HOME » NEWS » National-international » PM MODI CAUTIONS BJP AGAINST NEGATIVE CAMPAIGN IN ASSEMBLY POLLS MAK

Narendra Modi: ಪಂಚರಾಜ್ಯ ಚುನಾವಣೆಯಲ್ಲಿ ನಕಾರಾತ್ಮಕ ಅಭಿಯಾನದ ಬಗ್ಗೆ ಎಚ್ಚರವಿರಲಿ; ಬಿಜೆಪಿ ನಾಯಕರಿಗೆ ಮೋದಿ ಸೂಚನೆ

ಸ್ಥಳೀಯರ ಭಾವನೆಗಳ ಬಗ್ಗೆ ಪ್ರತಿಕ್ರಿಯೆ ಕೋರಿ ಪಶ್ಚಿಮ ಬಂಗಾಳ ಮತ್ತು ಅಸ್ಸಾಂನ ಕಾರ್ಯಕರ್ತರೊಂದಿಗೆ ಸಂವಹನ ನಡೆಸಿದ ಪ್ರಧಾನಿ, ಪ್ರತಿಪಕ್ಷಗಳು ಅಸಂಸದೀಯ ಭಾಷೆಯನ್ನು ಬಳಸಿದರೂ ಬಿಜೆಪಿ ನಿಂದನೀಯ ಭಾಷೆಯನ್ನು ಬಳಸಬಾರದು ಎಂದು ತಿಳಿಸಿದ್ದಾರೆ ಎಂದು ತಿಳಿದುಬಂದಿದೆ.

news18-kannada
Updated:March 9, 2021, 1:08 PM IST
Narendra Modi: ಪಂಚರಾಜ್ಯ ಚುನಾವಣೆಯಲ್ಲಿ ನಕಾರಾತ್ಮಕ ಅಭಿಯಾನದ ಬಗ್ಗೆ ಎಚ್ಚರವಿರಲಿ; ಬಿಜೆಪಿ ನಾಯಕರಿಗೆ ಮೋದಿ ಸೂಚನೆ
ನರೇಂದ್ರ ಮೋದಿ.
  • Share this:
ನವ ದೆಹಲಿ (ಮಾರ್ಚ್​ 06); ತಮಿಳುನಾಡು, ಕೇರಳ, ಪಶ್ಚಿಮ ಬಂಗಾಳ ಸೇರಿದಂತೆ ಮುಂದಿನ ತಿಂಗಳು ದೇಶದ ಐದು ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಕಾಂಗ್ರೆಸ್​, ಬಿಜೆಪಿಯಂತಹ ರಾಷ್ಟ್ರೀಯ ಪಕ್ಷಗಳು ಸೇರಿದಂತೆ ಎಲ್ಲಾ ಪ್ರಾದೇಶಿಕ ಪಕ್ಷಗಳೂ ಸಹ ಈಗಾಗಲೇ ಚುನಾವಣಾ ಪ್ರಚಾರ ಕಾರ್ಯದಲ್ಲಿ ತೊಡಗಿವೆ. ಒಬ್ಬರು ಮತ್ತೋರ್ವ ನಾಯಕರ ಮೇಲೆ ವಾಗ್ದಾಳಿ ನಡೆಸುವುದು ಸಾಮಾನ್ಯವಾಗಿದೆ. ಆಡಳಿತ ಮತ್ತು ವಿರೋಧ ಪಕ್ಷಗಳ ನಡುವಿನ ಆರೋಪ-ಪ್ರತ್ಯಾರೋಪಗಳೂ ಮುಂದುವರೆಯುತ್ತಿವೆ. ಈ ನಡುವೆ ಸ್ವಪಕ್ಷೀಯ ಬಿಜೆಪಿ ಕಾರ್ಯಕರ್ತರಿಗೆ ಕಿವಿಮಾತು ಹೇಳಿರುವ ಪ್ರಧಾನಿ ನರೇಂದ್ರ ಮೋದಿ, "ಮುಂಬರುವ ಪಂಚರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ನಕಾರಾತ್ಮಕ ಅಭಿಯಾನದ ವಿರುದ್ಧ ಬಿಜೆಪಿ ಕಾರ್ಯಕರ್ತರು ಹಾಗೂ ನಾಯಕರು ಎಚ್ಚರಿಕೆಯಿಂದಿರಿ" ಎಂದು ತಿಳಿಸಿದ್ದಾರೆ ಎಂದು ತಿಳಿದುಬಂದಿದೆ.

ಗುರುವಾರ ರಾತ್ರಿ ನಡೆದ ಪಕ್ಷದ ಕೇಂದ್ರ ಚುನಾವಣಾ ಸಮಿತಿಯ ಸಭೆಯಲ್ಲಿ, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಲ್ಲಿ ಮೊದಲ ಹಂತದ ಮತದಾನದ ಅಭ್ಯರ್ಥಿಗಳ ಕುರಿತು ಚರ್ಚೆಯಾಗಿದ್ದು, ಮತದಾನದ ವ್ಯಾಪ್ತಿಯ ರಾಜ್ಯಗಳಲ್ಲಿ ವಿವೇಚನೆಯಿಂದ ನಡೆದುಕೊಳ್ಳುವಂತೆ ಪ್ರಧಾನಿ ಮೋದಿ ಹೇಳಿದ್ದಾರೆ ಎನ್ನಲಾಗಿದೆ.

ಸ್ಥಳೀಯರ ಭಾವನೆಗಳ ಬಗ್ಗೆ ಪ್ರತಿಕ್ರಿಯೆ ಕೋರಿ ಪಶ್ಚಿಮ ಬಂಗಾಳ ಮತ್ತು ಅಸ್ಸಾಂನ ಕಾರ್ಯಕರ್ತರೊಂದಿಗೆ ಸಂವಹನ ನಡೆಸಿದ ಪ್ರಧಾನಿ, ಪ್ರತಿಪಕ್ಷಗಳು ಅಸಂಸದೀಯ ಭಾಷೆಯನ್ನು ಬಳಸಿದರೂ ಬಿಜೆಪಿ ನಿಂದನೀಯ ಭಾಷೆಯನ್ನು ಬಳಸಬಾರದು ಎಂದು ತಿಳಿಸಿದ್ದಾರೆ ಎಂದು ತಿಳಿದುಬಂದಿದೆ.

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ ವಿರುದ್ಧ ಬಿಜೆಪಿ ಹೋರಾಡಲು ಸಜ್ಜಾಗಿದ್ದರೆ, ಅಸ್ಸಾಂನಲ್ಲಿ ಅಧಿಕಾರವನ್ನು ಉಳಿಸಿಕೊಳ್ಳಲು ಹೋರಾಡುತ್ತಿದೆ. "ಪಕ್ಷವು ಅಸ್ಸಾಂನಲ್ಲಿ ಅಧಿಕಾರ ಉಳಿಸುವುದು ಮಾತ್ರವಲ್ಲ, ಹಿಂದಿನ ಚುನಾವಣೆಗಿಂತಲೂ ಹೆಚ್ಚಿನ ಸ್ಥಾನವನ್ನು ಪಡೆಯುವ ಗುರಿಯನ್ನು ಹೊಂದಿದೆ" ಎಂದು ಬಿಜೆಪಿ ಕಾರ್ಯಕರ್ತರೊಬ್ಬರು ಹೇಳಿದ್ದಾರೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ಇದನ್ನೂ ಓದಿ: ಕೋವಿಡ್ ಲಸಿಕೆ ಪ್ರಮಾಣಪತ್ರದಿಂದ ಮೋದಿ ಫೋಟೋ ತೆಗೆಯುವಂತೆ ಚುನಾವಣಾ ಆಯೋಗ ಸೂಚನೆ

126 ವಿಧಾನಸಭಾ ಸ್ಥಾನಗಳಿರುವ ಅಸ್ಸಾಂನಲ್ಲಿ 60 ಸ್ಥಾನಗಳನ್ನು ಗೆದ್ದ ಬಿಜೆಪಿಯು 2016 ರಲ್ಲಿ ಮೊದಲ ಬಾರಿಗೆ ಅಧಿಕಾರಕ್ಕೆ ಬಂದಿತ್ತು. ಮುಂಬರುವ ಚುನಾವಣೆಯಲ್ಲಿ ಪಕ್ಷವು 92 ಸ್ಥಾನಗಳನ್ನು ಸ್ಪರ್ಧಿಸಲಿದ್ದು, ಅದರ ಮಿತ್ರಪಕ್ಷಗಳಾದ ಎಜಿಪಿಗೆ 26 ಮತ್ತು ಯುಪಿಪಿಎಲ್‌ಗೆ 8 ಸ್ಥಾನಗಳನ್ನು ಬಿಟ್ಟುಕೊಟ್ಟಿದೆ.
ಅಸ್ಸಾಂ ಚುನಾವಣೆಗೆ 70 ಹೆಸರುಗಳ ಮೊದಲ ಪಟ್ಟಿಯನ್ನು ಪಕ್ಷ ಶುಕ್ರವಾರ ಪ್ರಕಟಿಸಿದ್ದು, ಪಶ್ಚಿಮ ಬಂಗಾಳದಲ್ಲಿ ಮೊದಲ ಹಂತದ ಚುನಾವಣೆಗೆ ಅಭ್ಯರ್ಥಿಗಳನ್ನು ಶೀಘ್ರದಲ್ಲೇ ಪ್ರಕಟಿಸುವ ಸಾಧ್ಯತೆ ಇದೆ.
Published by: MAshok Kumar
First published: March 6, 2021, 2:55 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories