ಮುಂಬೈ (ನವೆಂಬರ್ 5): ರಿಲಯನ್ಸ್ ಸಂಸ್ಥೆಯತ್ತ ವಿಶ್ವಾದ್ಯಂತದಿಂದ ಬಂಡವಾಳ ಹರಿದುಬರುವುದು ಮುಂದುವರಿದಿದೆ. ಸಾಲು ಸಾಲು ಕಂಪೆನಿಗಳು ರಿಲಾಯನ್ಸ್ ರೀಟೇಲ್ ಮೇಲೆ ಹೂಡಿಕೆ ಮಾಡುತ್ತಿವೆ. ಈಗ ಸೌದಿ ಅರೇಬಿಯಾದ ಸಾರ್ವಜನಿಕ ಹೂಡಿಕೆ ನಿಧಿ (ಪಿಐಎಫ್) ರಿಲಯನ್ಸ್ ರೀಟೇಲ್ನ ಶೇ. 2.04 ಪಾಲನ್ನು 9,555 ಕೋಟಿ ರೂಪಾಯಿಗೆ ಖರೀದಿ ಮಾಡಿದೆ. ಈ ಮೂಲಕ ರಿಲಯನ್ಸ್ ರೀಟೇಲ್ ಉದ್ಯಮಕ್ಕೆ ಹೊಸ ಬಲ ತುಂಬಿದೆ.
ರಿಲಯನ್ಸ್ ಇಂಡಸ್ಟ್ರೀಸ್ ಸಂಸ್ಥೆಗೆ ಸೇರಿದ ರಿಲಯನ್ಸ್ ರೀಟೇಲ್ ವೆಂಚರ್ಸ್ (RRVL) ಕಂಪನಿಯು ಫ್ಯೂಚರ್ ಗ್ರೂಪ್ನ ಹಲವು ವ್ಯವಹಾರಗಳನ್ನ ಖರೀದಿ ಮಾಡಿತ್ತು. ಕಿಶೋರ್ ಬಿಯಾನಿ ಅವರ ಫ್ಯೂಚರ್ ಗ್ರೂಪ್ನ ರೀಟೇಲ್, ಹೋಲ್ಸೇಲ್, ಲಾಜಿಸ್ಟಿಕ್ಸ್, ವೇರ್ಹೌಸಿಂಗ್ ವ್ಯವಹಾರಗಳನ್ನು ಒಟ್ಟು 24,713 ಕೋಟಿ ರೂಪಾಯಿಗೆ ಕೊಳ್ಳುತ್ತಿರುವುದಾಗಿ ರಿಲಯನ್ಸ್ ರೀಟೇಲ್ ವೆಂಚರ್ಸ್ ಘೋಷಿಸಿತ್ತು. ಫ್ಯೂಚರ್ ಗ್ರೂಪ್ನ ಪ್ರತಿಯೊಂದು ವ್ಯವಹಾರಕ್ಕೂ ಪ್ರತ್ಯೇಕ ಬೆಲೆ ನಿಗದಿ ಮಾಡದೇ ಒಟ್ಟಿಗೆ ಲಂಪ್ಸಮ್ ಆಗಿ ಎಲ್ಲಾ ವ್ಯವಹಾರಗಳನ್ನ ರಿಲಾಯನ್ಸ್ ಖರೀದಿಸಿ ವಹಿಸಿಕೊಂಡಿತ್ತು. ಮೇಲೆ ತಿಳಿಸಿದ ವ್ಯವಹಾರಗಳನ್ನ ಹೊಂದಿರುವ ಫ್ಯೂಚರ್ ಗ್ರೂಪ್ನ ಕಂಪನಿಗಳು ಫ್ಯೂಚರ್ ಎಂಟರ್ಪ್ರೈಸಸ್ ಲಿಮಿಟೆಡ್ ಸಂಸ್ಥೆಯೊಂದಿಗೆ ವಿಲೀನಗೊಳ್ಳಬೇಕಿತ್ತು. ಆದರೆ, ಈ ಓಪ್ಪಂದವನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ.
ವಿಶ್ವದ ಅನೇಕ ಪ್ರಮುಖ ಹೂಡಿಕೆ ಸಂಸ್ಥೆಗಳಿಂದ ಬಂಡವಾಳ ಆಕರ್ಷಿಸುತ್ತಿರುವ ರಿಲಯನ್ಸ್ ರೀಟೇಲ್ನ ವ್ಯವಹಾರ ದಿನೇ ದಿನೇ ಪ್ರಬಲಗೊಳ್ಳುತ್ತಿದೆ. ದೇಶಾದ್ಯಂತ 12 ಸಾವಿರ ಮಳಿಗೆಗಳೊಂದಿಗೆ ರಿಲಯನ್ಸ್ ರೀಟೇಲ್ ವ್ಯವಹಾರ ಹೊಂದಿದೆ.
ಪಿಐಎಫ್ 1971ರಲ್ಲಿ ಸ್ಥಾಪನೆಗೊಂಡಿತ್ತು. ಇದು ಸೌದಿ ಅರೇಬಿಯಾದ ಸವರನ್ ಸಂಪತ್ತು ನಿಧಿಯಾಗಿದೆ. ಇದು ಸರ್ಕಾರದ ಪ್ರತಿನಿಧಿಯಾಗಿ ಬೇರೆ ಬೇರೆ ಕಡೆಗಳಲ್ಲಿ ಹೂಡಿಕೆ ಮಾಡುತ್ತದೆ. ಇದು ದೇಶ ಹಾಗೂ ವಿದೇಶಗಳಲ್ಲಿ ಸಾಕಷ್ಟು ಹೂಡಿಕೆ ಮಾಡಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ