ಕೊರೋನಾ ಮಹಾಮಾರಿಯಿಂದ ಜನ ಸಾಯುತ್ತಿದ್ದಾರೆ. ಲಾಕ್ಡೌನ್ನಿಂದ ಕೋಟ್ಯಾಂತರ ಜನಕ್ಕೆ ನಿತ್ಯದ ಜೀವನ ನಿರ್ವಹಣೆಯೇ ದುಸ್ತರವಾಗಿದೆ. ದೇಶದ ಆರ್ಥಿಕ ಚಟುವಟಿಕೆಗೆ ಪಾರ್ಶ್ವವಾಯು ಬಡಿದಿದೆ. ಆದರೂ ಪೆಟ್ರೋಲ್ ಬೆಲೆ ಮಾತ್ರ ಕಡಿಮೆಯಾಗಿಲ್ಲ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾದರೆ ಸಹಜವಾಗಿ ನಿತ್ಯ ಬಳಕೆಯ ಬೇರೆಲ್ಲಾ ವಸ್ತುಗಳ ಬೆಲೆ ಹೆಚ್ಚಳವಾಗುತ್ತದೆ. ಇದರಿಂದ ಜನಸಾಮಾನ್ಯರಿಗೆ ಮತ್ತಷ್ಟು ಹೊರೆಯಾದಂತಾಗಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ