PM Kisan Scheme: ಡಿಸೆಂಬರ್ 15 ರಂದು ರೈತರ ಖಾತೆಗೆ ಬರಲಿದೆ ಕಿಸಾನ್ ಸಮ್ಮಾನ್ ನಿಧಿಯ ಹಂತನೇ ಕಂತು

Pm Kisan 10th Installment : ಇಲ್ಲಿಯವರೆಗೆ, ಸರ್ಕಾರವು ದೇಶದ 11.37 ಕೋಟಿಗೂ ಹೆಚ್ಚು ರೈತರ ಬ್ಯಾಂಕ್ ಖಾತೆಗಳಿಗೆ 1.58 ಲಕ್ಷ ಕೋಟಿ ರೂ.ಗೂ ಹೆಚ್ಚು ಹಣವನ್ನು ನೇರವಾಗಿ ವರ್ಗಾಯಿಸಿದೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM Kisan Samman NIdhi)ಯೋಜನೆಯಡಿ ಮುಂದಿನ ಕಂತಿನ ಹಣ ಶೀಘ್ರದಲ್ಲೇ ರೈತರ ಖಾತೆಗೆ ಬರಲಿದೆ ಎಂದು ಸರ್ಕಾರ ತಿಳಿಸಿದೆ. ಈಗಾಗಲೇ ರೈತರು(Farmers) ಹತ್ತನೇ ಕಂತಿಗಾಗಿ ಕಾಯುತ್ತಿದ್ದು, ಡಿಸೆಂಬರ್ 15ರಂದು ಹತ್ತನೇ ಕಂತಿನ 2 ಸಾವಿರ ರೂ. ಖಾತೆಗೆ ಬರುತ್ತದೆ ಎಂದು ತಿಳಿಸಿದೆ. ಅಂದರೆ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ನೋಂದಣಿಯಾದ ರೈತರ ಖಾತೆಗಳಿಗೆ ಹತ್ತನೇ ಕಂತಿನ 2,000 ರೂ.ಗಳನ್ನು ಸರ್ಕಾರ(Government) ಕಳುಹಿಸಲಿದೆ.ಅಲ್ಲದೇ, ಕಳೆದ ವರ್ಷ 25 ಡಿಸೆಂಬರ್ 2020 ರಂದು, ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಅಡಿಯಲ್ಲಿ ಹಣವನ್ನು ವರ್ಗಾಯಿಸಿತ್ತು,

ಇಲ್ಲಿಯವರೆಗೆ, ಸರ್ಕಾರವು ದೇಶದ 11.37 ಕೋಟಿಗೂ ಹೆಚ್ಚು ರೈತರ ಬ್ಯಾಂಕ್ ಖಾತೆಗಳಿಗೆ 1.58 ಲಕ್ಷ ಕೋಟಿ ರೂ.ಗೂ ಹೆಚ್ಚು ಹಣವನ್ನು ನೇರವಾಗಿ ವರ್ಗಾಯಿಸಿದೆ.

ಕೆಲ ರೈತರಿಗೆ ಸಿಗಲಿದೆ 4000 ರೂ

ಇನ್ನೂ 9ನೇ ಕಂತಿನ ಲಾಭ ಪಡೆಯದ ರೈತರಿಗೆ ಎರಡು ಕಂತಿನ ಹಣ ಆ ಜನರ ಖಾತೆಗೆ ಸೇರುತ್ತದೆ ಅಂದರೆ 4000 ರೂಪಾಯಿ ಅವರ ಖಾತೆಗೆ ವರ್ಗಾವಣೆಯಾಗುತ್ತದೆ. ಆದರೆ ಈ ಸೌಲಭ್ಯವು ಸೆಪ್ಟೆಂಬರ್ 30 ರ ಮೊದಲು ನೋಂದಾಯಿಸಿದ ರೈತರಿಗೆ ಮಾತ್ರ ಲಭ್ಯವಿರುತ್ತದೆ ಎನ್ನಲಾಗಿದೆ.

ಇದನ್ನೂ ಓದಿ:ವಿಪಕ್ಷಗಳ ಗದ್ದಲದ ನಡುವೆಯೂ ರಾಜ್ಯಸಭೆಯಲ್ಲಿಯೂ ಕೃಷಿ ಕಾನೂನು ರದ್ದು ಮಸೂದೆ ಪಾಸ್

ನಿಮಗೆ ಹಣ ಸಿಗುತ್ತದೋ ಇಲ್ಲವೋ ಎಂಬುದನ್ನು ಹೀಗೆ ಪರಿಶೀಲಿಸಿ

ನೀವು ಪಿಎಂ ಕಿಸಾನ್ ಯೋಜನೆಗಯಲ್ಲಿ ನೋಂದಾಯಿಸಿಕೊಂಡಿದ್ದರೆ, ಈ ಯೋಜನೆಯ ಫಲಾನುಭವಿಗಳ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯೇ ಅಥವಾ ಇಲ್ಲವೇ ಎಂಬುದನ್ನು ತಿಳಿದುಕೊಳ್ಳುವುದು ನಿಮಗೆ ಬಹಳ ಮುಖ್ಯ.ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಪರಿಶೀಲಿಸುವುದು ಹೇಗೆ ಎಂಬುದು ಇಲ್ಲಿದೆ

1. ಮೊದಲನೆಯದಾಗಿ ನೀವು ಪ್ರಧಾನ ಮಂತ್ರಿ ಕಿಸಾನ್ ಯೋಜನೆಯ ಅಧಿಕೃತ ವೆಬ್‌ಸೈಟ್ https://pmkisan.gov.in ಗೆ ಭೇಟಿ ನೀಡಬೇಕು.

2. ಅದರ ಮುಖಪುಟದಲ್ಲಿ, ನೀವು ರೈತರ ಕಾರ್ನರ್ ಆಯ್ಕೆಯನ್ನು ನೋಡುತ್ತೀರಿ.

3. ರೈತರ ಕಾರ್ನರ್ ವಿಭಾಗದಲ್ಲಿ, ನೀವು ಫಲಾನುಭವಿಗಳ ಪಟ್ಟಿ ಆಯ್ಕೆಯನ್ನು ಕ್ಲಿಕ್ ಮಾಡಬೇಕು.

4.  ನಂತರ ನೀವು ಡ್ರಾಪ್ ಡೌನ್ ಪಟ್ಟಿಯಿಂದ ರಾಜ್ಯ, ಜಿಲ್ಲೆ, ಉಪ ಜಿಲ್ಲೆ, ಬ್ಲಾಕ್ ಮತ್ತು ಗ್ರಾಮವನ್ನು ಆಯ್ಕೆ ಮಾಡಬೇಕು.

5. ಇದರ ನಂತರ ನೀವು ಗೆಟ್ ರಿಪೋರ್ಟ್ ಕ್ಲಿಕ್ ಮಾಡಬೇಕು. ಇದರ ನಂತರ ಫಲಾನುಭವಿಗಳ ಸಂಪೂರ್ಣ ಪಟ್ಟಿ ಕಾಣಿಸಿಕೊಳ್ಳುತ್ತದೆ, ಅದರಲ್ಲಿ ನೀವು ನಿಮ್ಮ ಹೆಸರನ್ನು ಪರಿಶೀಲಿಸಬಹುದು.

ಕಂತು ಸ್ಥಿತಿಯನ್ನು ಈ ರೀತಿ ಪರಿಶೀಲಿಸಿ

ಇದನ್ನೂ ಓದಿ: ರೈಲ್ವೇ ಪ್ರಯಾಣಿಕರಿಗೆ ಗುಡ್ ನ್ಯೂಸ್; ಕೊರೊನಾದಿಂದ ಸ್ಥಗಿತಗೊಂಡಿದ್ದ ಸೇವೆ ಪುನರಾರಂಭ

ವೆಬ್‌ಸೈಟ್ ತಲುಪಿದ ನಂತರ, ಬಲಭಾಗದಲ್ಲಿರುವ ರೈತರ ಕಾರ್ನರ್ ಅನ್ನು ಕ್ಲಿಕ್ ಮಾಡಿ. ಇದರ ನಂತರ ಫಲಾನುಭವಿ ಸ್ಥಿತಿ ಆಯ್ಕೆಯ ಮೇಲೆ ಕ್ಲಿಕ್ ಮಾಡಿ, ಅದರ ನಂತರ ಹೊಸ ಪುಟ ತೆರೆಯುತ್ತದೆ. ಈಗ ನಿಮ್ಮ ಆಧಾರ್ ಸಂಖ್ಯೆ, ಮೊಬೈಲ್ ಸಂಖ್ಯೆ ನಮೂದಿಸಿ. ಇದರ ನಂತರ ನೀವು ನಿಮ್ಮ ಸ್ಥಿತಿಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಪಡೆಯುತ್ತೀರಿ.
Published by:Sandhya M
First published: