Petrol Rate Today: ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಪ್ರತಿದಿನ ಏರಿಳಿತಗಳು ಉಂಟಾಗುತ್ತಲೇ ಇರುತ್ತವೆ. ಆದರೆ, ಕಳೆದ ಒಂದು ವಾರದಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಹೆಚ್ಚಿನ ಬದಲಾವಣೆಯಾಗಿಲ್ಲ. ಕೆಲವೇ ಕೆಲವು ನಗರಗಳಲ್ಲಿ ಮಾತ್ರ ಕೊಂಚ ಪ್ರಮಾಣದಲ್ಲಿ ಇಂಧನದ ಬೆಲೆ ಹೆಚ್ಚಳವಾಗಿದೆ. ಬೆಂಗಳೂರು, ಚೆನ್ನೈ, ದೆಹಲಿ, ಕೊಲ್ಕತ್ತಾ, ಮುಂಬೈ ಸೇರಿದಂತೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯೆಷ್ಟು? ಎಂಬ ಬಗ್ಗೆ ಇಲ್ಲಿದೆ ಮಾಹಿತಿ.
ಇಂದು ನವದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 90.56 ರೂ. ಇದೆ. ಮುಂಬೈನಲ್ಲಿ 96.98 ರೂ, ಜೈಪುರದಲ್ಲಿ 97.01 ರೂ, ಬೆಂಗಳೂರಿನಲ್ಲಿ 93.59 ರೂ, ಹೈದರಾಬಾದ್ನಲ್ಲಿ 94.16 ರೂ, ತಿರುವನಂತಪುರದಲ್ಲಿ 92.44 ರೂ, ಚೆನ್ನೈನಲ್ಲಿ 92.58 ರೂ, ಕೊಲ್ಕತ್ತಾದಲ್ಲಿ 90.77 ರೂ. ಇದೆ.
ಭಾರತದ ಕೆಲವು ನಗರಗಳಲ್ಲಿ ಡೀಸೆಲ್ ಬೆಲೆ ಕೊಂಚ ಕಡಿಮೆಯಾಗಿದೆ. ಬೆಂಗಳೂರು, ಮುಂಬೈ, ಹೈದರಾಬಾದ್, ಭುವನೇಶ್ವರ, ತಿರುವನಂತಪುರ, ಪಾಟ್ನಾದಲ್ಲಿ 1 ಲೀಟರ್ ಡೀಸೆಲ್ ಬೆಲೆ 88 ರೂ. ಆಗಿದೆ. ವಿವಿಧ ನಗರಗಳಲ್ಲಿ ಇಂದಿನ ಡೀಸೆಲ್ ಬೆಲೆ ಹೀಗಿದೆ. ನವದೆಹಲಿಯಲ್ಲಿ ಇಂದು 1 ಲೀಟರ್ ಡೀಸೆಲ್ಗೆ 80.87 ರೂ. ಇದೆ. ಚೆನ್ನೈನಲ್ಲಿ 85.88 ರೂ, ಮುಂಬೈನಲ್ಲಿ 87.96 ರೂ, ಬೆಂಗಳೂರಿನಲ್ಲಿ 85.75 ರೂ, ಹೈದರಾಬಾದ್ನಲ್ಲಿ 88.20 ರೂ. ಇದೆ.
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕ್ರೂಡ್ ಆಯಿಲ್ ದರ ಹೆಚ್ಚಳವಾದಾಗ ದೇಶಿಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಹೆಚ್ಚಿಸುವುದು, ಹಾಗೆಯೇ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕ್ರೂಡ್ ಆಯಿಲ್ ದರ ಕಡಿಮೆಯಾದಾಗ ದೇಶಿಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಇಳಿಸುವುದು ಸಾಮಾನ್ಯವಾದ ಸಂಗತಿ.
ಆದರೆ, ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕ್ರೂಡ್ ಆಯಿಲ್ ದರ ಗಣನೀಯವಾಗಿ ಏರಿಕೆ ಆಗದಿದ್ದರೂ ದೇಶೀಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ನಿರಂತರವಾಗಿ ಹೆಚ್ಚಳವಾಗುತ್ತಿದೆ. ನಿನ್ನೆಗಿಂತ ಇಂದು ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಮತ್ತೆ ಕೊಂಚ ಏರಿಕೆ ಕಂಡುಬಂದಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ