Covid ಹೆಚ್ಚಾಗುತ್ತಿರುವ ಹಿನ್ನೆಲೆ ಮಹತ್ವದ ಸಭೆ ನಡೆಸಿದ PM Modi.. ಶೀಘ್ರವೇ CMಗಳ ಜೊತೆ ಮೀಟಿಂಗ್

ಹೆಚ್ಚುತ್ತಿರುವ ಕೋವಿಡ್ ‌, ಓಮೈಕ್ರಾನ್ ಸೋಂಕು ತಡೆಗೆ ರಾಜ್ಯ ಸರ್ಕಾರಗಳ ಪಾತ್ರ ಏನಿರಬೇಕು ಎಂಬ ಬಗ್ಗೆ ಚರ್ಚೆ ಮಾಡಲು‌ ಶೀಘ್ರವೇ ಎಲ್ಲಾ ರಾಜ್ಯಗಳ ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯಮಂತ್ರಿಗಳ‌ ಸಭೆ ಕರೆಯಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.

ಪ್ರಧಾನಿ ಮೋದಿ

ಪ್ರಧಾನಿ ಮೋದಿ

  • Share this:
ನವದೆಹಲಿ, ಜ. 9: ಕೋವಿಡ್ ‌-19  (Covid-19) ಮತ್ತು ಓಮೈಕ್ರಾನ್ (Omicron) ಸೋಂಕು ದೇಶದಲ್ಲಿ ವ್ಯಾಪಕವಾಗಿ ಹರಡುತ್ತಿದೆ. ಈ ಸೋಂಕು ಇನ್ನಷ್ಟು ತೀವ್ರವಾಗಿ ಹರಡಲಿದೆ ಎಂಬ ಮಾತುಗಳು ಕೂಡ ಆರೋಗ್ಯ ಕ್ಷೇತ್ರದ ತಜ್ಞರಿಂದ (Health Experts) ಕೇಳಿಬರುತ್ತಿದೆ. ಕೊರೋನಾ ಮೂರನೇ ಅಲೆ (Corona Third Wave) ತೀವ್ರವಾಗಿ ಅಪ್ಪಳಿಸಿ ಅಪಾರ ಪ್ರಮಾಣದ ದುಷ್ಪರಿಣಾಮ ಬೀರಲಿದೆ ಎಂಬ ಭಯ ಕೂಡ ಸೃಷ್ಟಿಯಾಗಿದೆ. ಈ ಎಲ್ಲಾ ಹಿನ್ನೆಲೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ (Prime Minio Narendara Modi) ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.

ಮಹತ್ವದ ಸಭೆ

ಪ್ರಧಾನ ಮಂತ್ರಿ ನರೇಂದ್ರ ಮೋದಿ ಕರೆದಿದ್ದ ಈ ಮಹತ್ವದ ಸಭೆಯಲ್ಲಿ ಕೇಂದ್ರ ಗೃಹ ಮಂತ್ರಿ ಅಮಿತ್ ಶಾ, ಕೇಂದ್ರ ಆರೋಗ್ಯ ಸಚಿವ ಮುನ್ಸುಖ್ ಭಾಯ್ ಮಾಂಡೋವಿಯಾ, ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ರಾಜ್ಯ ಖಾತೆ ಸಚಿವೆ ಭಾರತಿ ಪ್ರವೀಣ್ ಪವಾರ್, ನೀತಿ ಆಯೋಗದ ಆರೋಗ್ಯ ವಿಭಾಗದ ಸದಸ್ಯ ಡಾ. ವಿ ಕೆ ಪಾಲ್, ಕೇಂದ್ರ ಆರೋಗ್ಯ ಇಲಾಖೆ ಕಾರ್ಯದರ್ಶಿ ರಾಜೀವ್ ಗೌಬಾ, ಸಂಪುಟ ಕಾರ್ಯದರ್ಶಿ, ಅಜಯ್ ಭಲ್ಲಾ, ಗೃಹ ಕಾರ್ಯದರ್ಶಿ, ರಾಜೇಶ್ ಭೂಷಣ್, ಔಷಧೀಯ ಇಲಾಖೆ ಕಾರ್ಯದರ್ಶಿ ರಾಜೇಶ್ ಗೋಖಲೆ, ಜೈವಿಕ ತಂತ್ರಜ್ಞಾನ ಇಲಾಖೆ ಕಾರ್ಯದರ್ಶಿ ಡಾ. ಬಲರಾಮ್ ಭಾರ್ಗವ, ಐಸಿಎಂಆರ್ ಡಿಜಿ ಆರ್.ಎಸ್. ಶರ್ಮಾ ಮತ್ತಿತರ ಹಿರಿಯ ಅಧಿಕಾರಿಗಳು ಭಾಗಿಯಾಗಿದ್ದರು.

ಇದನ್ನೂ ಓದಿ: Covid Vaccine: ವಾರದೊಳಗೆ 2 ಕೋಟಿ ಲಸಿಕೆ; ಯುವಜನತೆ ಉತ್ಸಾಹಕ್ಕೆ ಮೆಚ್ಚುಗೆ

ಸಮಗ್ರ ಸಮಾಲೋಚನೆ 
ದೇಶದಲ್ಲಿ ಈಗ ಕೊರೋನಾ ಸೋಂಕು ಹರಡುವಿಕೆ ದಿಢೀರನೆ ಹೆಚ್ಚಾಗಿದೆ. ಈ ಬಗ್ಗೆ ಸಭೆಯಲ್ಲಿ ಚರ್ಚೆ ನಡೆದಿದೆ. ಕೊರೋನಾ ಸೋಂಕು ಯಾವ್ಯಾವ ರಾಜ್ಯಗಳಲ್ಲಿ ಯಾವ ಪ್ರಮಾಣದಲ್ಲಿದೆ? ಸೋಂಕು ತಡೆಯಲು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳಿಂದ ಏನೇನು ಕ್ರಮಗಳನ್ನು ಕೈಗೊಳ್ಳಲಾಗಿದೆ? ದಿನದ ಮತ್ತು ವಾರದ ಪಾಸಿಟಿವ್ ರೇಟ್ ಹೇಗಿದೆ? ಸೋಂಕಿನಿಂದ ಸಾಯುವವತ ಪ್ರಮಾಣ ಹೇಗಿದೆ? ಕೊರೋನಾ ಅಲ್ಲದೆ ಓಮೈಕ್ರಾನ್ ಸೋಂಕು ಹರಡುವಿಕೆ ಪ್ರಮಾಣ ಹೇಗಿದೆ? ಕೊರೋನಾ ಮತ್ತು ಓಮೈಕ್ರಾನ್ ಸೋಂಕು ಹರಡುವಿಕೆ ತಡೆಯಲು ಮುಂದೆ ಕೈಗೊಳ್ಳಬೇಕಾದ ಅಗತ್ಯ ಕ್ರಮಗಳು ಯಾವುವು ಎಂಬ ವಿಷಯಗಳ ಬಗ್ಗೆ ಸಮಗ್ರವಾದ ಸಮಾಲೋಚನೆ ನಡೆಸಲಾಯಿತು ಎಂದು ತಿಳಿದುಬಂದಿದೆ.

ವಿವಿಧ ಕ್ರಮಗಳನ್ನು ಸೂಚಿಸಿದ ಪಿಎಂ
ಬಳಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಜಿಲ್ಲಾ ಮಟ್ಟದಲ್ಲಿ ಆರೋಗ್ಯ ಮೂಲಸೌಕರ್ಯಗಳನ್ನು ಹೆಚ್ಚಿಸಬೇಕು.‌ ಮಿಷನ್ ಮೋಡ್‌ನಲ್ಲಿ ವ್ಯಾಕ್ಸಿನೇಷನ್‌ ಅಭಿಯಾನ ಮಾಡಬೇಕು. ಜೀನೋಮ್ ಸೀಕ್ವೆನ್ಸಿಂಗ್ ಮತ್ತು ಕೋವಿಡ್ ಪರೀಕ್ಷೆಗಳನ್ನು ಹೆಚ್ಚಿಸಬೇಕು. ಔಷಧೀಯ ವಿಚಾರದಲ್ಲಿ ನಿರಂತರವಾದ ವೈಜ್ಞಾನಿಕ ಸಂಶೋಧನೆಗಳನ್ನು ನಡೆಸುವುದು ಅಗತ್ಯವಾಗಿದೆ. ಕೋವಿಡ್ ಹೊರತಾದ ಆರೋಗ್ಯ ಸೇವೆಗಳನ್ನು ನೀಡುವ ಬಗ್ಗೆಯೂ ಗಮನವಿಡಬೇಕು. ಗ್ರಾಮೀಣ ಪ್ರದೇಶಗಳಲ್ಲಿ ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಬಗ್ಗೆ ಜಾಗೃತಿ ಮೂಡಿಸಬೇಕು. ಟೆಲಿಮೆಡಿಸಿನ್ ವ್ಯವಸ್ಥೆ ಮೂಲಕ ಎಲ್ಲೆಡೆ ಕೋವಿಡ್ ಪರಿಸ್ಥಿತಿಯನ್ನು ನಿರ್ವಹಣೆ ಮಾಡಬೇಕು ಎಂದು ಹೇಳಿದ್ದಾರೆ.

ಇದನ್ನೂ ಓದಿ: 3ನೇ ಬಾರಿ Lockdown ಆದ್ರೆ ಕಸುಬನ್ನೇ ಬಿಟ್ಟು ಬಿಡ್ತೀವಿ.. ಮೀನುಗಾರರ ನೋವಿನ ನುಡಿ..!

ತುರ್ತು ಕೋವಿಡ್ ರೆಸ್ಪಾನ್ಸ್ ಪ್ಯಾಕೇಜ್ (ECRP-II) ಅಡಿಯಲ್ಲಿ ಆರೋಗ್ಯ ಮೂಲಸೌಕರ್ಯ, ಪರೀಕ್ಷಾ ಸಾಮರ್ಥ್ಯ, ಆಮ್ಲಜನಕ ಮತ್ತು ICU ಹಾಸಿಗೆಗಳ ಲಭ್ಯತೆ ಮತ್ತು ಕೋವಿಡ್ ಅಗತ್ಯ ಔಷಧಗಳ ಬಫರ್ ಸ್ಟಾಕ್ ಅನ್ನು ಹೆಚ್ಚಿಸಲು ರಾಜ್ಯಗಳಿಗೆ ಸಹಕಾರ ನೀಡಲಾಗುವುದು. ಈ ನಿಟ್ಟಿನಲ್ಲಿ ರಾಜ್ಯಗಳೊಂದಿಗೆ ಸಮನ್ವಯತೆ ಕಾಯ್ದುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಶೀಘ್ರವೇ ಸಿಎಂಗಳ ಜೊತೆ ಸಭೆ
ಹೆಚ್ಚುತ್ತಿರುವ ಕೋವಿಡ್ ‌-19 ಮತ್ತು ಓಮೈಕ್ರಾನ್ ಸೋಂಕು ತಡೆಗೆ ರಾಜ್ಯ ಸರ್ಕಾರಗಳ ಪಾತ್ರ ಏನಿರಬೇಕು? ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಮನ್ವಯ ಹೇಗಿರಬೇಕು ಎಂಬ ವಿಷಯಗಳೂ ಸೇರಿದಂತೆ ಕೆಲವು ನಿರ್ದಿಷ್ಟ ವಿಷಯಗಳ ಬಗ್ಗೆ ಚರ್ಚೆ ಮಾಡಲು‌ ಶೀಘ್ರವೇ ಎಲ್ಲಾ ರಾಜ್ಯಗಳ ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯಮಂತ್ರಿಗಳ‌ ಸಭೆ ಕರೆಯಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.
Published by:Kavya V
First published: