Narendra Modi in US| ವಾಷಿಂಗ್ಟನ್​ಗೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ; ಅನಿವಾಸಿ ಭಾರತೀಯರಿಂದ ಅದ್ದೂರಿ ಸ್ವಾಗತ

ಪ್ರಧಾನಿ ನರೇಂದ್ರ ಮೋದಿ ಸೆಪ್ಟೆಂಬರ್. 25ರಂದು ನ್ಯೂಯಾರ್ಕ್ ನಗರದಲ್ಲಿ ನಡೆಯುವ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಭಾಗಿಯಾಗಿ ಭಾಷಣ ಮಾಡಲಿದ್ದಾರೆ. ಸೆಪ್ಟೆಂಬರ್‌ 26ಕ್ಕೆ ನ್ಯೂಯಾರ್ಕ್ ನಿಂದ ನವದೆಹಲಿಗೆ ವಾಪಸ್ ಆಗಲಿದ್ದಾರೆ.

ಮೋದಿಯನ್ನು ಸ್ವಾಗತಿಸುತ್ತಿರುವ ಅನಿವಾಸಿ ಭಾರತೀಯರು.

ಮೋದಿಯನ್ನು ಸ್ವಾಗತಿಸುತ್ತಿರುವ ಅನಿವಾಸಿ ಭಾರತೀಯರು.

 • Share this:
  ಕ್ವಾಡ್ ನಾಯಕರ ಮೊದಲ ಶೃಂಗಸಭೆಯಲ್ಲಿ ಭಾಗವಹಿಸಲು ಅಧ್ಯಕ್ಷ ಜೋ ಬಿಡೆನ್ (Joe Biden) ಅವರ ಆಹ್ವಾನದ ಮೇರೆಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅಮೆರಿಕಕ್ಕೆ (America) ಮಂಗಳವಾರ ಪ್ರಯಾಣ ಬೆಳೆಸಿದ್ದರು. ಪ್ರಧಾನಿ ಮೋದಿ ವಾಷಿಂಗ್ಟನ್​ನ (Washington) ಆಂಡ್ರ್ಯೂಸ್ ಜಂಟಿ ಏರ್‌ಫೋರ್ಸ್ ಬೇಸ್‌ನಲ್ಲಿ ಇಳಿಯುತ್ತಿದ್ದಂತೆ ಇಂದು ಮುಂಜಾನೆ ಅಲ್ಲಿ ಭಾರೀ ಪ್ರಮಾಣದ ಮಳೆಯಾಗುತ್ತಿದ್ದರೂ ಸಹ ಅದನ್ನು ಲೆಕ್ಕಿಸದ ಅನಿವಾಸಿ ಭಾರತೀಯರು ಭಾರೀ ಸಂಖ್ಯೆಯಲ್ಲಿ ಜಮಾವಣೆಗೊಂಡಿದ್ದಾರೆ. ಮತ್ತು ರಾಷ್ಟ್ರಧ್ವಜವನ್ನು ಹಿಡಿದು ನರೇಂದ್ರ ಮೋದಿ ಅವರನ್ನು ಅಮೆರಿಕಕ್ಕೆ ಸ್ವಾಗತಿಸಿದ್ದಾರೆ ಎಂದು ವರದಿಯಾಗಿದೆ. ಪ್ರಧಾನಿ ಮೋದಿಯನ್ನು ಬಿಡೆನ್ ಆಡಳಿತದ ಹಿರಿಯ ಅಧಿಕಾರಿಗಳು ಮತ್ತು ಅಮೆರಿಕದ ಭಾರತದ ರಾಯಭಾರಿ ತರಂಜಿತ್ ಸಿಂಗ್ ಸಂಧು ಬರಮಾಡಿಕೊಂಡರು.

  ಈ ಬಗ್ಗೆ ಟ್ವೀಟ್ ಮಾಡಿ ತಮ್ಮ ಸಂತೋಷವನ್ನು ಹಂಚಿಕೊಂಡಿರುವ ಪ್ರದಾನಿ ನರೇಂದ್ರ ಮೋದಿ, "ವಾಷಿಂಗ್ಟನ್ ಡಿಸಿಯಲ್ಲಿ ಭಾರತೀಯ ಸಮುದಾಯದ ಹೃತ್ಪೂರ್ವಕ ಸ್ವಾಗತಕ್ಕಾಗಿ ಧನ್ಯವಾದಗಳು. ನಮ್ಮ ವಲಸಿಗರು ನಮ್ಮ ಶಕ್ತಿ. ಭಾರತೀಯ ವಲಸಿಗರು ಹೇಗೆ ವಿಶ್ವದಾದ್ಯಂತ ತಮ್ಮನ್ನು ಗುರುತಿಸಿಕೊಂಡಿದ್ದಾರೆ ಎಂಬುದು ಶ್ಲಾಘನೀಯ "ಎಂದು ಪ್ರಶಂಶಿಸಿದ್ದಾರೆ.

  2014 ರಲ್ಲಿ ಅಧಿಕಾರ ಸ್ವೀಕರಿಸಿದ ನಂತರ ಪ್ರಧಾನಿ ಮೋದಿ ಅಮೆರಿಕಕ್ಕೆ ಪ್ರವಾಸ ಬೆಳೆಸಿರುವುದು ಇದು ಏಳನೇ ಬಾರಿ ಎನ್ನಲಾಗಿದೆ. ಈ ಭೇಟಿಯು "ಅಮೆರಿಕದೊಂದಿಗಿನ ನಮ್ಮ ಕಾರ್ಯತಂತ್ರದ ಪಾಲುದಾರಿಕೆಯನ್ನು ಬಲಪಡಿಸುವ ಮತ್ತು ಜಪಾನ್, ಆಸ್ಟ್ರೇಲಿಯಾದೊಂದಿಗಿನ ಸಂಬಂಧವನ್ನು ಬಲಪಡಿಸುವ ಸಂದರ್ಭ" ಎಂದು ಮೋದಿ ಅಭಿಪ್ರಾಯಪಟ್ಟಿದ್ದಾರೆ.

  ಪ್ರಧಾನಿ ಮೋದಿಯ ಪ್ರವಾಸ ವೇಳಾಪಟ್ಟಿಯಂತೆ ಅವರು ಇಂದು ಅಮೆರಿಕದ ಉನ್ನತ ಸಂಸ್ಥೆಗಳ ಸಿಇಓ (CEO)ಗಳ ಜತೆ ಸಭೆ ನಡೆಸಲಿದ್ದಾರೆ. ಇದೇ ವೇಳೆ ಅವರು ಆ್ಯಪಲ್ ಸಂಸ್ಥೆ ಮುಖ್ಯಸ್ಥ ಟಿಮ್ ಕುಕ್ (CEO of Apple, Tim Cook) ಅವರ ಜೊತೆ ಪ್ರತ್ಯೇಕವಾಗಿ ಚರ್ಚೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.

  ಇದಾದ ಬಳಿಕ‌ ಸೆಪ್ಟೆಂಬರ್ 24ಕ್ಕೆ ಕ್ವಾಡ್ ನಾಯಕರ ಶೃಂಗಸಭೆಯಲ್ಲಿ ಭಾಗಿಯಾಗಲಿ ದ್ದಾರೆ. ಆಗ ಅಮೆರಿಕಾದ ಅಧ್ಯಕ್ಷ ಜೋ ಬಿಡೆನ್ ಅವರನ್ನು ಭೌತಿಕವಾಗಿ ‌ಇದೇ ಮೊದಲ ಬಾರಿಗೆ ಭೇಟಿಯಾಗಲಿದ್ದಾರೆ. ಕ್ವಾಡ್ ದೇಶಗಳಾದ ಆಸ್ಟ್ರೇಲಿಯಾ ಪ್ರಧಾನ ಮಂತ್ರಿ ಸ್ಕಾಟ್ ಮೋರಿಸನ್ (Australian Prime Minister Scott Morrison), ಜಪಾನ್ ಪ್ರಧಾನ ಮಂತ್ರಿ ಯೊಶಿಹಿಡೆ ಸುಗ (Japan Prime Minister Yoshihide Suga) ಮತ್ತು ಇಂಗ್ಲೆಂಡ್ ಪ್ರಧಾನ ಮಂತ್ರಿ ಬೋರಿಸ್ ಜಾನ್ಸನ್ (England Prime Minister Boris Johnson) ಅವರು ಕೂಡ ಕ್ವಾಡ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಸಭೆಯ ಬಳಿಕ‌ ಕ್ವಾಡ್ ದೇಶಗಳ ನಾಯಕರ‌ ಭೋಜನಕೂಟ ಇರಲಿದೆ.

  ಸೆಪ್ಟೆಂಬರ್ 24ರ ಸಂಜೆ‌ ವಾಷಿಂಗ್ಟನ್ ಡಿಸಿಯಿಂದ ಪ್ರಧಾನ ಮಂತ್ರಿ ನರೇಂದ್ರ ಮೋದಿ ನ್ಯೂಯಾರ್ಕ್‌‌ (New York)ಗೆ ಪ್ರಯಾಣ ಬೆಳಸಲಿದ್ದಾರೆ. ಸೆಪ್ಟೆಂಬರ್ 25ರಂದು ನ್ಯೂಯಾರ್ಕ್ ನಗರದಲ್ಲಿ ನಡೆಯುವ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಭಾಗಿಯಾಗಿ ಭಾಷಣ ಮಾಡಲಿದ್ದಾರೆ. ಸೆಪ್ಟೆಂಬರ್‌ 26ಕ್ಕೆ ನ್ಯೂಯಾರ್ಕ್ ನಿಂದ ನವದೆಹಲಿಗೆ ವಾಪಸ್ ಆಗಲಿದ್ದಾರೆ.

  ಕಳೆದ ಕೆಲವು ನರೇಂದ್ರ ಮೋದಿ ಮತ್ತು ಜೋ ಬಿಡೆನ್ ನಿಯಮಿತವಾಗಿ ಸಂಪರ್ಕದ ಲ್ಲಿದ್ದರು.‌ ಕೆಲವು ವರ್ಚ್ಯುಯಲ್ ‌ಮಿಟಿಂಗ್ ಗಳು (Verchual Meeting)ಗಳು ಆಗಿದ್ದವು. ಈಗ ಭೌತಿಕವಾಗಿ ಭೇಟಿ (Physical Meeting) ಆಗುತ್ತಿದ್ದು ಭದ್ರತೆ, ರಕ್ಷಣೆ ಮತ್ತು ವ್ಯಾಪಾರ ವೃದ್ಧಿ ಬಗ್ಗೆ ಉಭಯ ನಾಯಕರು ದ್ವಿಪಕ್ಷೀಯ ಸಭೆ ನಡೆಸಲಿದ್ದಾರೆ. ಅಫ್ಘಾನಿಸ್ತಾನದ ಬಿಕ್ಕಟ್ಟಿನ (Afghanistan Crisis) ಬಗ್ಗೆ ಸಮಾಲೋಚನೆ ನಡೆಸುತ್ತಾರೆ. ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅವರನ್ನು ಭೇಟಿ ಮಾಡಿ ಎರಡು ದೇಶಗಳ ನಡುವಿನ ವ್ಯಾಪಾರ ಮಟ್ಟದ ಸಂವಾದಗಳನ್ನು ನಡೆಸುತ್ತಾರೆ ಎಂದು ಹರ್ಷ ಶೃಂಗ್ಲಾ ತಿಳಿಸಿದ್ದಾರೆ.

  ನರೇಂದ್ರ ಮೋದಿ ನೇತೃತ್ವದಲ್ಲಿ ಅಮೆರಿಕ ಪ್ರವಾಸ ಕೈಗೊಳ್ಳುತ್ತಿರುವ ಭಾರತದ ನಿಯೋಗದಲ್ಲಿ ವಿದೇಶಾಂಗ ಸಚಿವ ಎಸ್. ಜೈಶಂಕರ್ (Foreign Affairs Minister S. Jaishankar), ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ (National Security Adviser Ajith Doel) ಮತ್ತು ವಿದೇಶಾಂಗ ಕಾರ್ಯದರ್ಶಿ ಹರ್ಷ ಶ್ರಿಂಗ್ಲಾ (Foreign Security Harsha Sringla) ಮತ್ತಿತರರು ಇರಲಿದ್ದಾರೆ.

  ಇದನ್ನೂ ಓದಿ: Delhi Child Rape Case| ದೆಹಲಿ ಪೂಜಾರಿಯಿಂದ ದಲಿತ ಬಾಲಕಿ ಅತ್ಯಾಚಾರ ಕೊಲೆ ಪ್ರಕರಣ; ಪೊಲೀಸರಿಂದ ಮತ್ತೊಂದು ಚಾರ್ಜ್​ಶೀಟ್​!

  ಬಾಂಗ್ಲಾದೇಶ ವಿಮೋಚನೆಯ ಸ್ವರ್ಣ ಮಹೋತ್ಸವ ಸಮಾರಂಭದಲ್ಲಿ ಪಾಲ್ಗೊಳ್ಳಲು 2020ರ ಮಾರ್ಚ್​ನಲ್ಲಿ ಢಾಕಾಕ್ಕೆ ಭೇಟಿ ನೀಡಿದ್ದು ಮೋದಿಯವರ ಕೊರೋನಾ ಕಾಲದ ಮೊದಲ ವಿದೇಶ ಪ್ರವಾಸವಾಗಿತ್ತು. 2019ರ ಸೆಪ್ಟೆಂಬರ್​ನಲ್ಲಿ ಹ್ಯೂಸ್ಟನ್ (Huston)ನಲ್ಲಿ ಆಯೋಜಿಸಲಾಗಿದ್ದ ಹೌಡಿ-ಮೋದಿ‌ (Howdy Modi) ಕಾರ್ಯಕ್ರಮದಲ್ಲಿ ಭಾಗವಹಿಸಲು ಅವರು ಅಮೆರಿಕಕ್ಕೆ ಭೇಟಿಕೊಟ್ಟಿದ್ದರು. ಅದು ಮೋದಿಯವರ ಕೊನೆಯ ಭೇಟಿಯಾಗಿತ್ತು.
  Published by:MAshok Kumar
  First published: