ದೆಹಲಿ ಹಿಂಸಾಚಾರ: ‘ಶಾಂತಿ ಕಾಪಾಡಿ, ಯಾವುದೇ ಸಂದರ್ಭದಲ್ಲೂ ಭ್ರಾತೃತ್ವ ಮರೆಯದಿರಿ‘ - ಪ್ರಧಾನಿ ಮೋದಿ

ಇಲ್ಲಿನ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಇಂದು ಸಚಿವ ಸಂಪುಟ ಸಭೆ ನಡೆಯಲಿದ್ದು, ಹಿಂಸಾಚಾರವನ್ನು ನಿಯಂತ್ರಿಸಲು ತೆಗೆದುಕೊಳ್ಳಬೇಕಾದ ಸೂಕ್ತ ಕ್ರಮಗಳ ಬಗ್ಗೆ ಚರ್ಚೆ ನಡೆಸಲಾಗುವುದು ಎನ್ನಲಾಗುತ್ತಿದೆ.

news18-kannada
Updated:February 26, 2020, 3:43 PM IST
ದೆಹಲಿ ಹಿಂಸಾಚಾರ: ‘ಶಾಂತಿ ಕಾಪಾಡಿ, ಯಾವುದೇ ಸಂದರ್ಭದಲ್ಲೂ ಭ್ರಾತೃತ್ವ ಮರೆಯದಿರಿ‘ - ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿ
  • Share this:
ನವದೆಹಲಿ(ಫೆ.26): ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸಿಎಎ ಮತ್ತು ಎನ್​​ಆರ್​​ಸಿ ಪರ-ವಿರೋಧಿ ಗುಂಪುಗಳ ನಡುವಿನ ಘರ್ಷಣೆಯಿಂದ ಹಿಂಸಾಚಾರ ಹೆಚ್ಚುತ್ತಲ್ಲೇ ಇದೆ. ಈ ಬೆನ್ನಲ್ಲೇ ಎಚ್ಚೆತ್ತ ದೆಹಲಿ ಪೊಲೀಸರು ಕಂಡಲ್ಲಿ ಗುಂಡಿಕ್ಕಲು ಆದೇಶ ಹೊರಡಿಸಿದ್ದಾರೆ. ಈ ಆದೇಶವೂ ಈಶಾನ್ಯ ದೆಹಲಿಯ ಹಲವೆಡೆ ಜಾರಿಯಲ್ಲಿದ್ದು, ಹಿಂಸಾಚಾರ ತಡೆಗಟ್ಟಲು ಕಠಿಣ ಆದೇಶ ಹೊರಡಿಸಲಾಗಿದೆ. ಈ ಮಧ್ಯೆ ದೆಹಲಿ ಹಿಂಸಾಚಾರದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ದೆಹಲಿ ಜನತೆ ಶಾಂತಿ ಕಾಪಾಡಬೇಕು ಎಂದು ಟ್ವೀಟ್ ಮಾಡುವ ಮೂಲಕ ಮನವಿ ಮಾಡಿದ್ದಾರೆ.

ದೆಹಲಿ ಹಿಂಸಾಚಾರ ಸಂಬಂಧ ಸರಣಿ ಟ್ವೀಟ್​ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ನಮ್ಮ ದೇಶದ ಶಾಂತಿ ಮತ್ತು ಸಾಮರಸ್ಯ ಕಾಪಾಡಬೇಕಿದೆ. ದೆಹಲಿಯ ನನ್ನ ಸೋದರ, ಸೋದರಿಯರೇ ದಯವಿಟ್ಟು ಸಹನೆಯಿಂದ ಇರಿ. ಯಾವುದೇ ಸಂದರ್ಭ ಬಂದರೂ ಭ್ರಾತೃತ್ವ ಕಾಪಾಡಿಕೊಳ್ಳಬೇಕು. ಆದಷ್ಟು ಬೇಗ ದೆಹಲಿ ಸಹಜಸ್ಥಿತಿಗೆ ಮರಳಬೇಕಿದೆ ಎಂದು ಹೇಳಿದ್ದಾರೆ.
ಇನ್ನು, ದೆಹಲಿಯ ವಿವಿಧ ಭಾಗಗಳಲ್ಲಿ ನಡೆಯುತ್ತಿರುವ ಗಲಭೆ ಪರಿಸ್ಥಿತಿ ಅವಲೋಕನ ಮಾಡಬೇಕಿದೆ. ಇದರ ಬಗ್ಗೆ ವ್ಯಾಪಕ ಪರಿಶೀಲನೆ ನಡೆಸಿ ಶಾಂತಿ ಕಾಪಾಡಲು ಸಹಕರಿಸಿ. ಹಾಗೆಯೇ ಸಾಧ್ಯವಾದಷ್ಟು ಪರಿಸ್ಥಿತಿ ನಿಯಂತ್ರಣ ಮಾಡಲು ಪ್ರಯತ್ನಿಸಿ ಎಂದು ಮತ್ತೊಂದು ಟ್ವೀಟ್​​ ಮೂಲಕ ದೆಹಲಿ ಪೊಲೀಸ್​​​​​​ ಸಿಬ್ಬಂದಿಗೆ ಸೂಚನೆ ನೀಡಿದ್ದಾರೆ.


ದೆಹಲಿಯ ನಾಲ್ಕು ಭಾಗಗಳಲ್ಲಿ ನಿಷೇಧಾಜ್ಞೆ ಜಾರಿಗೆ ತರಲಾಗಿದೆ. ಇದೇ ವೇಳೆ ಹಿಂಸಾಚಾರ ತಡೆಗಟ್ಟಲು 12 ಪ್ಯಾರ ಮಿಲಿಟರಿ ಪಡೆ ನಿಯೋಜನೆ ಮಾಡಲಾಗುತ್ತಿದೆ. ಇನ್ನು ಈಶಾನ್ಯ ದೆಹಲಿಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆಯುತ್ತಿದ್ದ ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 21ಕ್ಕೆ ಏರಿಕೆಯಾಗಿದೆ.

ಇಲ್ಲಿನ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಇಂದು ಸಚಿವ ಸಂಪುಟ ಸಭೆ ನಡೆಯಲಿದೆ. ಹಿಂಸಾಚಾರ ನಿಯಂತ್ರಿಸಲು ತೆಗೆದುಕೊಳ್ಳಬೇಕಾದ ಸೂಕ್ತ ಕ್ರಮಗಳ ಬಗ್ಗೆ ಚರ್ಚೆ ನಡೆಸಲಾಗುವುದು ಎನ್ನಲಾಗುತ್ತಿದೆ.

ಇದನ್ನೂ ಓದಿ: ದೆಹಲಿ ಹಿಂಸಾಚಾರ; ಅಮಿತ್ ಶಾ ರಾಜೀನಾಮೆಗೆ ಆಗ್ರಹಿಸಿ 6 ಪ್ರಶ್ನೆಗಳನ್ನು ಕೇಂದ್ರದ ಮುಂದಿಟ್ಟ ಸೋನಿಯಾ ಗಾಂಧಿ

ರಾಷ್ಟ್ರೀಯ ನಾಗರಿಕ ನೋಂದಣಿ ಮತ್ತು ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆಸುತ್ತಿದ್ದ ಹೋರಾಟವೂ ಹಿಂಸಾರೂಪಕ್ಕೆ ತಿರುಗಿದೆ. ಇದರ ಪರಿಣಾಮ ದೆಹಲಿಯಲ್ಲಿ ಸಾವನ್ನಪಿದವರ ಸಂಖ್ಯೆಯೂ ಏರುತ್ತಲೇ ಇದೆ. ಇಲ್ಲಿಯವರೆಗೂ ಸುಮಾರು 156 ಮಂದಿ ಪೊಲೀಸರು ಗಾಯಗೊಂಡಿದ್ದಾರೆ. ಈ ಮಧ್ಯೆ ಪೊಲೀಸರು ಹೀಗೆ ಕಠಿಣ ಆದೇಶಿಸಿದ್ದಾರೆ.

ಶಾಹೀನ್ ಬಾಗ್​ನಲ್ಲಿ ನಿರಂತರ ಪ್ರತಿಭಟನೆ ಕಂಡಿದ್ದ ದೆಹಲಿ ಈಗ ಜಾಫ್ರಾಬಾದ್​ನಲ್ಲೂ ಪ್ರತಿಭಟನೆಯ ಬಿಸಿ ಅನುಭವಿಸುತ್ತಿದೆ. ಸೀಲಂಪುರ್​ನಿಂದ ಮೌಜ್​ಪುರ್ ಮತ್ತು ಯಮುನಾ ವಿಹಾರ್​ಗೆ ಸಂಪರ್ಕ ಸಾಧಿಸುವ ಜಾಫ್ರಾಬಾದ್ ಮೆಟ್ರೋ ಸ್ಟೇಷನ್ ಬಳಿಯ ರಸ್ತೆಯೊಂದನ್ನು ಸಿಎಎ ಪ್ರತಿಭಟನಾಕಾರರು ಮುತ್ತಿಗೆ ಹಾಕಿದ್ದು ಸೂಕ್ಷ್ಮ ಪರಿಸ್ಥಿತಿಗೆ ಎಡೆ ಮಾಡಿಕೊಟ್ಟಿದೆ.ರಸ್ತೆಯನ್ನು ಮುತ್ತಿಗೆ ಹಾಕಿದ ನೂರಾರು ಪ್ರತಿಭಟನಾಕಾರರಲ್ಲಿ ಮಹಿಳೆಯರೇ ಹೆಚ್ಚಾಗಿದ್ದರು. ಭದ್ರತೆಯ ದೃಷ್ಟಿಯಿಂದ ಜಾಫ್ರಾಬಾದ್ ಮೆಟ್ರೋ ನಿಲ್ದಾಣದ ಪ್ರವೇಶ ಮತ್ತು ನಿರ್ಗಮನ ದ್ವಾರಗಳನ್ನು ಮುಚ್ಚಲಾಯಿತು. ಹಾಗೆಯೇ, ಮೌಜ್​ಪುರ್-ಬಾಬರ್​ಪುರ್ ಮೆಟ್ರೋ ಸ್ಟೇಷನ್​ನ ದ್ವಾರಗಳನ್ನೂ ಬಂದ್ ಮಾಡಲಾಯಿತು.
First published: February 26, 2020, 3:40 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading