ನವದೆಹಲಿ: ಲೋಕಸಭೆ ಮತ್ತು ರಾಜ್ಯಸಭೆಯ ಜಂಟಿ ಅಧಿವೇಶನದಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ಚರ್ಚೆಗೆ ಉತ್ತರಿಸಿದ ಪ್ರಧಾನಿ ನರೇಂದ್ರ ಮೋದಿ (PM Narendra Modi) ಕಾಂಗ್ರೆಸ್ (Congress) ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಉತ್ತರ ಪ್ರದೇಶ, ಉತ್ತರಾಖಂಡ, ಪಂಜಾಬ್ನಲ್ಲಿ ಕಾಂಗ್ರೆಸ್ ಕೊರೊನಾ ವೈರಸ್ನನ್ನು (Corona Virus) ಹರಡುತ್ತಿದೆ ಎಂದು ಮೋದಿ ಆರೋಪಿಸಿದ್ದಾರೆ. ಕಾಂಗ್ರೆಸ್ ಪಕ್ಷವು ಕೋವಿಡ್ ಕಾಲವನ್ನು ದುರುಪಯೋಗಪಡಿಸಿಕೊಂಡಿದೆ. ವಲಸೆ ಕಾರ್ಮಿಕರನ್ನು (Migrant workers) ಅವ್ಯವಸ್ಥೆಗೆ ತಳ್ಳಿದೆ ಎಂದು ಹೇಳಿದ್ದಾರೆ. ಇನ್ನು ಕಾಂಗ್ರೆಸ್ ಕಾರ್ಯಕರ್ತರು ವಲಸೆ ಕಾರ್ಮಿಕರಿಗೆ ನಿಲ್ದಾಣಗಳಲ್ಲಿ ಟಿಕೆಟ್ ನೀಡಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ರು.
ಕಾಂಗ್ರೆಸ್ನಿಂದ ಕೊಳಕು ರಾಜಕೀಯ
ಕೊರೊನಾ ಹೆಚ್ಚುತ್ತಿರುವ ಸಮಯದಲ್ಲಿ ಜನರು ಲಾಕ್ಡೌನ್ ನೀತಿ ಅನುಸರಿಸಬೇಕು. ಇರುವಲ್ಲಿಯೇ ಇರಬೇಕೆಂದು ಮಾರ್ಗಸೂಚಿ ನೀಡಲಾಗಿದೆ. ಕಾಂಗ್ರೆಸ್ ಮುಂಬೈ ನಿಲ್ದಾಣದಲ್ಲಿ ನಿಂತು ಅಮಾಯಕರನ್ನು ಹೆದರಿಸುತ್ತಿದೆ. ವಲಸೆಗೆ ಟಿಕೆಟ್ ನೀಡ್ತಿದೆ ಎಂದು ಮೋದಿ ಆರೋಪಿಸಿದ್ದಾರೆ. ಕಾಂಗ್ರೆಸ್ ಕೋವಿಡ್ ಸಾಂಕ್ರಾಮಿಕದ ವೇಳೆ ಕೊಳಕು ರಾಜಕೀಯ ಮಾಡ್ತಿದೆ ಎಲ್ಲಾ ಮಿತಿಗಳನ್ನು ಮೀರಿದೆ ಎಂದು ಮೋದಿ ಕಟುವಾಗಿ ಆರೋಪಿಸಿದ್ದಾರೆ.
‘ನನ್ನನ್ನು ವಿರೋಧಿಸಿ ನಮ್ಮ ಯೋಜನೆಯನ್ನಲ್ಲ’
ನಾವು ಪ್ರಜಾಪ್ರಭುತ್ವದಲ್ಲಿ ನಂಬಿಕೆಯುಳ್ಳವರು ಎಂದು ಪ್ರಧಾನಿ ಹೇಳಿದರು. ಟೀಕೆಯು ಪ್ರಜಾಪ್ರಭುತ್ವದ ಅತ್ಯಗತ್ಯ ಭಾಗವಾಗಿದೆ ಎಂದು ನಾವು ನಂಬುತ್ತೇವೆ. ಆದರೆ, ಎಲ್ಲದಕ್ಕೂ ಕುರುಡು ವಿರೋಧವೂ ಸರಿಯಲ್ಲ ಎಂದ್ರು. ಸರ್ಕಾರದ ಯೋಜನೆಗಳನ್ನು ಪ್ರಶ್ನಿಸಿದ್ದಕ್ಕಾಗಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಮೋದಿ, ನೀವು ನನ್ನನ್ನು ವಿರೋಧಿಸಬಹುದು, ಆದರೆ ನೀವು ಫಿಟ್ ಇಂಡಿಯಾ ಆಂದೋಲನ ಮತ್ತು ಇತರ ಯೋಜನೆಗಳನ್ನು ಏಕೆ ವಿರೋಧಿಸುತ್ತಿದ್ದೀರಿ ಅಂತ ಪ್ರಶ್ನಿಸಿದ್ರು.
ಇದನ್ನೂ ಓದಿ: ಭಾರತ ವಿಶ್ವ ನಾಯಕನಾಗಿ ಹೊರಹೊಮ್ಮಬೇಕು; ಲೋಕಸಭೆಯಲ್ಲಿ PM Modi
'100 ವರ್ಷವಾದರೂ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ'
ಇನ್ನು 100 ವರ್ಷವಾದರೂ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದಿಲ್ಲ. ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ನೀಡದಿರಲು ಜನ ನಿರ್ಧರಿಸಿದ್ದಾರೆ. ದೇಶದಲ್ಲಿ ಬಡವರನ್ನು ಹಸಿವಿನಿಂದ ನರಳದಂತೆ ಮಾಡಿದ್ದೇವೆ. 80 ಕೋಟಿಗೂ ಹೆಚ್ಚು ಜನರಿಗೆ ಉಚಿತ ಆಹಾರ ನೀಡಿದ್ದೇವೆ. ಗಾಂಧೀಜಿಯವರ ಸ್ವದೇಶಿ ಕನಸಿಗೆ ಕಾಂಗ್ರೆಸ್ ಅಡ್ಡಿಯಾಗಿದೆ. ಆತ್ಮನಿರ್ಭರ ಭಾರತಕ್ಕೆ ಕಾಂಗ್ರೆಸ್ ವಿರುದ್ಧವಾಗಿದೆ ಎಂದು ಲೋಕಸಭೆಯಲ್ಲಿ ಕಾಂಗ್ರೆಸ್ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ ನಡೆಸಿದ್ದಾರೆ. ಹಲವು ರಾಜ್ಯಗಳಲ್ಲಿ ಜನರು ತಮ್ಮನ್ನು ಏಕೆ ತಿರಸ್ಕರಿಸಿದ್ದಾರೆ ಎಂಬುದನ್ನು ಕಾಂಗ್ರೆಸ್ ಆತ್ಮಾವಲೋಕನ ಮಾಡಿಕೊಳ್ಳಬೇಕು ಮತ್ತು ಅನೇಕ ಚುನಾವಣಾ ಸೋಲಿನ ನಂತರವೂ ಪಕ್ಷದ “ಅಹಂಕಾರ”ಹೋಗುವುದಿಲ್ಲ ಎಂದು ಮೋದಿ ಹೇಳಿದರು.
ಇದನ್ನೂ ಓದಿ: ಮುಂದಿನ 100 ವರ್ಷದಲ್ಲೂ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ: ಲೋಕಸಭೆಯಲ್ಲಿ PM Modi ಮಾತಿನೇಟು!
‘ದೇಶದ ಜನ ನಿಮ್ಮನ್ನು ತಿರಸ್ಕರಿಸಿದ್ದಾರೆ’
ನಾಗಾಲ್ಯಾಂಡ್ 24 ವರ್ಷಗಳ ಹಿಂದೆ ಕಾಂಗ್ರೆಸ್ಗೆ ಮತ ಹಾಕಿದ್ದರೆ, 27 ವರ್ಷಗಳ ಹಿಂದೆ ಒಡಿಶಾ ನಿಮಗೆ ಮತ ಹಾಕಿದೆ. 28 ವರ್ಷಗಳ ಹಿಂದೆ ಗೋವಾದಲ್ಲಿ ಪೂರ್ಣ ಬಹುಮತದೊಂದಿಗೆ ಗೆದ್ದಿದ್ದೀರಿ. 1988ರಲ್ಲಿ ತ್ರಿಪುರಾದ ಜನ ಕಾಂಗ್ರೆಸ್ಗೆ ಮತ ಹಾಕಿದ್ರು. ಪಶ್ಚಿಮ ಬಂಗಾಳವು 1972 ರಲ್ಲಿ ಕಾಂಗ್ರೆಸ್ಗೆ ಮತ ಹಾಕಿದೆ. ತೆಲಂಗಾಣ ರಚನೆಯ ಕ್ರೆಡಿಟ್ ಅನ್ನು ನೀವು ತೆಗೆದುಕೊಳ್ಳುತ್ತೀರಿ ಆದರೆ ಸಾರ್ವಜನಿಕರು ನಿಮ್ಮನ್ನು ಸ್ವೀಕರಿಸಲಿಲ್ಲ ಎಂದು ಮೋದಿ ಹೇಳಿದರು. 50 ವರ್ಷಗಳ ಕಾಲ ಅಧಿಕಾರದಲ್ಲಿದ್ದರೂ, ದೇಶದ ಜನರು ಪದೇ ಪದೇ ಅವರನ್ನು ಏಕೆ ತಿರಸ್ಕರಿಸುತ್ತಿದ್ದಾರೆ? ಎಲ್ಲೆಲ್ಲಿ ಜನರು ಸರಿಯಾದ ದಾರಿ ಹಿಡಿದಿದ್ದಾರೋ ಅಲ್ಲಿಗೆ ಮತ್ತೆ ಪ್ರವೇಶಿಸಲು ಬಿಡಲಿಲ್ಲ ಎಂದು ಮೋದಿ ಹೇಳಿದ್ರು.
ತಮ್ಮ ಭಾಷಣದ ಸಮಯದಲ್ಲಿ, ಮೋದಿ ಅವರು ಭಾರತದ ಆರ್ಥಿಕ ಪ್ರಗತಿ ಯನ್ನು ಶ್ಲಾಘಿಸಿದರು ಮತ್ತು ಕೋವಿಡ್ ನಂತರದ ಜಗತ್ತಿನಲ್ಲಿ ಜಾಗತಿಕ ಮಟ್ಟದಲ್ಲಿ ಭಾರತವು ಹೇಗೆ ನಾಯಕತ್ವದ ಪಾತ್ರವನ್ನು ವಹಿಸುತ್ತದೆ ಎಂಬುದರ ಕುರಿತು ಯೋಚಿಸಲು ಇದು ಸೂಕ್ತ ಸಮಯ ಎಂದು ಹೇಳಿದರು
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ