HOME » NEWS » National-international » PETROL PRICE TODAY PETROL RATE AND DIESEL PRICES TOUCH NEW HIGH ON JUNE 14 CHECK LATEST FUEL PRICE SCT

Petrol Price Today: ಹೊಸ ದಾಖಲೆ ಬರೆದ ಪೆಟ್ರೋಲ್- ಡೀಸೆಲ್ ಬೆಲೆ; ಪ್ರಮುಖ ನಗರಗಳಲ್ಲಿ ಇಂದಿನ ದರವೆಷ್ಟು?

Petrol and Diesel Price Today: ಇಂದು ಪೆಟ್ರೋಲ್ ಬೆಲೆ ಮತ್ತೆ 31 ಪೈಸೆ ಏರಿಕೆಯಾಗಿದೆ. ಕರ್ನಾಟಕದ ಉತ್ತರ ಕನ್ನಡದ ಶಿರಸಿ, ಬೀದರ್, ಕೊಪ್ಪಳ, ದಾವಣಗೆರೆ, ಶಿವಮೊಗ್ಗ, ಬಳ್ಳಾರಿ, ಚಿಕ್ಕಮಗಳೂರಿನಲ್ಲಿ ಪೆಟ್ರೋಲ್ ಬೆಲೆ 100 ರೂ. ದಾಟಿದೆ.

news18-kannada
Updated:June 14, 2021, 9:35 AM IST
Petrol Price Today: ಹೊಸ ದಾಖಲೆ ಬರೆದ ಪೆಟ್ರೋಲ್- ಡೀಸೆಲ್ ಬೆಲೆ; ಪ್ರಮುಖ ನಗರಗಳಲ್ಲಿ ಇಂದಿನ ದರವೆಷ್ಟು?
ಸಾಂದರ್ಭಿಕ ಚಿತ್ರ.
  • Share this:
Fuel Price Today: ಭಾರತದ ಜನರು ಈಗಾಗಲೇ ಕೊರೋನಾದಿಂದ ಕಂಗೆಟ್ಟಿದ್ದಾರೆ. ಇದರ ನಡುವೆ ಕೇಂದ್ರ ಸರ್ಕಾರ ದಿನದಿಂದ ದಿನಕ್ಕೆ ಪೆಟ್ರೋಲ್, ಡೀಸೆಲ್, ಎಲ್​ಪಿಜಿ ದರವನ್ನು ಹೆಚ್ಚಿಸುತ್ತಲೇ ಇದೆ. ಕರ್ನಾಟಕದಲ್ಲಿ ಮೊದಲ ಬಾರಿಗೆ ಪೆಟ್ರೋಲ್ ಬೆಲೆ 100 ರೂ. ಗಡಿ ದಾಟಿದೆ, ಇನ್ನೇನು ರಾಜ್ಯದಲ್ಲಿ ಡೀಸೆಲ್ ಬೆಲೆಯೂ ಶತಕ ಬಾರಿಸುವ ಸಾಧ್ಯತೆಯಿದೆ. ದೇಶದಲ್ಲಿ ಈಗಾಗಲೇ ಡೀಸೆಲ್ ಬೆಲೆ 100 ರೂ. ದಾಟುವ ಮೂಲಕ ಹೊಸ ದಾಖಲೆ ಬರೆದಿದೆ! ಹಾಗಾದರೆ, ದೆಹಲಿ, ಚೆನ್ನೈ, ಬೆಂಗಳೂರು, ಮುಂಬೈ ಸೇರಿ ಯಾವ ನಗರಗಳಲ್ಲಿ ಇಂದು ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಎಷ್ಟಿದೆ? ಎಂಬ ಬಗ್ಗೆ ಇಲ್ಲಿದೆ ಮಾಹಿತಿ...

ಇಂದು ಪೆಟ್ರೋಲ್ ಬೆಲೆ ಮತ್ತೆ 31 ಪೈಸೆ ಏರಿಕೆಯಾಗಿದೆ. ಕರ್ನಾಟಕದ ಉತ್ತರ ಕನ್ನಡದ ಶಿರಸಿ, ಬೀದರ್, ಕೊಪ್ಪಳ, ದಾವಣಗೆರೆ, ಶಿವಮೊಗ್ಗ, ಬಳ್ಳಾರಿ, ಚಿಕ್ಕಮಗಳೂರಿನಲ್ಲಿ ಪೆಟ್ರೋಲ್ ಬೆಲೆ 100 ರೂ. ದಾಟಿದೆ. ಕರ್ನಾಟಕದ ಉಳಿದ ಜಿಲ್ಲೆಗಳಲ್ಲೂ ಪೆಟ್ರೋಲ್ ಬೆಲೆ 100 ರೂ.ನತ್ತ ದಾಪುಗಾಲಿಡುತ್ತಿದೆ. ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಗಗನಕ್ಕೇರಿದೆ. ಕಳೆದ 2 ವರ್ಷಗಳಲ್ಲಿ ಪೆಟ್ರೋಲ್ ದರ ಇದುವರೆಗಿನ ಎಲ್ಲ ದಾಖಲೆಗಳನ್ನೂ ಮುರಿದಿದೆ. ಇಂದು ಕೂಡ ಪೆಟ್ರೋಲ್ ಬೆಲೆ ಮತ್ತೆ ಹೆಚ್ಚಳವಾಗಿದೆ.

ಇಂದು ನವದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 96.41 ರೂ. ಇದೆ. ಕೊಲ್ಕತ್ತಾದಲ್ಲಿ 96.34 ರೂ., ಮುಂಬೈನಲ್ಲಿ 102.58 ರೂ., ಚೆನ್ನೈನಲ್ಲಿ 97.69 ರೂ., ನೋಯ್ಡಾದಲ್ಲಿ 93.71 ರೂ., ಬೆಂಗಳೂರಿನಲ್ಲಿ 99.63 ರೂ., ಭುವನೇಶ್ವರದಲ್ಲಿ 96.87 ರೂ., ಚಂಡೀಗಢದಲ್ಲಿ 92.73 ರೂ., ಹೈದರಾಬಾದ್​​ನಲ್ಲಿ 100.20 ರೂ., ಜೈಪುರದಲ್ಲಿ 102.99 ರೂ., ಲಕ್ನೋದಲ್ಲಿ 93.70 ರೂ., ಪಾಟ್ನಾದಲ್ಲಿ 98.68 ರೂ., ತಿರುವನಂತಪುರದಲ್ಲಿ 98.39 ರೂ. ಇದೆ.

ಇದನ್ನೂ ಓದಿ: Gold Price Today June 14: ಚಿನ್ನದ ಬೆಲೆ ಮತ್ತೆ ಇಳಿಕೆ; ಬೆಳ್ಳಿ ಪ್ರಿಯರಿಗೂ ಗುಡ್ ನ್ಯೂಸ್

ಭಾರತದ ಕೆಲವು ನಗರಗಳಲ್ಲಿ ಡೀಸೆಲ್ ಬೆಲೆ ಭಾರೀ ಏರಿಕೆಯಾಗಿದೆ. ರಾಜಸ್ಥಾನದಲ್ಲಿ ಮೊದಲ ಬಾರಿಗೆ ಡೀಸೆಲ್ ಬೆಲೆ ಶತಕ ಬಾರಿಸಿದೆ. ಬೆಂಗಳೂರು, ಮುಂಬೈ, ಹೈದರಾಬಾದ್, ಜೈಪುರ, ಭುವನೇಶ್ವರ, ಚೆನ್ನೈ ಸೇರಿ ವಿವಿಧ ನಗರಗಳಲ್ಲಿ ಇಂದಿನ ಡೀಸೆಲ್ ಬೆಲೆ ಹೀಗಿದೆ. ರಾಜಸ್ಥಾನದ ಶ್ರೀಗಂಗಾನಗರದಲ್ಲಿ ಇಂದು ಡೀಸೆಲ್ ಬೆಲೆ 100 ರೂ. ದಾಟಿದೆ. ನವದೆಹಲಿಯಲ್ಲಿ ಇಂದು 1 ಲೀಟರ್ ಡೀಸೆಲ್​ಗೆ 87.28 ರೂ. ಇದೆ. ಚೆನ್ನೈನಲ್ಲಿ 91.92 ರೂ, ಮುಂಬೈನಲ್ಲಿ 94.70 ರೂ, ಬೆಂಗಳೂರಿನಲ್ಲಿ 92.52 ರೂ, ಹೈದರಾಬಾದ್​ನಲ್ಲಿ 95.14 ರೂ. ಇದೆ.

ಭಾರತದ ಪ್ರಮುಖ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಪ್ರತಿದಿನ ಏರಿಳಿತಗಳು ಉಂಟಾಗುತ್ತಲೇ ಇರುತ್ತವೆ. ಕಳೆದ 1 ವರ್ಷದಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಭಾರೀ ಹೆಚ್ಚಳವಾಗುತ್ತಿದೆ. ಮಹಾರಾಷ್ಟ್ರದ ಮುಂಬೈ, ರಾಜಸ್ಥಾನದ ಜೈಪುರ, ಮಧ್ಯಪ್ರದೇಶ, ತೆಲಂಗಾಣ, ಕರ್ನಾಟಕ, ಆಂಧ್ರಪ್ರದೇಶದಲ್ಲೂ ಪೆಟ್ರೋಲ್ ದರ ಶತಕ ಬಾರಿಸಿದೆ. ದೇಶದಲ್ಲಿ ಪೆಟ್ರೋಲ್ ಬೆಲೆ ಶತಕ ಬಾರಿಸಿದ ರಾಜ್ಯಗಳ ಪೈಕಿ ಕರ್ನಾಟಕ 7ನೇ ರಾಜ್ಯವಾಗಿದೆ. ರಾಜಸ್ಥಾನ, ಮಧ್ಯಪ್ರದೇಶ, ಮಹಾರಾಷ್ಟ್ರ, ಆಂಧ್ರಪ್ರದೇಶ, ತೆಲಂಗಾಣ ಮತ್ತು ಲಡಾಖ್​ನಲ್ಲಿ ಈಗಾಗಲೇ ಪೆಟ್ರೋಲ್ ಬೆಲೆ 100 ರೂ. ದಾಟಿದೆ.

ಇದನ್ನೂ ಓದಿ: Karnataka Unlock: ಬೆಂಗಳೂರು ಸೇರಿ 19 ಜಿಲ್ಲೆಗಳಲ್ಲಿ ಇಂದಿನಿಂದ ಲಾಕ್​ಡೌನ್ ಸಡಿಲಿಕೆ; ವೀಕೆಂಡ್ ಕರ್ಫ್ಯೂ ಮುಂದುವರಿಕೆಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕ್ರೂಡ್ ಆಯಿಲ್ ದರ ಹೆಚ್ಚಳವಾದಾಗ ದೇಶಿಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಹೆಚ್ಚಿಸುವುದು, ಹಾಗೆಯೇ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕ್ರೂಡ್ ಆಯಿಲ್ ದರ ಕಡಿಮೆಯಾದಾಗ ದೇಶಿಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಇಳಿಸುವುದು ಸಾಮಾನ್ಯವಾದ ಸಂಗತಿ.

ಕೊರೋನಾ ಮಹಾಮಾರಿಯಿಂದ ಜನ ಸಾಯುತ್ತಿದ್ದಾರೆ. ಲಾಕ್​ಡೌನ್​ನಿಂದ ಕೋಟ್ಯಾಂತರ ಜನಕ್ಕೆ ನಿತ್ಯದ ಜೀವನ ನಿರ್ವಹಣೆಯೇ ದುಸ್ತರವಾಗಿದೆ. ದೇಶದ ಆರ್ಥಿಕ ಚಟುವಟಿಕೆಗೆ ಪಾರ್ಶ್ವವಾಯು ಬಡಿದಿದೆ. ಆದರೂ ಪೆಟ್ರೋಲ್ ಬೆಲೆ ಮಾತ್ರ ಕಡಿಮೆಯಾಗಿಲ್ಲ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾದರೆ ಸಹಜವಾಗಿ ನಿತ್ಯ ಬಳಕೆಯ ಬೇರೆಲ್ಲಾ ವಸ್ತುಗಳ ಬೆಲೆ ಹೆಚ್ಚಳವಾಗುತ್ತದೆ. ಇದರಿಂದ ಜನಸಾಮಾನ್ಯರಿಗೆ ಮತ್ತಷ್ಟು ಹೊರೆಯಾದಂತಾಗಿದೆ.
Youtube Video

ಭಾರತದಲ್ಲಿ ಕೊರೋನಾ ವೈರಸ್ ಅಬ್ಬರದಿಂದ ಕಳೆದೊಂದು ವರ್ಷದಿಂದ ಜನಜೀವನ ಅಸ್ತವ್ಯಸ್ತವಾಗಿದೆ. ಇದರಿಂದ ಭಾರತದ ಆರ್ಥಿಕತೆಯ ಮೇಲೂ ಪರಿಣಾಮ ಬೀರಿದೆ. ಆದಾಯವನ್ನು ಸರಿದೂಗಿಸಲು ಪೆಟ್ರೋಲ್- ಡೀಸೆಲ್ ಬೆಲೆಯನ್ನು ಹೆಚ್ಚಿಸಲಾಗುತ್ತಿದೆ. ಹಾಗೇ, ಇಂಧನದ ಆಮದಿನ ಪ್ರಮಾಣವೂ ಇಳಿಕೆಯಾಗಿದೆ. ಪೆಟ್ರೋಲ್- ಡೀಸೆಲ್ ಬೆಲೆಯ ಹೆಚ್ಚಳ ಎಲ್ಲದರ ಮೇಲೂ ಪರಿಣಾಮ ಬೀರಿದೆ. ಈಗಾಗಲೇ ಕಾರು, ಬೈಕ್ ಸೇರಿದಂತೆ ಬಹುತೇಕ ಎಲ್ಲ ವಾಹನಗಳ ಬೆಲೆಯೂ ಹೆಚ್ಚಳವಾಗಿದೆ.
Published by: Sushma Chakre
First published: June 14, 2021, 9:35 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories